Dinesh Karthik: ಟಿ20 ವಿಶ್ವಕಪ್‌ಗೆ ಆಯ್ಕೆಯಾದ ತಕ್ಷಣ ದಿನೇಶ್ ಕಾರ್ತಿಕ್ ಮಾಡಿದ ಟ್ವೀಟ್ ಏನು ನೋಡಿ
India Squad for the 2022 T20 World cup: 2007 ರಲ್ಲಿ ನಡೆದ ಟಿ20 ವಿಶ್ವಕಪ್ನ ಉದ್ಘಾಟನಾ ಟೂರ್ನಿಯಲ್ಲಿ ಭಾರತ ತಂಡದ ಭಾಗವಾಗಿದ್ದ ದಿನೇಶ್ ಕಾರ್ತಿಕ್ ಕೂಡ 2022 ಐಸಿಸಿ ಟಿ20 ವಿಶ್ವಕಪ್ ಟೂರ್ನಿಗೆ ಟೀಮ್ ಇಂಡಿಯಾದ 15 ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಮುಂದಿನ ತಿಂಗಳು ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ (ICC T20 World Cup) ಟೂರ್ನಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಟೀಮ್ ಇಂಡಿಯಾವನ್ನು ಪ್ರಕಟ ಮಾಡಿದೆ. ರೋಹಿತ್ ಶರ್ಮಾ (Rohit Sharma) ತಂಡವನ್ನು ಮುನ್ನಡೆಸುತ್ತಿದ್ದು ಕೆಎಲ್ ರಾಹುಲ್ ಉಪ ನಾಯಕನಾಗಿದ್ದಾರೆ. ಕೆಲವೊಂದು ಅಚ್ಚರಿಯ ಆಯ್ಕೆಗಳು ಕೂಡ ನಡೆದಿದೆ. ಇಂಜುರಿಯಿಂದ ಜಸ್ಪ್ರೀತ್ ಬುಮ್ರಾ ಹಾಗೂ ಹರ್ಷಲ್ ಪಟೇಲ್ ಕಮ್ಬ್ಯಾಕ್ ಮಾಡಿದ್ದು 15 ಆಟಗಾರರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ. ಇದರ ಜೊತೆಗೆ 2007 ರಲ್ಲಿ ನಡೆದ ಟಿ20 ವಿಶ್ವಕಪ್ನ ಉದ್ಘಾಟನಾ ಟೂರ್ನಿಯಲ್ಲಿ ಭಾರತ ತಂಡದ ಭಾಗವಾಗಿದ್ದ ದಿನೇಶ್ ಕಾರ್ತಿಕ್ (Dinesh Karthik) ಕೂಡ ಅವಕಾಶ ಗಿಟ್ಟಿಸಿಕೊಂಡಿದ್ದಾರೆ.
ಈ ಮೂಲಕ ಕಾರ್ತಿಕ್ ಬಹಳ ಸಮಯದ ತಮ್ಮ ಕನಸನ್ನು ನನಸು ಮಾಡಿಕೊಂಡಿದ್ದಾರೆ. ಈ ಬಗ್ಗೆ ಖುಷಿ ವ್ಯಕ್ತಪಡಿಸಿರುವ ಕಾರ್ತಿಕ್ ಟ್ವಿಟರ್ನಲ್ಲಿ ‘ಕನಸುಗಳು ನನಸಾಗುತ್ತವೆ‘ ಎಂದು ಬರೆದು ಬ್ಲೂ ಹಾರ್ಟ್ ಎಮೋಜಿಯೊಂದಿಗೆ ಹಂಚಿಕೊಂಡಿದ್ದಾರೆ. ಇದು ದಿನೇಶ್ ಕಾರ್ತಿಕ್‌ಗೆ ಮಾತ್ರವಲ್ಲ ಅವರ ಆಟವನ್ನು ಮೆಚ್ಚಿಕೊಂಡ ಅಭಿಮಾನಿಗಳಿಗೂ ಖುಷಿ ನೀಡಿದೆ.
Dreams do come true ?
