AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಡ್ರಗ್ಸ್ ಸೇವನೆ: ಆಸ್ಟ್ರೇಲಿಯಾದ ಸ್ಫೋಟಕ ದಾಂಡಿಗನಿಗೆ ನಿಷೇಧ!

ಮೈದಾನದಲ್ಲಿ ಬೌಲರ್‌ಗಳ ಬೆವರಿಳಿಸುತ್ತಿದ್ದ ಆಸೀಸ್‌ನ ದಿಗ್ಗಜ ಟಿ20 ಸ್ಟಾರ್ ಕ್ರಿಸ್ ಲಿನ್, ಇದೀಗ ಮೈದಾನದ ಹೊರಗೆ ವಿವಾದದ ಸುಳಿಗೆ ಸಿಲುಕಿದ್ದಾರೆ. ಟಿ20 ಬ್ಲಾಸ್ಟ್ ಟೂರ್ನಿಯ ವೇಳೆ ನಡೆದ ಡೋಪಿಂಗ್ ಪರೀಕ್ಷೆಯಲ್ಲಿ ಕೊಕೇನ್ ಪತ್ತೆಯಾದ ಬೆನ್ನಲ್ಲೇ ಅವರ ವಿರುದ್ಧ ಕ್ರಿಕೆಟ್ ಮಂಡಳಿ ಕಠಿಣ ಕ್ರಮ ಕೈಗೊಂಡಿದ್ದು, ಈ ಪ್ರಕರಣ ಇಷ್ಟು ತಡವಾಗಿ ಬೆಳಕಿಗೆ ಬರಲು ಕಾರಣವೇನು ಹಾಗೂ ಲಿನ್ ಅವರ ಮುಂದಿನ ನಡೆ ಏನು ಎಂಬ ಸಂಪೂರ್ಣ ವಿವರ ಇಲ್ಲಿದೆ.

ಡ್ರಗ್ಸ್ ಸೇವನೆ: ಆಸ್ಟ್ರೇಲಿಯಾದ ಸ್ಫೋಟಕ ದಾಂಡಿಗನಿಗೆ ನಿಷೇಧ!
Chris LynnImage Credit source: CA
ಝಾಹಿರ್ ಯೂಸುಫ್
|

Updated on: Nov 09, 2026 | 1:21 PM

Share

ಟಿ20 ಕ್ರಿಕೆಟ್​ನ ಸ್ಪೋಟಕ ಬ್ಯಾಟರ್, ಆಸ್ಟ್ರೇಲಿಯಾದ ಕ್ರಿಸ್ ಲಿನ್ ಕೊಕೇನ್ ಸೇವನೆ ಮಾಡಿರುವುದು ದೃಢಪಟ್ಟಿದ್ದು, ಅವರಿಗೆ ಒಂದು ತಿಂಗಳ ಕಾಲ ಕ್ರಿಕೆಟ್‌ನಿಂದ ನಿಷೇಧ ಹೇರಲಾಗಿದೆ. ಟಿ20 ಬ್ಲಾಸ್ಟ್ ಟೂರ್ನಿಯ ವೇಳೆ ನಡೆದ ಡೋಪಿಂಗ್ ಪರೀಕ್ಷೆಯಲ್ಲಿ ಕೊಕೇನ್ ಪತ್ತೆಯಾದ ಬೆನ್ನಲ್ಲೇ ಅವರ ವಿರುದ್ಧ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಕಠಿಣ ಕ್ರಮ ಕೈಗೊಂಡಿದೆ.

ಪ್ರಕರಣದ ಹಿನ್ನೆಲೆ:

ಕಳೆದ ಜುಲೈ 18, 2026 ರಂದು ಇಂಗ್ಲೆಂಡ್‌ನಲ್ಲಿ ನಡೆದ ಟಿ20 ಬ್ಲಾಸ್ಟ್ ಟೂರ್ನಿಯ ಸಂದರ್ಭದಲ್ಲಿ ಕ್ರಿಸ್ ಲಿನ್ ಅವರಿಗೆ ಡೋಪಿಂಗ್ ಪರೀಕ್ಷೆ ನಡೆಸಲಾಗಿತ್ತು. ಈ ವೇಳೆ ಅವರ ಮಾದರಿಯಲ್ಲಿ ‘ಕೊಕೇನ್’ ಪತ್ತೆಯಾಗಿತ್ತು. ವಿಚಾರಣೆಯ ವೇಳೆ ಲಿನ್, ತಾವು ಪಂದ್ಯಾವಳಿಗಿಂತ ಕೆಲವು ದಿನಗಳ ಮುನ್ನ ವೈಯಕ್ತಿಕ ಕಾರಣಗಳಿಗಾಗಿ ಕೊಕೇನ್ ಸೇವನೆ ಮಾಡಿದ್ದಾಗಿ ತಪ್ಪೊಪ್ಪಿಕೊಂಡಿದ್ದರು.

