ಶಾನ್​ದಾರ್ ಶತಕ ಸಿಡಿಸಿದ ದೇವದತ್ ಪಡಿಕ್ಕಲ್

Devdutt Padikkal: ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ಪರ ಕಣಕ್ಕಿಳಿದಿದ್ದ ದೇವದತ್ ಪಡಿಕ್ಕಲ್ ಇದೀಗ ದೇಶೀಯ ಅಂಗಳದಲ್ಲಿ ಕಣಕ್ಕಿಳಿದಿದ್ದಾರೆ. ವಿಜಯ ಹಝಾರೆ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ಪರ ಬ್ಯಾಟ್ ಬೀಸಿರುವ ಪಡಿಕ್ಕಲ್ ಭರ್ಜರಿ ಶತಕ ಸಿಡಿಸುವ ಮೂಲಕ ಗಮನ ಸೆಳೆದಿದ್ದಾರೆ.

ಶಾನ್​ದಾರ್ ಶತಕ ಸಿಡಿಸಿದ ದೇವದತ್ ಪಡಿಕ್ಕಲ್
Devdutt Padikkal
Follow us
ಝಾಹಿರ್ ಯೂಸುಫ್
|

Updated on: Jan 11, 2025 | 12:04 PM

ವಡೋದರದ ಮೋತಿ ಬಾಗ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ವಿಜಯ ಹಝಾರೆ ಟೂರ್ನಿಯ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡದ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಭರ್ಜರಿ ಸೆಂಚುರಿ ಸಿಡಿಸಿ ಮಿಂಚಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಬರೋಡಾ ತಂಡದ ನಾಯಕ ಕೃನಾಲ್ ಪಾಂಡ್ಯ ಕರ್ನಾಟಕ ತಂಡವನ್ನು ಬ್ಯಾಟಿಂಗ್​ಗೆ ಆಹ್ವಾನಿಸಿದರು.

ಅದರಂತೆ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ ಕೇವಲ 6 ರನ್ ಗಳಿಸಿ ವಿಕೆಟ್ ಒಪ್ಪಿಸಿದರು. ಆದರೆ ಮತ್ತೊಂದೆಡೆ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ದೇವದತ್ ಪಡಿಕ್ಕಲ್ ಯುವ ಆಟಗಾರ ಅನೀಶ್ ಜೊತೆಗೂಡಿ ಇನಿಂಗ್ಸ್ ಕಟ್ಟಿದರು.

ಅನುಭವಿ ಬರೋಡಾ ಬೌಲರ್​​ಗಳನ್ನು ನಿರಾಯಾಸವಾಗಿ ಎದುರಿಸಿದ ಪಡಿಕ್ಕಲ್ ಮೈದಾನದ ಮೂಲೆ ಮೂಲೆಗೂ ಫೋರ್​​ಗಳ ಸುರಿಮಳೆಗೈದರು. ಈ ಮೂಲಕ ಕೇವಲ 96 ಎಸೆತಗಳಲ್ಲಿ 1 ಭರ್ಜರಿ ಸಿಕ್ಸ್ ಹಾಗೂ 15 ಫೋರ್​ಗಳೊಂದಿಗೆ ಶತಕ ಪೂರೈಸಿದರು.

ಆದರೆ ಶತಕದ ಬೆನ್ನಲ್ಲೇ ಭರ್ಜರಿ ಹೊಡೆತಕ್ಕೆ ಮುಂದಾದ ದೇವದತ್ ಪಡಿಕ್ಕಲ್ (102 ರನ್, 99 ಎಸೆತ) ರಾಜ್ ಲಿಂಬಾನಿ ಎಸೆತದಲ್ಲಿ ಕ್ಯಾಚಿತ್ತು ನಿರ್ಗಮಿಸಿದರು. ಮತ್ತೊಂದೆಡೆ ಪಡಿಕ್ಕಲ್​ಗೆ ಉತ್ತಮ ಸಾಥ್ ನೀಡಿದ ಅನೀಶ್ 64 ಎಸೆತಗಳಲ್ಲಿ 54 ರನ್​ ಬಾರಿಸಿದರು. ಈ ಭರ್ಜರಿ ಬ್ಯಾಟಿಂಗ್ ನೆರವಿನಿಂದ ಕರ್ನಾಟಕ ತಂಡವು 41 ಓವರ್​​ಗಳ ಮುಕ್ತಾಯದ ವೇಳೆಗೆ 3 ವಿಕೆಟ್ ಕಳೆದುಕೊಂಡು 220 ರನ್ ಕಲೆಹಾಕಿದೆ.

ಕರ್ನಾಟಕ ಪ್ಲೇಯಿಂಗ್ 11: ಮಯಾಂಕ್ ಅಗರವಾಲ್ (ನಾಯಕ) , ದೇವದತ್ ಪಡಿಕ್ಕಲ್ , ಅನೀಶ್ ಕೆ ವಿ , ಸ್ಮರಣ್ ರವಿಚಂದ್ರನ್ , ಕೃಷ್ಣನ್ ಶ್ರೀಜಿತ್ ( ವಿಕೆಟ್ ಕೀಪರ್ ) , ಅಭಿನವ್ ಮನೋಹರ್ , ಹಾರ್ದಿಕ್ ರಾಜ್ , ಶ್ರೇಯಸ್ ಗೋಪಾಲ್ , ಅಭಿಲಾಷ್ ಶೆಟ್ಟಿ , ವಾಸುಕಿ ಕೌಶಿಕ್ , ಪ್ರಸಿದ್ಧ್ ಕೃಷ್ಣ.

ಇದನ್ನೂ ಓದಿ: 1,955 ಎಸೆತಗಳಲ್ಲಿ ಇತಿಹಾಸ ರಚಿಸಿದ ಗ್ಲೆನ್ ಮ್ಯಾಕ್ಸ್​ವೆಲ್

ಬರೋಡಾ ಪ್ಲೇಯಿಂಗ್ 11: ಶಾಶ್ವತ್ ರಾವತ್ , ನಿನಾದ್ ಅಶ್ವಿನ್ ಕುಮಾರ್ ರಥ್ವಾ , ಅತಿತ್ ಶೇಠ್ , ಶಿವಾಲಿಕ್ ಶರ್ಮಾ , ಕೃನಾಲ್ ಪಾಂಡ್ಯ (ನಾಯಕ) , ವಿಷ್ಣು ಸೋಲಂಕಿ ( ವಿಕೆಟ್ ಕೀಪರ್ ) , ಮಹೇಶ್ ಪಿಥಿಯಾ , ಭಾರ್ಗವ್ ಭಟ್ , ಭಾನು ಪಾನಿಯಾ , ರಾಜ್ ಲಿಂಬಾನಿ , ಲುಕ್ಮಾನ್ ಮೇರಿವಾಲಾ.

ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
ದಾಸರಹಳ್ಳಿ ವಲಯ ಕಚೇರಿ ಇಂಜನೀಯರ್ ಯದುಕೃಷ್ಣ ಸಿಕ್ಕಿಬಿದ್ದ ಅಧಿಕಾರಿ
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