ಭರ್ಜರಿ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್, ಮಯಾಂಕ್ ಅಗರ್ವಾಲ್

Vijay hazare Trophy: ವಿಜಯ ಹಝಾರೆ ಟೂರ್ನಿಯಲ್ಲಿ ಗ್ರೂಪ್-ಎ ನಲ್ಲಿ ಕಣಕ್ಕಿಳಿಯುತ್ತಿರುವ ಕರ್ನಾಟಕ ತಂಡವು ಮೊದಲ ಮೂರು ಮ್ಯಾಚ್​ಗಳಲ್ಲೂ ಜಯ ಸಾಧಿಸಿದೆ. ಮೊದಲ ಪಂದ್ಯದಲ್ಲಿ ಜಾರ್ಖಂಡ್ ತಂಡವನ್ನು 5 ವಿಕೆಟ್​ಗಳಿಂದ ಮಣಿಸಿದ್ದ ಕರ್ನಾಟಕ ಎರಡನೇ ಪಂದ್ಯದಲ್ಲಿ ಕೇರಳ ವಿರುದ್ಧ 8 ವಿಕೆಟ್​ಗಳ ಜಯ ಸಾಧಿಸಿತ್ತು. ಇನ್ನು ಮೂರನೇ ಪಂದ್ಯದಲ್ಲಿ ತಮಿಳುನಾಡು ವಿರುದ್ಧ 4 ವಿಕೆಟ್​ಗಳ ಗೆಲುವು ದಾಖಲಿಸಿದೆ.

ಭರ್ಜರಿ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್, ಮಯಾಂಕ್ ಅಗರ್ವಾಲ್
Devdutt Padikkal

Updated on: Dec 31, 2025 | 2:22 PM

ಅಹಮದಾಬಾದ್​ನ ರೈಲ್ವೇಸ್ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆದ ವಿಜಯ ಹಝಾರೆ ಟೂರ್ನಿಯ ಗ್ರೂಪ್-ಎ ಪಂದ್ಯದಲ್ಲಿ ಕರ್ನಾಟಕ ತಂಡ ಬೃಹತ್ ಮೊತ್ತ ಪೇರಿಸಿದೆ. ಪುದುಚೇರಿ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಕರ್ನಾಟಕ ತಂಡಕ್ಕೆ ನಾಯಕ ಮಯಾಂಕ್ ಅಗರ್ವಾಲ್ ಹಾಗೂ ದೇವದತ್ ಪಡಿಕ್ಕಲ್ ಭರ್ಜರಿ ಆರಂಭ ಒದಗಿಸಿದ್ದರು.

ಆರಂಭದಿಂದಲೇ ಉತ್ತಮ ಜೊತೆಯಾಟ ಪ್ರದರ್ಶಿಸಿದ ಈ ಜೋಡಿಯು ಮೊದಲ ವಿಕೆಟ್​ಗೆ ಪೇರಿಸಿದ್ದು ಬರೋಬ್ಬರಿ 228 ರನ್​ಗಳು. ಇದರ ನಡುವೆ 116 ಎಸೆತಗಳಲ್ಲಿ 4 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 113 ರನ್ ಬಾರಿಸಿ ದೇವದತ್ ಪಡಿಕ್ಕಲ್ ಔಟಾದರು.

ಇದಾಗ್ಯೂ ಮತ್ತೊಂದೆಡೆ ಇನಿಂಗ್ಸ್ ಕಟ್ಟುವ ಕಾಯಕ ಮುಂದುವರೆಸಿದ ಮಯಾಂಕ್ ಅಗರ್ವಾಲ್ 124 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 15 ಫೋರ್​ಗಳನ್ನು ಬಾರಿಸಿದರು. ಈ ಮೂಲಕ 132 ರನ್​ಗಳನ್ನು ಬಾರಿಸಿ ಮಯಾಂಕ್​​ ವಿಕೆಟ್ ಒಪ್ಪಿಸಿದರು.

ಆ ಬಳಿಕ ಬಂದ ಕರುಣ್ ನಾಯರ್ ತಮ್ಮ ಅನುಭವಯನ್ನು ಧಾರೆಯೆದರು. ಈ ಮೂಲಕ 34 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 4 ಫೋರ್​ಗಳೊಂದಿಗೆ ಅಜೇಯ 64 ರನ್ ಬಾರಿಸಿದರು.

ಇನ್ನು ಸ್ಮರಣ್ ರವಿಚಂದ್ರನ್ 21 ರನ್​ಗಳ ಕೊಡುಗೆ ನೀಡಿದರೆ, ಅಭಿನವ್ ಮನೋಹರ್ 6 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 2 ಫೋರ್​ಗಳೊಂದಿಗೆ ಅಜೇಯ 21 ರನ್ ಬಾರಿಸಿದರು. ಈ ಮೂಲಕ ಕರ್ನಾಟಕ ತಂಡವು 50 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 363 ರನ್​ ಕಲೆಹಾಕಿದೆ.

ಪುದುಚೇರಿ (ಪ್ಲೇಯಿಂಗ್ XI): ಸಿದಕ್ ಸಿಂಗ್, ವಿಶಾಲ್ ಖೋಖರ್, ಅಜಯ್ ರೊಹೆರಾ (ವಿಕೆಟ್ ಕೀಪರ್), ನೆಯಾನ್ ಶ್ಯಾಮ್ ಕಂಗಾಯನ್, ಜಶ್ವಂತ್ ಶ್ರೀರಾಮ್, ಮೋಹಿತ್ ಕಾಳೆ, ಪಾರ್ಥ್ ವಘಾನಿ, ಅಮಾನ್ ಖಾನ್ (ನಾಯಕ), ಜಯಂತ್ ಯಾದವ್, ಸಾಗರ್ ಉದೇಶಿ, ವಿಕನೇಶ್ವರನ್ ಮರಿಮುತ್ತು.

ಇದನ್ನೂ ಓದಿ: ಯಾರಿಂದಲೂ ಸಾಧ್ಯವಾಗದ ವಿಶ್ವ ದಾಖಲೆ ನಿರ್ಮಿಸಿದ ಅಭಿಷೇಕ್ ಶರ್ಮಾ

ಕರ್ನಾಟಕ (ಪ್ಲೇಯಿಂಗ್ XI): ಮಯಾಂಕ್ ಅಗರ್ವಾಲ್ (ನಾಯಕ), ದೇವದತ್ ಪಡಿಕ್ಕಲ್, ಕರುಣ್ ನಾಯರ್, ಸ್ಮರಣ್ ರವಿಚಂದ್ರನ್, ಕೃಷ್ಣನ್ ಶ್ರೀಜಿತ್ (ವಿಕೆಟ್ ಕೀಪರ್), ಶ್ರೇಯಸ್ ಗೋಪಾಲ್, ಅಭಿನವ್ ಮನೋಹರ್, ಶ್ರೀಶ ಆಚಾರ್, ಅಭಿಲಾಷ್ ಶೆಟ್ಟಿ, ವಿಧ್ವತ್ ಕಾವೇರಪ್ಪ, ಮನ್ವಂತ್ ಕುಮಾರ್.