— DK (@DineshKarthik) September 12, 2022
ಟೀಮ್ ಇಂಡಿಯಾಕ್ಕೆ ಕಮ್ಬ್ಯಾಕ್ ಮಾಡಬೇಕು, 2022 ಟಿ20 ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಬೇಕು ಎಂಬುದು ನನ್ನ ಕನಸು ಎಂದು ಕಾರ್ತಿಕ್ ಈ ಹಿಂದೆಯೇ ಹೇಳಿದ್ದರು. ಇದಕ್ಕಾಗಿ ತರಬೇತಿಯನ್ನು ಕೂಡ ಪಡೆದುಕೊಂಡಿದ್ದರು. ಇಂಡಿಯನ್ ಪ್ರೀಮಿಯರ್ ಲೀಗ್ 2022 ರಲ್ಲಿ ಆರ್ಸಿಬಿ ತಂಡದ ಪರವಾಗಿ ಆಡಿದ್ದ ದಿನೇಶ್ ಕಾರ್ತಿಕ್ ಅದ್ಭುತವಾಗಿ ಬ್ಯಾಟಿಂಗ್ ಮಾಡಿ ತಮಗೆ ನೀಡಿದ್ದ ಫಿನಿಶರ್ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸಿದರು.
ಐಪಿಎಲ್ 2022 ರಲ್ಲಿ ನೀಡಿದ ಅಮೋಘ ಪ್ರದರ್ಶನದಿಂದ ಬಿಸಿಸಿಐ ಇವರನ್ನು ಟೀಮ್ ಇಂಡಿಯಾಕ್ಕೆ ಮತ್ತೆ ಆಯ್ಕೆ ಮಾಡಿತು. ಈ ಮೂಲಕ ಮೂರು ವರ್ಷಗಳ ನಂತರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ವಾಪಸ್ ಮರಳಿದರು. ರಾಷ್ಟ್ರೀಯ ತಂಡದಲ್ಲೂ ಕಾರ್ತಿಕ್ ಅಬ್ಬರಿಸಿದರು. ಇದೀಗ ಪಟ್ಟ ಶ್ರಮಕ್ಕೆ ಫಲ ಸಿಕ್ಕಿದ್ದು ಟಿ20 ವಿಶ್ವಕಪ್‌ಗೆ ಆಯ್ಕೆ ಆಗಿದ್ದಾರೆ. ಇಲ್ಲಿ ಯಾವರೀತಿ ಪ್ರದರ್ಶನ ನೀಡುತ್ತಾರೆ ಎಂಬುದು ನೋಡಬೇಕಿದೆ.
ಜಡೇಜಾ ಔಟ್:
ಏಷ್ಯಾ ಕಪ್ ಟೂರ್ನಿಯ ಮಧ್ಯೆ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಆಲ್ರೌಂಡರ್ ರವೀಂದ್ರ ಜಡೇಜಾ ಟಿ20 ವಿಶ್ವಕಪ್ನಿಂದ ಹೊರಬಿದ್ದಿದ್ದಾರೆ. ಸರ್ಜರಿಗೆ ಒಳಗಾಗಿರುವ ಜಡೇಜಾ ಚೇತರಿಸಿಕೊಳ್ಳುತ್ತಿರುವುದಾಗಿ ತಿಳಿಸಿದ್ದರು. ವಿಶ್ವಕಪ್‌ಗೆ ಇನ್ನೂ ಕೇವಲ 5 ವಾರಗಳು ಬಾಕಿ ಇರುವ ಕಾರಣ ಜಡೇಜಾ ಲಭ್ಯತೆ ಅನುಮಾನದ ಕಾರಣ ಅವರ ಬದಲಾಗಿ ಅಕ್ಷರ್ ಪಟೇಲ್ಗೆ ಅವಕಾಶ ನೀಡಲಾಗಿದೆ. ಅಂತೆಯೆ ಅರ್ಷ್ದೀಪ್ ಸಿಂಗ್ಗೆ ಅವಕಾಶ ನೀಡಲಾಗಿದ್ದು ಆವೇಶ್ ಖಾನ್ ಅವರನ್ನು ಹೊರಗಿಡಲಾಗಿದೆ.
ಟಿ20 ವಿಶ್ವಕಪ್‌ಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪ ನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಜಸ್ಪ್ರೀತ್ ತ್ ಬುಮ್ರಾ, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷ್ದೀಪ್ ಸಿಂಗ್.
ಸ್ಟ್ಯಾಂಡ್‌ಬೈ ಆಟಗಾರರು: ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ಮೊಹಮ್ಮದ್ ಶಮಿ, ದೀಪಕ್ ಚಹಾರ್.
Published On - 7:52 am, Tue, 13 September 22