AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhananjaya De Silva: ಪಾಕ್ ವಿರುದ್ಧ ಶತಕ ಸಿಡಿಸಿದ ಡಿಸಿಲ್ವಾ

Sri Lanka vs Pakistan, 1st Test: ಪ್ರಥಮ ಇನಿಂಗ್ಸ್ ಆರಂಭಿಸಿದ ಪಾಕಿಸ್ತಾನ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. 73 ರನ್​ಗಳಿಸುವಷ್ಟರಲ್ಲಿ ಶಫೀಖ್ (19), ಇಮಾಮ್ ಉಲ್ ಹಕ್ (1), ಶಾನ್ ಮಸೂದ್ (39) ಹಾಗೂ ಬಾಬರ್ ಆಝಂ (13) ವಿಕೆಟ್ ಕಳೆದುಕೊಂಡಿತು.

Dhananjaya De Silva: ಪಾಕ್ ವಿರುದ್ಧ ಶತಕ ಸಿಡಿಸಿದ ಡಿಸಿಲ್ವಾ
Dhananjaya De Silva
TV9 Web
| Updated By: ಝಾಹಿರ್ ಯೂಸುಫ್|

Updated on: Jul 17, 2023 | 5:23 PM

Share

Sri Lanka vs Pakistan, 1st Test: ಗಾಲೆ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಾಕಿಸ್ತಾನ್ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ತಂಡದ ಧನಂಜಯ ಡಿಸಿಲ್ವಾ ಶತಕ ಸಿಡಿಸಿ ಮಿಂಚಿದ್ದಾರೆ. ಇದಕ್ಕೂ ಮುನ್ನ ಈ ಪಂದ್ಯದಲ್ಲಿ ಟಾಸ್ ಜಯಿಸಿದ ಲಂಕಾ ತಂಡದ ನಾಯಕ ದಿಮುತ್ ಕರುಣರತ್ನೆ ಬ್ಯಾಟಿಂಗ್ ಆಯ್ದುಕೊಂಡರು. ಆದರೆ ಶ್ರೀಲಂಕಾ ತಂಡಕ್ಕೆ ನಾಯಕನ ನಿರ್ಧಾರಕ್ಕೆ ತಕ್ಕಂತಹ ಆರಂಭ ಸಿಕ್ಕಿರಲಿಲ್ಲ. ಆರಂಭಿಕ ಆಟಗಾರ ನಿಶಾನ್ ಮದುಷ್ಕ (4) ಹಾಗೂ ಕುಸಾಲ್ ಮೆಂಡಿಸ್ (12) ಬೇಗನೆ ವಿಕೆಟ್ ಒಪ್ಪಿಸಿದ್ದರು. ಇನ್ನು ದಿಮುತ್ ಕರುಣರತ್ನೆ 29 ರನ್​ಗಳಿಸಿದರೆ, ದಿನೇಶ್ ಚಂಡಿಮಲ್ ಕೇವಲ 1 ರನ್​ಗಳಿಸಿ ಔಟಾದರು.

54 ರನ್​ಗಳಿಗೆ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಶ್ರೀಲಂಕಾ ತಂಡಕ್ಕೆ ಈ ಹಂತದಲ್ಲಿ ಅಜಂಲೊ ಮ್ಯಾಥ್ಯೂಸ್ ಹಾಗೂ ಧನಂಜಯ್ ಡಿಸಿಲ್ವಾ ಆಸರೆಯಾದರು. ಉತ್ತಮ ಹೊಂದಾಣಿಕೆಯ ಆಟ ಪ್ರದರ್ಶಿಸಿದ ಈ ಜೋಡಿಯು 5ನೇ ವಿಕೆಟ್​ಗೆ 131 ರನ್​ಗಳ ಜೊತೆಯಾಟವಾಡಿದರು.

ಈ ಹಂತದಲ್ಲಿ 64 ರನ್​ಗಳಿಸಿದ್ದ ಮ್ಯಾಥ್ಯೂಸ್ ಅಬ್ರಾರ್ ಅಹ್ಮದ್ ಎಸೆತದಲ್ಲಿ ಔಟಾದರು. ಇದಾಗ್ಯೂ ಮತ್ತೊಂದೆಡೆ ಏಕಾಂಗಿ ಹೋರಾಟ ಮುಂದುವರೆಸಿದ ಧನಂಜಯ್ ಡಿಸಿಲ್ವಾ 175 ಎಸೆತಗಳಲ್ಲಿ ಶತಕ ಪೂರೈಸಿದರು. ಅಲ್ಲದೆ 214 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 12 ಫೋರ್​ಗಳೊಂದಿಗೆ 122 ರನ್​ ಕಲೆಹಾಕಿದರು.

ಈ ಹಂತದಲ್ಲಿ ನಸೀಮ್ ಶಾ ಎಸೆತವನ್ನು ಗುರುತಿಸುವಲ್ಲಿ ಎಡವಿದ ಧನಂಜಯ್ ಡಿಸಿಲ್ವಾ (122) ಕ್ಯಾಚ್ ನೀಡಿ ನಿರ್ಗಮಿಸಿದರು. ಡಿಸಿಲ್ವಾ ನಿರ್ಗಮನದೊಂದಿಗೆ ಪಂದ್ಯದ ಮೇಲೆ ಹಿಡಿತ ಸಾಧಿಸಿದ ಪಾಕ್ ಬೌಲರ್​ಗಳು ಶ್ರೀಲಂಕಾ ತಂಡವನ್ನು ಮೊದಲ ಇನಿಂಗ್ಸ್​ನಲ್ಲಿ 312 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಯಶಸ್ವಿಯಾದರು. ಪಾಕಿಸ್ತಾನ್ ಪರ ಶಾಹೀನ್ ಅಫ್ರಿದಿ, ನಸೀಮ್ ಶಾ ಹಾಗೂ ಅಬ್ರಾರ್ ಅಹ್ಮದ್ ತಲಾ 3 ವಿಕೆಟ್ ಕಬಳಿಸಿ ಮಿಂಚಿದರು.

