Dinesh Karthik: ವಿರಾಟ್ ಕೊಹ್ಲಿ, ರಿಚಾರ್ಜ್ ಆಗಿ ಹೇಗೆ ಕಂಬ್ಯಾಕ್ ಮಾಡ್ತಾರೆ ನೋಡ್ತಾ ಇರಿ..!

Team India: ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ದದ ಸರಣಿಗಾಗಿ ತೆರಳಿದೆ. ಜುಲೈ 22 ರಿಂದ ಶುರುವಾಗಲಿರುವ ಏಕದಿನ ಸರಣಿಯಿಂದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್​​ಪ್ರೀತ್​ ಬುಮ್ರಾ ಸೇರಿದಂತೆ ಪ್ರಮುಖ ಆಟಗಾರರು ವಿಶ್ರಾಂತಿ ಪಡೆದಿದ್ದಾರೆ.

Dinesh Karthik: ವಿರಾಟ್ ಕೊಹ್ಲಿ, ರಿಚಾರ್ಜ್ ಆಗಿ ಹೇಗೆ ಕಂಬ್ಯಾಕ್ ಮಾಡ್ತಾರೆ ನೋಡ್ತಾ ಇರಿ..!
Virat Kohli-Dinesh Karthik
Follow us
TV9 Web
| Updated By: ಝಾಹಿರ್ ಯೂಸುಫ್

Updated on: Jul 20, 2022 | 5:32 PM

ವಿರಾಟ್ ಕೊಹ್ಲಿ (Virat Kohli) ಫಾರ್ಮ್​ ಕಳೆದುಕೊಂಡಿರುವುದು ಗೊತ್ತೇ ಇದೆ. ಇದೇ ಕಾರಣಕ್ಕೆ ಕೊಹ್ಲಿಯನ್ನು ತಂಡದಿಂದ ಕೈಬಿಡಬೇಕೆಂಬ ಅಭಿಪ್ರಾಯಗಳು ಕೇಳಿ ಬರುತ್ತಿದೆ. ಅನೇಕ ಮಾಜಿ ಆಟಗಾರರು ಕೊಹ್ಲಿ ಬ್ಯಾಟಿಂಗ್ ಅನ್ನು ಟೀಕಿಸಿದ್ದಾರೆ. ಇವೆಲ್ಲದರ ನಡುವೆ RCB ಆಟಗಾರ, ಟೀಮ್ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್​ ದಿನೇಶ್ ಕಾರ್ತಿಕ್ (Dinesh Karthik) ಮಾತ್ರ ಕೊಹ್ಲಿಯ ಬೆಂಬಲಕ್ಕೆ ನಿಂತಿದ್ದಾರೆ. ಈ ಬಗ್ಗೆ ಮಾತನಾಡಿರುವ ದಿನೇಶ್ ಕಾರ್ತಿಕ್,  ವಿರಾಟ್ ಕೊಹ್ಲಿ ಟೀಮ್ ಇಂಡಿಯಾ ಪರ ಅತ್ಯುತ್ತಮ ಪ್ರದರ್ಶನವನ್ನು ನೀಡಿದ ಆಟಗಾರ. ಇದೀಗ ಅವರಿಗೆ ವೆಸ್ಟ್ ಇಂಡೀಸ್ ಸರಣಿಯ ವೇಳೆ ವಿಶ್ರಾಂತಿ ನೀಡಲಾಗಿದೆ. ವಿಶ್ರಾಂತಿ ಪಡೆಯುವುದರಿಂದ ಅವರು ಸಂಪೂರ್ಣವಾಗಿ ರೀಚಾರ್ಜ್ ಆಗಿ ಹಿಂತಿರುಗುತ್ತಾರೆ ಎಂದು ಡಿಕೆ ಹೇಳಿದ್ದಾರೆ.

