ಟೀಮ್ ಇಂಡಿಯಾ ಮೆಂಟರ್​ ಹುದ್ದೆಗೆ ಧೋನಿ ಪಡೆಯುವ ಸಂಭಾವನೆ ಎಷ್ಟು?

Team India: ಅಕ್ಟೋಬರ್ 17 ರಿಂದ ಟಿ20 ವಿಶ್ವಕಪ್ ಅಭಿಯಾನ ಆರಂಭವಾಗಲಿದ್ದು, ಅಕ್ಟೋಬರ್ 24 ರಂದು ಮೊದಲ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಎದುರಿಸಲಿದೆ.

ಟೀಮ್ ಇಂಡಿಯಾ ಮೆಂಟರ್​ ಹುದ್ದೆಗೆ ಧೋನಿ ಪಡೆಯುವ ಸಂಭಾವನೆ ಎಷ್ಟು?
ಮಹೇಂದ್ರ ಸಿಂಗ್ ಧೋನಿ

ಕಳೆದ 14 ವರ್ಷಗಳಿಂದ ಟೀಮ್ ಇಂಡಿಯಾ ಟಿ20 ವಿಶ್ವಕಪ್ ಟ್ರೋಫಿಯನ್ನು ಎದುರು ನೋಡುತ್ತಿದೆ. ಇತ್ತ ಈ ಬಾರಿ ವಿರಾಟ್ ಕೊಹ್ಲಿ ಟ್ರೋಫಿಯೊಂದಿಗೆ ಟಿ20 ತಂಡದ ನಾಯಕತ್ವಕ್ಕೆ ರಾಜೀನಾಮೆ ನೀಡುವ ವಿಶ್ವಾಸದಲ್ಲಿದ್ದಾರೆ. ಇದಕ್ಕಾಗಿ ಬಿಸಿಸಿಐ ಕೂಡ ಭರ್ಜರಿ ಪ್ಲ್ಯಾನ್ ರೂಪಿಸಿದೆ. ಅದರಂತೆ ಈ ಬಾರಿ ಟೀಮ್ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿ ಅವರನ್ನು ತಂಡದ ಮಾರ್ಗದರ್ಶಕರನ್ನಾಗಿ ಆಯ್ಕೆ ಮಾಡಲಾಗಿದೆ. ಇದರ ಬೆನ್ನಲ್ಲೇ ಧೋನಿಗೆ ಸಿಗಲಿರುವ ವೇತನದ ಕುರಿತು ಕೂಡ ಚರ್ಚೆಗಳು ಶುರುವಾಗಿದೆ. ಈ ಬಗ್ಗೆ ಇದೀಗ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸ್ಪಷ್ಟನೆ ನೀಡಿದ್ದಾರೆ.

ಟೀಮ್ ಇಂಡಿಯಾ ಮೆಂಟರ್​ ಜವಾಬ್ದಾರಿಯನ್ನು ವಹಿಸಿಕೊಂಡಿರುವ ಧೋನಿ, ತಮ್ಮ ಕೆಲಸಕ್ಕಾಗಿ ಯಾವುದೇ ಗೌರವಧನ ಅಥವಾ ಸಂಭಾವನೆಯ ಬೇಡಿಕೆ ಇಟ್ಟಿಲ್ಲ ಎಂದು ತಿಳಿಸಿದ್ದಾರೆ. 2007 ರ ಟಿ20 ವಿಶ್ವಕಪ್, 2011 ಏಕದಿನ ವಿಶ್ವಕಪ್ ಮತ್ತು 2013 ಚಾಂಪಿಯನ್ಸ್ ಟ್ರೋಫಿಯನ್ನು ಅವರ ನಾಯಕತ್ವದಲ್ಲಿ ಗೆದ್ದ ಕಾರಣ ಎಂಎಸ್ ಧೋನಿಗೆ ಈ ಜವಾಬ್ದಾರಿ ನೀಡಲಾಗಿದೆ.

