AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್

Team India: ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಮೈದಾನಕ್ಕಿಳಿದ ತಕ್ಷಣ ದಿನೇಶ್ ಕಾರ್ತಿಕ್, ಲಾಲಾ ಅಮರನಾಥ್ ಹಾಗೂ ದಿಲೀಪ್ ವೆಂಗ್​ಸರ್ಕಾರ್ ಅವರಿರುವ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾದರು.

Dinesh Karthik: ಟೀಮ್ ಇಂಡಿಯಾ ಪರ ಯಾರೂ ಮಾಡದ ದಾಖಲೆ ಬರೆದ ದಿನೇಶ್ ಕಾರ್ತಿಕ್
dinesh karthikImage Credit source: sportzpic
TV9 Web
| Updated By: ಝಾಹಿರ್ ಯೂಸುಫ್|

Updated on: Jun 11, 2022 | 3:06 PM

Share

ಐಪಿಎಲ್​ನಲ್ಲಿ ಆರ್​ಸಿಬಿ ಪರ ಅಬ್ಬರಿಸುವ ಮೂಲಕ ಮೂರು ವರ್ಷಗಳ ಟೀಮ್ ಇಂಡಿಯಾಗೆ (Team India) ಕಂಬ್ಯಾಕ್ ಮಾಡಿದ ದಿನೇಶ್ ಕಾರ್ತಿಕ್ (Dinesh Karthik) ಇದೀಗ ವಿಶೇಷ ದಾಖಲೆಯೊಂದನ್ನು ತಮ್ಮದಾಗಿಸಿಕೊಂಡಿದ್ದಾರೆ. 2006 ರಲ್ಲಿ ದಕ್ಷಿಣ ಆಫ್ರಿಕಾ ವಿರುದ್ದ ಮೊದಲ ಟಿ20 ಪಂದ್ಯವಾಡಿದ್ದ ಡಿಕೆ, 3 ವರ್ಷಗಳ ಬಳಿಕ ಕಂಬ್ಯಾಕ್ ಮಾಡಿದ್ದು ಕೂಡ ತಂಡದ ವಿರುದ್ದ ಎಂಬುದು ವಿಶೇಷ. ಈ ಮೂಲಕ ಟೀಮ್ ಇಂಡಿಯಾ ಪರ 15 ವರ್ಷಗಳ ಕಾಲ ಆಡಿದ ಆಟಗಾರರ ಪಟ್ಟಿಗೆ ದಿನೇಶ್ ಕಾರ್ತಿಕ್ ಕೂಡ ಸೇರ್ಪಡೆಯಾಗಿದ್ದಾರೆ. ವಿಶೇಷ ಎಂದರೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 15 ವರ್ಷ ಪೂರೈಸಿದ ಮೊದಲ ಆಟಗಾರ ಎಂಬ ದಾಖಲೆ ಇದೀಗ ದಿನೇಶ್ ಕಾರ್ತಿಕ್ ಪಾಲಾಗಿದೆ.

2006 ರಿಂದ ಶುರುವಾದ ದಿನೇಶ್ ಕಾರ್ತಿಕ್ ಅವರ ಟಿ20 ಕ್ರಿಕೆಟ್ ಕೆರಿಯರ್​ ಇದೀಗ 2022 ಕ್ಕೆ ಬಂದು ನಿಂತಿದೆ. ಈ ಮೂಲಕ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ 15 ವರ್ಷಗಳನ್ನು ಪೂರೈಸಿದ ಏಕೈಕ ಆಟಗಾರ ಎಂಬ ಹೆಗ್ಗಳಿಕೆಗೆ ಡಿಕೆ ಪಾತ್ರರಾಗಿದ್ದಾರೆ. ವಿಶೇಷ ಎಂದರೆ ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್​ನಲ್ಲಿ ‘ಮ್ಯಾನ್ ಆಫ್ ದಿ ಮ್ಯಾಚ್’ ಪಡೆದ ಮೊದಲ ಆಟಗಾರ ಎಂಬ ದಾಖಲೆಯನ್ನೂ ಹೊಂದಿದ್ದಾರೆ. ಇದರ ಜೊತೆ ಇದೀಗ 15 ವರ್ಷ ಚುಟುಕು ಕ್ರಿಕೆಟ್​ ಆಡಿದ ವಿಶೇಷ ದಾಖಲೆಯನ್ನೂ ತಮ್ಮದಾಗಿಸಿಕೊಂಡಿದ್ದಾರೆ.

