Dinesh Karthik: 21 ಸಿಕ್ಸ್, 21 ಫೋರ್: 20ನೇ ಓವರ್​ನಲ್ಲಿ DK ಬಾಸ್..!

IPL 2022: ಇಂಡಿಯನ್ ಪ್ರೀಮಿಯರ್ ಲೀಗ್‌ನ 15 ನೇ ಸೀಸನ್‌ನಲ್ಲಿ ದಿನೇಶ್ ಕಾರ್ತಿಕ್ ಅವರ ಪ್ರದರ್ಶನವು ಇಲ್ಲಿಯವರೆಗೆ ಅತ್ಯುತ್ತಮವಾಗಿದೆ. ಪ್ರಸಕ್ತ ಸೀಸನ್​ನಲ್ಲಿ 12 ಪಂದ್ಯಗಳಲ್ಲಿ 274 ರನ್ ಗಳಿಸಿದ್ದಾರೆ.

Dinesh Karthik: 21 ಸಿಕ್ಸ್, 21 ಫೋರ್: 20ನೇ ಓವರ್​ನಲ್ಲಿ DK ಬಾಸ್..!
dinesh karthik
Follow us
TV9 Web
| Updated By: ಝಾಹಿರ್ ಯೂಸುಫ್

Updated on: May 09, 2022 | 9:19 PM

IPL 2022: ಐಪಿಎಲ್ ಸೀಸನ್ 15 ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ದಿನೇಶ್ ಕಾರ್ತಿಕ್ (Dinesh Karthik) ಅಬ್ಬರ ಮುಂದುವರೆದಿದೆ. ಸ್ಲಾಗ್ ಓವರ್ ಗಳಲ್ಲಿ ಎದುರಾಳಿ ತಂಡದ ಬೌಲರ್​ಗಳ ಅಬ್ಬರಿಸುತ್ತಿರುವ ಕಾರ್ತಿಕ್ ಎಸ್​ಆರ್​ಹೆಚ್​ ವಿರುದ್ದದ ಪಂದ್ಯದಲ್ಲೂ ತಮ್ಮ ಆಕ್ರಮಣಕಾರಿ ಬ್ಯಾಟಿಂಗ್​ ಪ್ರದರ್ಶಿಸಿದ್ದರು. ಭಾನುವಾರ ನಡೆದ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ದಿನೇಶ್ ಕಾರ್ತಿಕ್ ಕೊನೆಯ ಓವರ್‌ನಲ್ಲಿ 22 ರನ್ ಬಾರಿಸುವ ಮೂಲಕ ತಂಡದ ಮೊತ್ತವನ್ನು 192 ರನ್​ಗೆ ತಂದು ನಿಲ್ಲಿಸಿದರು. ವಿಶೇಷ ಎಂದರೆ ಡಿಕೆ ಕೊನೆಯ ಓವರ್​ನಲ್ಲಿ ಆರ್ಭಟಿಸುವ ಮೂಲಕ ಇದೀಗ ಐಪಿಎಲ್​ನ ಹೊಸ ಫಿನಿಶರ್​ ಆಗಿ ಗುರುತಿಸಿಕೊಂಡಿದ್ದಾರೆ.

ಐಪಿಎಲ್ 2022 ರ ಹರಾಜಿನಲ್ಲಿ ದಿನೇಶ್ ಕಾರ್ತಿಕ್ ಅವರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಐದೂವರೆ ಕೋಟಿಗೆ ಖರೀದಿಸಿತು. 15ನೇ ಸೀಸನ್‌ನಲ್ಲಿ ತಂಡ ಅವರಿಂದ ಏನು ನಿರೀಕ್ಷಿಸಿತ್ತೊ ಇದೀಗ ಅದು ಲಭ್ಯವಾಗುತ್ತಿದೆ. ಏಕೆಂದರೆ ಕಾರ್ತಿಕ್ RCB ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದಾರೆ. ಇದುವರೆಗೆ ಆಡಿದ 12 ಪಂದ್ಯಗಳಲ್ಲಿ ಕಾರ್ತಿಕ್ 8 ಬಾರಿ ಅಜೇಯರಾಗಿ ಉಳಿದಿದ್ದಾರೆ. ಅವರು ಔಟಾಗದೆ ಉಳಿದ ಪಂದ್ಯಗಳಲ್ಲಿ ಆರ್‌ಸಿಬಿ ಸೋತಿದ್ದು ಬಹಳ ಅಪರೂಪ. ಹೀಗಾಗಿ ಆರ್​ಸಿಬಿ ತಂಡದ ಮ್ಯಾಚ್ ಫಿನಿಶರ್ ಆಗಿ ಡಿಕೆ ಹೊಸ ಹವಾ ಸೃಷ್ಟಿಸಿದ್ದಾರೆ.