2013 ರಿಂದ ಟೀಮ್ ಇಂಡಿಯಾ ಒಂದೇ ಒಂದು ಐಸಿಸಿ ಟ್ರೋಫಿಯನ್ನು ಗೆದ್ದಿಲ್ಲ. ಟಿ20 ವಿಶ್ವಕಪ್‌ಗಾಗಿ ಭಾರತ ತಂಡಕ್ಕೆ ಮಾರ್ಗದರ್ಶನ ನೀಡಲು ಎಂಎಸ್ ಧೋನಿ ಯಾವುದೇ ಸಂಭಾವನೆ ತೆಗೆದುಕೊಳ್ಳದೆ ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಜಯ್ ಶಾ ತಿಳಿಸಿದ್ದಾರೆ. ಇದು ಟಿ20 ನಾಯಕನಾಗಿ ಆಗಿ ವಿರಾಟ್ ಕೊಹ್ಲಿಯ ಕೊನೆಯ ಟೂರ್ನಿ ಆಗಿರಲಿದೆ. ಟಿ20 ವಿಶ್ವಕಪ್ ನಂತರ ಟಿ20 ತಂಡದ ನಾಯಕತ್ವದಿಂದ ಕೆಳಗಿಳಿಯುವುದಾಗಿ ಕೊಹ್ಲಿ ಈಗಾಗಲೇ ಘೋಷಿಸಿದ್ದಾರೆ. ಹೀಗಾಗಿ ಅವರಿಂದಲೂ ಅದ್ಭುತ ಪ್ರದರ್ಶನವನ್ನು ನಿರೀಕ್ಷಿಸಲಾಗಿದೆ.

ಅಕ್ಟೋಬರ್ 17 ರಿಂದ ಟಿ20 ವಿಶ್ವಕಪ್ ಅಭಿಯಾನ ಆರಂಭವಾಗಲಿದ್ದು, ಅಕ್ಟೋಬರ್ 24 ರಂದು ಮೊದಲ ಪಂದ್ಯದಲ್ಲಿ ಭಾರತ ಪಾಕಿಸ್ತಾನವನ್ನು ಎದುರಿಸಲಿದೆ.

ಭಾರತ ಟಿ20 ತಂಡ ಹೀಗಿದೆ: ವಿರಾಟ್ ಕೊಹ್ಲಿ (ಕ್ಯಾಪ್ಟನ್), ರೋಹಿತ್ ಶರ್ಮಾ, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್, ಇಶಾನ್ ಕಿಶನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ರಾಹುಲ್ ಚಹರ್, ಆರ್ ಅಶ್ವಿನ್, ಅಕ್ಷರ್ ಪಟೇಲ್, ವರುಣ್ ಚಕ್ರವರ್ತಿ, ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಮತ್ತು ಮೊಹಮ್ಮದ್ ಶಮಿ.

ಮೀಸಲು ಆಟಗಾರರು: ಶ್ರೇಯಸ್ ಅಯ್ಯರ್, ದೀಪಕ್ ಚಹರ್, ಶಾರ್ದೂಲ್ ಠಾಕೂರ್, ಮಾರ್ಗದರ್ಶಕ: ಮಹೇಂದ್ರ ಸಿಂಗ್ ಧೋನಿ

ಭಾರತದ ಟಿ 20 ವಿಶ್ವಕಪ್ ಪಂದ್ಯಗಳ ವೇಳಾಪಟ್ಟಿ ಹೀಗಿವೆ

24 ಅಕ್ಟೋಬರ್: ಭಾರತ vs ಪಾಕಿಸ್ತಾನ

31 ಅಕ್ಟೋಬರ್: ಭಾರತ vs ನ್ಯೂಜಿಲ್ಯಾಂಡ್

ನವೆಂಬರ್ 3: ಭಾರತ vs ಅಫ್ಘಾನಿಸ್ತಾನ

ನವೆಂಬರ್ 5: ಭಾರತ vs ಬಿ 1 (ಅರ್ಹತಾ ಸುತ್ತಿನಲ್ಲಿ ಗೆದ್ದ ತಂಡ)

ನವೆಂಬರ್ 8: ಭಾರತ vs A2 (ಅರ್ಹತಾ ಸುತ್ತಿನಲ್ಲಿ ಗೆದ್ದ ತಂಡ)

 

ಇದನ್ನೂ ಓದಿ:  KL Rahul: ಸಿಡಿಲಬ್ಬರದ ಬ್ಯಾಟಿಂಗ್​ ಮೂಲಕ 7 ದಾಖಲೆ ಬರೆದ ಕೆಎಲ್ ರಾಹುಲ್

ಇದನ್ನೂ ಓದಿ:ಟಿ20 ವಿಶ್ವಕಪ್ ಪಾಕ್ ತಂಡದಲ್ಲಿ ಪ್ರಮುಖ ಬದಲಾವಣೆ: 39 ವರ್ಷದ ಆಲ್​ರೌಂಡರ್ ಆಯ್ಕೆ 

ಇದನ್ನೂ ಓದಿ: IPL 2021: ಅಚ್ಚರಿಯಾದರೂ ಇದು ಸತ್ಯ: 1 ವಿಕೆಟ್​ಗೆ 1 ಕೋಟಿ ಪಡೆದ ಕ್ರಿಸ್ ಮೋರಿಸ್..!

 

(Dhoni will not charge any honorarium for mentoring team in T20 World Cup: Jay Shah)

 

 

Read Full Article

Click on your DTH Provider to Add TV9 Kannada