AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Priyansh Arya: 6,6,6,6,6,6.. ಒಂದೇ ಓವರ್‌ನಲ್ಲಿ 6 ಸಿಕ್ಸರ್ ಬಾರಿಸಿದ ಪ್ರಿಯಾಂಶ್ ಆರ್ಯ! ವಿಡಿಯೋ ನೋಡಿ

DPL 2024: ಪ್ರಿಯಾಂಶ್, 12ನೇ ಓವರ್‌ನ ಮೊದಲ ಎಸೆತವನ್ನು ಲಾಂಗ್ ಆಫ್​ ದಿಕ್ಕಿನಲ್ಲಿ ಸಿಕ್ಸರ್​ಗಟ್ಟಿದರೆ, ಎರಡನೇ ಎಸೆತವನ್ನು ಡೀಪ್ ಮಿಡ್ ವಿಕೆಟ್ ಮೇಲೆ ಸಿಕ್ಸರ್ ಬಾರಿಸಿದರು. ಇದರ ನಂತರ, ಮೂರನೇ ಎಸೆತವನ್ನು ಲಾಂಗ್ ಆನ್ ಕಡೆಗೆ ಸಿಕ್ಸರ್​ ಬಾರಿಸಿದ ಅವರು ನಂತರದ ಮೂರು ಎಸೆತಗಳಲ್ಲಿ ಸಿಕ್ಸರ್‌ಗಳನ್ನು ಬಾರಿಸಿದರು.

Priyansh Arya: 6,6,6,6,6,6.. ಒಂದೇ ಓವರ್‌ನಲ್ಲಿ 6 ಸಿಕ್ಸರ್ ಬಾರಿಸಿದ ಪ್ರಿಯಾಂಶ್ ಆರ್ಯ! ವಿಡಿಯೋ ನೋಡಿ
ಪ್ರಿಯಾಂಶ್ ಆರ್ಯ
ಪೃಥ್ವಿಶಂಕರ
|

Updated on:Aug 31, 2024 | 4:39 PM

Share

ಪ್ರಸ್ತುತ ದೆಹಲಿಯಲ್ಲಿ ಚೊಚ್ಚಲ ಆವೃತ್ತಿಯ ದೆಹಲಿ ಪ್ರೀಮಿಯರ್ ಲೀಗ್ ನಡೆಯುತ್ತಿದೆ. ಇಂದು ನಡೆಯುತ್ತಿರುವ ಈ ಲೀಗ್​ನ 23 ನೇ ಪಂದ್ಯದಲ್ಲಿ ದಕ್ಷಿಣ ದೆಹಲಿ ಸೂಪರ್‌ಸ್ಟಾರ್ಸ್ ಮತ್ತು ಉತ್ತರ ದೆಹಲಿ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದಕ್ಷಿಣ ದೆಹಲಿ ಸೂಪರ್‌ಸ್ಟಾರ್‌ ತಂಡದ ಇಬ್ಬರು ಬ್ಯಾಟರ್​ಗಳು ಸಿಡಿಲಬ್ಬರದ ಶತಕ ಸಿಡಿಸಿ ಮಿಂಚಿದ್ದಾರೆ. ಈ ಇಬ್ಬರ ಅಬ್ಬರದಿಂದಾಗಿ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ದೆಹಲಿ ಸೂಪರ್‌ಸ್ಟಾರ್ಸ್ ತಂಡ ನಿಗದಿತ 20 ಓವರ್​ಗಳಲ್ಲಿ ಬರೋಬ್ಬರಿ 308 ರನ್ ಕಲೆಹಾಕಿದೆ. ಈ ವೇಳೆ ತಂಡದ 23 ವರ್ಷದ ಓಪನರ್ ಪ್ರಿಯಾಂಶ್ ಆರ್ಯ, ಒಂದೇ ಓವರ್​ನಲ್ಲಿ 6 ಸಿಕ್ಸರ್ ಬಾರಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

ಯುವರಾಜ್ ದಾಖಲೆ ಸರಿಗಟ್ಟಿದ ಪ್ರಿಯಾಂಶ್

ಈ ಲೀಗ್‌ನ ಆರಂಭದಿಂದಲೂ ಅತ್ಯುತ್ತಮ ಬ್ಯಾಟಿಂಗ್ ಮಾಡುತ್ತಿರುವ ಪ್ರಿಯಾಂಶ್ ಆರ್ಯ, ಈ ಲೀಗ್​ನಲ್ಲಿ ಇದುವರೆಗೆ 2 ಶತಕ ಬಾರಿಸಿದ್ದಾರೆ. ಇನ್ನು ಈಗ ನಡೆಯುತ್ತಿರುವ ಉತ್ತರ ದೆಹಲಿ ವಿರುದ್ಧದ ಪಂದ್ಯದಲ್ಲಿ ಮನನ್ ಭಾರದ್ವಾಜ್ ಬೌಲ್ ಮಾಡಿದ ಒಂದೇ ಓವರ್‌ನಲ್ಲಿ ಆರು ಸಿಕ್ಸರ್ ಬಾರಿಸಿ ಪ್ರಿಯಾಂಶ್ ದಾಖಲೆ ನಿರ್ಮಿಸಿದ್ದಾರೆ. ಪಂದ್ಯದ 12ನೇ ಓವರ್‌ನಲ್ಲಿ ಪ್ರಿಯಾಂಶ್ ಪ್ರತಿ ಎಸೆತವನ್ನು ಸಿಕ್ಸರ್​ಗಟ್ಟಿದರು. ಇದರೊಂದಿಗೆ ಡೆಲ್ಲಿ ಪ್ರೀಮಿಯರ್ ಲೀಗ್‌ನಲ್ಲಿ ಒಂದೇ ಓವರ್‌ನಲ್ಲಿ 6 ಸಿಕ್ಸರ್‌ ಬಾರಿಸಿದ ಮೊದಲ ಬ್ಯಾಟರ್ ಎನಿಸಿಕೊಂಡರು. ಇದಕ್ಕೂ ಮೊದಲು ಪ್ರಿಯಾಂಶ್, ಡೆಲ್ಲಿ ಪ್ರೀಮಿಯರ್ ಲೀಗ್‌ನಲ್ಲಿ ಶತಕ ಬಾರಿಸಿದ ಮೊದಲ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದರು.