ತಮ್ಮ 15 ವರ್ಷಗಳ ಸುದೀರ್ಘ ವೃತ್ತಿಜೀವನದಲ್ಲಿ ದಿನೇಶ್ ಕಾರ್ತಿಕ್ ಕೇವಲ 33 ಟಿ20 ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಈ 33 ಪಂದ್ಯಗಳ 17 ಇನ್ನಿಂಗ್ಸ್‌ಗಳಲ್ಲಿ ಬ್ಯಾಟ್ ಬೀಸಿದ್ದರು. ಈ ಮೂಲಕ 33.33 ಸರಾಸರಿಯೊಂದಿಗೆ ಒಟ್ಟು 400 ರನ್ ಕಲೆಹಾಕಿದ್ದಾರೆ. ವಿಶೇಷ ಎಂದರೆ ಟೀಮ್ ಇಂಡಿಯಾ ಪರ ಟಿ20 ಯಲ್ಲಿ ಡಿಕೆ 15 ವರ್ಷಗಳನ್ನು ಪೂರೈಸಿದರೂ ಒಂದೇ ಒಂದು ಅರ್ಧಶತಕ ಬಾರಿಸಿಲ್ಲ. ಹಾಗೆಯೇ 27 ಇನಿಂಗ್ಸ್​ಗಳಲ್ಲಿ 15 ಬಾರಿ ನಾಟೌಟ್ ಆಗಿ ಉಳಿದಿದ್ದರು. ಅಲ್ಲದೆ ಈ ಇನಿಂಗ್ಸ್​ಗಳಲ್ಲಿ 42 ಫೋರ್ ಹಾಗೂ 15 ಸಿಕ್ಸ್​ಗಳನ್ನು ಸಿಡಿಸಿದ್ದಾರೆ.

ಇದನ್ನೂ ಓದಿ
Image
India vs South Africa T20: ಭಾರತ-ದಕ್ಷಿಣ ಆಫ್ರಿಕಾ ಟಿ20 ಸರಣಿ ವೇಳಾಪಟ್ಟಿ ಪ್ರಕಟ
Image
Ashish Nehra: ಎಳನೀರು, ಪೆನ್ನು ಪೇಪರ್​ನಲ್ಲೇ 9 ತಂಡಗಳನ್ನ ಮುಗಿಸಿಬಿಟ್ರು..!
Image
IPL 2022: RCB ತಂಡಕ್ಕೆ ಸಿಡಿಲಮರಿ ABD ರಿ-ಎಂಟ್ರಿ​..!
Image
IPL 2022: ವಿಶ್ವ ದಾಖಲೆ ನಿರ್ಮಿಸಿದ RCB ಅಭಿಮಾನಿಗಳು

ಇದೀಗ ಐಪಿಎಲ್​ನಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿ ಹೊಸ ಫಿನಿಶರ್ ರೂಪದಲ್ಲಿ ಟೀಮ್ ಇಂಡಿಯಾಗೆ ಎಂಟ್ರಿ ಕೊಟ್ಟಿರುವ 37 ವರ್ಷದ ದಿನೇಶ್ ಕಾರ್ತಿಕ್ ಸೌತ್ ಆಫ್ರಿಕಾ ವಿರುದ್ದದ ಸರಣಿಯಲ್ಲಿ ಮಿಂಚುವ ವಿಶ್ವಾಸದಲ್ಲಿದ್ದಾರೆ. ಒಂದು ವೇಳೆ ಈ ಸರಣಿಯಲ್ಲಿ ಡಿಕೆ ಅದ್ಭುತ ಪ್ರದರ್ಶನ ನೀಡಿದರೆ ಟಿ20 ವಿಶ್ವಕಪ್​ ತಂಡದಲ್ಲಿ ಸ್ಥಾನ ಸಿಗುವುದು ಖಚಿತ ಎನ್ನಬಹುದು.

ದಿಗ್ಗಜರ ಕ್ಲಬ್​ಗೆ ಡಿಕೆ ಎಂಟ್ರಿ: ಸೌತ್ ಆಫ್ರಿಕಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಮೈದಾನಕ್ಕಿಳಿದ ತಕ್ಷಣ ದಿನೇಶ್ ಕಾರ್ತಿಕ್, ಲಾಲಾ ಅಮರನಾಥ್ ಹಾಗೂ ದಿಲೀಪ್ ವೆಂಗ್​ಸರ್ಕಾರ್ ಅವರಿರುವ ಲೆಜೆಂಡ್ಸ್ ಕ್ಲಬ್​ನಲ್ಲಿ ಸ್ಥಾನ ಪಡೆದರು. ಲಾಲಾ ಅಮರನಾಥ್ 1948 ರಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ 15 ವರ್ಷಗಳನ್ನು ಪೂರೈಸಿದ ಮೊದಲ ಭಾರತೀಯರಾಗಿದ್ದರು. ಇದರ ನಂತರ, ದಿಲೀಪ್ ವೆಂಗ್​ಸರ್ಕಾರ್ ಏಕದಿನ ಕ್ರಿಕೆಟ್‌ನಲ್ಲಿ 15 ವರ್ಷಗಳನ್ನು ಪೂರೈಸಿದ ಮೊದಲ ಭಾರತೀಯರಾಗಿ ದಾಖಲೆ ಬರೆದಿದ್ದರು. ಇದೀಗ ದಿನೇಶ್ ಕಾರ್ತಿಕ್ ಟಿ20 ನಲ್ಲಿ 15 ವರ್ಷಗಳನ್ನು ಪೂರೈಸಿದ ಮೊದಲ ಆಟಗಾರರಾಗಿ ಈ ವಿಶೇಷ ಸಾಧಕರ ಪಟ್ಟಿಗೆ ಸೇರ್ಪಡೆಯಾಗಿದ್ದಾರೆ.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