AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡೆವಾಲ್ಡ್ ಬ್ರೆವಿಸ್ ಆರ್ಭಟಕ್ಕೆ ದಾಖಲೆಗಳೆಲ್ಲಾ ಧೂಳೀಪಟ

ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಸೌತ್ ಆಫ್ರಿಕಾದ ಯುವ ದಾಂಡಿಗ ಡೆವಾಲ್ಡ್ ಬ್ರೆವಿಸ್ ಭರ್ಜರಿ ಪ್ರದರ್ಶನ ನೀಡಿದ್ದಾರೆ. ದ್ವಿತೀಯ ಮ್ಯಾಚ್​ನಲ್ಲಿ ಸ್ಫೋಟಕ ಸೆಂಚುರಿ ಸಿಡಿಸಿದ್ದ ಬ್ರೆವಿಸ್ ಕೊನೆಯ ಟಿ20 ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದಾರೆ. ಈ ಶತಕ ಹಾಗೂ ಅರ್ಧಶತಕಗಳೊಂದಿಗೆ ಬ್ರೆವಿಸ್ ಹಲವು ದಾಖಲೆಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.

ಡೆವಾಲ್ಡ್ ಬ್ರೆವಿಸ್ ಆರ್ಭಟಕ್ಕೆ ದಾಖಲೆಗಳೆಲ್ಲಾ ಧೂಳೀಪಟ
Dewald Brevis
ಝಾಹಿರ್ ಯೂಸುಫ್
|

Updated on: Aug 17, 2025 | 3:17 PM

Share

ಟಿ20 ಕ್ರಿಕೆಟ್​​ನಲ್ಲಿ ಸೌತ್ ಆಫ್ರಿಕಾ ತಂಡದ ಯುವ ದಾಂಡಿಗ ಡೆವಾಲ್ಡ್ ಬ್ರೆವಿಸ್ ಆರ್ಭಟ ಮುಂದುವರೆದಿದೆ. ಈ ಆರ್ಭಟದೊಂದಿಗೆ ದ್ವಿತೀಯ ಟಿ20 ಪಂದ್ಯದಲ್ಲಿ ಶತಕ ಸಿಡಿಸಿದ್ದ ಬ್ರೆವಿಸ್ ಇದೀಗ ಮೂರನೇ ಪಂದ್ಯದಲ್ಲಿ ಸ್ಫೋಟಕ ಅರ್ಧಶತಕ ಬಾರಿಸಿದ್ದಾರೆ. ಈ ಭರ್ಜರಿ ಪ್ರದರ್ಶನದೊಂದಿಗೆ ಬ್ರೆವಿಸ್ ಆಸ್ಟ್ರೇಲಿಯಾ ವಿರುದ್ಧ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ದಾಖಲೆಗಳ ಸಂಪೂರ್ಣ ಪಟ್ಟಿ ಈ ಕೆಳಗಿನಂತಿದೆ…