ಪ್ರಿಯಾಂಶ್, 12ನೇ ಓವರ್‌ನ ಮೊದಲ ಎಸೆತವನ್ನು ಲಾಂಗ್ ಆಫ್​ ದಿಕ್ಕಿನಲ್ಲಿ ಸಿಕ್ಸರ್​ಗಟ್ಟಿದರೆ, ಎರಡನೇ ಎಸೆತವನ್ನು ಡೀಪ್ ಮಿಡ್ ವಿಕೆಟ್ ಮೇಲೆ ಸಿಕ್ಸರ್ ಬಾರಿಸಿದರು. ಇದರ ನಂತರ, ಮೂರನೇ ಎಸೆತವನ್ನು ಲಾಂಗ್ ಆನ್ ಕಡೆಗೆ ಸಿಕ್ಸರ್​ ಬಾರಿಸಿದ ಅವರು ನಂತರದ ಮೂರು ಎಸೆತಗಳಲ್ಲಿ ಸಿಕ್ಸರ್‌ಗಳನ್ನು ಬಾರಿಸಿದರು. ಈ ಮೂಲಕ ಪ್ರಿಯಾಂಶ್ ಆರ್ಯ ಡಿಪಿಎಲ್‌ನಲ್ಲಿ ಇತಿಹಾಸ ಸೃಷ್ಟಿಸಿದಲ್ಲದೆ, ರವಿಶಾಸ್ತ್ರಿ ಮತ್ತು ಯುವರಾಜ್ ಸಿಂಗ್ ನಂತರ ಒಂದು ಓವರ್‌ನಲ್ಲಿ ಆರು ಸಿಕ್ಸರ್‌ಗಳನ್ನು ಬಾರಿಸಿದ ಮೂರನೇ ಭಾರತೀಯ ಎನಿಸಿಕೊಂಡಿದ್ದಾರೆ.

ಲೀಗ್​ನಲ್ಲಿ 2ನೇ ಶತಕ

ಈ ಪಂದ್ಯದಲ್ಲಿ ಪ್ರಿಯಾಂಶ್ ಆರ್ಯ 50 ಎಸೆತಗಳನ್ನು ಎದುರಿಸಿ 120 ರನ್‌ಗಳ ಅದ್ಭುತ ಇನ್ನಿಂಗ್ಸ್ ಆಡಿದರು. ಅವರ ಈ ಶತಕದ ಇನ್ನಿಂಗ್ಸ್‌ನಲ್ಲಿ 10 ಬೌಂಡರಿ ಮತ್ತು 10 ಸಿಕ್ಸರ್‌ಗಳು ಸೇರಿದ್ದವು. 240 ಸ್ಟ್ರೈಕ್ ರೇಟ್‌ನಲ್ಲಿ ಬ್ಯಾಟ್ ಬೀಸಿದ ಪ್ರಿಯಾಂಶ್ ಆರ್ಯ, ನಾಯಕ ಆಯುಷ್ ಬಡೋನಿ ಅವರೊಂದಿಗೆ ಎರಡನೇ ವಿಕೆಟ್‌ಗೆ 286 ರನ್‌ಗಳ ದಾಖಲೆಯ ಜೊತೆಯಾಟವನ್ನು ನಡೆಸಿದರು. ಇದು ಈ ಲೀಗ್‌ನಲ್ಲಿ ಇದುವರೆಗಿನ ಅತಿದೊಡ್ಡ ಜೊತೆಯಾಟವಾಗಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:32 pm, Sat, 31 August 24

ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಪಕ್ಷದ ನಿರ್ದೇಶನ ಪಾಲಿಸೋದು ಕಾರ್ಯಕರ್ತರ ಕರ್ತವ್ಯ: ಯತೀಂದ್ರ ಟಾಂಗ್
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಫಾರಂ ಕೋಳಿ, ಮೊಟ್ಟೆ ತಿನ್ನೋ ಮುನ್ನ ಎಚ್ಚರ: ಕೆಲವು ಕಡೆ ಹೀಗೆಲ್ಲ ಮಾಡ್ತಾರೆ!
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಮಕ್ಕಳಿಗೂ ಮಾಳು ಸ್ಟೈಲ್​​ನಲ್ಲೇ ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ಜಾತ್ರೆ, ಪೆಟ್ರೋಲ್ ಬಂಕ್, ಎಲ್ಲೆಲ್ಲೂ ಕೋಟಾ ನೋಟು ಚಲಾಯಿಸ್ತಿದ್ದವರು ಅಂದರ್
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನೈಜೀರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಟ್ರಂಪ್ ಪಡೆಯ ಮಾರಕ ದಾಳಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ನಿದ್ದೆಗಣ್ಣಿನಲ್ಲಿ 10ನೇ ಮಹಡಿಯಿಂದ ಕೆಳಗೆ ಬಿದ್ದ ವ್ಯಕ್ತಿ
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ತೋರು ಬೆರಳಿನ ಆಕಾರದಿಂದ ಮನುಷ್ಯನ ವ್ಯಕ್ತಿತ್ವ ಗೊತ್ತಾಗುತ್ತಾ?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು