ಧ್ರುವ್ ಜುರೇಲ್ ಏಕಾಂಗಿ ಹೋರಾಟ: ಆದರೂ ಅಲ್ಪ ಮೊತ್ತಕ್ಕೆ ಕುಸಿದ ಭಾರತ ಎ ತಂಡ

Australia A vs India A: ಭಾರತ ಎ ಮತ್ತು ಆಸ್ಟ್ರೇಲಿಯಾ ಎ ತಂಡಗಳ ನಡುವೆ ಅನಧಿಕೃತ ಟೆಸ್ಟ್ ಪಂದ್ಯ ನಡೆಯುತ್ತಿದೆ. ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾ ವಿಕೆಟ್ ಕೀಪರ್ ಬ್ಯಾಟರ್ ಧ್ರುವ್ ಜುರೇಲ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ.

ಧ್ರುವ್ ಜುರೇಲ್ ಏಕಾಂಗಿ ಹೋರಾಟ: ಆದರೂ ಅಲ್ಪ ಮೊತ್ತಕ್ಕೆ ಕುಸಿದ ಭಾರತ ಎ ತಂಡ
Dhruv Jurel
Follow us
ಝಾಹಿರ್ ಯೂಸುಫ್
|

Updated on:Nov 07, 2024 | 11:45 AM

ಮೆಲ್ಬೋರ್ನ್​ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ಎ ತಂಡದ ವಿರುದ್ಧದ 2ನೇ ಅನಧಿಕೃತ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಭಾರತ ಎ ತಂಡವು ಕೇವಲ 161 ರನ್​ಗಳಿಗೆ ಆಲೌಟ್ ಆಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಎ ತಂಡವು ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಟೀಮ್ ಇಂಡಿಯಾ ಉತ್ತಮ ಆರಂಭ ಪಡೆದಿರಲಿಲ್ಲ.

ಆರಂಭಿಕರಾಗಿ ಕಣಕ್ಕಿಳಿದ ಅಭಿಮನ್ಯು ಈಶ್ವರನ್ (0) ಶೂನ್ಯಕ್ಕೆ ಔಟಾದರೆ, ಕೆಎಲ್ ರಾಹುಲ್ 4 ರನ್​ಗಳಿಸಿ ವಿಕೆಟ್ ಒಪ್ಪಿಸಿದರು. ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಸಾಯಿ ಸುದರ್ಶನ್ (0) ರನ್​ಗಳಿಸದೇ ಪೆವಿಲಿಯನ್​ಗೆ ಹಿಂತಿರುಗಿದರು.

ಆ ಬಳಿಕ ಬಂದ ನಾಯಕ ರುತುರಾಜ್ ಗಾಯಕ್ವಾಡ್ 4 ರನ್​ಗಳಿಸಿ ಔಟಾದರೆ, ದೇವದತ್ತ್ ಪಡಿಕ್ಕಲ್ 26 ರನ್​ ಬಾರಿಸಿ ವಿಕೆಟ್ ಕೈಚೆಲ್ಲಿದರು. ಈ ಹಂತದಲ್ಲಿ ಕಣಕ್ಕಿಳಿದ ಧ್ರುವ್ ಜುರೇಲ್ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು.

ಧ್ರುವ್ ಏಕಾಂಗಿ ಹೋರಾಟ:

ಆರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ಧ್ರುವ್ ಜುರೇಲ್ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಆಸೀಸ್ ಬೌಲರ್​ಗಳನ್ನು ಆತ್ಮ ವಿಶ್ವಾಸದಿಂದಲೇ ಎದುರಿಸಿದ ಯುವ ದಾಂಡಿಗ 186 ಎಸೆತಗಳಲ್ಲಿ 2 ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ 80 ರನ್ ಬಾರಿಸಿದರು.

ಧ್ರುವ್ ಜುರೇಲ್ ಅವರ ಏಕಾಂಗಿ ಹೋರಾಟದ ಫಲವಾಗಿ ಭಾರತ ಎ ತಂಡದ ಸ್ಕೋರ್​ 150ರ ಗಡಿದಾಟಿತು. ಆದರೆ ಜುರೇಲ್ ಔಟಾಗುತ್ತಿದ್ದಂತೆ ಮತ್ತೆ ಕುಸಿತಕ್ಕೊಳಗಾದ ಭಾರತ ಎ ತಂಡವು 161 ರನ್​ಗಳಿಗೆ ಸರ್ವಪತನ ಕಂಡಿದೆ.

ಇದೀಗ ಪ್ರಥಮ ಇನಿಂಗ್ಸ್ ಆರಂಭಿಸಿರುವ ಆಸ್ಟ್ರೇಲಿಯಾ ತಂಡವು 14 ಓವರ್​ಗಳಲ್ಲಿ ಒಂದು ವಿಕೆಟ್ ಕಳೆದುಕೊಂಡು 41 ರನ್ ಕಲೆಹಾಕಿದೆ.

