AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SA20: ಡೊನೊವನ್ ಸ್ಪೋಟಕ ಅರ್ಧಶತಕ: ಸೂಪರ್ ಕಿಂಗ್ಸ್​ಗೆ ಮೊದಲ ಜಯ

Joburg Super Kings vs Pretoria Capitals: ವಿಶೇಷ ಎಂದರೆ ಇದು ಜೋಬರ್ಗ್ ಸೂಪರ್ ಕಿಂಗ್ಸ್ ತಂಡದ ಮೊದಲ ಜಯ. ಅಂದರೆ ಈ ಬಾರಿಯ ಟೂರ್ನಿಯಲ್ಲಿ ಆಡಿದ 5 ಪಂದ್ಯಗಳಲ್ಲಿ ಜೆಎಸ್​ಕೆ 4 ರಲ್ಲಿ ಸೋಲನುಭವಿಸಿತ್ತು.

SA20: ಡೊನೊವನ್ ಸ್ಪೋಟಕ ಅರ್ಧಶತಕ: ಸೂಪರ್ ಕಿಂಗ್ಸ್​ಗೆ ಮೊದಲ ಜಯ
Donovan Ferreira-JSK
TV9 Web
| Edited By: |

Updated on: Jan 21, 2024 | 11:43 AM

Share

ಸೌತ್ ಆಫ್ರಿಕಾದಲ್ಲಿ ನಡೆಯುತ್ತಿರುವ SA20 ಲೀಗ್​ನ 13ನೇ ಪಂದ್ಯದಲ್ಲಿ ಜೋಬರ್ಗ್​ ಸೂಪರ್ ಕಿಂಗ್ಸ್ ತಂಡ ಜಯ ಸಾಧಿಸಿದೆ. ಜೋಹಾನ್ಸ್​ಬರ್ಗ್​ನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡವು ಮೊದಲು ಬ್ಯಾಟಿಂಗ್ ಮಾಡಿತು. ಆದರೆ ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಕೇವಲ 33 ರನ್​ಗಳಿಸುವಷ್ಟರಲ್ಲಿ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡದ ಅಗ್ರ ಕ್ರಮಾಂಕದ ಮೂವರು ಪೆವಿಲಿಯನ್​ಗೆ ಮರಳಿದ್ದರು. ಈ ಹಂತದಲ್ಲಿ ಕಣಕ್ಕಿಳಿದ ಕೈಲ್ ವೆರ್ರೆನ್ನೆ ಸ್ಪೋಟಕ ಇನಿಂಗ್ಸ್ ಆಡಿದರು.

ಆಕರ್ಷಕ ಹೊಡೆತಗಳ ಮೂಲಕ ಗಮನ ಸೆಳೆದ ಕೈಲ್ 52 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 72 ರನ್ ಬಾರಿಸಿದರು. ಈ ಮೂಲಕ ಪ್ರಿಟೋರಿಯಾ ಕ್ಯಾಪಿಟಲ್ಸ್ ತಂಡ 20 ಓವರ್​ಗಳಲ್ಲಿ 9 ವಿಕೆಟ್ ಕಳೆದುಕೊಂಡು 167 ರನ್ ಕಲೆಹಾಕಿತು.

168 ರನ್​ಗಳ ಗುರಿ ಪಡೆದ ಜೋಬರ್ಗ್ ಸೂಪರ್ ಕಿಂಗ್ಸ್​ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಕ್ಯಾಪಿಟಲ್ಸ್ ಬೌಲರ್​ಗಳು ಯಶಸ್ವಿಯಾದರು. ಆದರೆ 5ನೇ ವಿಕೆಟ್​ಗೆ ಜೊತೆಯಾದ ಮೊಯೀನ್ ಅಲಿ (25) ಹಾಗೂ ಡೊನೊವನ್ ಫೆರೆರಾ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು.

ಅದರಲ್ಲೂ ಬಿರುಸಿನ ಬ್ಯಾಟಿಂಗ್ ಮೂಲಕ ಕ್ಯಾಪಿಟಲ್ಸ್​ ಬೌಲರ್​ಗಳ ಬೆಂಡೆತ್ತಿದ ಡೊನೊವನ್ ಫೆರೆರಾ ಕೇವಲ 18 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಅಲ್ಲದೆ 20 ಎಸೆತಗಳಲ್ಲಿ 3 ಸಿಕ್ಸ್ ಹಾಗೂ 7 ಫೋರ್​ಗಳೊಂದಿಗೆ ಅಜೇಯ 56 ರನ್​ ಬಾರಿಸಿ 18 ಓವರ್​ಗಳಲ್ಲಿ ತಂಡವನ್ನು ಗುರಿ ಮುಟ್ಟಿಸಿದರು. ಈ ಮೂಲಕ ಜೋಬರ್ಗ್ ಸೂಪರ್ ಕಿಂಗ್ಸ್ ತಂಡವು 6 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿದೆ.

