AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಬುಮ್ರಾ ಬದಲಿಗೆ ಯಾರು? ಸುಳಿವು ನೀಡಿದ ದ್ರಾವಿಡ್, ರೋಹಿತ್

T20 World Cup 2022: ಈ ವರ್ಷ ಐಪಿಎಲ್‌ನಲ್ಲೂ 20 ವಿಕೆಟ್ ಕಬಳಿಸಿ ಶಮಿ ಅದ್ಭುತ ಪ್ರದರ್ಶನ ನೀಡಿದ್ದರು. ಮತ್ತೊಂದೆಡೆ ದೀಪಕ್ ಚಹರ್ ಸೌತ್ ಆಫ್ರಿಕಾ ವಿರುದ್ಧ ಉತ್ತಮ ಬೌಲಿಂಗ್ ಮಾಡಿದ್ದರು. ಹೀಗಾಗಿ ಚಹರ್ ಹಾಗೂ ಶಮಿಯ ನಡುವೆ ಪೈಪೋಟಿಯಿದೆ.

T20 World Cup 2022: ಬುಮ್ರಾ ಬದಲಿಗೆ ಯಾರು? ಸುಳಿವು ನೀಡಿದ ದ್ರಾವಿಡ್, ರೋಹಿತ್
Team India Pacers
TV9 Web
| Updated By: ಝಾಹಿರ್ ಯೂಸುಫ್|

Updated on: Oct 05, 2022 | 2:54 PM

Share

T20 World Cup 2022: ಟಿ20 ವಿಶ್ವಕಪ್​ಗಾಗಿ ಭಾರತ ತಂಡವು ಗುರುವಾರ ಆಸ್ಟ್ರೇಲಿಯಾಗೆ ತೆರಳಲಿದೆ. 15 ಸದಸ್ಯರ ಈ ಬಳಗದಿಂದ ಈಗಾಗಲೇ ಜಸ್​​ಪ್ರೀತ್ ಬುಮ್ರಾ (Jasprit Bumrah) ಹೊರಬಿದ್ದಿದ್ದಾರೆ. ಬೆನ್ನು ನೋವಿನ ಕಾರಣ ಬುಮ್ರಾ ತಂಡದಿಂದ ಹೊರಗುಳಿದಿದ್ದು, ಹೀಗಾಗಿ ಬದಲಿ ಬೌಲರ್​ನನ್ನು ಆಯ್ಕೆ ಮಾಡಬೇಕಾದ ಅನಿವಾರ್ಯತೆ ಟೀಮ್ ಇಂಡಿಯಾ (Team India) ಮುಂದಿದೆ. ಆದರೆ ಬುಮ್ರಾ ಬದಲಿಗೆ ತಂಡದಲ್ಲಿ ಯಾರಿಗೆ ಅವಕಾಶ ಸಿಗಲಿದೆ ಎಂಬುದೇ ದೊಡ್ಡ ಪ್ರಶ್ನೆ. ಈ ಕುತೂಹಲಕಾರಿ ಪ್ರಶ್ನೆಗೆ ಸಣ್ಣ ಸುಳಿವಿನ ಉತ್ತರ ನೀಡಿದ್ದಾರೆ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಹಾಗೂ ಕೋಚ್ ರಾಹುಲ್ ದ್ರಾವಿಡ್.

ಈ ಬಗ್ಗೆ ಮಾತನಾಡಿರುವ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್, ಬುಮ್ರಾ ಅವರ ಬದಲಿ ಆಟಗಾರನ ಆಯ್ಕೆಗೆ ನಮಗೆ ಅಕ್ಟೋಬರ್ 15 ರವರೆಗೆ ಸಮಯವಕಾಶವಿದೆ. ಸದ್ಯ ಮೀಸಲು ಆಟಗಾರರ ಪಟ್ಟಿಯಲ್ಲಿ ಮೊಹಮ್ಮದ್ ಶಮಿ ಅವರಿದ್ದಾರೆ. ಅವರು ಸೌತ್ ಆಫ್ರಿಕಾ ವಿರುದ್ಧ ಆಡದಿರುವುದು ದುರದೃಷ್ಟಕರ. ಈ ಸರಣಿಯಲ್ಲಿ ಆಡಿದಿದ್ದರೆ ಚೆನ್ನಾಗಿರುತ್ತಿತ್ತು. ಇದಾಗ್ಯೂ ಅವರು ಪ್ರಸ್ತುತ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿದ್ದಾರೆ. ಅವರ ಫಿಟ್​ನೆಸ್ ಕುರಿತಾದ ನಿಖರ​ ವರದಿಗಳನ್ನು ಪಡೆದ ನಂತರ ನಾವು ಮತ್ತು ಆಯ್ಕೆದಾರರು ಮುಂದಿನ ನಿರ್ಧಾರವನ್ನು ತೆಗೆದುಕೊಳ್ಳಬಹುದು ಎಂದು ದ್ರಾವಿಡ್ ತಿಳಿಸಿದ್ದಾರೆ.