ಅಲ್ಲದೆ ಅವರು ಕಂಬ್ಯಾಕ್ ಮಾಡಿದ ಬಳಿಕ ಅದ್ಭುತ ಪ್ರದರ್ಶನ ನೀಡಲಿದ್ದಾರೆ. ನೀವು ಅವರಂತಹ ಕ್ಯಾಲಿಬರ್ ಆಟಗಾರನನ್ನು ಎಂದಿಗೂ ತಳ್ಳಿಹಾಕಲು ಸಾಧ್ಯವಿಲ್ಲ. ಇಂತಹ  ಶ್ರೇಷ್ಠ ಆಟಗಾರನನ್ನು ಯಾವುದೇ ತಂಡ  ಕೈಬಿಡಲು ಬಯಸುವುದಿಲ್ಲ. ಅವರು ಫಾರ್ಮ್​ಗೆ ಬರಲು ಹೆಚ್ಚು ದಿನಗಳು ಬೇಕಾಗುವುದಿಲ್ಲ ಎಂದು ಭಾವಿಸುತ್ತೇನೆ. ಅಲ್ಲದೆ ಶೀಘ್ರದಲ್ಲೇ ಟೀಮ್ ಇಂಡಿಯಾ ಪರ ಅವರು ಮತ್ತೊಮ್ಮೆ ಶ್ರೇಷ್ಠ ಇನಿಂಗ್ಸ್​ಗಳನ್ನು ಆಡುವ ದಿನಗಳು ಬರಲಿವೆ ಎಂದು ದಿನೇಶ್ ಕಾರ್ತಿಕ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇದಕ್ಕೂ ಮುನ್ನ ಇಂಗ್ಲೆಂಡ್ ಪ್ರವಾಸದ ವೇಳೆ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಅವರು ವಿರಾಟ್ ಕೊಹ್ಲಿಗೆ ಬೆಂಬಲ ವ್ಯಕ್ತಪಡಿಸಿದ್ದರು. ಕೊಹ್ಲಿ ಹಲವು ವರ್ಷಗಳಿಂದ ಹಲವಾರು ಪಂದ್ಯಗಳನ್ನು ಆಡಿದ್ದಾರೆ. ಅಂತಹ ಶ್ರೇಷ್ಠ ಬ್ಯಾಟ್ಸ್‌ಮನ್​ಗೆ ಯಾರೂ ಕೂಡ ಧೈರ್ಯ ತುಂಬುವ ಅಗತ್ಯವಿಲ್ಲ. ಫಾರ್ಮ್​ ಇರುವುದು ಹೋಗುವುದು ಆಟದ ಒಂದು ಭಾಗವಷ್ಟೇ. ಎಲ್ಲಾ ಆಟಗಾರರ ವೃತ್ತಿಜೀವನದಲ್ಲೂ ಇದು ನಡೆಯುತ್ತದೆ. ಹೀಗಾಗಿ ವಿರಾಟ್ ಕೊಹ್ಲಿಯಂತಹ ಶ್ರೇಷ್ಠ ಆಟಗಾರನಿಗೆ ಫಾರ್ಮ್​​ಗೆ ಬರಲು ಹಲವಾರು  ಕೇವಲ 1 ಅಥವಾ 2 ಇನ್ನಿಂಗ್ಸ್ ಅಗತ್ಯವಿರುತ್ತೆ ಎಂದು ಹಿಟ್​​ಮ್ಯಾನ್ ಹೇಳಿದ್ದರು.

ಇದನ್ನೂ ಓದಿ
Image
T20 World Cup 2022: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 16 ತಂಡಗಳು ಫೈನಲ್
Image
Steve Smith: ಬರೋಬ್ಬರಿ 30 ಕೋಟಿ ಲಾಭ ಪಡೆದ ಸ್ಟೀವ್ ಸ್ಮಿತ್..!
Image
Cricket Records: ಕ್ರಿಕೆಟ್ ಇತಿಹಾಸದ ಈ ಅದ್ಭುತ ದಾಖಲೆಗಳನ್ನು ಎಂದಿಗೂ ಮುರಿಯಲಾಗುವುದಿಲ್ಲ!
Image
Team India: 1 ವರ್ಷದೊಳಗೆ 8 ನಾಯಕರನ್ನು ಕಣಕ್ಕಿಳಿಸಿದ ಟೀಮ್ ಇಂಡಿಯಾ..!

ಸದ್ಯ ಟೀಮ್ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ದದ ಸರಣಿಗಾಗಿ ತೆರಳಿದೆ. ಜುಲೈ 22 ರಿಂದ ಶುರುವಾಗಲಿರುವ ಏಕದಿನ ಸರಣಿಯಿಂದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಜಸ್​​ಪ್ರೀತ್​ ಬುಮ್ರಾ ಸೇರಿದಂತೆ ಪ್ರಮುಖ ಆಟಗಾರರು ವಿಶ್ರಾಂತಿ ಪಡೆದಿದ್ದಾರೆ. ಇನ್ನು ಟಿ20 ಸರಣಿಗೆ ರೋಹಿತ್ ಶರ್ಮಾ ಮರಳಿದರೂ ವಿರಾಟ್ ಕೊಹ್ಲಿ ಹೊರಗುಳಿದಿದ್ದಾರೆ.

ಹಾಗೆಯೇ ವೆಸ್ಟ್ ಇಂಡೀಸ್ ಸರಣಿಯ ಬಳಿಕ ಟೀಮ್ ಇಂಡಿಯಾ ಜಿಂಬಾಬ್ವೆ ವಿರುದ್ದ ಏಕದಿನ ಸರಣಿ ಆಡಲಿದ್ದು, ಈ ಸರಣಿಯಲ್ಲಿ ವಿರಾಟ್ ಕೊಹ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ. ಏಕೆಂದರೆ ಏಷ್ಯಾಕಪ್​ಗೂ ಮುನ್ನ ವಿರಾಟ್​ ಕೊಹ್ಲಿ ಫಾರ್ಮ್​​ಗೆ ಬರಬೇಕಾದ ಅನಿವಾರ್ಯತೆ ಇದೆ. ಹೀಗಾಗಿ ಒಂದು ತಿಂಗಳ ವಿಶ್ರಾಂತಿ ಬಳಿಕ ಕೊಹ್ಲಿ ಹರಾರೆಯಲ್ಲಿ ನಡೆಯಲಿರುವ ಜಿಂಬಾಬ್ವೆ ವಿರುದ್ದದ 3 ಪಂದ್ಯಗಳ ಏಕದಿನ ಸರಣಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ವೆಸ್ಟ್ ಇಂಡೀಸ್ ವಿರುದ್ಧದ ಟಿ20 ಸರಣಿಗೆ ಭಾರತ ತಂಡ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಇಶಾನ್ ಕಿಶನ್, ಕೆಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ಶ್ರೇಯಸ್ ಅಯ್ಯರ್, ದಿನೇಶ್ ಕಾರ್ತಿಕ್, ರಿಷಭ್ ಪಂತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ವೆಸ್ಟ್ ಇಂಡೀಸ್ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಹೀಗಿದೆ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಭಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್‌), ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.