AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಮೊದಲ ಟಿ20ಗೆ ಫಿನಿಶರ್ ದಿನೇಶ್ ಕಾರ್ತಿಕ್ ಭರ್ಜರಿ ತಯಾರಿ: ವೈರಲ್ ಆಗುತ್ತಿದೆ ಫೋಟೋ

Dinesh Karthik: ಭಾರತ ಹಾಗೂ ದಕ್ಷಿಣ ಆಫ್ರಿಕಾ ತಂಡದ ಆಟಗಾರರು ದೆಹಲಿಗೆ ಬಂದಿದ್ದು ಆರ್​​​​ಟಿಪಿಸಿಆರ್ ಟೆಸ್ಟ್ ನಡೆಸಿ ಅಭ್ಯಾಸ ಶುರು ಮಾಡಿದ್ದಾರೆ. ಕೆಎಲ್ ರಾಹುಲ್ ನಾಯಕತ್ವದಲ್ಲಿ ಭಾರತ ತಂಡ ಈ ಬಾರಿ ಕಣಕ್ಕಿಳಿಯಲಿದೆ.

IND vs SA: ಮೊದಲ ಟಿ20ಗೆ ಫಿನಿಶರ್ ದಿನೇಶ್ ಕಾರ್ತಿಕ್ ಭರ್ಜರಿ ತಯಾರಿ: ವೈರಲ್ ಆಗುತ್ತಿದೆ ಫೋಟೋ
Dinesh Karthik IND vs SA
TV9 Web
| Updated By: Vinay Bhat|

Updated on:Jun 07, 2022 | 7:51 AM

Share

ಭಾರತ ಹಾಗೂ ದಕ್ಷಿಣ ಆಫ್ರಿಕಾ (India vs South Africa) ನಡುವಣ ಟಿ20 ಸರಣಿ ಆರಂಭಕ್ಕೆ ಇನ್ನೇನು ಕೇವಲ ಎರಡು ದಿನಗಳಷ್ಟೇ ಬಾಕಿಯಿದೆ. ಜೂನ್ 9 ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಮೊದಲ ಟಿ20 ಪಂದ್ಯ ಆಯೋಜಿಸಲಾಗಿದೆ. ಈಗಾಗಲೇ ಉಭಯ ತಂಡದ ಆಟಗಾರರು ದೆಹಲಿಗೆ ಬಂದಿದ್ದು ಆರ್​​​​ಟಿಪಿಸಿಆರ್ ಟೆಸ್ಟ್ ನಡೆಸಿ ಅಭ್ಯಾಸ ಶುರು ಮಾಡಿದ್ದಾರೆ. ಕೆಎಲ್ ರಾಹುಲ್ (KL Rahul) ನಾಯಕತ್ವದಲ್ಲಿ ಭಾರತ ತಂಡ ಈ ಬಾರಿ ಕಣಕ್ಕಿಳಿಯಲಿದೆ. ಹೆಚ್ಚು ಯುವ ಆಟಗಾರರಿಂದಲೇ ಕೂಡಿರುವ ಯಂಗ್ ಇಂಡಿಯಾ ಮೇಲೆ ಸಾಕಷ್ಟು ನಿರೀಕ್ಷೆ ಇಡಲಾಗಿದೆ. ಇತ್ತ ಹರಿಣಗಳು ಕೂಡ ತಮ್ಮ ಹಿಂದಿನ ದಾಖಲೆಯನ್ನು ಮುಂದುವರೆಸುವ ತವಕದಲ್ಲಿದ್ದಾರೆ. ತೆಂಬಾ ಬವುಮಾ (Temba Bhavuma) ತಂಡವನ್ನು ಮುನ್ನಡೆಸುತ್ತಿದ್ದು ಕ್ವಿಂಟನ್ ಡಿಕಾಕ್, ಕಿಲ್ಲರ್ ಮಿಲ್ಲರ್ ಸೇರಿದಂತೆ ಸ್ಟಾರ್ ಆಟಗಾರರ ದಂಡೇ ಇದೆ. ಹೀಗಾಗಿ ಭಾರತಕ್ಕೆ ಈ ಸರಣಿ ಕಠಿಣ ಸವಾಲಾಗುವುದರಲ್ಲಿ ಅನುಮಾನವಿಲ್ಲ.

