England: ಶೂನ್ಯ, ಸೊನ್ನೆ, ಶೂನ್ಯ: ಕ್ರಿಕೆಟ್​ ಇತಿಹಾಸದಲ್ಲಿ 2ನೇ ಬಾರಿ ಕಳಪೆ ದಾಖಲೆ ಬರೆದ ಇಂಗ್ಲೆಂಡ್

Australia vs England: ಜೋ ರೂಟ್​ಗೂ ಮುನ್ನ ಪಾಕಿಸ್ತಾನದ ಮೊಹಮ್ಮದ್ ಯೂಸುಫ್ ಮತ್ತು ವೆಸ್ಟ್ ಇಂಡೀಸ್​ನ ವಿವ್ ರಿಚರ್ಡ್ಸ್ ಈ ಸಾಧನೆ ಮಾಡಿದ್ದರು. 2006ರಲ್ಲಿ 11 ಪಂದ್ಯಗಳಲ್ಲಿ 1788 ರನ್ ಗಳಿಸಿ ವಿಶ್ವ ದಾಖಲೆ ನಿರ್ಮಿಸಿರುವ ಮೊಹಮ್ಮದ್ ಯೂಸುಫ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ.

England: ಶೂನ್ಯ, ಸೊನ್ನೆ, ಶೂನ್ಯ: ಕ್ರಿಕೆಟ್​ ಇತಿಹಾಸದಲ್ಲಿ 2ನೇ ಬಾರಿ ಕಳಪೆ ದಾಖಲೆ ಬರೆದ ಇಂಗ್ಲೆಂಡ್
ಸಾಂದರ್ಭಿಕ ಚಿತ್ರ
Follow us
TV9 Web
| Updated By: ಝಾಹಿರ್ ಯೂಸುಫ್

Updated on:Dec 28, 2021 | 2:29 PM

ಮೆಲ್ಬೋರ್ನ್​ನಲ್ಲಿ ನಡೆದ ಆ್ಯಶಸ್ ಸರಣಿಯ (The Ashes) ಮೂರನೇ ಟೆಸ್ಟ್‌ನಲ್ಲಿ ಇಂಗ್ಲೆಂಡ್ ವಿರುದ್ಧ ಆಸ್ಟ್ರೇಲಿಯಾ (England vs Australia) ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಬೌಲಿಂಗ್ ಆಯ್ದುಕೊಂಡಿತು. ಅದರಂತೆ ಮೊದಲು ಬ್ಯಾಟ್ ಮಾಡಿ ಇಂಗ್ಲೆಂಡ್ 185 ರನ್​ಗಳಿಗೆ ಸರ್ವಪತನ ಕಂಡಿತು. ಇದಕ್ಕುತ್ತರವಾಗಿ ಬ್ಯಾಟ್ ಬೀಸಿದ ಆಸ್ಟ್ರೇಲಿಯಾ 267 ರನ್​ಗಳಿಸಿ ಆಲೌಟ್ ಆಗಿತ್ತು. ಆದರೆ ದ್ವಿತೀಯ ಇನಿಂಗ್ಸ್​ನಲ್ಲಿ ಅತ್ಯಂತ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿದ ಇಂಗ್ಲೆಂಡ್ ಕೇವಲ 68 ರನ್​ಗಳಿಗೆ ಆಲೌಟ್​ ಆಗುವುದರೊಂದಿಗೆ ಆಸ್ಟ್ರೇಲಿಯಾ ಇನಿಂಗ್ಸ್​ ಹಾಗೂ 14 ರನ್​ಗಳ ಭರ್ಜರಿ ಜಯ ಸಾಧಿಸಿತು. ಈ ಸೋಲಿನೊಂದಿಗೆ ಈ ಬಾರಿಯ ಆ್ಯಶಸ್ ಇಂಗ್ಲೆಂಡ್ ಕೈ ತಪ್ಪಿದೆ. 5 ಪಂದ್ಯಗಳ ಈ ಸರಣಿಯಲ್ಲಿ ಇದೀಗ ಆಸ್ಟ್ರೇಲಿಯಾ 3-0 ಮುನ್ನಡೆ ಸಾಧಿಸಿದ್ದು, ಈ ಮೂಲಕ ಮತ್ತೊಮ್ಮೆ ತವರಿನಲ್ಲಿ ಆಸ್ಟ್ರೇಲಿಯಾ ಆ್ಯಶಸ್ ಟ್ರೋಫಿಯನ್ನು ಉಳಿಸಿಕೊಂಡಿದೆ.

