AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dinesh Karthik Injury: ಸೋಲಿನ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಶಾಕ್: ಸ್ಟಾರ್ ಆಟಗಾರನಿಗೆ ಇಂಜುರಿ

India vs South Africa, T20 World Cup: ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿನ ಬೆನ್ನಲ್ಲೇ ಇದೀಗ ಭಾರತ ತಂಡಕ್ಕೆ ಮತ್ತೊಂದು ಆಘಾತ ಉಂಟಾಗಿದೆ. ತಂಡದ ಸ್ಟಾರ್ ಬ್ಯಾಟರ್, ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ಗಾಯಕ್ಕೆ ತುತ್ತಾಗಿದ್ದಾರೆ.

Dinesh Karthik Injury: ಸೋಲಿನ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಶಾಕ್: ಸ್ಟಾರ್ ಆಟಗಾರನಿಗೆ ಇಂಜುರಿ
Dinesh Karthik Injury
TV9 Web
| Edited By: |

Updated on:Oct 31, 2022 | 9:35 AM

Share

ಭಾನುವಾರ ಪರ್ತ್ ಸ್ಟೇಡಿಯಂನಲ್ಲಿ ನಡೆದ ಟಿ20 ವಿಶ್ವಕಪ್​ನ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಭಾರತ (India vs South Africa) ಸೋಲು ಕಂಡಿತು. ಗೆಲ್ಲಬಹುದಾಗಿದ್ದ ಪಂದ್ಯದಲ್ಲಿ ನೀಡಿದ ಕಳಪೆ ಫೀಲ್ಡಿಂಗ್ ಸೋಲಿಗೆ ಮುಖ್ಯ ಕಾರಣವಾಯಿತು. ನಾಯಕ ರೋಹಿತ್ ಶರ್ಮಾ (Rohit Sharma) ಕೂಡ ತಂಡ ಸೋಲಲು ನಾವು ಪ್ರದರ್ಶಿಸಿದ ಕೆಟ್ಟ ಫೀಲ್ಡಿಂಗ್ ಕಾರಣ ಎಂದು ಹೇಳಿದರು. 5 ವಿಕೆಟ್​ಗಳ ಗೆಲುವಿನ ಮೂಲಕ ಉತ್ತಮ ರನ್​ರೇಟ್​ ಹಾಗೂ 2 ಅಂಕ ಸಂಪಾದಿಸಿ ದಕ್ಷಿಣ ಆಫ್ರಿಕಾ ಟೇಬಲ್ ಟಾಪರ್ ಆಗಿದೆ. ಭಾರತ ಎರಡನೇ ಸ್ಥಾನಕ್ಕೆ ಇಳಿದಿದೆ. ಸೋಲಿನ ಬೆನ್ನಲ್ಲೇ ಇದೀಗ ಟೀಮ್ ಇಂಡಿಯಾಕ್ಕೆ ಮತ್ತೊಂದು ಆಘಾತ ಉಂಟಾಗಿದೆ. ತಂಡದ ಸ್ಟಾರ್ ಬ್ಯಾಟರ್, ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ (Dinesh Karthik) ಗಾಯಕ್ಕೆ ತುತ್ತಾಗಿದ್ದು ಮುಂದಿನ ಪಂದ್ಯದಲ್ಲಿ ಆಡುವುದು ಅನುಮಾನ ಎನ್ನಲಾಗಿದೆ.