20ನೇ ಓವರ್​ನಲ್ಲಿ ಸಿಡಿಲಬ್ಬರ: ಐಪಿಎಲ್ 2022 ರಲ್ಲಿ ದಿನೇಶ್ ಕಾರ್ತಿಕ್ 20ನೇ ಓವರ್​ನಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಕೊನೆಯ ಓವರ್‌ನಲ್ಲಿ ಅವರು ಇಲ್ಲಿಯವರೆಗೆ 23 ಎಸೆತಗಳನ್ನು ಎದುರಿಸಿದ್ದಾರೆ. ಈ 23 ಎಸೆತಗಳಲ್ಲಿ ಬರೋಬ್ಬರಿ 71 ರನ್ ಬಾರಿಸಿ ಅಬ್ಬರಿಸಿದ್ದಾರೆ. ವಿಶೇಷವೆಂದರೆ ಈ ಸೀಸನ್​ನಲ್ಲಿ ಡಿಕೆ 20ನೇ ಓವರ್‌ನಲ್ಲಿ ಔಟಾಗಿಲ್ಲ. ಹಾಗೆಯೇ ಕೊನೆಯ ಓವರ್‌ನಲ್ಲಿ 5 ಬೌಂಡರಿ ಮತ್ತು 7 ಸಿಕ್ಸರ್‌ಗಳನ್ನು ಬಾರಿಸಿ ಪರಾಕ್ರಮ ಮರೆದಿದ್ದಾರೆ. ಹೀಗಾಗಿಯೇ ಎದುರಾಳಿ ತಂಡದ ಬೌಲರ್​ಗಳಿಗೆ ಡಿಕೆಗೆ 20ನೇ ಓವರ್​ ಎಸೆಯುವುದು ಇದೀಗ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಇಂಡಿಯನ್ ಪ್ರೀಮಿಯರ್ ಲೀಗ್‌ನ 15 ನೇ ಸೀಸನ್‌ನಲ್ಲಿ ದಿನೇಶ್ ಕಾರ್ತಿಕ್ ಅವರ ಪ್ರದರ್ಶನವು ಇಲ್ಲಿಯವರೆಗೆ ಅತ್ಯುತ್ತಮವಾಗಿದೆ. ಪ್ರಸಕ್ತ ಸೀಸನ್​ನಲ್ಲಿ 12 ಪಂದ್ಯಗಳಲ್ಲಿ 274 ರನ್ ಗಳಿಸಿದ್ದಾರೆ. ಕೆಳ ಕ್ರಮಾಂಕದಲ್ಲಿ ಕಣಕ್ಕಿಳಿದು ಅರ್ಧ ಶತಕವನ್ನೂ ಗಳಿಸಿದ್ದಾರೆ. ಹಾಗೆಯೇ 12 ಪಂದ್ಯಗಳಲ್ಲಿ 21 ಬೌಂಡರಿ ಮತ್ತು 21 ಸಿಕ್ಸರ್‌ಗಳನ್ನು ಬಾರಿಸಿದ್ದಾರೆ. ಡಿಕೆಯ ಅದ್ಭುತ ಬ್ಯಾಟಿಂಗ್ ಫಲವಾಗಿ ಇದೀಗ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಅಗ್ರ-4ರಲ್ಲಿ ಸ್ಥಾನ ಪಡೆದುಕೊಂಡಿದೆ. ಇನ್ನು ಲೀಗ್​ ಹಂತದಲ್ಲಿ ಆರ್​ಸಿಬಿಗೆ 2 ಪಂದ್ಯಗಳು ಉಳಿದಿದ್ದು, ಈ ಪಂದ್ಯಗಳಲ್ಲಿ ಗೆಲ್ಲುವ ಮೂಲಕ ಪ್ಲೇಆಫ್​ಗೇರುವ ಇರಾದೆಯಲ್ಲಿದೆ.

ಹೆಚ್ಚಿನ IPL 2022 ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಮ್ಯಾಕ್ಸ್ 25 ದಿನ ಪೂರೈಸಿದ್ದಕ್ಕೆ ಅಭಿಮಾನಿಗಳಿಗೆ ಸುದೀಪ್ ಸ್ಪೆಷಲ್ ವಿಡಿಯೋ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ಪ್ರಯಾಗ್​ರಾಜ್ ಕುಂಭಮೇಳದ ಹಲವು ಟೆಂಟ್​ಗಳಲ್ಲಿ ಅಗ್ನಿ ಜ್ವಾಲೆ ನರ್ತನ
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ನಂಜನಗೂಡು ನಂಜುಂಡೇಶ್ವರನ ಆಶೀರ್ವಾದ ಪಡೆದ ಡಾಲಿ ಧನಂಜಯ್
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಹನುಮಂತ ಕೊಟ್ಟ ತಿರುಗೇಟಿಗೆ ರಜತ್ ಕಂಗಾಲು; ಸುದೀಪ್ ಪ್ರತಿಕ್ರಿಯೆ ನೋಡಿ..
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಮಹಾಕುಂಭದಲ್ಲಿ ಸ್ನೇಹಿತರೊಂದಿಗೆ ಭಜನೆ ಹಾಡಿದ ಪ್ರಧಾನಿ ಸಹೋದರನ ಮಗ ಸಚಿನ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಭವ್ಯಾ-ತ್ರಿವಿಕ್ರಮ್ ಪ್ರೇಮಕತೆ, ಬಹಿರಂಗ ಮಾಡಿದ ಸುದೀಪ್
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಡಿಕೆಶಿ, ರುದ್ರಾಕ್ಷಿಮಾಲೆ ಹಿಡ್ದು ಜಪ
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