Devdutt Padikkal: ಭರ್ಜರಿ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್

| Updated By: ಝಾಹಿರ್ ಯೂಸುಫ್

Updated on: Jan 06, 2024 | 1:30 PM

Devdutt Padikkal: ಪಂಜಾಬ್ ತಂಡ ಆಲೌಟ್ ಆದ ಬೆನ್ನಲ್ಲೇ ಮೊದಲ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ನಾಯಕ ಮಯಾಂಕ್ ಅಗರ್ವಾಲ್ (0) ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಈ ಹಂತದಲ್ಲಿ ಜೊತೆಗೂಡಿದ ರವಿಕುಮಾರ್ ಸಮರ್ಥ್ (38) ಹಾಗೂ ದೇವದತ್ ಪಡಿಕ್ಕಲ್ 2ನೇ ವಿಕೆಟ್​ಗೆ 76 ರನ್​ಗಳ ಜೊತೆಯಾಟವಾಡಿದರು. ಆ ಬಳಿಕ ಬಂದ ನಿಕಿನ್ ಜೋಸ್ ಕೇವಲ 8 ರನ್​ಗಳಿಸಿ ನಿರ್ಗಮಿಸಿದರು.

Devdutt Padikkal: ಭರ್ಜರಿ ಸೆಂಚುರಿ ಸಿಡಿಸಿದ ದೇವದತ್ ಪಡಿಕ್ಕಲ್
Devdutt Padikkal
Follow us on

ಹುಬ್ಬಳ್ಳಿಯ ಕೆಎಸ್​ಸಿಎ ಕ್ರಿಕೆಟ್ ಗ್ರೌಂಡ್​ನಲ್ಲಿ ನಡೆಯುತ್ತಿರುವ ರಣಜಿ ಟೂರ್ನಿಯ ಗ್ರೂಪ್-ಸಿ ಪಂದ್ಯದಲ್ಲಿ ಕರ್ನಾಟಕ ತಂಡದ ಯುವ ಬ್ಯಾಟರ್ ದೇವದತ್ ಪಡಿಕ್ಕಲ್ (Devdutt Padikkal) ಭರ್ಜರಿ ಶತಕ ಸಿಡಿಸಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಪಂಜಾಬ್ ತಂಡವು ಬ್ಯಾಟಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಪಂಜಾಬ್ ತಂಡವು ಉತ್ತಮ ಆರಂಭ ಪಡೆದಿರಲಿಲ್ಲ.

ವಾಸುಕಿ ಕೌಶಿಕ್ ಅವರ ಮಾರಕ ದಾಳಿಗೆ ತತ್ತರಿಸಿದ ಪಂಜಾಬ್ ತಂಡವು ಕೇವಲ 89 ರನ್​ಗಳಿಗೆ 5 ವಿಕೆಟ್ ಕಳೆದುಕೊಂಡಿತು. ಈ ಹಂತದಲ್ಲಿ ಎಚ್ಚರಿಕೆಯ ಬ್ಯಾಟಿಂಗ್ ಪ್ರದರ್ಶಿಸಿದ ನೆಹಾಲ್ ವಧೇರ 44 ರನ್​ಗಳ ಕೊಡುಗೆ ನೀಡಿದರು.

ಇದಾಗ್ಯೂ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಕರ್ನಾಟಕ ಬೌಲರ್​ಗಳು ಕೇವಲ 152 ರನ್​ಗಳಿಗೆ ಪಂಜಾಬ್ ತಂಡವನ್ನು ಆಲೌಟ್ ಮಡುವಲ್ಲಿ ಯಶಸ್ವಿಯಾದರು. ಕರ್ನಾಟಕ ಪರ 15 ಓವರ್​ಗಳನ್ನು ಎಸೆದ ವಾಸುಕಿ ಕೌಶಿಕ್ ಕೇವಲ 41 ರನ್ ನೀಡಿ 7 ವಿಕೆಟ್ ಕಬಳಿಸಿ ಮಿಂಚಿದರು.

ದೇವದತ್ ಭರ್ಜರಿ ಶತಕ:

ಪಂಜಾಬ್ ತಂಡ ಆಲೌಟ್ ಆದ ಬೆನ್ನಲ್ಲೇ ಮೊದಲ ಇನಿಂಗ್ಸ್ ಆರಂಭಿಸಿದ ಕರ್ನಾಟಕ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. ನಾಯಕ ಮಯಾಂಕ್ ಅಗರ್ವಾಲ್ (0) ಶೂನ್ಯಕ್ಕೆ ಔಟಾಗುವ ಮೂಲಕ ನಿರಾಸೆ ಮೂಡಿಸಿದರು. ಈ ಹಂತದಲ್ಲಿ ಜೊತೆಗೂಡಿದ ರವಿಕುಮಾರ್ ಸಮರ್ಥ್ (38) ಹಾಗೂ ದೇವದತ್ ಪಡಿಕ್ಕಲ್ 2ನೇ ವಿಕೆಟ್​ಗೆ 76 ರನ್​ಗಳ ಜೊತೆಯಾಟವಾಡಿದರು. ಆ ಬಳಿಕ ಬಂದ ನಿಕಿನ್ ಜೋಸ್ ಕೇವಲ 8 ರನ್​ಗಳಿಸಿ ನಿರ್ಗಮಿಸಿದರು.

