‘ನನ್ನೇಲ್ಲ ಸಹ ಆಟಗಾರರಿಗೆ ಧನ್ಯವಾದಗಳು’: ನಿವೃತ್ತಿಯ ಮುನ್ಸೂಚನೆ ನೀಡಿದ್ರಾ ದಿನೇಶ್ ಕಾರ್ತಿಕ್..?

Dinesh Karthik: ನನ್ನನ್ನು ಸದಾ ಬೆಂಬಲಿಸುತ್ತಿರುವ ನನ್ನ ಸಹ ಆಟಗಾರರು, ತರಬೇತುದಾರರು, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಕಾರ್ತಿಕ್ ಬರೆದುಕೊಂಡಿದ್ದಾರೆ.

‘ನನ್ನೇಲ್ಲ ಸಹ ಆಟಗಾರರಿಗೆ ಧನ್ಯವಾದಗಳು’: ನಿವೃತ್ತಿಯ ಮುನ್ಸೂಚನೆ ನೀಡಿದ್ರಾ ದಿನೇಶ್ ಕಾರ್ತಿಕ್..?
Dinesh Karthik
Follow us
TV9 Web
| Updated By: ಪೃಥ್ವಿಶಂಕರ

Updated on:Nov 24, 2022 | 3:35 PM

ಟೀಂ ಇಂಡಿಯಾದಲ್ಲಿ (Team India) ಸರಿಸುಮಾರು 20 ವರ್ಷಗಳ ಪಯಣವನ್ನು ಮುಗಿಸಿರುವ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ (Dinesh Karthik) ತಮ್ಮ ವೃತ್ತಿ ಬದುಕಿನ ಅಂತಿಮ ದಿನಗಳನ್ನು ಎಣಿಸುತ್ತಿದ್ದಾರೆ. ಟೀಂ ಇಂಡಿಯಾದಲ್ಲಿ ತಮ್ಮ ಸ್ಥಾನವನ್ನು ಭಾಗಶಃ ಕಳೆದುಕೊಂಡಿದ್ದ ಕಾರ್ತಿಕ್ ಐಪಿಎಲ್​ನಲ್ಲಿ (IPL) ಅಬ್ಬರಿಸುವ ಮೂಲಕ ಮತ್ತೆ ಸ್ಥಾನ ಗಿಟ್ಟಿಸಿಕೊಂಡಿದ್ದರು. ಹೀಗಾಗಿ ಕಾರ್ತಿಕ್​ರನ್ನು ಟಿ20 ವಿಶ್ವಕಪ್​ಗೆ (T20 World Cup 2022) ಗೇಮ್ ಫಿನಿಶರ್ ಆಗಿ ಆಯ್ಕೆ ಮಾಡಲಾಗಿತ್ತು. ಆದರೆ ಈ ಮಿನಿ ಸಮರದಲ್ಲಿ ಕಾರ್ತಿಕ್ ಪ್ರದರ್ಶನ ಹೇಳಿಕೊಳ್ಳುವಂತಿರಲಿಲ್ಲ. ವಿಶ್ವಕಪ್‌ಗೂ ಮುನ್ನವೇ ಕಾರ್ತಿಕ್‌ಗೆ ಇದು ಕೊನೆಯ ವಿಶ್ವಕಪ್ ಆಗಿರಬಹುದು ಎಂದು ಹೇಳಲಾಗುತ್ತಿತ್ತು. ಇದೀಗ ವಿಶ್ವಕಪ್​ನಿಂದ ಬರಿಗೈಯಲ್ಲಿ ವಾಪಸ್ಸಾಗಿರುವ ಕಾರ್ತಿಕ್ ಬುಧವಾರ ತಮ್ಮ ಇನ್‌ಸ್ಟಾಗ್ರಾಮ್‌ ಖಾತೆಯಲ್ಲಿ ವೀಡಿಯೊವನ್ನು ಹಂಚಿಕೊಳ್ಳುವ ಮೂಲಕ ತಮ್ಮ ವಿದಾಯದ ಮುನ್ಸೂಚನೆ ನೀಡಿದ್ದಾರೆ. ಈ ಪೋಸ್ಟ್‌ನಲ್ಲಿ ನಿವೃತ್ತಿಯ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಗಳು ಇಲ್ಲದಿದ್ದರೂ ಅಭಿಮಾನಿಗಳಿಗೆ ಇದು ಸ್ಪಷ್ಟವಾಗಿ ನಿವೃತ್ತಿಯ ಸೂಚನೆ ಎಂಬುದು ಅರ್ಥವಾಗಿದೆ.

