Duleep Trophy 2023: ರೋಚಕ ಜಯದೊಂದಿಗೆ ಫೈನಲ್​ಗೆ ಲಗ್ಗೆಯಿಟ್ಟ ದಕ್ಷಿಣ ವಲಯ

Vijayakumar Vyshak-Vidhwath kaverappa: ಈ ಪಂದ್ಯದ ಮೊದಲ ಇನಿಂಗ್ಸ್​ನಲ್ಲಿ ಕರ್ನಾಟಕದ ವೇಗಿ ವಿಧ್ವತ್ ಕಾವೇರಪ್ಪ 5 ವಿಕೆಟ್​ ಪಡೆದರೆ, 2ನೇ ಇನಿಂಗ್ಸ್​ನಲ್ಲಿ ವಿಜಯಕುಮಾರ್ ವೈಶಾಕ್ 5 ವಿಕೆಟ್ ಉರುಳಿಸಿ ಮಿಂಚಿದ್ದಾರೆ.

Duleep Trophy 2023: ರೋಚಕ ಜಯದೊಂದಿಗೆ ಫೈನಲ್​ಗೆ ಲಗ್ಗೆಯಿಟ್ಟ ದಕ್ಷಿಣ ವಲಯ
Vijayakumar Vyshak-Vidhwath kaverappa
Follow us
| Updated By: ಝಾಹಿರ್ ಯೂಸುಫ್

Updated on: Jul 08, 2023 | 10:07 PM

Duleep Trophy 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ದುಲೀಪ್ ಟ್ರೋಫಿಯ 2ನೇ ಸೆಮಿಫೈನಲ್ ಪಂದ್ಯದಲ್ಲಿ ದಕ್ಷಿಣ ವಲಯ ತಂಡ ರೋಚಕ ಜಯ ಸಾಧಿಸಿದೆ. ಉತ್ತರ ವಲಯ ವಿರುದ್ಧದ ಈ ಪಂದ್ಯದಲ್ಲಿ 2 ವಿಕೆಟ್​ಗಳಿಂದ ರೋಚಕ ಗೆಲುವು ಸಾಧಿಸಿ ಸೌತ್ ಝೋನ್ ತಂಡವು ದುಲೀಪ್ ಟ್ರೋಫಿಯ ಫೈನಲ್​ಗೆ ಲಗ್ಗೆಯಿಟ್ಟಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ದಕ್ಷಿಣ ವಲಯ ತಂಡದ ನಾಯಕ ಹನುಮ ವಿಹಾರಿ ಫೀಲ್ಡಿಂಗ್ ಆಯ್ದುಕೊಂಡಿದ್ದರು.

ಅದರಂತೆ ಮೊದಲು ಬ್ಯಾಟ್ ಮಾಡಿದ ಉತ್ತರ ವಲಯ ತಂಡ ಉತ್ತಮ ಆರಂಭ ಪಡೆದಿರಲಿಲ್ಲ. ಕನ್ನಡಿಗ ವಿಧ್ವತ್ ಕಾವೇರಪ್ಪ ದಾಳಿಗೆ ಕ್ರೀಸ್ ಕಚ್ಚಿ ನಿಲ್ಲಲು ಪರದಾಡಿದ ಉತ್ತರ ವಲಯ ಪರ ಪ್ರಭ್​ಸಿಮ್ರಾನ್ ಸಿಂಗ್ 49 ರನ್​ಗಳಿಸಿದ್ದೇ ಗರಿಷ್ಠ ಸ್ಕೋರ್. ಇತ್ತ ಕರಾರುವಾಕ್ ದಾಳಿ ಮೂಲಕ ಮಿಂಚಿದ ಕರ್ನಾಟಕ ವೇಗಿ ವಿಧ್ವತ್ ಕಾವೇರಪ್ಪ 17.3 ಓವರ್​ಗಳಲ್ಲಿ 28 ರನ್​ ನೀಡಿ 5 ವಿಕೆಟ್ ಕಬಳಿಸಿದರು. ಪರಿಣಾಮ ಉತ್ತರ ವಲಯ ತಂಡವು ಮೊದಲ ಇನಿಂಗ್ಸ್​ನಲ್ಲಿ ಕೇವಲ 198 ರನ್​ಗಳಿಗೆ ಆಲೌಟ್ ಆಯಿತು.

