ಬೆಂಗಳೂರಿನಲ್ಲಿ ಆಸೀಸ್- ಪಾಕ್ ವಿಶ್ವಕಪ್ ಪಂದ್ಯ; ಚಿನ್ನಸ್ವಾಮಿ ಸ್ಟೇಡಿಯಂಗೆ ಬಿಗಿ ಪೊಲೀಸ್ ಭದ್ರತೆ
ICC World Cup 2023: ಈ ಬಾರಿಯ ವಿಶ್ವಕಪ್‌ನಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ಪಂದ್ಯ ಇದಾಗಿದೆ. ಇತ್ತ ಪಂದ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಹಿಸಿರುವ ಬೆಂಗಳೂರು ಪೊಲೀಸರು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಹೈಅಲರ್ಟ್ ಘೋಷಿಸಿದ್ದಾರೆ.
2023 ರ ವಿಶ್ವಕಪ್‌ನಲ್ಲಿ (ICC World Cup 2023) ಭಾರತದ ವಿರುದ್ಧ ಹೀನಾಯ ಸೋಲನುಭವಿಸಿದ್ದ ಪಾಕಿಸ್ತಾನ, ಇದೀಗ ತನ್ನ ಮುಂದಿನ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ (Australia vs Pakistan) ಕಣಕ್ಕಿಳಿಯುತ್ತಿದೆ. ಉಭಯ ತಂಡಗಳ ಈಕದನ ಅಕ್ಟೋಬರ್ 20 ರಂದು ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ (M. Chinnaswamy Stadium) ನಡೆಯುತ್ತಿದೆ. ಈ ಬಾರಿಯ ವಿಶ್ವಕಪ್‌ನಲ್ಲಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಮೊದಲ ಪಂದ್ಯ ಇದಾಗಿದೆ. ಹೀಗಾಗಿ ಪಂದ್ಯಕ್ಕೆ ಸಕಲ ಸಿದ್ದತೆಗಳನ್ನು ಕೆಎಸ್ಸಿಎ ಮಾಡಿಕೊಂಡಿದೆ. ಇತ್ತ ಪಂದ್ಯದಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಹಿಸಿರುವ ಬೆಂಗಳೂರು ಪೊಲೀಸರು ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ಹೈಅಲರ್ಟ್ ಘೋಷಿಸಿದ್ದಾರೆ.
ಬೆಂಗಳೂರಿನಲ್ಲಿ ವಿಶ್ವಕಪ್ನ ಮೊದಲ ಪಂದ್ಯ ನಡೆಯುತ್ತಿರುವುದರಿಂದಾಗಿ ಇಡೀ ಕ್ರೀಡಾಂಗಣ ಭರ್ತಿಯಾಗುವ ಸಾಧ್ಯತೆ ಇದೆ. ಅಲ್ಲದೆ ಈಗಾಗಲೇ ಮೊದಲ ಪಂದ್ಯದ ಟಿಕೆಟ್ಗಳು ಸೋಲ್ಡ್ ಔಟ್ ಆಗಿವೆ. ಹೀಗಾಗಿ ಈ ಪಂದ್ಯದಲ್ಲಿ ಯಾವುದೇ ಅಹಿತಕರ ಘಟನೆಯಾಗದಂತೆ ತಡೆಯುವ ನಿಟ್ಟಿನಲ್ಲಿ ಬೆಂಗಳೂರು ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ.
AUS vs PAK: ಬೆಂಗಳೂರಿನಲ್ಲಿರುವ ಪಾಕ್ ತಂಡದ ಹಲವು ಆಟಗಾರರಿಗೆ ವೈರಲ್ ಫೀವರ್..!
ಮ್ಯಾಚ್ ವಿಕ್ಷಣೆಗೆ ಬರುವವರ ಮೇಲೆ ಹದ್ದಿನಕಣ್ಣು
ಇದೀಗ ಕೇಳಿಬಂದಿರುವ ಮಾಹಿತಿ ಪ್ರಕಾರ, ಪ್ರಸ್ತುತ ನಡೆಯುತ್ತಿರುವ ಇಸ್ರೇಲ್ ಹಾಗೂ ಪ್ಯಾಲೆಸ್ಟೈನ್ ನಡುವಿನ ಘರ್ಷಣೆಗೆ ಸಂಬಂಧಿಸಿದಂತೆ ಅಂತರಾಷ್ಟ್ರೀಯ ಮಟ್ಟದಲ್ಲಿ ಧ್ವನಿ ಎತ್ತಲು ಕೆಲವು ಸಂಘನೆಗಳು ತಯಾರಿ ನಡೆಸಿವೆ ಎಂದು ವರದಿಯಾಗಿದೆ. ವಾಸ್ತವವಾಗಿ ಪಂದ್ಯ ನಡೆಯುವ ವೇಳೆ ಪ್ಯಾಲೆಸ್ಟೈನ್ಗೆ ಬೆಂಬಲ ನೀಡುವ ಪೊಸ್ಟರ್ ಹಾಗೂ ಫ್ಲಕಾರ್ಡ್ಗಳನ್ನು ಹಿಡಿದು ಘೋಷಣೆ ಕೂಗಲು ಹಲವು ಸಂಘಟನೆಗಳನ್ನು ತಯಾರಿ ನಡೆಸಿವೆ ಎಂಬ ಮಾಹಿತಿ ಬೆಂಗಳೂರು ಪೊಲೀಸರಿಗೆ ಲಭಿಸಿದ್ದು, ಈ ಹಿನ್ನಲೆಯಲ್ಲಿ ಮತ್ತಷ್ಟು ಅಲರ್ಟ್ ಆಗಿರುವ ಪೊಲೀಸರು ಮ್ಯಾಚ್ ವಿಕ್ಷಣೆಗೆ ಬರುವವರ ಮೇಲೆ ಹದ್ದಿನಕಣ್ಣಿಡಲು ತೀರ್ಮಾನಿಸಿದೆ.