ಮತ್ತೊಂದೆಡೆ ಭರ್ಜರಿ ಬ್ಯಾಟಿಂಗ್ ಮುಂದುವರೆಸಿದ ದೇವದತ್ ಪಡಿಕ್ಕಲ್ 115 ಎಸೆತಗಳಲ್ಲಿ ಶತಕ ಪೂರೈಸಿದರು. ಶತಕದ ಬಳಿಕ ಬಿರುಸಿನ ಬ್ಯಾಟಿಂಗ್ ಮುಂದುವರೆಸಿದ ಪಡಿಕ್ಕಲ್​ಗೆ ಮನೀಶ್ ಪಾಂಡೆ ಉತ್ತಮ ಸಾಥ್ ನೀಡಿದರು.

ಪರಿಣಾಮ ಪಡಿಕ್ಕಲ್ ಸ್ಪೋಟಕ ಬ್ಯಾಟಿಂಗ್​ಗೆ ಒತ್ತು ನೀಡಿದರು. ಅದರಂತೆ 216 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 24 ಫೋರ್​ಗಳೊಂದಿಗೆ 193 ರನ್​ ಬಾರಿಸಿ ವಿಕೆಟ್ ಒಪ್ಪಿಸಿದರು. ಈ ಮೂಲಕ ಕೇವಲ 7 ರನ್​ಗಳಿಂದ ದ್ವಿಶತಕ ವಂಚಿತರಾದರು.

ಪಾಂಡೆ ಪವರ್​:

ಆಕರ್ಷಕ ಹೊಡೆತಗಳೊಂದಿಗೆ ಗಮನ ಸೆಳೆದ ಮನೀಶ್ ಪಾಂಡೆ ಕೂಡ ಭರ್ಜರಿ ಫಾರ್ಮ್​ ಪ್ರದರ್ಶಿಸಿದರು. ಪರಿಣಾಮ ಪಾಂಡೆ ಬ್ಯಾಟ್​ನಿಂದ ಕೇವಲ 142 ಎಸೆತಗಳಲ್ಲಿ ಸೆಂಚುರಿ ಮೂಡಿಬಂತು. 79 ಓವರ್​ಗಳ ಮುಕ್ತಾಯದ ವೇಳೆಗೆ ಕರ್ನಾಟಕ ತಂಡವು 4 ವಿಕೆಟ್ ಕಳೆದುಕೊಂಡು 358 ರನ್​ ಕಲೆಹಾಕಿದೆ. ಸದ್ಯ ಕ್ರೀಸ್​ನಲ್ಲಿ ಮನೀಶ್ ಪಾಂಡೆ (104) ಹಾಗೂ ಶ್ರೀನಿವಾಸ್ ಶರತ್ (9) ಬ್ಯಾಟಿಂಗ್ ಮಾಡುತ್ತಿದ್ದಾರೆ.

ಕರ್ನಾಟಕ ಪ್ಲೇಯಿಂಗ್ 11: ಮಯಾಂಕ್ ಅಗರ್ವಾಲ್ (ನಾಯಕ) , ದೇವದತ್ ಪಡಿಕ್ಕಲ್ , ರವಿಕುಮಾರ್ ಸಮರ್ಥ್ , ಮನೀಶ್ ಪಾಂಡೆ , ನಿಕಿನ್ ಜೋಸ್ , ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್) , ಶುಭಾಂಗ್ ಹೆಗ್ಡೆ , ವಿಜಯ್ ಕುಮಾರ್ ವೈಶಾಕ್ , ರೋಹಿತ್ ಕುಮಾರ್ , ವಿಧ್ವತ್ ಕಾವೇರಪ್ಪ , ವಾಸುಕಿ ಕೌಶಿಕ್.

ಇದನ್ನೂ ಓದಿ: David Warner: ದಾಖಲೆಯೊಂದಿಗೆ ವಿದಾಯ ಹೇಳಿದ ಡೇವಿಡ್ ವಾರ್ನರ್

ಪಂಜಾಬ್ ಪ್ಲೇಯಿಂಗ್ 11: ಪ್ರಭ್‌ಸಿಮ್ರಾನ್ ಸಿಂಗ್ , ಅಭಿಷೇಕ್ ಶರ್ಮಾ , ಮನ್‌ದೀಪ್ ಸಿಂಗ್ (ನಾಯಕ) , ನೆಹಾಲ್ ವಧೇರ , ನಮನ್ ಧೀರ್ , ಗೀತಾಂಶ್ ಖೇರಾ (ವಿಕೆಟ್ ಕೀಪರ್) , ಬಲ್ತೇಜ್ ಸಿಂಗ್ , ಮಯಾಂಕ್ ಮಾರ್ಕಾಂಡೆ , ಪ್ರೀತ್ ದತ್ತಾ , ಸಿದ್ದಾರ್ಥ್ ಕೌಲ್ , ಅರ್ಷದೀಪ್ ಸಿಂಗ್.