AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2025: ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್-ಡೆಲ್ಲಿ ಐಪಿಎಲ್ ಪಂದ್ಯ ರದ್ದು

Dharmashala IPL Match Called off: ಭಾರತ ಮತ್ತು ಪಾಕಿಸ್ತಾನದ ನಡುವಿನ ಮಿಲಿಟರಿ ಉದ್ವಿಗ್ನತೆಯಿಂದಾಗಿ ಧರ್ಮಶಾಲೆಯಲ್ಲಿ ನಡೆಯುತ್ತಿದ್ದ ಐಪಿಎಲ್ ಪಂದ್ಯವಾದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಡುವಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಪಂಜಾಬ್ ಕಿಂಗ್ಸ್ ಬ್ಯಾಟಿಂಗ್ ಮಾಡುತ್ತಿದ್ದಾಗ ಮೈದಾನದ ದೀಪಗಳನ್ನು ಆಫ್ ಮಾಡಲಾಗಿದ್ದು, ಆಟಗಾರರು ಮತ್ತು ಪ್ರೇಕ್ಷಕರು ಮೈದಾನವನ್ನು ತೊರೆಯುತ್ತಿದ್ದಾರೆ.

IPL 2025: ಧರ್ಮಶಾಲಾದಲ್ಲಿ ನಡೆಯುತ್ತಿದ್ದ ಪಂಜಾಬ್-ಡೆಲ್ಲಿ ಐಪಿಎಲ್ ಪಂದ್ಯ ರದ್ದು
Ipl 2025
ಪೃಥ್ವಿಶಂಕರ
|

Updated on:May 08, 2025 | 10:11 PM

Share

ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯುತ್ತಿರುವ ಮಿಲಿಟರಿ ಕಾರ್ಯಾಚರಣೆಯ ಮಧ್ಯೆ ಧರ್ಮಶಾಲಾದಲ್ಲಿ (Dharmashala) ನಡೆಯುತ್ತಿದ್ದ ಪಂಜಾಬ್ ಕಿಂಗ್ಸ್ ಮತ್ತು ಡೆಲ್ಲಿ ಕ್ಯಾಪಿಟಲ್ಸ್ (PBKS vs DC) ನಡುವಿನ ಪಂದ್ಯವನ್ನು ರದ್ದುಗೊಳಿಸಲಾಗಿದೆ. ಪಂಜಾಬ್ ಕಿಂಗ್ಸ್ ತಂಡ ಬ್ಯಾಟಿಂಗ್‌ ಮಾಡುತ್ತಿದ್ದ ವೇಳೆ 9 ಗಂಟೆ 29 ನಿಮಿಷಕ್ಕೆ ಮೈದಾನದ ದೀಪಗಳನ್ನು ಆಫ್ ಮಾಡಲಾಯಿತು. ಹೀಗಾಗಿ ಮೈದಾನದಲ್ಲಿದ್ದ ಆಟಗಾರರು ಪೆವಿಲಿಯನ್ ಸೇರಿಕೊಂಡಿದ್ದರೆ, ಇತ್ತ ಕ್ರೀಡಾಂಗಣದಲ್ಲಿ ಕುಳಿತು ಪಂದ್ಯ ವೀಕ್ಷಿಸುತ್ತಿದ್ದ ಪ್ರೇಕ್ಷಕರು ಮೈದಾನದಿಂದ ನಿರ್ಗಮಿಸುತ್ತಿದ್ದಾರೆ. ಪಂದ್ಯ ರದ್ದಾದ ವಿಷಯವನ್ನು ಐಪಿಎಲ್ (IPL) ಅಧ್ಯಕ್ಷರಾದ ಅರುಣ್ ಧುಮಾಲ್ ಅವರೇ ಖಚಿತಪಡಿಸಿದ್ದಾರೆ.