ಶಿಕ್ಷೆ ಕಡಿಮೆಯಾಗಲು ಕಾರಣವೇನು?

ಕ್ರಿಸ್ ಲಿನ್ ಅವರು ಕ್ರೀಡೆಯಲ್ಲಿ ಕಾರ್ಯಕ್ಷಮತೆ ಹೆಚ್ಚಿಸಿಕೊಳ್ಳಲು ಈ ಡ್ರಗ್ಸ್ ಬಳಸಿಲ್ಲ ಎಂಬುದು ಸಾಬೀತಾಗಿದೆ. ಅಲ್ಲದೆ, ತಪ್ಪು ಒಪ್ಪಿಕೊಂಡ ಬಳಿಕ ಅವರು ತಕ್ಷಣವೇ ಪುನರ್ವಸತಿ ಮತ್ತು ಕೌನ್ಸಿಲಿಂಗ್ ಕಾರ್ಯಕ್ರಮಕ್ಕೆ ಒಳಪಟ್ಟರು. ಈ ಹಿನ್ನೆಲೆಯಲ್ಲಿ ಅವರ ಮೇಲಿನ ಶಿಕ್ಷೆಯ ಅವಧಿಯನ್ನು ಕೇವಲ ಒಂದು ತಿಂಗಳಿಗೆ ಕಡಿತಗೊಳಿಸಲಾಯಿತು.

ಗೌಪ್ಯತೆ ಕಾಪಾಡಿದ ಇಸಿಬಿ:

ಇಂಗ್ಲೆಂಡ್‌ನ ಕ್ರಿಕೆಟ್ ನಿಯಂತ್ರಕ ಮಂಡಳಿ ಮತ್ತು ಆಂಟಿ-ಡೋಪಿಂಗ್ ಸಂಸ್ಥೆಗಳ ನಿಯಮದ ಪ್ರಕಾರ, ಕ್ರೀಡಾಪಟುಗಳು ಸ್ಪರ್ಧೆಯಿಂದ ಹೊರಗಿದ್ದಾಗ ವೈಯಕ್ತಿಕ ಕಾರಣಗಳಿಗಾಗಿ ಇಂತಹ ತಪ್ಪುಗಳನ್ನು ಒಪ್ಪಿಕೊಂಡರೆ, ಅವರ ಖಾಸಗಿತನ ಮತ್ತು ಮಾನಸಿಕ ಆರೋಗ್ಯದ ಹಿತದೃಷ್ಟಿಯಿಂದ ಪ್ರಕರಣವನ್ನು ತಕ್ಷಣವೇ ಸಾರ್ವಜನಿಕಗೊಳಿಸುವುದಿಲ್ಲ.

ಕ್ರಿಸ್ ಲಿನ್ ತಕ್ಷಣವೇ ತಪ್ಪು ಒಪ್ಪಿಕೊಂಡು ಪುನರ್ವಸತಿ ಮತ್ತು ಕೌನ್ಸಿಲಿಂಗ್ ಕಾರ್ಯಕ್ರಮಕ್ಕೆ ಒಳಪಟ್ಟಿದ್ದರು. ಅವರು ಯಶಸ್ವಿಯಾಗಿ ಆ ಕೋರ್ಸ್ ಮುಗಿಸುವವರೆಗೆ ಮತ್ತು ಅವರ ನಿಷೇಧದ ಅವಧಿ (ಜುಲೈ 31 ರಿಂದ ಆಗಸ್ಟ್ 30) ಮುಗಿಯುವವರೆಗೆ ತನಿಖಾ ಪ್ರಕ್ರಿಯೆಗಳು ಅಧಿಕೃತವಾಗಿ ಚಾಲ್ತಿಯಲ್ಲಿದ್ದವು. ತನಿಖೆ, ವೈದ್ಯಕೀಯ ವರದಿಗಳು ಮತ್ತು ಶಿಕ್ಷೆಯ ಅವಧಿ ಎಲ್ಲವೂ ಸಂಪೂರ್ಣವಾಗಿ ಮುಗಿದ ನಂತರವೇ ಕ್ರಿಕೆಟ್ ನಿಯಂತ್ರಕ ಮಂಡಳಿಯು ತನ್ನ ಅಧಿಕೃತ ದಾಖಲೆಗಳನ್ನು ಇದೀಗ ಸಾರ್ವಜನಿಕವಾಗಿ ಬಿಡುಗಡೆ ಮಾಡಿದೆ.

ಇದನ್ನೂ ಓದಿ: ಅದೇ ರಾಗ, ಅದೇ ಹಾಡು… ಪಾಕ್ ತಂಡದ್ದು ಅದೇ ಪಾಡು!

