Dinesh Karthik: ತಿಂಗಳ ಹಿಂದೆ ಆರ್​​ಸಿಬಿ ಪರ ಈಗ ಭಾರತಕ್ಕೆ: ಕ್ರಿಕೆಟ್ ಲೋಕದಲ್ಲಿ ದಿನೇಶ್ ಕಾರ್ತಿಕ್ ನೂತನ ದಾಖಲೆ

IND vs SA 4th T20: ಐಪಿಎಲ್​​ನಲ್ಲಿ ಆರ್​ಸಿಬಿ ಪರ ನೀಡಿದ ಪ್ರದರ್ಶನ ದಿನೇಶ್ ಕಾರ್ತಿಕ್ ಕೆರೆಯರ್ ಅನ್ನೇ ಬದಲಾಯಿಸಿದೆ. ಶುಕ್ರವಾರ ನಡೆದ ಭಾರತ- ದಕ್ಷಿಣ ಆಫ್ರಿಕಾ 4ನೇ ಟಿ20 ಪಂದ್ಯದಲ್ಲಿ ಕಾರ್ತಿಕ್ ಅಕ್ಷರಶಃ ಎದುರಾಳಿಗೆ ಕಂಟಕವಾಗಿ ಪರಿಣಮಿಸಿದರು. ಕುಸಿದಿದ್ದ ಭಾರತ ತಂಡಕ್ಕೆ ಆಧಾರವಾಗಿ ನಿಂತರು.

Dinesh Karthik: ತಿಂಗಳ ಹಿಂದೆ ಆರ್​​ಸಿಬಿ ಪರ ಈಗ ಭಾರತಕ್ಕೆ: ಕ್ರಿಕೆಟ್ ಲೋಕದಲ್ಲಿ ದಿನೇಶ್ ಕಾರ್ತಿಕ್ ನೂತನ ದಾಖಲೆ
Dinesh Karthik IND vs SA 4th T20I
Follow us
TV9 Web
| Updated By: Vinay Bhat

Updated on:Jun 18, 2022 | 8:03 AM

ಮೂರು ತಿಂಗಳ ಹಿಂದೆ ದಿನೇಶ್ ಕಾರ್ತಿಕ್ (Dinesh Karthik) ಪುನಃ ಟೀಮ್ ಇಂಡಿಯಾ ಪರ ಆಡುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಇವರು ನೀಡಿದ ಪ್ರದರ್ಶನ ಕಾರ್ತಿಕ್ ಕೆರೆಯರ್ ಅನ್ನೇ ಬದಲಾಯಿಸಿದೆ. ತಿಂಗಳ ಹಿಂದೆ ಆರ್​ಸಿಬಿ (RCB) ತಂಡಕ್ಕೆ ನೀಡುತ್ತಿದ್ದ ಕೊಡುಗೆಯನ್ನು ಈಗ ಟೀಮ್ ಇಂಡಿಯಾ ಪರವೂ ಮುಂದುವರೆಸುತ್ತಿದ್ದಾರೆ. ಇದು ಮತ್ತೊಮ್ಮೆ ಸಾಭೀತಾಗಿದ್ದು ಸದ್ಯ ಸಾಗುತ್ತಿರುವ ಭಾರತ- ದಕ್ಷಿಣ ಆಫ್ರಿಕಾ (India vs South Africa) ನಡುವಣ ಟಿ20 ಸರಣಿ. ಶುಕ್ರವಾರ ರಾಜ್​ಕೋಟ್​ನಲ್ಲಿ ನಡೆದ ನಾಲ್ಕನೇ ಟಿ20 ಪಂದ್ಯದಲ್ಲಿ ಕಾರ್ತಿಕ್ ಅಕ್ಷರಶಃ ಎದುರಾಳಿಗೆ ಕಂಟಕವಾಗಿ ಪರಿಣಮಿಸಿದರು. ಕುಸಿದಿದ್ದ ಭಾರತ ತಂಡಕ್ಕೆ ಆಧಾರವಾಗಿ ನಿಂತ ಡಿಕೆ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು. ಇದರ ಜೊತೆಗೆ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಚೊಚ್ಚಲ ಅರ್ಧಶತಕ ಸಿಡಿಸಿದ ಸಾಧನೆ ಕೂಡ ಮಾಡಿದ್ದಾರೆ.

ಕೇವಲ 27 ಎಸೆತಗಳಲ್ಲಿ 55 ರನ್ ಚಚ್ಚಿದ ಕಾರ್ತಿಕ್ 203.70 ಸ್ಟ್ರೈಕ್‌ರೇಟ್‌ನಲ್ಲಿ 9 ಫೋರ್ ಮತ್ತು 2 ಅಮೋಘ ಸಿಕ್ಸರ್ ಸಿಡಿಸಿದರು. ಈ ಮೂಲಕ ಭಾರತದ ಪರ ಟಿ20 ಕ್ರಿಕೆಟ್‌ನಲ್ಲಿ ಅರ್ಧಶತಕ ದಾಖಲಿಸಿದ ಅತಿ ಹಿರಿಯ ಆಟಗಾರ ಎಂಬ ಸಾಧನೆ ಇವರ ಹೆಸರಿಗೆ ದಾಖಲಾಗಿದೆ. ಈ ವಿಚಾರದಲ್ಲಿ ಮಾಜಿ ನಾಯಕ ಎಂಎಸ್ ಧೋನಿ ದಾಖಲೆಯನ್ನೂ ಅಳಿಸಿ ಹಾಕಿದ್ದಾರೆ. ಈ ಹಿಂದೆ ಧೋನಿ 36ನೇ ವರ್ಷದಲ್ಲಿ ಟಿ20 ಅಂತರರಾಷ್ಟ್ರೀಯ ಕ್ರಿಕೆಟ್​ನಲ್ಲಿ ಮೊದಲ ಅರ್ಧಶತಕ ದಾಖಲಿಸಿದ್ದರು. ಇದೀಗ ಡಿಕೆ 37ನೇ ವಯಸ್ಸಿನಲ್ಲಿ ಚೊಚ್ಚಲ ಅರ್ಧಶತಕ ಗಳಿಸಿದ್ದಾರೆ.

IND vs SA: ಕಾರ್ತಿಕ್- ಹಾರ್ದಿಕ್ ಅಬ್ಬರ.. ಅವೇಶ್- ಹರ್ಷಲ್ ಮಾರಕ ದಾಳಿ; ಭಾರತಕ್ಕೆ 82 ರನ್ ಜಯ

ಇದನ್ನೂ ಓದಿ
Image
ಅಬ್ಬರ ಸಿಡಿಲಬ್ಬರ: ಏಕದಿನ ಕ್ರಿಕೆಟ್​ನಲ್ಲಿ ಅತ್ಯಧಿಕ ರನ್​ ಬಾರಿಸಿ ವಿಶ್ವ ದಾಖಲೆ ನಿರ್ಮಿಸಿದ ಇಂಗ್ಲೆಂಡ್
Image
India vs South Africa T20 Highlights: ದಿನೇಶ್ ಅಬ್ಬರದ ಅರ್ಧಶತಕ; ಭಾರತಕ್ಕೆ 82 ರನ್​ಗಳ ಜಯ, ಸರಣಿ ಸಮಬಲ
Image
IND vs IRE: ಭಾರತ ವಿರುದ್ಧದ ಸರಣಿಗೂ ಮುನ್ನ ಐರ್ಲೆಂಡ್‌ಗೆ ಆಘಾತ; ಕ್ರಿಕೆಟ್​ಗೆ ಗುಡ್​ ಬೈ ಹೇಳಿದ ತಂಡದ ಮಾಜಿ ನಾಯಕ
Image
Steffan Nero: ಕ್ರಿಕೆಟ್ ಲೋಕವೇ ಶಾಕ್: ಏಕದಿನ ಪಂದ್ಯದಲ್ಲಿ ತ್ರಿಶತಕ ಸಿಡಿಸಿದ ಆಸ್ಟ್ರೇಲಿಯಾ ಬ್ಯಾಟರ್ ಸ್ಟೀಫನ್ ನೀರೊ

