Dinesh Karthik: ಮುಂದಿನ ಪಂದ್ಯದಲ್ಲೂ DK ಗೆ ಚಾನ್ಸ್ ಸಿಗೋದು ಡೌಟ್..!

Dinesh Karthik: ಪಾಕ್ ವಿರುದ್ಧ ಕಣಕ್ಕಿಳಿದ ಪ್ಲೇಯಿಂಗ್ ಇಲೆವೆನ್​ ಅನ್ನೇ ಟೀಮ್ ಇಂಡಿಯಾ ಮತ್ತೆ ಆಡಿಸುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಪಾಕಿಸ್ತಾನ್ ವಿರುದ್ಧ ಭಾರತ ತಂಡ ಸೋತರೂ ಉತ್ತಮ ಪೈಪೋಟಿ ನೀಡುವಲ್ಲಿ ಯಶಸ್ವಿಯಾಗಿತ್ತು.

Dinesh Karthik: ಮುಂದಿನ ಪಂದ್ಯದಲ್ಲೂ DK ಗೆ ಚಾನ್ಸ್ ಸಿಗೋದು ಡೌಟ್..!
Dinesh Karthik
Follow us
TV9 Web
| Updated By: ಝಾಹಿರ್ ಯೂಸುಫ್

Updated on:Sep 05, 2022 | 7:31 PM

Asia Cup 2022: ಏಷ್ಯಾಕಪ್​ನ ಸೂಪರ್-4 ಹಂತದಲ್ಲಿ ಪಾಕಿಸ್ತಾನ್ ವಿರುದ್ದ ಸೋಲುಂಡಿರುವ ಟೀಮ್ ಇಂಡಿಯಾ (Team India) ಇದೀಗ 2ನೇ ಪಂದ್ಯಕ್ಕಾಗಿ ಸಿದ್ಧತೆಗಳನ್ನು ಆರಂಭಿಸಿದೆ. ಮಂಗಳವಾರ (ಸೆ.6) ನಡೆಯಲಿರುವ ಈ ಪಂದ್ಯದಲ್ಲಿ ಭಾರತ ತಂಡವು ಶ್ರೀಲಂಕಾವನ್ನು ಎದುರಿಸಲಿದೆ. ಆದರೆ ಅತ್ತ ಶ್ರೀಲಂಕಾ ತಂಡವು ಅಫ್ಘಾನಿಸ್ತಾನ್ ವಿರುದ್ದ ಭರ್ಜರಿ ಜಯ ಸಾಧಿಸುವ ಮೂಲಕ ಸೂಪರ್​-4 ನಲ್ಲಿ ಶುಭಾರಂಭ ಮಾಡಿದೆ. ಇತ್ತ ಟೀಮ್ ಇಂಡಿಯಾ ಪಾಕ್ ವಿರುದ್ದ ಸೋತು ಲಂಕಾ ವಿರುದ್ಧ ಗೆಲ್ಲಲೇಬೇಕಾದ ಅನಿವಾರ್ಯತೆಯಲ್ಲಿದೆ. ಇದಾಗ್ಯೂ ಈ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾದಲ್ಲಿ ಪ್ರಮುಖ ಬದಲಾವಣೆ ಕಂಡು ಬರುವ ಸಾಧ್ಯತೆ ತುಂಬಾ ಕಡಿಮೆ ಎನ್ನಬಹುದು. ಒಂದು ವೇಳೆ ಅವೇಶ್ ಖಾನ್ ತಂಡಕ್ಕೆ ಮರಳಿದರೆ, ರವಿ ಬಿಷ್ಣೋಯ್ ಅಥವಾ ಚಹಾಲ್ ತಂಡದಿಂದ ಸ್ಥಾನ ಕಳೆದುಕೊಳ್ಳಬಹುದು.

ಇದಾಗ್ಯೂ ದಿನೇಶ್ ಕಾರ್ತಿಕ್​ಗೆ ಮತ್ತೆ ಪ್ಲೇಯಿಂಗ್ ಇಲೆವೆನ್​ನಲ್ಲಿ ಚಾನ್ಸ್ ಸಿಗುವುದು ಅನುಮಾನ. ಏಕೆಂದರೆ ಟೀಮ್ ಇಂಡಿಯಾದಲ್ಲಿ ಯಾವುದೇ ಎಡಗೈ ಬ್ಯಾಟ್ಸ್​ಮನ್​ ಇಲ್ಲ. ಲೆಫ್ಟ್ ಹ್ಯಾಂಡ್ ಆಲ್​ರೌಂಡರ್ ರವೀಂದ್ರ ಜಡೇಜಾ ಗಾಯಗೊಂಡ ಹಿನ್ನೆಲೆಯಲ್ಲಿ ಏಷ್ಯಾಕಪ್​ನಿಂದ ಹೊರಗುಳಿದಿದ್ದಾರೆ. ಜಡೇಜಾ ಅವರ ಅನುಪಸ್ಥಿತಿಯ ಕಾರಣ ಪಾಕ್ ವಿರುದ್ಧ ಟೀಮ್ ಇಂಡಿಯಾ ಮಹತ್ವದ ಬದಲಾವಣೆ ಮಾಡಿಕೊಂಡಿತ್ತು.