ಒಟ್ಟಾರೆಯಾಗಿ, ಕ್ರೀಡಾಪಟುಗಳು ಮೈದಾನದ ಒಳಗೆ ಮಾತ್ರವಲ್ಲ, ಮೈದಾನದ ಹೊರಗೂ ಯುವ ಪೀಳಿಗೆಗೆ ಮಾದರಿಯಾಗಿರಬೇಕು ಎಂಬುದನ್ನು ಕ್ರಿಸ್ ಲಿನ್ ಪ್ರಕರಣ ಮತ್ತೊಮ್ಮೆ ನೆನಪಿಸಿದೆ. ಸದ್ಯಕ್ಕೆ ಒಂದು ತಿಂಗಳ ನಿಷೇಧದ ಶಿಕ್ಷೆ ಮುಗಿಸಿ ಕಣಕ್ಕಿಳಿಯಲು ಸಜ್ಜಾಗಿರುವ ಲಿನ್, ಮುಂಬರುವ ದಿನಗಳಲ್ಲಿ ತಮ್ಮ ಆಟದ ಮೂಲಕ ವಿವಾದದ ಧೂಳನ್ನು ಮರೆಮಾಚುತ್ತಾರಾ ಅಥವಾ ಈ ಘಟನೆ ಅವರ ವೃತ್ತಿಜೀವನದ ಮೇಲೆ ಪ್ರಭಾವ ಬೀರುತ್ತಾ ಎಂಬುದನ್ನು ಕಾದು ನೋಡಬೇಕಿದೆ.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಚೀಫ್ ಸಬ್ ಎಡಿಟರ್. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಶಾಸಕ ಜನಾರ್ದನ ರೆಡ್ಡಿಗೆ ಶಾಕ್​​ ಕೊಟ್ಟ ಬಳ್ಳಾರಿ ಜಿಲ್ಲಾಡಳಿತ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಹಾಸನಾಂಬೆಯ ದರ್ಶನ ಪಡೆದ ಪ್ರಿಯಾ; ಅತ್ತೆ ಸಂಪ್ರದಾಯ ಮುಂದುವರಿಸಿದ ಸೊಸೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಮಗು ಶಯಾನ ಕೋಮಾ ಪ್ರಕರಣ: ನಿರ್ಲಕ್ಷ್ಯ ಆರೋಪ ತಳ್ಳಿಹಾಕಿದ ಆಸ್ಪತ್ರೆ
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಸ್ಟಿಂಗ್ ಕೇಸ್: ವಿಚಾರಣೆಗೆ ಹಾಜರಾಗುವಂತೆ ಕೃಪಾ ಆಳ್ವಾಗೆ ಸಿಸಿಬಿ ನೋಟಿಸ್
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ಛಲವಾದಿ ಮನೆಗೆ ಚಾಕು, ಚೂರಿ ಪಾರ್ಸೆಲ್; ಇತ್ತ ಜೋರಾಯ್ತು ಪೋಸ್ಟರ್ ವಾರ್!
ಬಿಗ್‌ ಬಾಸ್‌ ಮನೆಯಲ್ಲಿ ಮೊದಲ ದಿನವೇ ರಂಪಾಟ ಸೃಷ್ಟಿಸಿದ ಮಂಜು
ಬಿಗ್‌ ಬಾಸ್‌ ಮನೆಯಲ್ಲಿ ಮೊದಲ ದಿನವೇ ರಂಪಾಟ ಸೃಷ್ಟಿಸಿದ ಮಂಜು
ದೀಪಾವಳಿ ಹಬ್ಬದ ಹಿನ್ನೆಲೆ ಕೆಆರ್ ಮಾರುಕಟ್ಟೆಯಲ್ಲಿ ಜನಸಾಗರ
ದೀಪಾವಳಿ ಹಬ್ಬದ ಹಿನ್ನೆಲೆ ಕೆಆರ್ ಮಾರುಕಟ್ಟೆಯಲ್ಲಿ ಜನಸಾಗರ
ದೀಪಾವಳಿ ಪಟಾಕಿ ದುರಂತ: ಮೊದಲ ದಿನವೇ ಮಕ್ಕಳೂ ಸೇರಿ 32 ಮಂದಿಗೆ ಗಾಯ
ದೀಪಾವಳಿ ಪಟಾಕಿ ದುರಂತ: ಮೊದಲ ದಿನವೇ ಮಕ್ಕಳೂ ಸೇರಿ 32 ಮಂದಿಗೆ ಗಾಯ
ಇಂದು ಈ ರಾಶಿಯವರು ಹಿತಶತ್ರುಗಳ ಬಗ್ಗೆ ಜಾಗೃತೆವಹಿಸಿ
ಇಂದು ಈ ರಾಶಿಯವರು ಹಿತಶತ್ರುಗಳ ಬಗ್ಗೆ ಜಾಗೃತೆವಹಿಸಿ
ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಹಾಸನ ಡಿಸಿ
ಕುಮಾರಸ್ವಾಮಿ ಮಾಡಿರುವ ಆರೋಪಗಳ ಬಗ್ಗೆ ಸಿಎಂ ಗಮನಕ್ಕೆ ತಂದ ಹಾಸನ ಡಿಸಿ