ವಿಶೇಷ ಎಂದರೆ ಇದು ಜೋಬರ್ಗ್ ಸೂಪರ್ ಕಿಂಗ್ಸ್ ತಂಡದ ಮೊದಲ ಜಯ. ಅಂದರೆ ಈ ಬಾರಿಯ ಟೂರ್ನಿಯಲ್ಲಿ ಆಡಿದ 5 ಪಂದ್ಯಗಳಲ್ಲಿ ಜೆಎಸ್​ಕೆ 4 ರಲ್ಲಿ ಸೋಲನುಭವಿಸಿತ್ತು. ಇದೀಗ ಡೊನೊವನ್ ಫೆರೆರಾ ಅವರ ಅಬ್ಬರದೊಂದಿಗೆ ಜೋಬರ್ಗ್ ಸೂಪರ್ ಕಿಂಗ್ಸ್ ತಂಡವು ಮೊದಲ ಜಯ ಸಾಧಿಸುವಲ್ಲಿ ಯಶಸ್ವಿಯಾಗಿದೆ.

ಜೋಬರ್ಗ್ ಸೂಪರ್ ಕಿಂಗ್ಸ್​ ಪ್ಲೇಯಿಂಗ್ 11: ರೀಝ ಹೆಂಡ್ರಿಕ್ಸ್ , ಫಾಫ್ ಡು ಪ್ಲೆಸಿಸ್ (ನಾಯಕ) , ಲೆಯುಸ್ ಡು ಪ್ಲೂಯ್ , ಮೊಯಿನ್ ಅಲಿ , ಸಿಬೊನೆಲೊ ಮಖನ್ಯಾ , ಡೊನೊವನ್ ಫೆರೆರಾ (ವಿಕೆಟ್ ಕೀಪರ್) , ಡೇವಿಡ್ ವೈಸ್ , ರೊಮಾರಿಯೊ ಶೆಫರ್ಡ್ , ಲಿಜಾದ್ ವಿಲಿಯಮ್ಸ್ , ನಾಂಡ್ರೆ ಬರ್ಗರ್ , ಇಮ್ರಾನ್ ತಾಹಿರ್.

ಇದನ್ನೂ ಓದಿ: Rohit Sharma: 5 ಮ್ಯಾಚ್ 15 ಸಿಕ್ಸ್​: ಸೆಹ್ವಾಗ್ ದಾಖಲೆ ಮೇಲೆ ಕಣ್ಣಿಟ್ಟಿ ರೋಹಿತ್ ಶರ್ಮಾ

ಪ್ರಿಟೋರಿಯಾ ಕ್ಯಾಪಿಟಲ್ಸ್ ಪ್ಲೇಯಿಂಗ್ 11: ಫಿಲಿಪ್ ಸಾಲ್ಟ್ (ವಿಕೆಟ್ ಕೀಪರ್) , ವಿಲ್ ಜ್ಯಾಕ್ಸ್ , ಕೈಲ್ ವೆರ್ರೆನ್ನೆ , ರಿಲೀ ರೊಸೊವ್ , ಕಾಲಿನ್ ಇಂಗ್ರಾಮ್ , ಜೇಮ್ಸ್ ನೀಶಮ್ , ಕಾರ್ಬಿನ್ ಬಾಷ್ , ವೇಯ್ನ್ ಪಾರ್ನೆಲ್ (ನಾಯಕ) , ಈಥನ್ ಬಾಷ್ , ಹಾರ್ಡಸ್ ವಿಲ್ಜೋನ್ , ಆದಿಲ್ ರಶೀದ್.

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ಬಿಗ್ ಬಾಸ್ ಮನೆಯಲ್ಲಿ ಕೈಕೈ ಮಿಲಾಯಿಸುವ ಹಂತಕ್ಕೆ ಹೋದ ರಘು, ಧ್ರುವಂತ್
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