ಇದರ ಬೆನ್ನಲ್ಲೇ ಪ್ರಥಮ ಇನಿಂಗ್ಸ್ ಆರಂಭಿಸಿದ ಪಾಕಿಸ್ತಾನ್ ತಂಡ ಕೂಡ ಉತ್ತಮ ಆರಂಭ ಪಡೆದಿರಲಿಲ್ಲ. 73 ರನ್​ಗಳಿಸುವಷ್ಟರಲ್ಲಿ ಶಫೀಖ್ (19), ಇಮಾಮ್ ಉಲ್ ಹಕ್ (1), ಶಾನ್ ಮಸೂದ್ (39) ಹಾಗೂ ಬಾಬರ್ ಆಝಂ (13) ವಿಕೆಟ್ ಕಳೆದುಕೊಂಡಿತು.

ಇದರ ಬೆನ್ನಲ್ಲೇ ಅನುಭವಿ ಆಟಗಾರ ಸರ್ಫರಾಝ್ ಅಹ್ಮದ್ (17) ಕೂಡ ವಿಕೆಟ್ ಒಪ್ಪಿಸಿದರು. ಈ ಹಂತದಲ್ಲಿ ಜೊತೆಗೂಡಿದ ಸೌದ್ ಶಕೀಲ್ ಹಾಗೂ ಅಘ ಸಲ್ಮಾನ್ ರಕ್ಷಣಾತ್ಮಕ ಆಟದೊಂದಿಗೆ ತಂಡಕ್ಕೆ ಆಸರೆಯಾಗಿ ನಿಂತರು.

ಉತ್ತಮ ಬ್ಯಾಟಿಂಗ್ ಮೂಲಕ ಗಮನ ಸೆಳೆದ ಸೌದ್ ಶಕೀಲ್ 69 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಮತ್ತೊಂದೆಡೆ ಅಘ ಸಲ್ಮಾನ್ 67 ಎಸೆತಗಳಲ್ಲಿ ಹಾಫ್ ಸೆಂಚುರಿ ಸಿಡಿಸಿದರು. ಅಲ್ಲದೆ 6ನೇ ವಿಕೆಟ್​ಗೆ 125 ಎಸೆತಗಳಲ್ಲಿ ಶತಕದ ಜೊತೆಯಾಟವಾಡಿದರು.

ಇನ್ನು 2ನೇ ದಿನದಾಟದ ಅಂತ್ಯಕ್ಕೆ ಪಾಕಿಸ್ತಾನ್ ತಂಡವು 5 ವಿಕೆಟ್ ಕಳೆದುಕೊಂಡು 221 ರನ್​ ಕಲೆಹಾಕಿದೆ.  ಸೌದ್ ಶಕೀಲ್ (69) ಹಾಗೂ ಅಘ ಸಲ್ಮಾನ್ (61) ಕ್ರೀಸ್​ನಲ್ಲಿ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಶ್ರೀಲಂಕಾ ಪ್ಲೇಯಿಂಗ್ 11: ದಿಮುತ್ ಕರುಣಾರತ್ನೆ (ನಾಯಕ) , ನಿಶಾನ್ ಮದುಷ್ಕ , ಕುಸಲ್ ಮೆಂಡಿಸ್ , ಏಂಜೆಲೊ ಮ್ಯಾಥ್ಯೂಸ್ , ಧನಂಜಯ ಡಿ ಸಿಲ್ವಾ , ದಿನೇಶ್ ಚಂಡಿಮಲ್ , ಸದೀರ ಸಮರವಿಕ್ರಮ (ವಿಕೆಟ್ ಕೀಪರ್) , ರಮೇಶ್ ಮೆಂಡಿಸ್ , ಪ್ರಭಾತ್ ಜಯಸೂರ್ಯ , ವಿಶ್ವ ಫೆರ್ನಾಂಡೋ , ಕಸುನ್ ರಜಿತ.

ಇದನ್ನೂ ಓದಿ: Team India: ಟೀಮ್ ಇಂಡಿಯಾ ಪರ ಅತ್ಯಧಿಕ ವಿಕೆಟ್ ಪಡೆದ ಟಾಪ್-5 ಬೌಲರ್​ಗಳ ಪಟ್ಟಿ ಇಲ್ಲಿದೆ

ಪಾಕಿಸ್ತಾನ್ ಪ್ಲೇಯಿಂಗ್ 11: ಅಬ್ದುಲ್ಲಾ ಶಫೀಖ್, ಇಮಾಮ್-ಉಲ್-ಹಕ್ , ಶಾನ್ ಮಸೂದ್ , ಬಾಬರ್ ಆಝಂ (ನಾಯಕ) , ಸೌದ್ ಶಕೀಲ್ , ಸರ್ಫರಾಜ್ ಅಹ್ಮದ್ (ವಿಕೆಟ್ ಕೀಪರ್) , ಅಘ ಸಲ್ಮಾನ್ , ನೌಮಾನ್ ಅಲಿ , ಅಬ್ರಾರ್ ಅಹ್ಮದ್ , ಶಾಹೀನ್ ಅಫ್ರಿದಿ , ನಸೀಮ್ ಶಾ.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