ಈ ಹೀನಾಯ ಸೋಲಿನೊಂದಿಗೆ ಇಂಗ್ಲೆಂಡ್ ತಂಡವು ಅತ್ಯಂತ ಕಳಪೆ ದಾಖಲೆಯೊಂದನ್ನು ಪುನರಾವರ್ತಿಸಿರುವುದು ವಿಶೇಷ. ಏಕೆಂದರೆ ದ್ವಿತೀಯ ಇನಿಂಗ್ಸ್​ನಲ್ಲಿ ಇಂಗ್ಲೆಂಡ್ ಬ್ಯಾಟರ್​ಗಳಾದ ಡೇವಿಡ್ ಮಲಾನ್, ಜಾಕ್ ಲೀಚ್, ಮಾರ್ಕ್ ವುಡ್ ಮತ್ತು ಓಲಿ ರಾಬಿನ್ಸನ್ ಖಾತೆ ತೆರೆಯದೇ ಪೆವಿಲಿಯನ್​ಗೆ ಮರಳಿದ್ದರು. ಇದರೊಂದಿಗೆ 2021 ರಲ್ಲಿ ಅತೀ ಹೆಚ್ಚು ಬಾರಿ ಶೂನ್ಯಕ್ಕೆ ಔಟಾದ ಬ್ಯಾಟರುಗಳ ತಂಡ ಎಂಬ ಅಪಖ್ಯಾತಿ ಇಂಗ್ಲೆಂಡ್ ಪಾಲಾಗಿದೆ. ಇಂಗ್ಲೆಂಡ್ ಬ್ಯಾಟರ್​ಗಳು ಈ ವರ್ಷ 54 ಬಾರಿ ಸೊನ್ನೆಗೆ ಔಟಾಗಿದ್ದರು. ಇದು ಟೆಸ್ಟ್​ ಕ್ರಿಕೆಟ್ ಇತಿಹಾಸ ಅತ್ಯಂತ ಕಳಪೆ ದಾಖಲೆಯಾಗಿದೆ.

ಇನ್ನು 144 ವರ್ಷಗಳಿಂದ ಟೆಸ್ಟ್ ಕ್ರಿಕೆಟ್ ಆಡುತ್ತಿರುವ ಇಂಗ್ಲೆಂಡ್ ತಂಡ ಎರಡನೇ ಬಾರಿಗೆ ಇಂತಹ ಕಳಪೆ ದಾಖಲೆ ನಿರ್ಮಿಸಿರುವುದು ವಿಶೇಷ. ಇದಕ್ಕೂ ಮುನ್ನ 1998ರಲ್ಲಿ ಇಂಗ್ಲೆಂಡ್ ಆಟಗಾರರು 54 ಬಾರಿ ಶೂನ್ಯಕ್ಕೆ ಔಟಾಗಿದ್ದರು. ಇದೀಗ ಮತ್ತೊಮ್ಮೆ ತನ್ನ ಹಳೆಯ ಹೀನಾಯ ದಾಖಲೆಯನ್ನು ಇಂಗ್ಲೆಂಡ್ ಆಟಗಾರರು ಪುನರಾವರ್ತಿಸಿದ್ದಾರೆ.