ಸೋಮವಾರ ಭಾರತೀಯ ಆಟಗಾರರು ಮೈದಾನದಲ್ಲಿ ಅಭ್ಯಾಸಕ್ಕೆ ಇಳಿದರು. ಇವರ ನಡುವೆ ದಿನೇಶ್ ಕಾರ್ತಿಕ್ ಭರ್ಜರಿ ಬ್ಯಾಟಿಂಗ್ ಪ್ರ್ಯಾಕ್ಟೀಸ್ ನಡೆಸಿದ್ದಾರೆ. ತನ್ನ ಕೆರಿಯರ್ ಮುಗಿಯಿತು ಎಂಬೊತ್ತಿಗೆ ಎರಡನೇ ಇನ್ನಿಂಗ್ಸ್ ಆರಂಭಿಸಿರುವ ಕಾರ್ತಿಕ್ ಬರೋಬ್ಬರಿ 3 ವರ್ಷಗಳ ನಂತರ ಭಾರತದ ಪರ ಟಿ20 ಅಂತರರಾಷ್ಟ್ರೀಯ ಪಂದ್ಯವನ್ನು ಆಡಲು ತುದಿಗಾಲಿನಲ್ಲಿ ನಿಂತಿದ್ದಾರೆ. ಇವರು ಟೀಮ್ ಇಂಡಿಯಾ ಜೆರ್ಸಿ ತೊಟ್ಟು ಅಭ್ಯಾಸ ನಡೆಸುತ್ತಿರುವ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ಇದನ್ನೂ ಓದಿ
Image
Ranji Trophy: ಕರ್ನಾಟಕದ 7 ವಿಕೆಟ್ ಕಿತ್ತ ಯುಪಿ ತಂಡದ ಇಬ್ಬರು ಬೌಲರ್ಸ್​! ಮೊದಲ ದಿನದಾಟ ಹೀಗಿತ್ತು
Image
ICC Awards: ತಿಂಗಳ ಆಟಗಾರ ಪ್ರಶಸ್ತಿಗೆ ನಾಮನಿರ್ದೇಶನಗೊಂಡ ಆಟಗಾರರ ಪಟ್ಟಿ ಬಿಡುಗಡೆಗೊಳಿಸಿದ ಐಸಿಸಿ
Image
IND vs SA: 6 ವರ್ಷ, 56 ಟಿ20 ಪಂದ್ಯ; ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ನಾಯಕನ ಚೊಚ್ಚಲ ಪಂದ್ಯವಿದು
Image
ಭಾರತಕ್ಕೆ ಬಂದಾಗಲೆಲ್ಲ ಇಂಜುರಿಗೊಳಗಾಗುತ್ತೇನೆ; ಇಲ್ಲೇ ನನಗ್ಯಾವುದೋ ಶಾಪ ತಟ್ಟಿರಬೇಕು; ಮಿಚೆಲ್ ಮಾರ್ಷ್