ಭಾರತ- ದಕ್ಷಿಣ ಆಫ್ರಿಕಾ ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ತಿಕ್ ಇಂಜುರಿಗೆ ತುತ್ತಾಗಿದ್ದರು. ನೆಟ್​ನಲ್ಲಿ ಕ್ಯಾಚಿಂಗ್ ಅಭ್ಯಾಸದ ವೇಳೆ ಡೈವ್ ಬಿದ್ದು ಕ್ಯಾಚ್ ಹಿಡಿಯುವಾಗ ಗಾಯಕ್ಕೆ ತುತ್ತಾಗಿದ್ದರು. ಆದರೆ, ಆ ಸಂದರ್ಭ ದೊಡ್ಡ ಮಟ್ಟದ ನೋವು ಕಾಣಿಸಿಕೊಂಡಿರಲಿಲ್ಲ. ಬಳಿಕ ಪಂದ್ಯದ ಮಧ್ಯೆ ಭಾರತ ಫೀಲ್ಡಿಂಗ್ ಮಾಡುವಾಗ 16ನೇ ಓವರ್​​ ವೇಳೆ ದೇಹದ ಹಿಂಭಾಗ ಜೋರಾಗಿ ನೋವು ಕಾಣಿಸಿಕೊಂಡಿದೆ. ಈ ಸಂದರ್ಭ ಕಾರ್ತಿಕ್​ಗೆ ಕೀಪಿಂಗ್ ಕೂಡ ಮಾಡಲಾಗಿಲ್ಲ. ಹೀಗಾಗಿ ಮೈದಾನ ತೊರೆದು ಇವರ ಬದಲು ರಿಷಭ್ ಪಂತ್ ವಿಕೆಟ್ ಕೀಪಿಂಗ್ ಜವಾಬ್ದಾರಿ ನಿರ್ವಹಿಸಿದರು.

ಪಂದ್ಯ ಮುಗಿದ ಬಳಿಕ ಕಾರ್ತಿಕ್ ಗಾಯದ ಬಗ್ಗೆ ಮಾತನಾಡಿದ ಭುವನೇಶ್ವರ್ ಕುಮಾರ್, ”ಅವರಿಗೆ ಹಿಂಭಾಗ ನೋವು ಕಾಣಿಸಿಕೊಂಡಿದೆ. ಪಂದ್ಯದ ಬಳಿಕ ನಾನು ಅವರನ್ನು ಬೇಟಿಯಾಗಿಲ್ಲ. ಹೋಟೆಲ್​ಗೆ ತೆರಳಿದ ಬಳಿಕ ಕಾರ್ತಿಕ್​ ಜೊತೆ ಮಾತನಾಡುತ್ತೇನೆ. ಫಿಸಿಯೊ ಅವರ ವರದಿಗಾಗಿ ಕಾಯುತ್ತಿದ್ದೇ,”ವೆ ಎಂದು ಹೇಳಿದ್ದಾರೆ. ಕಾರ್ತಿಕ್ ಇಂಜುರಿ ಸಮಸ್ಯೆ ಬಗ್ಗೆ ಬಿಸಿಸಿಐ ಇನ್ನೂ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ. ನೋವಿನ ಪ್ರಮಾಣ ದೊಡ್ಡದಾಗಿದ್ದಲ್ಲಿ ಮುಂದಿನ ಪಂದ್ಯದಲ್ಲಿ ಇವರು ಆಡುವುದು ಅನುಮಾನ.

ಇದನ್ನೂ ಓದಿ
Image
Rohit Sharma: ಪಂದ್ಯ ಮುಗಿದ ಬಳಿಕ ತಂಡದ ಸೋಲಿಗೆ ನಾಯಕ ರೋಹಿತ್ ಶರ್ಮಾ ದೂರಿದ್ದು ಯಾರನ್ನು ಗೊತ್ತೇ?
Image
T20 World Cup 2022 Point Table: ಟೀಮ್ ಇಂಡಿಯಾಗೆ ಸೋಲು: ಪಾಯಿಂಟ್ ಟೇಬಲ್​ನಲ್ಲಿ ಮಹತ್ವದ ಬದಲಾವಣೆ
Image
T20 World Cup: ಸೆಮಿಫೈನಲ್​ ಪ್ರವೇಶಿಸಲು ಪಾಕಿಸ್ತಾನಕ್ಕೆ ಇರುವುದು ಇದೊಂದು ದಾರಿ..!
Image
ಪೌರಾಣಿಕದ ಈ ಪಾತ್ರದ ಮೂಲಕ ಇತಿಹಾಸ ನಿರ್ಮಿಸಲು ದೀಪಿಕಾ ರೆಡಿ

ಭಾರತಕ್ಕೆ ಸೋಲು:

ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಮಾಡಿದ ಲುಂಗಿ ಎನ್​ಗಿಡಿ ಆರಂಭದಲ್ಲೆ ಆಘಾತ ನೀಡಿದರು. ಕೆ.ಎಲ್. ರಾಹುಲ್ (9), ರೋಹಿತ್ ಶರ್ಮಾ (15), ವಿರಾಟ್ ಕೊಹ್ಲಿ (12), ಹಾರ್ದಿಕ್ ಪಾಂಡ್ಯ (0) ಹಾಗೂ ದೀಪಕ್ ಹೂಡ (0) ಅವರ ವಿಕೆಟ್‌ಗಳನ್ನು 50 ರನ್​ಗು ಮುನ್ನವೇ ಕಳೆದುಕೊಂಡಿತು. ಆದರೆ ಮತ್ತೊಮ್ಮೆ ದಿಟ್ಟ ಆಟವಾಡಿದ ಸೂರ್ಯಕುಮಾರ್ ಯಾದವ್ (68 ರನ್, 40ಎಸೆತ, 6 ಫೋರ್, 3 ಸಿಕ್ಸರ್) ಅವರಿಂದಾಗಿ ಭಾರತ ತಂಡವು 20 ಓವರ್‌ಗಳಲ್ಲಿ 9 ವಿಕೆಟ್‌ಗಳಿಗೆ 133 ರನ್ ಗಳಿಸಿತು. ಹರಿಣಗಳ ಪರ ಲುಂಗಿ ಎನ್​ಗಿಡಿ 4 ಹಾಗೂ ವೇಯನ್ ಪರ್ನೆಲ್ 3 ವಿಕೆಟ್ ಕಿತ್ತು ಮಿಂಚಿದರು.

ಸಾಧಾರಣ ಗುರಿ ಬೆನ್ನತ್ತಿದ ಆಫ್ರಿಕಾಗೆ ಅರ್ಷದೀಪ್ ಸಿಂಗ್ ಆರಂಭದಲ್ಲೇ ಎರಡು ವಿಕೆಟ್ ಪಡೆದು ಆಘಾತ ನೀಡಿದರು. ಕ್ವಿಂಟಾನ್ ಡಿ ಕಾಕ್ 1 ಮತ್ತು ರಿಲೀ ರೋಸ್ಸೋ ಸೊನ್ನೆ ಸುತ್ತಿ ಔಟಾದರು. ಬಳಿಕ ಟೆಂಬಾ ಬಾವುವಾ 10 ರನ್ ಗಳಿಸಿದ್ದಾಗ ಶಮಿ ಬೌಲಿಂಗ್​ನಲ್ಲಿ ವಿಕೆಟ್ ಒಪ್ಪಿಸಿದರು. ಇದರಿಂದಾಗಿ ಭಾರತಕ್ಕೂ ಗೆಲುವಿನತ್ತ ಸಾಗುವ ಅವಕಾಶ ಇತ್ತು. ಆದರೆ, ಫೀಲ್ಡಿಂಗ್‌ನಲ್ಲಿ ನಡೆದ ಲೋಪಗಳು ದುಬಾರಿಯಾದವು. ಆ್ಯಡಂ ಮರ್ಕ್ರಮ್ ಮತ್ತು ಡೇವಿಡ್ ಮಿಲ್ಲರ್ ಕ್ರಮವಾಗಿ 52 ಹಾಗೂ 59 ರನ್ ಬಾರಿಸಿ ತಂಡವನ್ನು ಅಪಾಯದಿಂದ ಪಾರು ಮಾಡಿ ಜಯದ ದಡಕ್ಕೆ ಕೊಂಡೊಯ್ದರು. ಅಂತಿಮವಾಗಿ ಆಫ್ರಿಕಾ 19.4 ಓವರ್‌ಗಳಲ್ಲಿ 5 ವಿಕೆಟ್‌ಗಳಿಗೆ 137 ರನ್‌ ಗಳಿಸಿ ಜಯದ ನಗೆ ಬೀರಿತು.

Published On - 9:35 am, Mon, 31 October 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಹೊಸ ವರ್ಷದ ಕೊಡುಗೆ: ನೀವು ಬೆಳಗ್ಗೆ ಹಲ್ಲು ಉಜ್ಜೋ ಮುಂಚೆಯೇ ಬಾರ್ ಓಪನ್!
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