AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs WI: ಮೋದಿ ಮೈದಾನದಲ್ಲಿ ಚೊಚ್ಚಲ ಟೆಸ್ಟ್ ಶತಕ ಸಿಡಿಸಿದ ಧ್ರುವ್ ಜುರೆಲ್

Dhruv Jurel's Heroic Maiden Test Century: ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್​ಮನ್ ಧ್ರುವ್ ಜುರೆಲ್ ಭಾರತ-ವೆಸ್ಟ್ ಇಂಡೀಸ್ ಮೊದಲ ಟೆಸ್ಟ್‌ನಲ್ಲಿ ತಮ್ಮ ಚೊಚ್ಚಲ ಶತಕ ಸಿಡಿಸಿ ಮಿಂಚಿದ್ದಾರೆ. ಅಹಮದಾಬಾದ್‌ನಲ್ಲಿ ನಡೆದ ಪಂದ್ಯದ ಮೂರನೇ ದಿನ, ರಿಷಭ್ ಪಂತ್ ಅನುಪಸ್ಥಿತಿಯಲ್ಲಿ ಸಿಕ್ಕ ಅವಕಾಶವನ್ನು ಉತ್ತಮವಾಗಿ ಬಳಸಿಕೊಂಡರು. ಜುರೆಲ್, ರವೀಂದ್ರ ಜೊತೆ ಶತಕದ ಜೊತೆಯಾಟ ಕಟ್ಟುವ ಮೂಲಕ ಟೀಂ ಇಂಡಿಯಾಗೆ ಬಲ ತುಂಬಿದರು.

IND vs WI: ಮೋದಿ ಮೈದಾನದಲ್ಲಿ ಚೊಚ್ಚಲ ಟೆಸ್ಟ್ ಶತಕ ಸಿಡಿಸಿದ ಧ್ರುವ್ ಜುರೆಲ್
Dhruv Jurel
ಪೃಥ್ವಿಶಂಕರ
|

Updated on:Oct 03, 2025 | 5:15 PM

Share

ಭಾರತ ಹಾಗೂ ವೆಸ್ಟ್ ಇಂಡೀಸ್ (India vs West Indies) ನಡುವೆ ಅಹಮದಾಬಾದ್​ನ ನರೇಂದ್ರ ಮೋದಿ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಎರಡನೇ ದಿನದಾಟದಂದು ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ (Dhruv Jurel) ತಮ್ಮ ಟೆಸ್ಟ್ ವೃತ್ತಿಜೀವನದ ಮೊದಲ ಶತಕ ಸಿಡಿಸಿ ಮಿಂಚಿದ್ದಾರೆ. ರಿಷಭ್ ಪಂತ್ ಇಂಜುರಿಯಿಂದಾಗಿ ಭಾರತ ಟೆಸ್ಟ್ ತಂಡದಲ್ಲಿ ಆಡುವ ಅವಕಾಶ ಪಡೆದಿದ್ದ ಜುರೇಲ್, ಸಿಕ್ಕ ಅವಕಾಶವನ್ನು ಎರಡು ಕೈಗಳಿಂದ ಬಾಚಿಕೊಂಡಿದ್ದಾರೆ. ವೈಯಕ್ತಿಕವಾಗಿ ಶತಕ ಬಾರಿಸಿದಲ್ಲದೆ, ಉಪನಾಯಕ ರವೀಂದ್ರ ಜಡೇಜಾ (Ravindra Jadeja) ಜೊತೆಗೂಡಿ ಶತಕದ ಜೊತೆಯಾಟವನ್ನು ಕಟ್ಟಿದ್ದಾರೆ.

190 ಎಸೆತಗಳಲ್ಲಿ ಮೊದಲ ಟೆಸ್ಟ್ ಶತಕ

ನಾಯಕ ಶುಭ್​ಮನ್ ಗಿಲ್ ಔಟಾದ ನಂತರ ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದ ಜುರೆಲ್, ಕೆಎಲ್ ರಾಹುಲ್ ಜೊತೆಗೆ ಉತ್ತಮ ಜೊತೆಯಾಟ ಕಟ್ಟಿದರು. ಈ ಹಂತದಲ್ಲಿ ರಾಹುಲ್ ಶತಕ ಬಾರಿಸಿ ಔಟಾದರೆ, ಜುರೆಲ್ ಮಾತ್ರ ತಮ್ಮ ತಾಳ್ಮೆಯ ಆಟವನ್ನು ಮುಂದುವರೆಸಿದರು. ಇತ್ತ ಜುರೆಲ್​​ಗೆ ಉಪನಾಯಕ ರವೀಂದ್ರ ಜಡೇಜಾ ಅವರಿಂದಲೂ ಉತ್ತಮ ಸಾಥ್ ಸಿಕ್ಕಿತು. ಹೀಗಾಗಿ ಎರಡನೇ ದಿನದ ಮೂರನೇ ಸೆಷನ್‌ನಲ್ಲಿ ಜುರೆಲ್ 190 ಎಸೆತಗಳಲ್ಲಿ ತಮ್ಮ ಮೊದಲ ಟೆಸ್ಟ್ ಶತಕವನ್ನು ಪೂರೈಸಿದರು.

