VIDEO: ದಿನೇಶ್ ಕಾರ್ತಿಕ್ ಮೈಗೆ ಕೈಹಾಕಿದ ಯುವತಿ: ಕೋಪಗೊಂಡ ಡಿಕೆ ಮಾಡಿದ್ದೇನು ನೋಡಿ
Dinesh Karthik: ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮೈದಾನದಲ್ಲಿ ಕಾಣಿಸಿಕೊಂಡ ಯುವತಿಯು ಬಿಸಿಸಿಐ ಅಥವಾ ಟೀಮ್ ಇಂಡಿಯಾ ಸಿಬ್ಬಂದಿಗಳ ಭಾಗವೇ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.
ಆಸ್ಟ್ರೇಲಿಯಾ-ಭಾರತ (India vs Australia) ನಡುವಣ ಟಿ20 ಸರಣಿಯ ಕೊನೆಯ ಪಂದ್ಯವು ಹಲವು ನಾಟಕೀಯ ಸನ್ನಿವೇಶಗಳಿಗೆ ಸಾಕ್ಷಿಯಾಗಿತ್ತು. ಈ ಪಂದ್ಯದಲ್ಲಿ 6 ವಿಕೆಟ್ಗಳಿಂದ ಜಯ ಸಾಧಿಸುವ ಮೂಲಕ ಟೀಮ್ ಇಂಡಿಯಾ (Team India) 2-1 ಅಂತರದಿಂದ ಸರಣಿಯನ್ನು ಗೆದ್ದುಕೊಂಡಿತು. ಈ ಗೆಲುವಿನ ಬಳಿಕ ಟ್ರೋಫಿ ಎತ್ತಿ ಹಿಡಿದು ಸಂಭ್ರಮಿಸಿದ ಟೀಮ್ ಇಂಡಿಯಾ ಆಟಗಾರರ ಬಳಿ ಯುವತಿಯೊಬ್ಬಳು ಕಾಣಿಸಿಕೊಂಡು ಅಚ್ಚರಿ ಮೂಡಿಸಿದ್ದರು.
ಟೀಮ್ ಇಂಡಿಯಾ ಆಟಗಾರರು ವಿಜಯೋತ್ಸವದ ಬಳಿಕ ಮೈದಾನದಿಂದ ಡ್ರೆಸ್ಸಿಂಗ್ ರೂಮ್ನತ್ತ ತೆರಳುತ್ತಿದ್ದರು. ಇದೇ ವೇಳೆ ಯುವತಿಯೊಬ್ಬಳು ದಿನೇಶ್ ಕಾರ್ತಿಕ್ (Dinesh Karthik) ಅವರ ಮೈ ಮುಟ್ಟಿದ್ದಾರೆ. ಇದರಿಂದ ಕುಪಿತಗೊಂಡ ಕಾರ್ತಿಕ್ ಯುವತಿಯನ್ನು ದಿಟ್ಟಿಸಿ ನೋಡಿದ್ದಾರೆ. ಅಲ್ಲದೆ ಅಲ್ಲಿದ್ದ ಮೈದಾನದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಳ್ಳಲು ಮುಂದಾಗಿದ್ದರು.
ಅಷ್ಟರಲ್ಲಿ ಟೀಮ್ ಇಂಡಿಯಾ ಆಟಗಾರ ರವಿಚಂದ್ರನ್ ಅಶ್ವಿನ್ ಮಧ್ಯೆ ಪ್ರವೇಶಿಸಿ ದಿನೇಶ್ ಕಾರ್ತಿಕ್ ಅವರನ್ನು ಸಮಾಧಾನಪಡಿಸುವ ಪ್ರಯತ್ನ ಮಾಡಿದರು. ಇದೀಗ ಈ ತೆರೆಮರೆಯ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಯುವತಿ ಬಿಸಿಸಿಐ ಭಾಗವೇ?
ಈ ವಿಡಿಯೋ ವೈರಲ್ ಆದ ಬೆನ್ನಲ್ಲೇ ಮೈದಾನದಲ್ಲಿ ಕಾಣಿಸಿಕೊಂಡ ಯುವತಿಯು ಬಿಸಿಸಿಐ ಅಥವಾ ಟೀಮ್ ಇಂಡಿಯಾ ಸಿಬ್ಬಂದಿಗಳ ಭಾಗವೇ ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ. ಏಕೆಂದರೆ ಯುವತಿಯು ಟೀಮ್ ಇಂಡಿಯಾ ಮಹಿಳಾ ತಂಡದ ಜೆರ್ಸಿಯನ್ನು ಧರಿಸಿದ್ದಾರೆ. ಹೀಗಾಗಿ ಇದೀಗ ದಿನೇಶ್ ಕಾರ್ತಿಕ್ ಅವರೊಂದಿಗೆ ಮೈದಾನದಲ್ಲಿ ಅನುಚಿತವಾಗಿ ವರ್ತಿಸಿದ ಯುವತಿ ಯಾರು ಎಂಬ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.