Rohan Kunnummal: 68 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ ರೋಹನ್

Deodhar Trophy final: ರೋಹನ್ ಕುನ್ನುಮ್ಮಲ್ ಹಾಗೂ ಮಯಾಂಕ್ ಅಗರ್ವಾಲ್ ಅವರ ಭರ್ಜರಿ ಬ್ಯಾಟಿಂಗ್​ನಿಂದ ದಕ್ಷಿಣ ವಲಯ ತಂಡವು ಈ ಪಂದ್ಯದಲ್ಲಿ ಅತ್ಯುತ್ತಮ ಆರಂಭ ಪಡೆಯಿತು.

Rohan Kunnummal: 68 ಎಸೆತಗಳಲ್ಲಿ ಸ್ಪೋಟಕ ಸೆಂಚುರಿ ಸಿಡಿಸಿದ ರೋಹನ್
Rohan Kunnummal
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 03, 2023 | 6:45 PM

ಪುದುಚೇರಿಯ ಕ್ರಿಕೆಟ್ ಅಸೋಸಿಯೇಷನ್ ಮೈದಾನದಲ್ಲಿ ನಡೆಯುತ್ತಿರುವ ದೇವಧರ್ ಟ್ರೋಫಿ ಫೈನಲ್ ಪಂದ್ಯದಲ್ಲಿ ರೋಹನ್ ಕುನ್ನುಮ್ಮಲ್ (Rohan Kunnummal) ಸ್ಪೋಟಕ ಶತಕ ಸಿಡಿಸಿ ಅಬ್ಬರಿಸಿದ್ದಾರೆ. ಪೂರ್ವ ವಲಯ ವಿರುದ್ಧದ ಈ ಪಂದ್ಯದಲ್ಲಿ ದಕ್ಷಿಣ ವಲಯ ಪರ ಆರಂಭಿಕನಾಗಿ ಕಣಕ್ಕಿಳಿದ ರೋಹನ್ ಕೇವಲ 68 ಎಸೆತಗಳಲ್ಲಿ ಶತಕ ಪೂರೈಸಿದರು. ಈ ಮೂಲಕ ದಕ್ಷಿಣ ವಲಯ ತಂಡವು ಬೃಹತ್ ಮೊತ್ತ ಪೇರಿಸುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.

ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ವಲಯ ತಂಡದ ನಾಯಕ ಮಯಾಂಕ್ ಅಗರ್ವಾಲ್ ಬ್ಯಾಟಿಂಗ್ ಆಯ್ದುಕೊಂಡರು. ಅಲ್ಲದೆ ರೋಹನ್ ಕುನ್ನುಮ್ಮಲ್ ಜೊತೆ ಇನಿಂಗ್ಸ್ ಆರಂಭಿಸಿದ ಮಯಾಂಕ್ ತಂಡಕ್ಕೆ ಭರ್ಜರಿ ಆರಂಭ ಒದಗಿಸಿದ್ದರು.

ಮಯಾಂಕ್​ ಜೊತೆಗೂಡಿ ಮೊದಲ ವಿಕೆಟ್​ಗೆ 181 ರನ್​ ಪೇರಿಸಿದ ರೋಹನ್ ಕುನ್ನುಮ್ಮಲ್ ಪೂರ್ವ ವಲಯ ಬೌಲರ್​ಗಳ ಬೆಂಡೆತ್ತಿದ್ದರು. ಮೈದಾನದ ಮೂಲೆ ಮೂಲೆಗೂ ಚೆಂಡನ್ನು ತಲುಪಿಸಿದ ಕೇರಳದ ಈ ಯುವ ಬ್ಯಾಟರ್ ಕೇವಲ 68 ಎಸೆತಗಳಲ್ಲಿ ಶತಕ ಪೂರೈಸಿದರು.

ಶತಕದ ಬಳಿಕ ಬಿರುಸಿನ ಬ್ಯಾಟಿಂಗ್ ಮುಂದುವರೆಸಲು ಹೋದ ರೋಹನ್ 75 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 11 ಫೋರ್​ಗಳೊಂದಿಗೆ 107 ರನ್ ಬಾರಿಸಿ ವಿಕೆಟ್ ಒಪ್ಪಿಸಿದರು. ಮತ್ತೊಂದೆಡೆ ಮಯಾಂಕ್ ಅಗರ್ವಾಲ್ 83 ಎಸೆತಗಳಲ್ಲಿ 63 ರನ್​ಗಳ ಕೊಡುಗೆ ನೀಡಿದರು.