ತಮ್ಮ ಶತಕದ ಹಾದಿಯಲ್ಲಿ 12 ಬೌಂಡರಿ ಮತ್ತು ಎರಡು ಸಿಕ್ಸರ್‌ಗಳನ್ನು ಬಾರಿಸಿದ ಜುರೆಲ್ ಇದರೊಂದಿಗೆ ಭಾರತ ಪರ ಟೆಸ್ಟ್ ಶತಕ ಗಳಿಸಿದ 12 ನೇ ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಎನಿಸಿಕೊಂಡರು. ಅವರಿಗಿಂತ ಮೊದಲು ಲೆಜೆಂಡರಿ ವಿಕೆಟ್‌ಕೀಪರ್‌ಗಳಾದ ವಿಜಯ್ ಮಂಜ್ರೇಕರ್, ಸೈಯದ್ ಕಿರ್ಮಾನಿ, ಅಜಯ್ ರಾತ್ರಾ, ದೀಪ್ ದಾಸ್‌ಗುಪ್ತಾ, ಎಂಎಸ್ ಧೋನಿ, ನಯನ್ ಮೊಂಗಿಯಾ, ವೃದ್ಧಿಮಾನ್ ಸಹಾ ಮತ್ತು ರಿಷಭ್ ಪಂತ್ ಈ ಸಾಧನೆ ಮಾಡಿದ್ದರು.

IND A vs AUS A: ಅಕ್ಕನ ಮದುವೆ ಬಿಟ್ಟು ಆಸೀಸ್ ವಿರುದ್ಧ ಕಣಕ್ಕಿಳಿದಿದ್ದ ಅಭಿಷೇಕ್ ಸೊನ್ನೆಗೆ ಔಟ್

ಈ ಸಾಧನೆ ಮಾಡಿದ 5ನೇ ವಿಕೆಟ್ ಕೀಪರ್

ಇದಲ್ಲದೆ, ಜುರೆಲ್ ವೆಸ್ಟ್ ಇಂಡೀಸ್ ವಿರುದ್ಧ ಮೊದಲ ಟೆಸ್ಟ್ ಶತಕ ಗಳಿಸಿದ ಐದನೇ ಭಾರತೀಯ ವಿಕೆಟ್ ಕೀಪರ್-ಬ್ಯಾಟ್ಸ್‌ಮನ್ ಎನಿಸಿಕೊಂಡರು. ಇದಕ್ಕೂ ಮೊದಲು, ವಿಜಯ್ ಮಂಜ್ರೇಕರ್, ಫಾರೋಖ್ ಎಂಜಿನಿಯರ್, ಅಜಯ್ ರಾತ್ರಾ ಮತ್ತು ವೃದ್ಧಿಮಾನ್ ಸಹಾ ಕೆರಿಬಿಯನ್ ವಿರುದ್ಧ ತಮ್ಮ ಮೊದಲ ಟೆಸ್ಟ್ ಶತಕ ಬಾರಿಸಿದ್ದರು. ಇದೀಗ ಜುರೆಲ್ ಕೂಡ ಈ ಪಟ್ಟಿಗೆ ಸೇರಿದ್ದಾರೆ. 125 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದ ನಂತರ ಜುರೆಲ್ ಅಂತಿಮವಾಗಿ ಪೆವಿಲಿಯನ್‌ ಸೇರಿಕೊಂಡಿದ್ದಾರೆ. ತಮ್ಮ ಇನ್ನಿಂಗ್ಸ್‌ನಲ್ಲಿ ಜುರೆಲ್ 15 ಬೌಂಡರಿಗಳು ಮತ್ತು 3 ಸಿಕ್ಸರ್‌ಗಳನ್ನು ಬಾರಿಸಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:10 pm, Fri, 3 October 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