ಮತ್ತೊಂದೆಡೆ ಆಸ್ಟ್ರೇಲಿಯಾದಲ್ಲಿ ಅನುಭವಿ ಬೌಲರ್​ಗಳ ಅಗತ್ಯವಿದೆ ಎಂದು ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೂಡ ಹೇಳಿದ್ದಾರೆ. ಬುಮ್ರಾ ಸ್ಥಾನಕ್ಕೆ ಯಾರು ಆಯ್ಕೆಯಾಗಲಿದ್ದಾರೆ ಎಂಬುದು ನನಗೆ ತಿಳಿದಿಲ್ಲ. ಆದರೆ ಅನೇಕ ಸ್ಪರ್ಧಿಗಳು ಇದ್ದಾರೆ. ಹೀಗಾಗಿ ಆಸ್ಟ್ರೇಲಿಯಾ ತಲುಪಿದ ನಂತರ ಈ ಬಗ್ಗೆ ನಿರ್ಧರಿಸುತ್ತೇವೆ ಎಂದು ರೋಹಿತ್ ಶರ್ಮಾ ತಿಳಿಸಿದ್ದಾರೆ.

ಮೊಹಮ್ಮದ್ ಶಮಿ ಆಸ್ಟ್ರೇಲಿಯಾದಲ್ಲಿ ಕೇವಲ ಒಂದು ಟಿ20 ಪಂದ್ಯವನ್ನಾಡಿದ್ದಾರೆ. ಅದಾಗ್ಯೂ ಅವರ ವೇಗ ಹಾಗೂ ಅನುಭವ ದೊಡ್ಡ ಟೂರ್ನಿಯಲ್ಲಿ ಸಹಕಾರಿಯಾಗಲಿದೆ. ಅಲ್ಲದೆ ಈ ವರ್ಷ ಐಪಿಎಲ್‌ನಲ್ಲೂ 20 ವಿಕೆಟ್ ಕಬಳಿಸಿ ಶಮಿ ಅದ್ಭುತ ಪ್ರದರ್ಶನ ನೀಡಿದ್ದರು. ಮತ್ತೊಂದೆಡೆ ದೀಪಕ್ ಚಹರ್ ಸೌತ್ ಆಫ್ರಿಕಾ ವಿರುದ್ಧ ಉತ್ತಮ ಬೌಲಿಂಗ್ ಮಾಡಿದ್ದರು. ಹೀಗಾಗಿ ಚಹರ್ ಹಾಗೂ ಶಮಿಯ ನಡುವೆ ಪೈಪೋಟಿಯಿದೆ.

ಇದಾಗ್ಯೂ ರಾಹುಲ್ ದ್ರಾವಿಡ್ ಹಾಗೂ ರೋಹಿತ್ ಶರ್ಮಾ ಅನುಭವಿ ವೇಗಿ ಮೊಹಮ್ಮದ್ ಶಮಿ ಅವರ ಹೆಸರನ್ನು ಪರೋಕ್ಷವಾಗಿ ಪ್ರಸ್ತಾಪಿಸಿರುವ ಕಾರಣ, ಜಸ್​ಪ್ರೀತ್ ಬುಮ್ರಾ ಸ್ಥಾನದಲ್ಲಿ ಶಮಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

ಟಿ20 ವಿಶ್ವಕಪ್‌ಗೆ ಟೀಮ್ ಇಂಡಿಯಾ ಹೀಗಿದೆ:

 ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಆರ್. ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್,  ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಮೀಸಲು ಆಟಗಾರರು: ಮೊಹಮ್ಮದ್ ಶಮಿ, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯ್, ದೀಪಕ್ ಚಹರ್

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್