ಸೌತ್ ಆಫ್ರಿಕಾ ಏಕದಿನ ತಂಡ ಪ್ರಕಟ: ಯುವ ಸ್ಪೋಟಕ ದಾಂಡಿಗ ಎಂಟ್ರಿ

South Africa squad: ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಹಿರಿಯ ಆಟಗಾರರಾದ ಕ್ವಿಂಟನ್ ಡಿ ಕಾಕ್, ಕಗಿಸೊ ರಬಾಡ, ಅನ್ರಿಕ್ ನೋಕಿಯಾ ಮತ್ತು ಹೆನ್ರಿಕ್ ಕ್ಲಾಸೆನ್ ಅವರನ್ನು ಹೊರಗಿಡಲಾಗಿದೆ. ಮುಂಬರುವ ಏಕದಿನ ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ.

ಸೌತ್ ಆಫ್ರಿಕಾ ಏಕದಿನ ತಂಡ ಪ್ರಕಟ: ಯುವ ಸ್ಪೋಟಕ ದಾಂಡಿಗ ಎಂಟ್ರಿ
South Africa
Follow us
TV9 Web
| Updated By: ಝಾಹಿರ್ ಯೂಸುಫ್

Updated on: Aug 14, 2023 | 9:21 PM

ಆಸ್ಟ್ರೇಲಿಯಾ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗಾಗಿ ಸೌತ್ ಆಫ್ರಿಕಾ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ತಂಡದಲ್ಲಿ ಯುವ ಸ್ಪೋಟಕ ದಾಂಡಿಗ ಡೆವಾಲ್ಡ್ ಬ್ರೆವಿಸ್ ಸ್ಥಾನ ಪಡೆದಿದ್ದಾರೆ. 2022 ರ ಅಂಡರ್-19 ವಿಶ್ವಕಪ್​ನಲ್ಲಿ ಒಟ್ಟು 506 ರನ್ ಸಿಡಿಸಿ ಅಬ್ಬರಿಸಿದ್ದ ಬ್ರೆವಿಸ್ ಆ ಬಳಿಕ ವಿಶ್ವದ ಪ್ರಮುಖ ಲೀಗ್​ಗಳಲ್ಲಿ ಕಾಣಿಸಿಕೊಂಡಿದ್ದರು.

ಅದರಲ್ಲೂ ಐಪಿಎಲ್​ನಲ್ಲಿ ಮುಂಬೈ ಇಂಡಿಯನ್ಸ್ ಪರ ಆಯ್ಕೆಯಾಗಿದ್ದ ಬ್ರೆವಿಸ್ ಆ ಬಳಿಕ MI ಕೇಪ್ ಟೌನ್ ಮತ್ತು MI ನ್ಯೂಯಾರ್ಕ್ ತಂಡಗಳ ಪರ ಕಣಕ್ಕಿಳಿದಿದ್ದರು. ಇದೀಗ ಸೌತ್ ಆಫ್ರಿಕಾ ರಾಷ್ಟ್ರೀಯ ತಂಡದಿಂದಲೂ ಯುವ ಡ್ಯಾಶಿಂಗ್ ಬ್ಯಾಟರ್​ಗೆ ಬುಲಾವ್ ಸಿಕ್ಕಿದೆ.

ಸೌತ್ ಆಫ್ರಿಕಾ ಆಸ್ಟ್ರೇಲಿಯಾ ಸರಣಿ:

ಆಸ್ಟ್ರೇಲಿಯಾ ಹಾಗೂ ಸೌತ್ ಆಫ್ರಿಕಾ ನಡುವಣ ಮೂರು ಪಂದ್ಯಗಳ ಟಿ20 ಸರಣಿ ಆಗಸ್ಟ್ 30 ರಿಂದ ಶುರುವಾಗಲಿದೆ. ಇದರ ಬೆನ್ನಲ್ಲೇ ಐದು ಪಂದ್ಯಗಳ ಏಕದಿನ ಸರಣಿ ನಡೆಯಲಿದೆ. ಈ ಸರಣಿಯ ಕೊನೆಯ ಪಂದ್ಯ ಸೆಪ್ಟೆಂಬರ್ 17 ರಂದು ನಡೆಯಲಿದ್ದು, ಆ ಬಳಿಕ ಸೌತ್ ಆಫ್ರಿಕಾ ತಂಡ ಏಕದಿನ ವಿಶ್ವಕಪ್​ಗಾಗಿ ಭಾರತಕ್ಕೆ ಬರಲಿದೆ. ಹೀಗಾಗಿ ಏಕದಿನ ವಿಶ್ವಕಪ್​ಗೂ ಇದೇ ತಂಡ ಮುಂದುವರೆಯುವ ಸಾಧ್ಯತೆಯಿದೆ.

ಟಿ20 ಸರಣಿಯಿಂದ ಸ್ಟಾರ್​ ಆಟಗಾರರಿಗೆ ವಿಶ್ರಾಂತಿ:

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಹಿರಿಯ ಆಟಗಾರರಾದ ಕ್ವಿಂಟನ್ ಡಿ ಕಾಕ್, ಕಗಿಸೊ ರಬಾಡ, ಅನ್ರಿಕ್ ನೋಕಿಯಾ ಮತ್ತು ಹೆನ್ರಿಕ್ ಕ್ಲಾಸೆನ್ ಅವರನ್ನು ಹೊರಗಿಡಲಾಗಿದೆ. ಮುಂಬರುವ ಏಕದಿನ ವಿಶ್ವಕಪ್​ ಅನ್ನು ಗಮನದಲ್ಲಿರಿಸಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲಾಗಿದೆ. ಅಲ್ಲದೆ ಈ ನಾಲ್ವರು ಆಟಗಾರರು ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸೌತ್ ಆಫ್ರಿಕಾ ಟಿ20 ತಂಡ: ಐಡೆನ್ ಮಾರ್ಕ್ರಾಮ್ (ನಾಯಕ), ಟೆಂಬಾ ಬವುಮಾ, ಮ್ಯಾಥ್ಯೂ ಬ್ರೀಟ್ಜ್ಕೆ, ಡೆವಾಲ್ಡ್ ಬ್ರೆವಿಸ್, ಜೆರಾಲ್ಡ್ ಕೊಯೆಟ್ಜಿ, ಡೊನೊವನ್ ಫೆರೀರಾ, ಜಾರ್ನ್ ಫೋರ್ಚುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಸಿಸಂದಾ ಮಗಲಾ, ಕೇಶವ್ ಮಹಾರಾಜ್, ಲುಂಗಿ ಎನ್​ಗಿಡಿ, ತಬ್ರೇಝ್ ಶಂಸಿ, ಟ್ರಿಸ್ಟನ್ ಸ್ಟಬ್ಸ್, ಲಿಝಾರ್ಡ್ ವಿಲಿಯಮ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್.

ಇದನ್ನೂ ಓದಿ: Dewald Brevis: ಜೆರ್ಸಿ ನಂಬರ್ 17, RCB ಫ್ಯಾನ್: ಯಾರು ಈ ಬೇಬಿ AB?

ಸೌತ್ ಆಫ್ರಿಕಾ ಏಕದಿನ ತಂಡ: ಟೆಂಬಾ ಬಾವುಮಾ (ನಾಯಕ), ಡೆವಾಲ್ಡ್ ಬ್ರೆವಿಸ್, ಜೆರಾಲ್ಡ್ ಕೊಯೆಟ್ಜಿ, ಕ್ವಿಂಟನ್ ಡಿ ಕಾಕ್, ಜಾರ್ನ್ ಫೋರ್ಚುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಯಾನ್ಸೆನ್, ಹೆನ್ರಿಕ್ ಕ್ಲಾಸೆನ್, ಸಿಸಂದಾ ಮಗಲಾ, ಕೇಶವ್ ಮಹಾರಾಜ್, ಐಡೆನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಲುಂಗಿ ಎನ್​ಗಿಡಿ, ಅನ್ರಿಕ್ ನೋಕಿಯಾ, ತಬ್ರೇಝ್ ಶಂಸಿ, ವೇಯ್ನ್ ಪಾರ್ನೆಲ್ , ಕಗಿಸೊ ರಬಾಡ , ಟ್ರಿಸ್ಟನ್ ಸ್ಟಬ್ಸ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್.

ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