AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND A vs AUS A: ಆಸ್ಟ್ರೇಲಿಯಾ ಎ ವಿರುದ್ಧ ಭರ್ಜರಿ ಶತಕ ಬಾರಿಸಿದ ಧ್ರುವ್ ಜುರೆಲ್

Dhruv Jurel's Century: ಆಸ್ಟ್ರೇಲಿಯಾ ಎ ವಿರುದ್ಧ ನಡೆದ ಅನಧಿಕೃತ ಟೆಸ್ಟ್ ಪಂದ್ಯದಲ್ಲಿ ಭಾರತ ಎ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಧ್ರುವ ಜುರೇಲ್ ಅವರು ಅದ್ಭುತ ಶತಕ ಸಿಡಿಸಿದ್ದಾರೆ. ಇದು ಅವರ ಪ್ರಥಮ ದರ್ಜೆ ವೃತ್ತಿ ಜೀವನದಲ್ಲಿ ಎರಡನೇ ಶತಕ. ದೇವದತ್ ಪಡಿಕ್ಕಲ್ ಜೊತೆಗಿನ ಅವರ ಉತ್ತಮ ಜೊತೆಯಾಟ ಭಾರತ ತಂಡಕ್ಕೆ ದೊಡ್ಡ ಬಲವನ್ನು ನೀಡಿದೆ. ಇಂಗ್ಲೆಂಡ್‌ನಲ್ಲಿಯೂ ಅವರ ಉತ್ತಮ ಪ್ರದರ್ಶನ ಇದೀಗ ಮತ್ತಷ್ಟು ಮೆಚ್ಚುಗೆಗೆ ಪಾತ್ರವಾಗಿದೆ.

IND A vs AUS A: ಆಸ್ಟ್ರೇಲಿಯಾ ಎ ವಿರುದ್ಧ ಭರ್ಜರಿ ಶತಕ ಬಾರಿಸಿದ ಧ್ರುವ್ ಜುರೆಲ್
Dhruv Jurel
ಪೃಥ್ವಿಶಂಕರ
|

Updated on:Sep 18, 2025 | 6:43 PM

Share

ಒಂದೆಡೆ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ಟಿ20 ತಂಡ ಯುಎಇಯಲ್ಲಿ ನಡೆಯುತ್ತಿರುವ ಏಷ್ಯಾಕಪ್‌ನಲ್ಲಿ (Asia Cup 2025) ಭಾಗವಹಿಸುತ್ತಿದ್ದರೆ, ಮತ್ತೊಂದೆಡೆ ಶ್ರೇಯಸ್ ಅಯ್ಯರ್ (Shreyas Iyer) ನಾಯಕತ್ವದ ಭಾರತ ಎ ತಂಡ, ಆಸ್ಟ್ರೇಲಿಯಾ ಎ (India A vs Australia A) ವಿರುದ್ಧ ಅನಧಿಕೃತ ಟೆಸ್ಟ್ ಪಂದ್ಯವನ್ನು ಆಡುತ್ತಿದೆ. ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಎ ತಂಡ ಮೊದಲು ಬ್ಯಾಟಿಂಗ್ ಮಾಡಿ ಮೊದಲ ಇನ್ನಿಂಗ್ಸ್‌ನ 532 ರನ್‌ ಕಲೆಹಾಕಿದೆ. ಇದಕ್ಕೆ ಉತ್ತರವಾಗಿ ಭಾರತ ಎ ತಂಡದ ಬ್ಯಾಟ್ಸ್‌ಮನ್‌ಗಳು ಅದ್ಭುತ ಪ್ರದರ್ಶನ ನೀಡಿದ್ದಾರೆ. ಈ ವೇಳೆ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ 114 ಎಸೆತಗಳಲ್ಲಿ ಒಂಬತ್ತು ಬೌಂಡರಿ ಮತ್ತು ಮೂರು ಸಿಕ್ಸರ್‌ಗಳ ಸಹಾಯದಿಂದ ಶತಕ ಬಾರಿಸಿದ್ದಾರೆ.