ಪಾಕಿಸ್ತಾನದಿಂದ ಡ್ರೋನ್ ದಾಳಿ

ಭಾರತ ಇಂದು ಪಾಕಿಸ್ತಾನದ ಹಲವು ಕಡೆ ಡ್ರೋನ್ ದಾಳಿ ನಡೆಸಿತ್ತು. ಇದೀಗ ಪಾಕಿಸ್ತಾನ ಕೂಡ ಭಾರತದ ಹಲವು ನಗರಗಳ ಮೇಲೆ ಡ್ರೋನ್ ದಾಳಿಗಳನ್ನು ನಡೆಸಿದೆ. ಉಧಂಪುರ, ಜಮ್ಮು, ಅಖ್ನೂರ್, ಪಠಾಣ್‌ಕೋಟ್ ಮತ್ತು ಕಥುವಾಗಳಲ್ಲಿ ಪಾಕಿಸ್ತಾನ ಡ್ರೋನ್ ಮತ್ತು ಕ್ಷಿಪಣಿ ದಾಳಿಗಳನ್ನು ನಡೆಸಿದೆಯಾದರೂ, ಭಾರತ ಅವುಗಳನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದೆ. ಇದಲ್ಲದೆ, ರಾಜಸ್ಥಾನ ಮತ್ತು ಪಂಜಾಬ್‌ನ ಪ್ರಮುಖ ನಗರಗಳ ಮೇಲೆಯೂ ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಹಾರಿಸಲಾಗಿದೆ ಎಂದು ವರದಿಯಾಗಿದೆ.

ತಲಾ ಒಂದೊಂದು ಅಂಕ

ಪಂಜಾಬ್ ಮತ್ತು ಡೆಲ್ಲಿ ನಡುವಿನ ಪಂದ್ಯ ರದ್ದಾದ ಕಾರಣ ಈಗ ಎರಡೂ ತಂಡಗಳಿಗೆ ತಲಾ ಒಂದು ಅಂಕವನ್ನು ನೀಡಲಾಗಿದೆ. ವಾಸ್ತವವಾಗಿ ಈ ಪಂದ್ಯದಲ್ಲಿ ಪಂಜಾಬ್‌ ಮೇಲುಗೈ ಸಾಧಿಸಿತ್ತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡುತ್ತಿದ್ದ ಪಂಜಾಬ್ 10 ಓವರ್​ಗಳ ಅಂತ್ಯಕ್ಕೆ 1 ವಿಕೆಟ್ ಕಳೆದುಕೊಂಡು 122 ರನ್ ಕಲೆಹಾಕಿತ್ತು. ಆದ್ದರಿಂದ ಈ ಪಂದ್ಯ ರದ್ದಾಗಿರುವುದು ಪಂಜಾಬ್ ತಂಡಕ್ಕೆ ನಷ್ಟವನ್ನುಂಟು ಮಾಡಿದೆ.

ಇದು ಮಾತ್ರವಲ್ಲ ಜನರು ಮತ್ತು ಆಟಗಾರರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಮುಂಬರುವ ಎಲ್ಲಾ ಐಪಿಎಲ್ ಪಂದ್ಯಗಳನ್ನು ಸಹ ಮುಂದೂಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಈ ವಿಷಯದ ಕುರಿತು ಐಪಿಎಲ್ ಆಡಳಿತ ಮಂಡಳಿ ತುರ್ತು ಸಭೆ ಕರೆದಿದ್ದು, ಈ ಸೀಸನ್​ನ ಮುಂಬರುವ ಪಂದ್ಯಗಳ ಕುರಿತು ನಿರ್ಧಾರ ತೆಗೆದುಕೊಳ್ಳಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:49 pm, Thu, 8 May 25

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಇದು ಯಾವ ಸೀಮೆಯ ಬೌಲಿಂಗ್: ಪಾಕ್ ಸ್ಪಿನ್ನರ್ ಶೈಲಿಗೆ ಗ್ರೀನ್​ ಆಕ್ರೋಶ
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಬಲೂಚ್ ಬಂಡುಕೋರರು ನಡೆಸಿದ ದಾಳಿಯಲ್ಲಿ 80ಕ್ಕೂ ಹೆಚ್ಚು ಪಾಕ್ ಸೈನಿಕರು ಸಾವು
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ
ಇಂದೇ ಮಾಘ ಹುಣ್ಣಿಮೆ ಇದರ ಮಹತ್ವ ತಿಳಿದುಕೊಳ್ಳಿ