DC vs RCB: ಪಂದ್ಯದ ಚಿತ್ರಣವನ್ನೇ ಬದಲಾಯಿಸಿತು ಆರ್​ಸಿಬಿ ಬೌಲರ್ ಮಾಡಿದ ಆ ಒಂದು ಓವರ್

Josh Hazlewood, IPL 2022: ಆರ್​ಸಿಬಿ ನೀಡಿದ 190 ರನ್​ಗಳ ಟಾರ್ಗೆಟ್ ಬೆನ್ನಟ್ಟುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸುಲಭ ಗೆಲುವು ಸಾಧಿಸುವುದರಲ್ಲಿತ್ತು. ಆದರೆ, ಜೋಷ್ ಹ್ಯಾಜ್ಲೆವುಡ್ ಮಾಡಿದ 15ನೇ ಓವರ್ ಪಂದ್ಯದ ಚಿತ್ರಣವನ್ನೇ ಬದಲಾಯಿಸಿತು.

DC vs RCB: ಪಂದ್ಯದ ಚಿತ್ರಣವನ್ನೇ ಬದಲಾಯಿಸಿತು ಆರ್​ಸಿಬಿ ಬೌಲರ್ ಮಾಡಿದ ಆ ಒಂದು ಓವರ್
DC vs RCB IPL 2022
Follow us
TV9 Web
| Updated By: Vinay Bhat

Updated on: Apr 17, 2022 | 7:45 AM

ಇಂಡಿಯನ್ ಪ್ರೀಮಿಯರ್ ಲೀಗ್ 2022 ರಲ್ಲಿ ಶನಿವಾರ ನಡೆದ 27ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಭರ್ಜರಿ ಗೆಲುವು ಸಾಧಿಸಿದೆ. ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಡೆದ ಕದನದಲ್ಲಿ ಆರ್​ಸಿಬಿ (DC vs RCB) ಬ್ಯಾಟಿಂಗ್-ಬೌಲಿಂಗ್​ನಲ್ಲಿ ಮಿಂಚಿನ ಪ್ರದರ್ಶನ ನೀಡಿ 16 ರನ್​​ಗಳ ಜಯ ಕಂಡಿದೆ. ಟಾಸ್ ಸೋತರೂ ಎದುರಾಳಿಗರನ್ನು ಟಾರ್ಗೆಟ್ ಮೀರದಂತೆ ಕಟ್ಟಿಹಾಕುವಲ್ಲಿ ಫಾಫ್ ಪಡೆ ಯಶಸ್ವಿಯಾಯಿತು. ದಿನೇಶ್ ಕಾರ್ತಿಕ್ (Dinesh Kartik) ಹಾಗೂ ಗ್ಲೆನ್ ಮ್ಯಾಕ್ಸ್​ವೆಲ್ (Glenn Maxwell) ಅರ್ಧಶತಕ ತಂಡದ ಗೆಲುವಿನಲ್ಲಿ ಮುಖ್ಯ ಪಾತ್ರವಹಿಸಿತು. ಈ ಜಯದ ಮೂಲಕ ಬೆಂಗಳೂರು ತಂಡ ಆಡಿದ ಆರು ಪಂದ್ಯಗಳಲ್ಲಿ ನಾಲ್ಕು ಗೆಲುವು ಎರಡು ಸೋಲಿನ ಮೂಲಕ ಒಟ್ಟು 8 ಅಂಕ ಸಂಪಾದಿಸಿದ್ದು ಪಾಯಿಂಟ್ ಟೇಬಲ್​ನಲ್ಲಿ ಮೂರನೇ ಸ್ಥಾನಕ್ಕೆ ಜಿಗಿದಿದೆ. ಈ ಪಂದ್ಯದ ಆರಂಭದಲ್ಲಿ ಓವರ್​ಗೆ 10 ರನ್​ಗಳಂತೆ ಸಿಡಿಲಬ್ಬರದ ಬ್ಯಾಟಿಂಗ್ ನಡೆಸಿದ ಡೆಲ್ಲಿಯ ಗೆಲುವಿನ ಓಟಕ್ಕೆ ಬ್ರೇಕ್ ಹಾಕಿದ್ದು ಆರ್​ಸಿಬಿಯ ಆ ಒಂದು ಓವರ್.