ಅದರಂತೆ ದಿನೇಶ್ ಕಾರ್ತಿಕ್ ಅವರನ್ನು ಕೈ ಬಿಟ್ಟು ಎಡಗೈ ದಾಂಡಿಗ ರಿಷಭ್ ಪಂತ್ ಅವರನ್ನು ವಿಕೆಟ್ ಕೀಪರ್ ಆಗಿ ಆಯ್ಕೆ ಮಾಡಲಾಗಿತ್ತು. ಏಕೆಂದರೆ ಟೀಮ್ ಇಂಡಿಯಾ ಬಳಗದಲ್ಲಿರುವ ಏಕೈಕ ಎಡಗೈ ಬ್ಯಾಟ್ಸ್​ಮನ್ ಎಂದರೆ ರಿಷಭ್ ಪಂತ್. ಹಾಗಾಗಿ ಮಧ್ಯಮ ಕ್ರಮಾಂಕದಲ್ಲಿ ಲೆಫ್ಟ್ ಹ್ಯಾಂಡ್ ಬ್ಯಾಟ್ಸ್​ಮನ್​ ಅನ್ನು ಕಣಕ್ಕಿಳಿಸಲು ದಿನೇಶ್ ಕಾರ್ತಿಕ್ ಅವರನ್ನು ಪ್ಲೇಯಿಂಗ್ ಇಲೆವೆನ್​ನಿಂದ ಕೈ ಬಿಡಲಾಗಿತ್ತು.

ಇದೀಗ ಶ್ರೀಲಂಕಾ ವಿರುದ್ಧದ ಪಂದ್ಯದಲ್ಲೂ ಎಡಗೈ ದಾಂಡಿಗನಾಗಿ ರಿಷಭ್ ಪಂತ್ ಅವರೊಬ್ಬರೇ ಟೀಮ್ ಇಂಡಿಯಾ ಮುಂದಿರುವ ಆಯ್ಕೆ. ಹೀಗಾಗಿ ಈ ಪಂದ್ಯದಲ್ಲೂ ದಿನೇಶ್ ಕಾರ್ತಿಕ್​ಗೆ ಚಾನ್ಸ್ ಸಿಗುವುದು ಅನುಮಾನ. ಅದರಂತೆ ಶ್ರೀಲಂಕಾ ವಿರುದ್ಧದ ಪಂದ್ಯದ ವೇಳೆಯೂ ಡಿಕೆ ಬೆಂಚ್ ಕಾಯಬೇಕಾಗಿ ಬರಬಹುದು.

ಅಲ್ಲದೆ ಪಾಕ್ ವಿರುದ್ಧ ಕಣಕ್ಕಿಳಿದ ಪ್ಲೇಯಿಂಗ್ ಇಲೆವೆನ್​ ಅನ್ನೇ ಟೀಮ್ ಇಂಡಿಯಾ ಮತ್ತೆ ಆಡಿಸುವ ಸಾಧ್ಯತೆ ಹೆಚ್ಚಿದೆ. ಏಕೆಂದರೆ ಪಾಕಿಸ್ತಾನ್ ವಿರುದ್ಧ ಭಾರತ ತಂಡ ಸೋತರೂ ಉತ್ತಮ ಪೈಪೋಟಿ ನೀಡುವಲ್ಲಿ ಯಶಸ್ವಿಯಾಗಿತ್ತು. ಹೀಗಾಗಿ ಅದೇ ಬಳಗವನ್ನೇ ಲಂಕಾ ವಿರುದ್ಧ ಕೂಡ ಕಣಕ್ಕಿಳಿಸುವ ಮೂಲಕ ಜಯದ ಲಯಕ್ಕೆ ಮರಳಲು ಟೀಮ್ ಇಂಡಿಯಾ ಯೋಜನೆ ರೂಪಿಸಬಹುದು.

ಟೀಮ್ ಇಂಡಿಯಾ ಹೀಗಿದೆ:

ರೋಹಿತ್‌ ಶರ್ಮಾ (ನಾಯಕ), ಕೆ.ಎಲ್‌ ರಾಹುಲ್‌, ವಿರಾಟ್‌ ಕೊಹ್ಲಿ, ಸೂರ್ಯಕುಮಾರ್‌ ಯಾದವ್‌, ದೀಪಕ್‌ ಹೂಡ, ರಿಷಭ್ ಪಂತ್‌ (ವಿಕೆಟ್‌ಕೀಪರ್‌), ದಿನೇಶ್‌ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್‌ ಪಾಂಡ್ಯ, ಅಕ್ಷರ್‌ ಪಟೇಲ್‌, ಭುವನೇಶ್ವರ್‌ ಕುಮಾರ್‌, ಅರ್ಷದೀಪ್‌ ಸಿಂಗ್‌, ಅವೇಶ್‌ ಖಾನ್‌, ಯುಜ್ವೇಂದ್ರ ಚಹಲ್‌, ಆರ್‌ ಅಶ್ವಿನ್‌, ರವಿ ಬಿಷ್ಣೋಯ್‌.

ಮೀಸಲು ಆಟಗಾರರು: ದೀಪಕ್‌ ಚಹರ್‌ ಮತ್ತು ಶ್ರೇಯಸ್‌ ಅಯ್ಯರ್‌.

Published On - 7:31 pm, Mon, 5 September 22

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್