ಬೃಹತ್ ಮೊತ್ತ ಪೇರಿಸಿದ ದಕ್ಷಿಣ ವಲಯ:

ರೋಹನ್ ಕುನ್ನುಮ್ಮಲ್ ಹಾಗೂ ಮಯಾಂಕ್ ಅಗರ್ವಾಲ್ ಅವರ ಭರ್ಜರಿ ಬ್ಯಾಟಿಂಗ್​ನಿಂದ ದಕ್ಷಿಣ ವಲಯ ತಂಡವು ಈ ಪಂದ್ಯದಲ್ಲಿ ಅತ್ಯುತ್ತಮ ಆರಂಭ ಪಡೆಯಿತು. ಇವರ ಬಳಿಕ ಕಣಕ್ಕಿಳಿದ ಎನ್​ ಜಗದೀಸನ್ (60) ಕೂಡ ಅರ್ಧಶತಕ ಸಿಡಿಸಿದರು. ಪರಿಣಾಮ ನಿಗದಿತ 50 ಓವರ್​ಗಳಲ್ಲಿ ದಕ್ಷಿಣ ವಲಯ ತಂಡವು 8 ವಿಕೆಟ್ ನಷ್ಟಕ್ಕೆ 328 ರನ್​ ಪೇರಿಸಿದೆ. ಈ ಮೂಲಕ ಪೂರ್ವ ವಲಯ ತಂಡಕ್ಕೆ 329 ರನ್​ಗಳ ಟಾರ್ಗೆಟ್ ನೀಡಿದೆ.

ರೋಹನ್ ಅಬ್ಬರ:

25 ವರ್ಷದ ರೋಹನ್ ಕುನ್ನುಮ್ಮಲ್ ದೇಶೀಯ ಕ್ರಿಕೆಟ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಮೂಲಕ ಸಂಚಲನ ಸೃಷ್ಟಿಸುತ್ತಿದ್ದಾರೆ. ಈ ಬಾರಿಯ ದೇವಧರ್ ಟೂರ್ನಿಯಲ್ಲಿ 6 ಇನ್ನಿಂಗ್ಸ್‌ಗಳಲ್ಲಿ 62.20 ಸರಾಸರಿಯಲ್ಲಿ 311 ರನ್ ಗಳಿಸಿದ್ದಾರೆ. ಹಾಗೆಯೇ ಲಿಸ್ಟ್ ಎ ಕ್ರಿಕೆಟ್‌ನಲ್ಲಿ ಇದುವರೆಗೆ 3 ಶತಕ ಹಾಗೂ 5 ಅರ್ಧ ಶತಕಗಳನ್ನು ಸಹ ಬಾರಿಸಿದ್ದಾರೆ.

ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ತಂದೆ ಮುಖ ನೋಡಿ ಅಳು ನಿಲ್ಲಿಸಲೇ ಇಲ್ಲ ಉಗ್ರಂ ಮಂಜು; ಎಮೋಷನಲ್ ಎಪಿಸೋಡ್
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಪೊಲೀಸರ ಮೇಲೆ ಅಪಾರ ನಂಬಿಕೆಯಿದೆ, ಸಿಬಿಐ ತನಿಖೆ ಬೇಕಿಲ್ಲ: ಸಿದ್ದರಾಮಯ್ಯ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಸಂವಿಧಾನದ ಆಶಯಗಳಿಗೆ ಕಾಂಗ್ರೆಸ್​ನಿಂದ ಅಪಪ್ರಚಾರ: ಸಿಟಿ ರವಿ
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಯುವಕ ಯುವತಿಯರ ಜೊತೆ ಮಧ್ಯವಯಸ್ಕ ಮಹಿಳೆಯರೂ ಪಬ್​ಗೆ ಬಂದಿದ್ದರು
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ಹೊಸ ವರ್ಷಕ್ಕೆ ಸಿಹಿ ಸುದ್ದಿ ಕೊಟ್ಟ ಶಿವಣ್ಣ: ವಿಡಿಯೋ ನೋಡಿ
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ನ್ಯೂ ಈಯರ್ ರೆವೆಲ್ಲರ್​​ಗಳ ಅಮಲಿನ ಹಾವಭಾವಗಳು ನಗೆ ಹುಟ್ಟಿಸುವಂತಿದ್ದವು!
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಗುಂಡಿನ ಮತ್ತೇ ಗಮ್ಮತ್ತು, ಗೆಳೆಯ ಹೊತ್ತೊಯ್ಯದಿದ್ದರೆ ಕಾದಿತ್ತು ಆಪತ್ತು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ
ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