ಸರಣಿ ಸೋತರೂ ಮಿಂಚಿದ ಇಂಗ್ಲೆಂಡ್ ನಾಯಕ: ಇಂಗ್ಲೆಂಡ್ ತಂಡ ನಾಯಕ ಜೋ ರೂಟ್ (Joe Root) ಎರಡನೇ ಇನ್ನಿಂಗ್ಸ್‌ನಲ್ಲಿ 28 ರನ್ ಗಳಿಸುವ ಮೂಲಕ ಈ ವರ್ಷ ಟೆಸ್ಟ್​ ಕ್ರಿಕೆಟ್​ನಲ್ಲಿ 1700 ಕ್ಕೂ ಅಧಿಕ ರನ್​ ಬಾರಿಸಿದ ದಾಖಲೆ ಬರೆದರು. ಇದರೊಂದಿಗೆ ಕ್ಯಾಲೆಂಡರ್ ವರ್ಷದಲ್ಲಿ 1700 ಕ್ಕೂ ಹೆಚ್ಚು ಟೆಸ್ಟ್ ರನ್ ಗಳಿಸಿದ ವಿಶ್ವದ ಮೂರನೇ ಬ್ಯಾಟರ್ ಎನಿಸಿಕೊಂಡರು. ರೂಟ್ ಈ ವರ್ಷ 15 ಟೆಸ್ಟ್‌ಗಳ 29 ಇನ್ನಿಂಗ್ಸ್‌ಗಳಲ್ಲಿ 61 ಸರಾಸರಿಯಲ್ಲಿ 1708 ರನ್ ಗಳಿಸಿದ್ದಾರೆ. ಇದರಲ್ಲಿ 6 ಶತಕ ಮತ್ತು 4 ಅರ್ಧ ಶತಕಗಳು ಸೇರಿವೆ.

ಜೋ ರೂಟ್​ಗೂ ಮುನ್ನ ಪಾಕಿಸ್ತಾನದ ಮೊಹಮ್ಮದ್ ಯೂಸುಫ್ ಮತ್ತು ವೆಸ್ಟ್ ಇಂಡೀಸ್​ನ ವಿವ್ ರಿಚರ್ಡ್ಸ್ ಈ ಸಾಧನೆ ಮಾಡಿದ್ದರು. 2006ರಲ್ಲಿ 11 ಪಂದ್ಯಗಳಲ್ಲಿ 1788 ರನ್ ಗಳಿಸಿ ವಿಶ್ವ ದಾಖಲೆ ನಿರ್ಮಿಸಿರುವ ಮೊಹಮ್ಮದ್ ಯೂಸುಫ್ ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದ್ದಾರೆ. ಹಾಗೆಯೇ 1976 ರಲ್ಲಿ 11 ಟೆಸ್ಟ್ ಪಂದ್ಯಗಳಲ್ಲಿ 1710 ರನ್ ಗಳಿಸಿದ ವೆಸ್ಟ್ ಇಂಡೀಸ್‌ನ ಸ್ವಾಶ್‌ಬಕ್ಲಿಂಗ್ ಬ್ಯಾಟರ್ ವಿವ್ ರಿಚರ್ಡ್ಸ್ ದ್ವಿತೀಯ ಸ್ಥಾನದಲ್ಲಿದ್ದಾರೆ. ಇತ್ತ ಈ ವರ್ಷ 1708 ರನ್​ಗಳಿಸಿ ಜೋ ರೂಟ್ ಕೇವಲ 3 ರನ್​ಗಳ ಅಂತರದಿಂದ 2ನೇ ಸ್ಥಾನಕ್ಕೇರುವ ಅವಕಾಶವನ್ನು ಕೈತಪ್ಪಿಸಿಕೊಂಡರು.

ಇದನ್ನೂ ಓದಿ: IPL 2022: RCB ಮನೀಷ್ ಪಾಂಡೆಯನ್ನು ಯಾಕೆ ಖರೀದಿಸಬೇಕು ಅಂದರೆ…

ಇದನ್ನೂ ಓದಿ: IPL 2022: ಇವರೇ RCB ತಂಡದ ಮುಂದಿನ ಕ್ಯಾಪ್ಟನ್ ಎಂದ ಮಾಜಿ ಆರ್​ಸಿಬಿ ನಾಯಕ

(Duck, duck, lose: the numbers behind England’s latest batting collapse)

Published On - 2:29 pm, Tue, 28 December 21

‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
ಡಿಕೆ ಶಿವಕುಮಾರ್ ಒಕ್ಕಲಿಗ ಸಮುದಾಯದ ಪರಮೋಚ್ಛ ನಾಯಕ: ಪ್ರದೀಪ್ ಈಶ್ವರ್
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು
Results: ಹಣ ಹಂಚಿ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿದ್ದಾರೆ: ಬಂಗಾರು ಹನುಮಂತು