ಹೌದು, ಟಾರ್ಗೆಟ್ ಬೆನ್ನಟ್ಟುತ್ತಿದ್ದ ಡೆಲ್ಲಿ ಸುಲಭ ಗೆಲುವು ಸಾಧಿಸುವುದರಲ್ಲಿತ್ತು. ಆದರೆ, ಜೋಷ್ ಹ್ಯಾಜ್ಲೆವುಡ್ ಮಾಡಿದ 15ನೇ ಓವರ್ ಪಂದ್ಯದ ಚಿತ್ರಣವನ್ನೇ ಬದಲಾಯಿಸಿತು. ತಮ್ಮ ಒಂದೇ ಓವರ್​ನಲ್ಲಿ ಎರಡು ವಿಕೆಟ್​ಗಳನ್ನ ಕಿತ್ತು ಜೋಷ್ ಎದುರಾಳಿಗೆ ನೇರವಾಗಿ ಒತ್ತಡವನ್ನು ಹಾಕಿದರು. ಇದರಿಂದ ಹೊರಬರಲು ಕಠಿಣ ಪರಿಶ್ರಮ ಪಟ್ಟರೂ ಅದು ಸಾಧ್ಯವಾಗಲಿಲ್ಲ. ರೋವಮ್ ಪಾವೆಲ್ ಅವರನ್ನು ಮೊದಲ ಎಸೆತದಲ್ಲೇ ಔಟ್ ಮಾಡಿದರೆ ಕೊನೆಯ ಎಸೆತದಲ್ಲಿ ಅಪಾಯಕಾರಿ ಬ್ಯಾಟರ್ ಲಲಿತ್ ಯಾದವ್ (1) ಅವರಿಗೆ ಪೆವಿಲಿಯನ್ ಹಾದಿ ತೋರಿದರು. ಶಿಸ್ತಿನ ಬೌಲಿಂಗ್ ಮಾಡಿದ ಹ್ಯಾಜ್ಲೆವುಡ್ 4 ಓವರ್​​ಗೆ ಕೇವಲ 28 ರನ್ ನೀಡಿ ಪ್ರಮುಖ 3 ವಿಕೆಟ್ ಕಿತ್ತರು.

ಆರ್​ಸಿಬಿ ತಂಡದ ಪರ ಆರಂಭಿಕ ಆಟಗಾರರಾಗಿ ಕಣಕ್ಕಿಳಿದ ನಾಯಕ ಫಾಫ್ ಡುಪ್ಲೆಸಿಸ್ ಮತ್ತು ಅನುಜ್ ರಾವತ್ ತಂಡಕ್ಕೆ ಭದ್ರ ಬುನಾದಿ ಹಾಕಿಕೊಡುವಲ್ಲಿ ಮತ್ತೊಮ್ಮೆ ವಿಫಲರಾದರು. ರಾವತ್ ಮೊದಲನೇ ಎಸೆತದಲ್ಲಿಯೇ ವಿಕೆಟ್ ಒಪ್ಪಿಸಿ ಗೋಲ್ಡನ್ ಡಕೌಟ್ ಆದರೆ, ಫಾಫ್ 8 ರನ್ ಕಲೆಹಾಕಿ ಪೆವಿಲಿಯನ್ ಸೇರಿಕೊಂಡರು ಹಾಗೂ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ವಿರಾಟ್ ಕೊಹ್ಲಿ 12 ರನ್ ಗಳಿಸಿ ಔಟ್ ಆದರು. ಹೀಗೆ ಆರಂಭಿಕ ಆಘಾತಕ್ಕೆ ಒಳಗಾದ ತಂಡಕ್ಕೆ ಆಸರೆಯಾದ ಗ್ಲೆನ್ ಮ್ಯಾಕ್ಸ್‌ವೆಲ್ 34 ಎಸೆತಗಳನ್ನು ಎದುರಿಸಿ 55 ರನ್ ಚಚ್ಚಿದರು.