Indonesia Open: ಲಕ್ಷ್ಯ ಸೇನ್​ಗೆ ಭಾರತೀಯನೇ ಎದುರಾಳಿ; ಪಿವಿ ಸಿಂಧು, ಸೈನಾ ನೆಹ್ವಾಲ್ ಮೇಲೆ ಭಾರಿ ನಿರೀಕ್ಷೆ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಮತ್ತು ಜಸ್ಪ್ರೀತ್ ಬುಮ್ರಾ ಇಲ್ಲದೆ ಕೆಎಲ್ ರಾಹುಲ್ ತಂಡದ ನಾಯಕತ್ವ ಜವಾಬ್ದಾರಿ ಹೊತ್ತಿದ್ದಾರೆ. ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಶ್ರೇಯಸ್ ಅಯ್ಯರ್ ಮತ್ತು ಭುವನೇಶ್ವರ್ ಕುಮಾರ್ ಅವರು ಭಾರತದೊಂದಿಗೆ ಇದ್ದಾರೆ. ಅತ್ತ ದಕ್ಷಿಣ ಆಫ್ರಿಕಾದ ಕ್ವಿಂಟನ್ ಡಿಕಾಕ್, ಏಡನ್ ಮಾರ್ಕ್ರಾಮ್, ಡೇವಿಡ್ ಮಿಲ್ಲರ್, ಕಗಿಸೊ ರಬಾಡ ಮತ್ತು ಅನ್ರಿಕ್ ನೊರ್ಕಿಯಾ ಐಪಿಎಲ್‌ನಲ್ಲಿ ಉತ್ತಮ ಫಾರ್ಮ್‌ನಲ್ಲಿ ಆಡಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ವಿರುದ್ಧದ ಸರಣಿಯಲ್ಲಿ ಕಠಿಣ ಹೋರಾಟ ನಿರೀಕ್ಷಿಸಬಹುದು.

ಅಲ್ಲದೆ ಇದೇ ವರ್ಷದ ಅಕ್ಟೋಬರ್ ತಿಂಗಳಿನಲ್ಲಿ ಪ್ರತಿಷ್ಠಿತ ಐಸಿಸಿ ಟಿ20 ವಿಶ್ವಕಪ್ ಟೂರ್ನಿ ಆರಂಭವಾಗಲಿದ್ದು, ಟೀಮ್ ಇಂಡಿಯಾ ಈಗಿನಿಂದಲೇ ಟಿ20 ಸರಣಿಗಳಲ್ಲಿ ಉತ್ತಮ ಪ್ರದರ್ಶನವನ್ನು ನೀಡಿ ಮೆಗಾ ಟೂರ್ನಿಗೆ ಸಜ್ಜಾಗಬೇಕಾದ ಅವಶ್ಯಕತೆ ಇದೆ. ಹೀಗಾಗಿ ಈ ಟೂರ್ನಿಗೂ ಮುನ್ನ ನಡೆಯಲಿರುವ ವಿವಿಧ ಟಿ20 ಸರಣಿಗಳಲ್ಲಿ ಆಟಗಾರರು ಉತ್ತಮ ಪ್ರದರ್ಶನ ನೀಡಿ ವಿಶ್ವಕಪ್ ಟೂರ್ನಿಗೆ ಪ್ರಕಟವಾಗುವ ಭಾರತ ತಂಡದಲ್ಲಿ ಸ್ಥಾನ ಗಿಟ್ಟಿಸಿಕೊಳ್ಳುವ ಯೋಜನೆಯನ್ನು ಹೊಂದಿದ್ದಾರೆ.

ವೇಳಾಪಟ್ಟಿ:

ಜೂನ್ 9- ಮೊದಲ T20I ಪಂದ್ಯ (ಅರುಣ್ ಜೇಟ್ಲಿ ಸ್ಟೇಡಿಯಂ, ದೆಹಲಿ)

ಜೂನ್ 12- ದ್ವಿತೀಯ T20I ಪಂದ್ಯ (ಬಾರಾಬತಿ ಸ್ಟೇಡಿಯಂ, ಕಟಕ್)

ಜೂನ್ 14- ಮೂರನೇ T20I ಪಂದ್ಯ (ಡಾ. ವೈಎಸ್‌ಆರ್ ರೆಡ್ಡಿ ಸ್ಟೇಡಿಯಂ, ವಿಶಾಖಪಟ್ಟಣಂ)

ಜೂನ್ 17- ನಾಲ್ಕನೇ T20I ಪಂದ್ಯ (ಸೌರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ​​ಸ್ಟೇಡಿಯಂ, ರಾಜ್ಕೋಟ್)

ಜೂನ್ 19- ಐದನೇ T20I ಪಂದ್ಯ (ಎಂ.ಚಿನ್ನಸ್ವಾಮಿ ಕ್ರೀಡಾಂಗಣ, ಬೆಂಗಳೂರು)

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 7:51 am, Tue, 7 June 22

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?