ನಾಲ್ಕನೇ ಟಿ20 ಕದನದಲ್ಲಿ ಟಾಸ್ ಗೆದ್ದ ಅ. ಆಫ್ರಿಕಾ ತಂಡವು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ದಿನೇಶ್ ಕಾರ್ತಿಕ್  ಮತ್ತು ಹಾರ್ದಿಕ್ ಪಾಂಡ್ಯ ಅವರ ಜೊತೆಯಾಟದ ಬಲದಿಂದ ಆತಿಥೇಯ ತಂಡವು 20 ಓವರ್‌ಗಳಲ್ಲಿ 6ಕ್ಕೆ 169 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡಕ್ಕೆ ಆವೇಶ್ ಖಾನ್ (18ಕ್ಕೆ4) ತಡೆಯೊಡ್ಡಿದರು. ತೆಂಬಾ ಬವುಮಾ ಬಳಗವು 16.5 ಓವರ್‌ಗಳಲ್ಲಿ 87 ರನ್‌ ಗಳಿಸಿ ಎಲ್ಲ ವಿಕೆಟ್ ಕಳೆದುಕೊಂಡಿತು. ಇದರೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ 2-2ರ ಸಮಬಲ ಸಾಧಿಸಿತು. ಅದರಿಂದಾಗಿ ಭಾನುವಾರ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಕೊನೆಯ ಪಂದ್ಯದಲ್ಲಿ ಜಯಿಸುವವರಿಗೆ ಸರಣಿ ಕಿರೀಟ ಒಲಿಯಲಿದೆ. ಮೊದಲ ಎರಡು ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಅಮೋಘ ಜಯ ಸಾಧಿಸಿತ್ತು. ಮೂರನೇ ಪಂದ್ಯದಲ್ಲಿ ರಿಷಭ್ ಪಂತ್ ಬಳಗವು ಪುಟಿದೆದ್ದು ಗೆಲುವು ಸಾಧಿಸಿತು.

ಅಚ್ಚರಿ ಎಂದರೆ ಈ ಪಂದ್ಯದಲ್ಲಿ ಭಾರತ ತಂಡವು 81 ರನ್‌ಗಳಿಗೆ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಈ ಸಂದರ್ಭದಲ್ಲಿ ಕ್ರೀಸ್‌ಗೆ ಕಾಲಿಟ್ಟ ದಿನೇಶ್ ಇನಿಂಗ್ಸ್‌ನ ಚಿತ್ರಣವನ್ನೇ ಬದಲಿಸಿದರು. ಸ್ಟ್ರೈಟ್ ಡ್ರೈವ್, ಸ್ಕೂ‍ಪ್ ಮತ್ತು ರಿವರ್ಸ್ ಸ್ವೀಪ್‌ಗಳ ಮೂಲಕ ಮನಮೋಹಕವಾಗಿ ಆಟವಾಡಿದರು. ಇವರಿಗೆ ಹಾರ್ದಿಕ್ ಕೂಡ ಸಾಥ್ ನೀಡಿದರು. ಇದರಿಂದಾಗಿ ಕೊನೆಯ 5 ಓವರ್‌ಗಳಲ್ಲಿ 69 ರನ್‌ಗಳು ತಂಡದ ಖಾತೆ ಸೇರಿದವು. ಐದನೇ ವಿಕೆಟ್ ಜೊತೆಯಾಟದಲ್ಲಿ ಡಿಕೆ- ಹಾರ್ದಿಕ್ 65 ರನ್​ಗಳ ಕಾಣಿಕೆ ನೀಡಿದರು.

ಕ್ರಿಕೆಟ್​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:03 am, Sat, 18 June 22

ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