ಮ್ಯಾಕ್ಸ್‌ವೆಲ್ ಔಟ್ ಆದ ಬಳಿಕ ಮತ್ತೆ ಸಂಕಷ್ಟಕ್ಕೆ ಸಿಲುಕಿದ ಆರ್​ಸಿಬಿಗೆ ದಿನೇಶ್ ಕಾರ್ತಿಕ್ ಮತ್ತು ಶಹಬಾಜ್ ಅಹ್ಮದ್ ಆಸರೆಯಾದರು. ಅಲ್ಪ ಮೊತ್ತಕ್ಕೆ ಕುಸಿಯುವ ಭೀತಿಯಲ್ಲಿದ್ದ ಆರ್​ಸಿಬಿ 190ರ ಅಂಚಿಗೆ ರನ್ ಕಲೆಹಾಕುತ್ತೆಂದು ಯಾರೂ ಊಹಿಸಿರಲಿಲ್ಲ. ಕಾರ್ತಿಕ್‌ ಸ್ಪೋಟಕ ಬ್ಯಾಟಿಂಗ್‌ನಿಂದ, ಬೌಂಡರಿ, ಸಿಕ್ಸರ್‌ಗಳ ಮೂಲಕ ಘರ್ಜಿಸಿದರು. ಕೇವಲ 34 ಬಾಲ್‌ಗಳಲ್ಲಿ 5 ಬೌಂಡರಿ ಹಾಗೂ 6 ಸಿಕ್ಸರ್‌ಗಳನ್ನ ಸಿಡಿಸಿದ ದಿನೇಶ್‌ ಕಾರ್ತಿಕ್‌, ತಂಡದ ರನ್‌ಗಳಿಕೆ ವೇಗ ಹೆಚ್ಚಿಸಿದರು. ಇವರಿಗೆ ಸಾಥ್‌ ನೀಡಿದ ಶಹಬಾಜ್‌ ಅಹ್ಮದ್‌ 32* ರನ್‌ಗಳ ಉಪಯುಕ್ತ ಕಾಣಿಕೆ ನೀಡಿದರು. ಡೆಲ್ಲಿ ಬೌಲರ್‌ಗಳ ಮೇಲೆ ಹಿಡಿತ ಸಾಧಿಸಿದ ಈ ಜೋಡಿ 6ನೇ ವಿಕೆಟ್‌ಗೆ 97* ರನ್‌ ಅದ್ಭುತ ಜೊತೆಯಾಟವಾಡಿದರು. ಪರಿಣಾಮ ಆರ್​​ಸಿಬಿ 20 ಓವರ್​ಗೆ 5 ವಿಕೆಟ್ ನಷ್ಟಕ್ಕೆ 189 ರನ್ ಬಾರಿಸಿತು.

ಗುರಿಯನ್ನು ಬೆನ್ನತ್ತಿದ ಡೆಲ್ಲಿ ಕ್ಯಾಪಿಟಲ್ಸ್ ಪರ ಡೇವಿಡ್ ವಾರ್ನರ್ 38 ಎಸೆತಗಳಲ್ಲಿ 66 ರನ್ ಬಾರಿಸಿ ಅಬ್ಬರಿಸಿದರೆ, ಮಧ್ಯಮ ಕ್ರಮಾಂಕದಲ್ಲಿ 17 ಎಸೆತಗಳಿಗೆ 34 ರನ್ ಬಾರಿಸಿದ ರಿಷಭ್ ಪಂತ್ ಪಂದ್ಯ ಗೆಲ್ಲಿಸುವ ಭರವಸೆಯನ್ನು ಆ ಕ್ಷಣಕ್ಕೆ ಹುಟ್ಟುಹಾಕಿದ್ದರು. ಆದರೆ, ಇವರಿಬ್ಬರ ಸ್ಫೋಟಕ ಆಟ ವ್ಯರ್ಥವಾಯಿತು. ಇನ್ನುಳಿದಂತೆ ತಂಡದ ಪರ ಪೃಥ್ವಿ ಶಾ 16, ಮಿಚೆಲ್ ಮಾರ್ಷ್ 14, ರೋವ್ಮನ್ ಪೊವೆಲ್ 0, ಲಲಿತ್ ಯಾದವ್ 1, ಶಾರ್ದೂಲ್ ಠಾಕೂರ್ 17, ಅಕ್ಷರ್ ಪಟೇಲ್ ಮತ್ತು ಕುಲ್ ದೀಪ್ ಯಾದವ್ ಅಜೇಯ 10 ರನ್ ಗಳಿಸಿದರು.

IPL 2022: ತೂಫಾನ್ ಜೋಡಿ: ಹೊಸ ದಾಖಲೆ ಬರೆದ ಶಹಬಾಜ್-ಡಿಕೆ

ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಹಾರ್ದಿಕ್ ಪಾಂಡ್ಯ ತೂಫಾನ್​ಗೆ ಎದುರಾಳಿ ತಂಡ ತತ್ತರ
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಇನ್ನು ಮುಂದೆ ಸುಮ್ಮನಿರಲ್ಲ: ಚೈತ್ರಾ-ಮೋಕ್ಷಿತಾಗೆ ತ್ರಿವಿಕ್ರಮ್ ಸವಾಲು
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