ಬೆಂಗಳೂರಿನಲ್ಲಿ ನಿನ್ನೆ ಪ್ರತಿಭಟನೆ
ಇಸ್ರೇಲ್‌ನೊಂದಿಗೆ ನಡೆಯುತ್ತಿರುವ ಸಂಘರ್ಷದಲ್ಲಿ ಪ್ಯಾಲೆಸ್ತೀನ್‌ಗೆ ಬೆಂಬಲ ನೀಡಲು ಅ.16ರ ಸಂಜೆ ಬೆಂಗಳೂರಿನ ಎಂಜಿ ರಸ್ತೆಯ ಮೆಟ್ರೋ ನಿಲ್ದಾಣದ ಬಳಿ ನೂರಾರು ಜನರು ಜಮಾಯಿಸಿ ಪ್ಯಾಲೆಸ್ಟೀನ್‌ನ ಗಾಜಾ ಮೇಲೆ ಇಸ್ರೇಲ್ ನಡೆಸುತ್ತಿರುವ ದಾಳಿಯನ್ನು ಭಾರತ ಖಂಡಿಸಬೇಕು ಎಂದು ಒತ್ತಾಯಿಸಿದರು. ಎಂಜಿ ರಸ್ತೆಯ ಉದ್ದಕ್ಕೂ ಮಾನವ ಸರಪಳಿ ನಿರ್ಮಿಸಿ ಮೇಣದಬತ್ತಿ ಹಿಡಿದು ಪ್ಯಾಲೆಸ್ತೀನ್‌ಗೆ ಬೆಂಬಲ ನೀಡುವಂತೆ ಕೋರಿಕೊಂಡರು. ಹೀಗಾಗಿ ಪಂದ್ಯದ ನಡುವೆಯೂ ಈ ರೀತಿಯ ಘಟನೆ ಮರುಕಳಿಸುವ ಸಾಧ್ಯತೆಗಳು ಹೆಚ್ಚಿವೆ. ಈ ನಿಟ್ಟಿನಲ್ಲಿ ಈ ರೀತಿಯ ಘಟನೆಗಳು ಆಗದಂತೆ ತಡೆಹಿಡಿಯಲು ಪೊಲೀಸರು ಮುನ್ನೇಚರಿಕಾ ಕ್ರಮ ಕೈಗೊಂಡಿದ್ದಾರೆ.
ಉಭಯ ತಂಡಗಳು
ವಿಶ್ವಕಪ್‌ಗೆ ಪಾಕಿಸ್ತಾನ ತಂಡ: ಬಾಬರ್ ಆಝಂ (ನಾಯಕ), ಶಾದಾಬ್ ಖಾನ್, ಫಖರ್ ಜಮಾನ್, ಇಮಾಮ್-ಉಲ್-ಹಕ್, ಅಬ್ದುಲ್ಲಾ ಶಫೀಕ್, ಮೊಹಮ್ಮದ್ ರಿಜ್ವಾನ್, ಸೌದ್ ಶಕೀಲ್, ಇಫ್ತಿಕರ್ ಅಹ್ಮದ್, ಸಲ್ಮಾನ್ ಅಲಿ ಅಘಾ, ಮೊಹಮ್ಮದ್ ನವಾಜ್, ಉಸಾಮಾ ಮಿರ್, ಹ್ಯಾರಿಸ್ ರೌಫ್, ಹಸನ್ ಅಲಿ, ಶಾಹೀನ್ ಅಫ್ರಿದಿ, ಮೊಹಮ್ಮದ್ ಅಫ್ರಿದಿ ವಾಸಿಂ.
ಆಸ್ಟ್ರೇಲಿಯಾ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಟೀವ್ ಸ್ಮಿತ್, ಅಲೆಕ್ಸ್ ಕ್ಯಾರಿ, ಜೋಶ್ ಇಂಗ್ಲಿಸ್, ಸೀನ್ ಅಬಾಟ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಮಾರ್ನಸ್ ಲಬುಶೇನ್, ಮಿಚ್ ಮಾರ್ಷ್, ಗ್ಲೆನ್ ಮ್ಯಾಕ್ಸ್‌ವೆಲ್, ಮಾರ್ಕಸ್ ಸ್ಟೊಯಿನಿಸ್, ಡೇವಿಡ್ ವಾರ್ನರ್, ಆಡಮ್ ಜಂಪಾ, ಮಿಚೆಲ್ ಸ್ಟಾರ್ಕ್.
ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published On - 10:46 am, Wed, 18 October 23