ಅತ್ಯಧಿಕ ರನ್: ಆಸ್ಟ್ರೇಲಿಯಾ ವಿರುದ್ಧ ಟಿ20 ಪಂದ್ಯದಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ದಾಖಲೆ ಡೆವಾಲ್ಡ್ ಬ್ರೆವಿಸ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ರುತುರಾಜ್ ಗಾಯಕ್ವಾಡ್ (123) ಹೆಸರಿನಲ್ಲಿತ್ತು. ಆದರೆ ಆಸೀಸ್ ವಿರುದ್ಧದ ಸರಣಿಯ ದ್ವಿತೀಯ ಪಂದ್ಯದಲ್ಲಿ 125 ರನ್​ ಸಿಡಿಸುವ ಮೂಲಕ ಬ್ರೆವಿಸ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಗರಿಷ್ಠ ಸ್ಕೋರ್: ಆಸ್ಟ್ರೇಲಿಯಾದಲ್ಲಿ ಆಸೀಸ್ ವಿರುದ್ಧ ಟಿ20 ಪಂದ್ಯದಲ್ಲಿ ಗರಿಷ್ಠ ಸ್ಕೋರ್ ಗಳಿಸಿದ ವಿದೇಶಿ ಬ್ಯಾಟರ್ ಎಂಬ ದಾಖಲೆ ಕೂಡ ಡೆವಾಲ್ಡ್ ಬ್ರೆವಿಸ್ ಹೆಸರಿಗೆ ಸೇರ್ಪಡೆಯಾಗಿದೆ. ಇದಕ್ಕೂ ಮುನ್ನ ಈ ದಾಖಲೆ ನ್ಯೂಝಿಲೆಂಡ್​​ನ ಡೆವೊನ್ ಕಾನ್ವೆ (92) ಹೆಸರಿನಲ್ಲಿತ್ತು. ಇದೀಗ 125 ರನ್​ಗಳೊಂದಿಗೆ ಬ್ರೆವಿಸ್ ಈ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಕಿರಿಯ ಶತಕವೀರ: ಆಸ್ಟ್ರೇಲಿಯಾ ವಿರುದ್ಧ ಟಿ20 ಶತಕ ಸಿಡಿಸಿದ ಅತ್ಯಂತ ಕಿರಿಯ ಬ್ಯಾಟರ್ ಎಂಬ ಹೆಗ್ಗಳಿಕೆಯನ್ನು ಡೆವಾಲ್ಡ್ ಬ್ರೆವಿಸ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ರೆಕಾರ್ಡ್ 26 ವರ್ಷದ ರುತುರಾಜ್ ಗಾಯಕ್ವಾಡ್ ಹೆಸರಿನಲ್ಲಿತ್ತು. ಇದೀಗ 22ನೇ ವಯಸ್ಸಿನಲ್ಲಿ ಶತಕ ಸಿಡಿಸಿ ಡೆವಾಲ್ಡ್ ಬ್ರೆವಿಸ್ ಹೊಸ ಇತಿಹಾಸ ನಿರ್ಮಿಸಿದ್ದಾರೆ.

ಅತೀ ವೇಗದ ಅರ್ಧಶತಕ: ಆಸ್ಟ್ರೇಲಿಯಾ ವಿರುದ್ಧ ಆಸ್ಟ್ರೇಲಿಯಾದಲ್ಲಿ ಅತೀ ವೇಗದ ಅರ್ಧಶತಕ ಬಾರಿಸಿದ ದಾಖಲೆ ಕೂಡ ಡೆವಾಲ್ಡ್ ಬ್ರೆವಿಸ್ ಪಾಲಾಗಿದೆ. ಇದಕ್ಕೂ ಮುನ್ನ ಈ ದಾಖಲೆ ರವಿ ಬೋಪಾರ ಹೆಸರಿನಲ್ಲಿತ್ತು. ಬೋಪಾರ 23 ಎಸೆತಗಳಲ್ಲಿ ಅರ್ಧಶತಕ ಬಾರಿಸಿದ್ದರೆ, ಇದೀಗ ಡೆವಾಲ್ಡ್ ಬ್ರೆವಿಸ್ 22 ಬಾಲ್​ಗಳಲ್ಲಿ ಹಾಫ್ ಸೆಂಚುರಿ ಸಿಡಿಸಿ ದಾಖಲೆ ನಿರ್ಮಿಸಿದ್ದಾರೆ.

ಇದನ್ನೂ ಓದಿ: IPL 2026: ಇಬ್ಬರ ಡೀಲ್… ಸಂಜು ಸ್ಯಾಮ್ಸನ್ ಮೇಲೆ KKR ಕಣ್ಣು

ಸಿಕ್ಸರ್ ಕಿಂಗ್: ಕಾಂಗರೂ ನಾಡಿನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಟಿ20 ಸರಣಿಯಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ದಾಖಲೆಯನ್ನು ಕೂಡ ಬ್ರೆವಿಸ್ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ರೆಕಾರ್ಡ್ ದಾಖಲೆಗಳ ಸರದಾರ ವಿರಾಟ್ ಕೊಹ್ಲಿಯ ಹೆಸರಿನಲ್ಲಿತ್ತು. ಕಿಂಗ್ ಕೊಹ್ಲಿ ಒಟ್ಟು 13 ಸಿಕ್ಸ್ ಬಾರಿಸಿ ಈ ಹಿಂದೆ ದಾಖಲೆ ನಿರ್ಮಿಸಿದ್ದರು. ಇದೀಗ 14 ಸಿಕ್ಸರ್​ಗಳೊಂದಿಗೆ ಡೆವಾಲ್ಡ್ ಬ್ರೆವಿಸ್ ಈ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದ್ದಾರೆ.

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು