AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2024: ಐಪಿಎಲ್​ಗೆ ದಿನೇಶ್ ಕಾರ್ತಿಕ್ ಗುಡ್ ಬೈ..?

IPL 2024: ಇಂಡಿಯನ್ ಪ್ರೀಮಿಯರ್ ಲೀಗ್ 17ನೇ ಆವೃತ್ತಿಗೆ ಮಾರ್ಚ್ 22 ರಂದು ಚಾಲನೆ ಸಿಗಲಿದೆ. ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಮುಖಾಮುಖಿಯಾಗಲಿದೆ. ಈ ಪಂದ್ಯದೊಂದಿಗೆ ಐಪಿಎಲ್ ಸೀಸನ್ 17 ಶುರುವಾಗಲಿದೆ.

IPL 2024: ಐಪಿಎಲ್​ಗೆ ದಿನೇಶ್ ಕಾರ್ತಿಕ್ ಗುಡ್ ಬೈ..?
Dinesh Karthik
TV9 Web
| Edited By: |

Updated on: Mar 07, 2024 | 1:59 PM

Share

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಕೆಟ್ ಕೀಪರ್ ಬ್ಯಾಟರ್ ದಿನೇಶ್ ಕಾರ್ತಿಕ್ (Dinesh Karthik) ಈ ಬಾರಿಯ ಐಪಿಎಲ್​ನೊಂದಿಗೆ ನಿವೃತ್ತಿ ಘೋಷಿಸಲಿದ್ದಾರೆ ಎಂದು ವರದಿಯಾಗಿದೆ. ಐಪಿಎಲ್ ಸೀಸನ್​-17 ರಲ್ಲಿ ಆರ್​ಸಿಬಿ ಪರ ಕೊನೆಯ ಬಾರಿಗೆ ಕಣಕ್ಕಿಳಿಯುವ ಮೂಲಕ ಡಿಕೆ ಎಲ್ಲಾ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ. ಹೀಗಾಗಿ ಇದು ಅವರ ಕೊನೆಯ ಐಪಿಎಲ್ ಸೀಸನ್ ಆಗಿರಲಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

“ಈ 2024 ರ ಆವೃತ್ತಿಯು ದಿನೇಶ್ ಕಾರ್ತಿಕ್ ಅವರ ಕೊನೆಯ ಐಪಿಎಲ್ ಆಗಿರಲಿದೆ. ಈ ಬಾರಿಯ ಐಪಿಎಲ್ ನಂತರ ಅವರು ಅಂತರರಾಷ್ಟ್ರೀಯ ಕ್ರಿಕೆಟ್ ನಿವೃತ್ತಿಯನ್ನು ನಿರ್ಧರಿಸುತ್ತಾರೆ” ಎಂದು BCCI ಮೂಲಗಳು ತಿಳಿಸಿದೆ ಎಂದು ಪಿಟಿಐ ವರದಿ ಮಾಡಿದೆ.

  • 2008 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್​) ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ದಿನೇಶ್ ಕಾರ್ತಿಕ್, 2011 ರಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ (ಈಗಿನ ಪಂಜಾಬ್ ಕಿಂಗ್ಸ್​) ಪರ ಆಡಿದ್ದರು.
  • 2012 ರಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪಾಲಾದ ಡಿಕೆ 2014 ರಲ್ಲಿ ಮತ್ತೆ ಡೆಲ್ಲಿ ಡೇರ್ ಡೆವಿಲ್ಸ್ ತಂಡಕ್ಕೆ ಮರಳಿದ್ದರು. 2015 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಆಡಿದ್ದರು.
  • 2016-17 ರಲ್ಲಿ ಗುಜರಾತ್ ಲಯನ್ಸ್ (ಈ ತಂಡ ಈಗಿಲ್ಲ) ಪರ ಆಡಿದ್ದ ದಿನೇಶ್ ಕಾರ್ತಿಕ್, 2018 ರಿಂದ 2021 ರವರೆಗೆ ಕೊಲ್ಕತ್ತಾ ನೈಟ್ ರೈಡರ್ಸ್ ಪರ ಕಣಕ್ಕಿಳಿದಿದ್ದರು.
  •  2022 ರಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಭಾಗವಾಗಿರುವ ಡಿಕೆ ಈ ಬಾರಿಯ ಐಪಿಎಲ್​ ಮೂಲಕ ನಿವೃತ್ತಿ ಘೋಷಿಸುವ ಸಾಧ್ಯತೆಯಿದೆ.

ಡಿಕೆ ಬಾಸ್ ಪ್ರದರ್ಶನ:

2022 ರಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ದಿನೇಶ್ ಕಾರ್ತಿಕ್ ಭರ್ಜರಿ ಪ್ರದರ್ಶನ ನೀಡಿದ್ದರು. ಕೆಳ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದ ಡಿಕೆ 180 ಎಸೆತಗಳನ್ನು ಎದುರಿಸಿ ಒಟ್ಟು 330 ರನ್ ಕಲೆಹಾಕಿದ್ದರು. ಈ ಮೂಲಕ ಟೀಮ್ ಇಂಡಿಯಾ ಟಿ20 ವಿಶ್ವಕಪ್ ತಂಡದಲ್ಲೂ ಸ್ಥಾನ ಪಡೆದಿದ್ದರು. ಆದರೆ ಐಪಿಎಲ್ 2023 ರಲ್ಲಿ ಆರ್​ಸಿಬಿ ಪರ ಅತ್ಯಂತ ಕಳಪೆ ಪ್ರದರ್ಶನ ನೀಡಿದ್ದರು. ಕಳೆದ ಸೀಸನ್​ನಲ್ಲಿ 13 ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ದಿನೇಶ್ ಕಾರ್ತಿಕ್ ಕಲೆಹಾಕಿದ್ದು ಕೇವಲ 140 ರನ್​ಗಳು ಮಾತ್ರ.

ಇದನ್ನೂ ಓದಿ: IPL 2024: 10 ತಂಡಗಳ ನಾಯಕರುಗಳ ಪಟ್ಟಿ ಇಲ್ಲಿದೆ

ಇದಾಗ್ಯೂ ಈ ಬಾರಿಯ ಐಪಿಎಲ್​ ಹರಾಜಿಗೂ ಮುನ್ನ ಆರ್​ಸಿಬಿ ತಂಡವು ದಿನೇಶ್ ಕಾರ್ತಿಕ್ ಅವರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಈ ಸಲ ಕೂಡ 38 ವರ್ಷದ ದಿನೇಶ್ ಕಾರ್ತಿಕ್ ಆರ್​ಸಿಬಿ ಪರ ಕಣಕ್ಕಿಳಿಯಲಿದ್ದಾರೆ. ಅಲ್ಲದೆ ಈ ಐಪಿಎಲ್​ನೊಂದಿಗೆ ಡಿಕೆ ವಿದಾಯ ಹೇಳಲಿದ್ದಾರಾ ಕಾದು ನೋಡಬೇಕಿದೆ.

ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಕೊನೆಗೂ ತುಂಗಭದ್ರಾ ಡ್ಯಾಂ ಕ್ರಸ್ಟ್ ಗೇಟ್ ಬದಲಾವಣೆ ಕಾರ್ಯ ಆರಂಭ
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್