AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Deodhar Trophy 2023: ದಕ್ಷಿಣ-ಪೂರ್ವ ವಲಯ ತಂಡಗಳ ನಡುವೆ ಫೈನಲ್ ಫೈಟ್

Deodhar Trophy 2023: ದಕ್ಷಿಣ ವಲಯ ಹಾಗೂ ಪೂರ್ವ ವಲಯ ತಂಡಗಳ ನಡುವಣ ಫೈನಲ್ ಪಂದ್ಯವನ್ನು ಬಿಸಿಸಿಐ ಟಿವಿಯಲ್ಲಿ ಲೈವ್ ವೀಕ್ಷಿಸಬಹುದು.

Deodhar Trophy 2023: ದಕ್ಷಿಣ-ಪೂರ್ವ ವಲಯ ತಂಡಗಳ ನಡುವೆ ಫೈನಲ್ ಫೈಟ್
ಮಯಾಂಕ್​-ಸೌರಭ್
TV9 Web
| Updated By: ಝಾಹಿರ್ ಯೂಸುಫ್|

Updated on:Aug 02, 2023 | 5:22 PM

Share

Deodhar Trophy 2023: ದೇವಧರ್ ಟ್ರೋಫಿ ಟೂರ್ನಿಯು ಅಂತಿಮ ಹಂತಕ್ಕೆ ಬಂದು ನಿಂತಿದೆ. ಪುದುಚೇರಿಯ ಕ್ರಿಕೆಟ್ ಅಸೋಷಿಯೇಷನ್ ಮೈದಾನದಲ್ಲಿ ನಡೆಯಲಿರುವ ಫೈನಲ್​ ಪಂದ್ಯದಲ್ಲಿ ದಕ್ಷಿಣ ವಲಯ ಮತ್ತು ಪೂರ್ವ ವಲಯ ಮುಖಾಮುಖಿಯಾಗಲಿದೆ. ಈ ಬಾರಿಯ ಟೂರ್ನಿಯಲ್ಲಿ ಒಟ್ಟು 6 ತಂಡಗಳು ಕಣಕ್ಕಿಳಿದಿದ್ದವು. ಅದರಂತೆ ಪ್ರತಿ ತಂಡಗಳು ತಲಾ 5 ಪಂದ್ಯಗಳನ್ನು ಆಡಲಾಗಿತ್ತು.

ಈ ಐದು ಪಂದ್ಯಗಳಲ್ಲಿ ಜಯಭೇರಿ ಬಾರಿಸಿದ್ದ ದಕ್ಷಿಣ ವಲಯ ತಂಡವು ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ಮೂಲಕ ಫೈನಲ್ ಪ್ರವೇಶಿಸಿದೆ. ಹಾಗೆಯೇ ಐದು ಮ್ಯಾಚ್​ಗಳಲ್ಲಿ 4 ರಲ್ಲಿ ಗೆಲುವು ದಾಖಲಿಸಿ​ ಪೂರ್ವ ವಲಯ ತಂಡವು ಫೈನಲ್​ಗೆ ಅರ್ಹತೆ ಪಡೆದಿದೆ. ಅದರಂತೆ ಗುರುವಾರ ನಡೆಯಲಿರುವ ಅಂತಿಮ ಹಣಾಹಣಿಯಲ್ಲಿ ದಕ್ಷಿಣ ವಲಯ ಮತ್ತು ಪೂರ್ವ ವಲಯ ತಂಡಗಳು ಸೆಣಸಲಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ದಕ್ಷಿಣ ವಲಯ ಹಾಗೂ ಪೂರ್ವ ವಲಯ ತಂಡಗಳ ನಡುವಣ ಫೈನಲ್ ಪಂದ್ಯವನ್ನು ಬಿಸಿಸಿಐ ಟಿವಿಯಲ್ಲಿ (bcci.tv) ಲೈವ್ ವೀಕ್ಷಿಸಬಹುದು. ಇದರ ಹೊರತಾಗಿ ಬೇರೆ ಯಾವುದೇ ಚಾನೆಲ್​ನಲ್ಲಿ ನೇರ ಪ್ರಸಾರ ಇರುವುದಿಲ್ಲ.

ದಕ್ಷಿಣ ವಲಯ ತಂಡ: ಮಯಾಂಕ್ ಅಗರ್ವಾಲ್ (ನಾಯಕ) , ದೇವದತ್ ಪಡಿಕ್ಕಲ್ , ಎನ್. ಜಗದೀಸನ್ , ಅರುಣ್ ಕಾರ್ತಿಕ್ , ರಿಕಿ ಭುಯಿ , ವಾಷಿಂಗ್ಟನ್ ಸುಂದರ್ , ವಿಜಯ್ ಕುಮಾರ್ ವೈಶಾಕ್ , ಅರ್ಜುನ್ ತೆಂಡೂಲ್ಕರ್ , ಸಾಯಿ ಕಿಶೋರ್ , ವಾಸುಕಿ ಕೌಶಿಕ್ , ವಿಧ್ವತ್ ಕಾವೇರಪ್ಪ , ರೋಹನ್ ಕುನ್ನುಮ್ಮಳ್, ಸಿಜೊಮೊನ್ ಜೋಸೆಫ್ , ಮೊಹಿತ್ ರೆಡ್ಕರ್, ರೋಹಿತ್ ರಾಯುಡು, ಸಾಯಿ ಸುದರ್ಶನ್.

ಇದನ್ನೂ ಓದಿ: Team India: ವಿಶ್ವ ದಾಖಲೆ ಬರೆದ ಟೀಮ್ ಇಂಡಿಯಾ

ಪೂರ್ವ ವಲಯ ತಂಡ: ಸೌರಭ್ ತಿವಾರಿ (ನಾಯಕ) , ಅಭಿಷೇಕ್ ಪೊರೆಲ್ , ಅಭಿಮನ್ಯು ಈಶ್ವರನ್ , ರಿಯಾನ್ ಪರಾಗ್ , ಸುಭ್ರಾಂಶು ಸೇನಾಪತಿ , ವಿರಾಟ್ ಸಿಂಗ್ , ಉತ್ಕರ್ಷ್ ಸಿಂಗ್ , ಶಹಬಾಝ್ ಅಹ್ಮದ್ , ಮಣಿಶಂಕರ್ ಮುರಾಸಿಂಗ್ , ಆಕಾಶ್ ದೀಪ್ , ಅವಿನೋವ್ ಚೌಧರಿ , ರಿಷವ್ ಕುಹರಾಮಿ , ಸುದೀಪ್ ಕುಮಾರ್ , ಸುದೀಪ್ ಕುಮಾರ್.

Published On - 5:21 pm, Wed, 2 August 23

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