ಆಸ್ಟ್ರೇಲಿಯಾ ಎ ಪ್ಲೇಯಿಂಗ್ 11: ಮಾರ್ಕಸ್ ಹ್ಯಾರಿಸ್ , ಸ್ಯಾಮ್ ಕಾನ್ಸ್ಟಾಸ್ , ಕ್ಯಾಮರೋನ್ ಬ್ಯಾಂಕ್ರಾಫ್ಟ್ , ನಾಥನ್ ಮೆಕ್‌ಸ್ವೀನಿ (ನಾಯಕ) , ಬ್ಯೂ ವೆಬ್‌ಸ್ಟರ್ , ಒಲಿವರ್ ಡೇವಿಸ್ , ಜಿಮ್ಮಿ ಪೀರ್ಸನ್ (ವಿಕೆಟ್ ಕೀಪರ್) , ಮೈಕೆಲ್ ನೆಸರ್ , ನಾಥನ್ ಮ್ಯಾಕ್‌ಆಂಡ್ರ್ಯೂ , ಸ್ಕಾಟ್ ಬೋಲ್ಯಾಂಡ್ , ಕೋರೆ ರೊಚಿಚಿಯೋಲಿ.

ಇದನ್ನೂ ಓದಿ: IPL 2025: ಐಪಿಎಲ್ ಮೆಗಾ ಹರಾಜಿಗೆ ಇಟಲಿ ಆಟಗಾರ ಎಂಟ್ರಿ

ಭಾರತ ಎ ಪ್ಲೇಯಿಂಗ್ 11: ಅಭಿಮನ್ಯು ಈಶ್ವರನ್ , ರುತುರಾಜ್ ಗಾಯಕ್ವಾಡ್ (ನಾಯಕ) , ಸಾಯಿ ಸುದರ್ಶನ್ , ಕೆಎಲ್ ರಾಹುಲ್ , ದೇವದತ್ತ್ ಪಡಿಕ್ಕಲ್ , ಧ್ರುವ ಜುರೇಲ್ (ವಿಕೆಟ್ ಕೀಪರ್) , ನಿತೀಶ್ ರೆಡ್ಡಿ , ತನುಷ್ ಕೋಟ್ಯಾನ್ , ಖಲೀಲ್ ಅಹ್ಮದ್ , ಪ್ರಸಿದ್ಧ್ ಕೃಷ್ಣ , ಮುಖೇಶ್ ಕುಮಾರ್.

Published On - 11:44 am, Thu, 7 November 24

ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ಬೆಳಗಾವಿಯ ಮಹಿಳೆಯೊಬ್ಬರಿಗೆ ಬೇಡವಂತೆ ಉಚಿತ ಬಸ್ ಪ್ರಯಾಣ!
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ರಾಜ್ಯ ಬಿಜೆಪಿ ಘಟಕಗಳಿಗೆ ಅಧ್ಯಕ್ಷನನ್ನು ಆಯ್ಕೆಮಾಡುವ ಪ್ರಕ್ರಿಯೆ ಶುರು:ಜೋಶಿ
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ಸಿಎಂ ಪಕ್ಕದಲ್ಲಿದ್ದ ಗೋವಿಂದರಾಜು ಆಗಂತುಕನನ್ನು ಗದರಿದ್ದು ಯಾಕೆ ಗೊತ್ತಾ?
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ದಲಿತ ಸಮಾಜಕ್ಕೆ ಪ್ರಿಯಾಂಕ್ ಖರ್ಗೆ ಕೊಡುಗೆ ದೊಡ್ಡ ಶೂನ್ಯ: ನಾರಾಯಣಸ್ವಾಮಿ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಸ್ ಚಾಲಕ ಇದ್ದಕ್ಕಿದ್ದಂತೆ ಬ್ರೇಕ್ ಅದುಮಿದ್ದರಿಂದ ಸಂಭವಿಸಿದ ಅಪಘಾತ
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಬಿಗ್​ಬಾಸ್ ಮನೆಗೆ ಬಂದ ಹನುಮಂತನ ಪೋಷಕರು
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸಚಿನ್ ಬರೆದಿರುವ ಡೆತ್ ನೋಟಲ್ಲಿ ಪ್ರಿಯಾಂಕ್ ಖರ್ಗೆ ಹೆಸರಿದೆ: ಆರ್ ಅಶೋಕ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಸರ್ಕಾರ ದಾಖಲೆಪತ್ರಗಳಲ್ಲಿ ಪ್ರಿನ್ಸೆಸ್ ರೋಡ್ ಅಂತಲೇ ವಿಳಾಸ ದಾಖಲಾಗಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಮೆಟ್ರೋನಲ್ಲಿ ಪ್ರಯಾಣಿಸುವ ಮನೋವಿಕಾರ ವ್ಯಕ್ತಿಗಳ ಸಂಖ್ಯೆ ಹೆಚ್ಚುತ್ತಿದೆ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ
ಶಾಟ್ ಸರ್ಕ್ಯೂಟ್ ನಿಂದ ಅಗ್ನಿ ಅವಘಡ ಸಂಭವಿಸಿರುವ ಗುಮಾನಿ