2ನೇ ಪ್ರಥಮ ದರ್ಜೆ ಶತಕ ಬಾರಿಸಿದ ಜುರಲ್

ಆಸ್ಟ್ರೇಲಿಯಾ ಎ ವಿರುದ್ಧ ಅದ್ಭುತ ಶತಕ ಬಾರಿಸಿರುವ ಧ್ರುವ್ ಜುರೆಲ್​ಗೆ ಇದು ಅವರ ಪ್ರಥಮ ದರ್ಜೆ ವೃತ್ತಿಜೀವನದ ಎರಡನೇ ಶತಕವಾಗಿದೆ. ಶತಕದ ಜೊತೆಗೆ ಅವರು ದೇವದತ್ ಪಡಿಕ್ಕಲ್ ಅವರೊಂದಿಗೆ ಐದನೇ ವಿಕೆಟ್‌ಗೆ ಉತ್ತಮ ಜೊತೆಯಾಟವನ್ನು ಕಟ್ಟಿದರು. ಇವರಿಬ್ಬರ ಜೊತೆಯಾಟದಿಂದಾಗಿ 3ನೇ ದಿನದಾಟದಂತ್ಯಕ್ಕೆ ಭಾರತ ತಂಡ 4 ವಿಕೆಟ್ ಕಳೆದುಕೊಂಡು 403 ರನ್ ಗಳಿಸಿದೆ. ಜುರೇಲ್ ಮಾತ್ರವಲ್ಲದೆ ಕನ್ನಡಿಗ ದೇವದತ್ ಪಡಿಕ್ಕಲ್ ಕೂಡ ಅಜೇಯ ಅರ್ಧಶತಕ ಬಾರಿಸಿ ಶತಕದತ್ತ ಮುನ್ನುಗ್ಗುತ್ತಿದ್ದಾರೆ.

ಇಂಗ್ಲೆಂಡ್‌ನಲ್ಲಿಯೂ ಅದ್ಭುತ ಪ್ರದರ್ಶನ

ಈ ಹಿಂದೆ, ಧ್ರುವ್ ಜುರೆಲ್ ಇಂಗ್ಲೆಂಡ್‌ನಲ್ಲಿಯೂ ಅದ್ಭುತವಾಗಿ ಬ್ಯಾಟಿಂಗ್ ಮಾಡಿದ್ದರು. ಭಾರತ ಎ ಪರ ಇಂಗ್ಲೆಂಡ್ ಲಯನ್ಸ್ ವಿರುದ್ಧ ಮೂರು ಅರ್ಧಶತಕಗಳನ್ನು ಬಾರಿಸಿದ್ದರು. ಆ ಬಳಿಕ ರಿಷಭ್ ಪಂತ್ ಗಾಯಗೊಂಡಿದ್ದರಿಂದಾಗಿ ಇಂಗ್ಲೆಂಡ್ ವಿರುದ್ಧದ ಓವಲ್ ಟೆಸ್ಟ್‌ನಲ್ಲಿ ಜುರೇಲ್​ಗೆ ಆಡಲು ಅವಕಾಶ ನೀಡಲಾಯಿತು. ಆ ಪಂದ್ಯದಲ್ಲಿ ಅವರು ಕ್ರಮವಾಗಿ 19 ಮತ್ತು 34 ರನ್ ಬಾರಿಸಿದ್ದರು.

ಜುರಲ್ ಇದುವರೆಗೆ ಐದು ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಒಂದು ಅರ್ಧಶತಕ ಸೇರಿದಂತೆ 36.42 ಸರಾಸರಿಯಲ್ಲಿ 255 ರನ್ ಗಳಿಸಿದ್ದಾರೆ. ಇದಲ್ಲದೆ, ಅವರು ನಾಲ್ಕು ಟಿ20ಪಂದ್ಯಗಳಲ್ಲಿ ಕೇವಲ 12 ರನ್ ಗಳಿಸಿದ್ದಾರೆ. ಆಸ್ಟ್ರೇಲಿಯಾ ಎ ವಿರುದ್ಧದ ಈ ಪಂದ್ಯಕ್ಕೂ ಮೊದಲು, ಜುರಲ್ 25 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ್ದು, 36 ಇನ್ನಿಂಗ್ಸ್‌ಗಳಲ್ಲಿ 47.34 ಸರಾಸರಿಯಲ್ಲಿ 1515 ರನ್ ಬಾರಿಸಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು 12 ಅರ್ಧಶತಕಗಳು ಸೇರಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:42 pm, Thu, 18 September 25