ವಿಶ್ವಕಪ್‌ನ ಆರಂಭಿಕ ಪಂದ್ಯಗಳಲ್ಲಿ ದಿನೇಶ್ ಕಾರ್ತಿಕ್ ಅವರಿಗೆ ತಂಡದಲ್ಲಿ ಅವಕಾಶ ನೀಡಲಾಯಿತು. ಆದರೆ ಕಾರ್ತಿಕ್ ತಮಗೆ ವಹಿಸಿದ್ದ ಜವಬ್ದಾರಿಯನ್ನು ಪೂರ್ಣಗೊಳಿಸುವಲ್ಲಿ ವಿಫಲರಾದರು. ಹೀಗಾಗಿ ಇಂಗ್ಲೆಂಡ್ ವಿರುದ್ಧದ ಮಹತ್ವದ ಸೆಮಿಫೈನಲ್ ಪಂದ್ಯದಲ್ಲಿ ಅವರ ಸ್ಥಾನಕ್ಕೆ ರಿಷಬ್ ಪಂತ್ ಅವರನ್ನು ಆಯ್ಕೆ ಮಾಡಲಾಗಿತ್ತು. ಕಾರ್ತಿಕ್‌ಗೆ ಈಗ 37 ವರ್ಷ ವಯಸ್ಸಾಗಿರುವುದರಿಂದ ಮುಂದಿನ ವಿಶ್ವಕಪ್‌ನಲ್ಲಿ ಆಡುತ್ತಾರೆ ಎಂಬ ಭರವಸೆ ಈಗ ಕಡಿಮೆಯಾಗಿದೆ. ಹೀಗಾಗಿ ಕಾರ್ತಿಕ್ ತಮ್ಮ ಪೋಸ್ಟ್‌ನಲ್ಲಿ ನಿವೃತ್ತಿ ಸೂಚನೆ ನೀಡಿದ್ದಾರೆ ಎಂಬುದು ಅಭಿಮಾನಿಗಳ ವಲಯದಿಂದ ಕೇಳಿಬರುತ್ತಿರುವ ಟಾಕ್ ಆಗಿದೆ.

ವಿಶೇಷ ವಿಡಿಯೋ ಹಂಚಿಕೊಂಡ ಕಾರ್ತಿಕ್

ಕಾರ್ತಿಕ್ ಅವರು ತಮ್ಮ ತಂಡದ ಆಟಗಾರರೊಂದಿಗೆ, ಕುಟುಂಬದೊಂದಿಗೆ ಮತ್ತು ಮೈದಾನದಲ್ಲಿ ಆಡುತ್ತಿರುವ ಫೋಟೋಗಳನ್ನು ಒಳಗೊಂಡಿರುವ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಅಲ್ಲದೆ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, ವಿಶ್ವಕಪ್‌ನಲ್ಲಿ ಭಾರತ ತಂಡದ ಭಾಗವಾಗಿದ್ದು ಹೆಮ್ಮೆಯ ಸಂಗತಿ. ನಾವು ಪಂದ್ಯಾವಳಿಯನ್ನು ಗೆದ್ದಿಲ್ಲದಿರಬಹುದು ಆದರೆ ನೆನಪುಗಳು ಯಾವಾಗಲೂ ನನ್ನನ್ನು ಸಂತೋಷಪಡಿಸುತ್ತವೆ. ನನ್ನನ್ನು ಸದಾ ಬೆಂಬಲಿಸುತ್ತಿರುವ ನನ್ನ ಸಹ ಆಟಗಾರರು, ತರಬೇತುದಾರರು, ಸ್ನೇಹಿತರು ಮತ್ತು ಅಭಿಮಾನಿಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಸುಮಾರು ಎರಡು ದಶಕಗಳ ವೃತ್ತಿಜೀವನ

2004 ರಲ್ಲಿ ಭಾರತ ತಂಡಕ್ಕೆ ಪಾದಾರ್ಪಣೆ ಮಾಡಿದ ದಿನೇಶ್ ಕಾರ್ತಿಕ್, 2007 ರಲ್ಲಿ ನಡೆದ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾದ ಭಾಗವಾಗಿದ್ದರು. ಆದರೆ ಆ ಬಳಿಕ ತಂಡದ ನಾಯಕ ಹಾಗೂ ಖಾಯಂ ವಿಕೆಟ್ ಕೀಪರ್ ಆಗಿ ಧೋನಿ ಇದ್ದಿದ್ದರಿಂದ ಕಾರ್ತಿಕ್​ಗೆ ಭಾರತ ತಂಡದಲ್ಲಿ ಹೆಚ್ಚಿನ ಅವಕಾಶಗಳು ಸಿಗಲಿಲ್ಲ. ಆದಾಗ್ಯೂ ಸಿಕ್ಕ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡಿದ್ದ ಕಾರ್ತಿಕ್, ಟೀಂ ಇಂಡಿಯಾಕ್ಕೆ ಮತ್ತೊಮ್ಮೆ ಭರ್ಜರಿ ಎಂಟ್ರಿಕೊಟ್ಟಿದ್ದರು. ಹಾಗೆಯೇ 2019 ರಲ್ಲಿ ಇಂಗ್ಲೆಂಡ್‌ನಲ್ಲಿ ನಡೆದ ವಿಶ್ವಕಪ್‌ನಲ್ಲಿ ದಿನೇಶ್ ಕಾರ್ತಿಕ್​ಗೆ ತಂಡದಲ್ಲಿ ಅವಕಾಶ ನೀಡಲಾಗಿತ್ತು. ಕಾರ್ತಿಕ್ ಈಗ ಇಬ್ಬರು ಪುತ್ರರ ತಂದೆಯಾಗಿದ್ದು, ಕುಟುಂಬದೊಂದಿಗೆ ಸಮಯ ಕಳೆಯಲು ಬಯಸಿದ್ದಾರೆ. ಹೀಗಿರುವಾಗ ಸದ್ಯದಲ್ಲೇ ಅಧಿಕೃತವಾಗಿ ನಿವೃತ್ತಿ ಘೋಷಿಸುವ ಸಾಧ್ಯತೆ ಇದೆ.

Published On - 3:33 pm, Thu, 24 November 22

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?