ಇನ್ನು ದಕ್ಷಿಣ ವಲಯ ಕೂಡ ಮೊದಲ ಇನಿಂಗ್ಸ್​ನಲ್ಲಿ ಕಳಪೆ ಬ್ಯಾಟಿಂಗ್ ಪ್ರದರ್ಶಿಸಿತು. ಆರಂಭಿಕ ಆಟಗಾರ ಮಯಾಂಕ್ ಅಗರ್ವಾಲ್ 76 ರನ್​ ಬಾರಿಸಿದರೆ, ತಿಲಕ್ ವರ್ಮಾ 46 ರನ್​ ಕಲೆಹಾಕಿದರು. ಇವರಿಬ್ಬರನ್ನು ಹೊರತುಪಡಿಸಿದರೆ, ಉಳಿದ ಬ್ಯಾಟರ್​ಗಳಿಂದ ನಿರೀಕ್ಷಿತ ಆಟ ಮೂಡಿಬಂದಿರಲಿಲ್ಲ. ಪರಿಣಾಮ 195 ರನ್​ಗಳಿಸುವಷ್ಟರಲ್ಲಿ ದಕ್ಷಿಣ ವಲಯ ಸರ್ವಪತನ ಕಂಡಿತು.

ಮೂರು ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಉತ್ತರ ವಲಯಕ್ಕೆ ಈ ಬಾರಿ ಕನ್ನಡಿಗ ವಿಜಯ್​ಕುಮಾರ್ ವೈಶಾಕ್ ಮಾರಕವಾಗಿ ಪರಿಣಮಿಸಿದರು. ಅತ್ಯುತ್ತಮ ದಾಳಿ ಸಂಘಟಿಸಿದ ವೈಶಾಕ್ 15 ಓವರ್​ಗಳಲ್ಲಿ 76 ರನ್ ನೀಡಿ 5 ವಿಕೆಟ್ ಉರುಳಿಸಿದರು. ಇದಾಗ್ಯೂ ಪ್ರಭ್​ಸಿಮ್ರಾನ್ ಸಿಂಗ್ 63 ರನ್ ಬಾರಿಸುವಲ್ಲಿ ಯಶಸ್ವಿಯಾದರು. ಅಂತಿಮವಾಗಿ ಉತ್ತರ ವಲಯ ತಂಡ 211 ರನ್​ಗಳಿಗೆ ಆಲೌಟ್ ಆಯಿತು.

ಮೊದಲ ಇನಿಂಗ್ಸ್ ಹಿನ್ನಡೆಯೊಂದಿಗೆ 215 ರನ್​ಗಳ ಗುರಿ ಪಡೆದ ದಕ್ಷಿಣ ವಲಯ ತಂಡಕ್ಕೆ ಈ ಬಾರಿ ಕೂಡ ಮಯಾಂಕ್ ಅಗರ್ವಾಲ್ ಆಸರೆಯಾಗಿ ನಿಂತರು. 57 ಎಸೆತಗಳಲ್ಲಿ 54 ರನ್​ ಬಾರಿಸಿ ಮಯಾಂಕ್ ಉತ್ತಮ ಆರಂಭ ಒದಗಿಸಿದ್ದರು. ಇನ್ನು ಹನುಮ ವಿಹಾರಿ 43 ರನ್​ಗಳ ಕಾಣಿಕೆ ನೀಡಿದರು. ಇದಾಗ್ಯೂ ಮಧ್ಯಮ ಕ್ರಮಾಂಕದಲ್ಲಿ ದಿಢೀರ್ ಕುಸಿತಕ್ಕೊಳಗಾದ ದಕ್ಷಿಣ ವಲಯ ತಂಡವು 8 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು.

ಈ ಹಂತದಲ್ಲಿ ಸಾಯಿ ಕಿಶೋರ್ 2 ಸಿಕ್ಸರ್​ನೊಂದಿಗೆ 11 ಎಸೆತಗಳಲ್ಲಿ 15 ಬಾರಿಸಿ ತಂಡಕ್ಕೆ 2 ವಿಕೆಟ್​ಗಳ ರೋಚಕ ಜಯ ತಂದುಕೊಟ್ಟರು. ಈ ಗೆಲುವಿನೊಂದಿಗೆ ದಕ್ಷಿಣ ವಲಯ ತಂಡವು ದುಲೀಪ್ ಟ್ರೋಫಿಯ ಫೈನಲ್​ಗೆ ಲಗ್ಗೆಯಿಟ್ಟಿದೆ.

ಉತ್ತರ ವಲಯ ಪ್ಲೇಯಿಂಗ್ ಇಲೆವೆನ್: ಜಯಂತ್ ಯಾದವ್ (ನಾಯಕ), ಪ್ರಭ್​ಸಿಮ್ರಾನ್ ಸಿಂಗ್ (ವಿಕೆಟ್ ಕೀಪರ್) , ಪ್ರಶಾಂತ್ ಚೋಪ್ರಾ , ಧ್ರುವ ಶೋರೆ , ಅಂಕಿತ್ ಕಲ್ಸಿ , ಅಂಕಿತ್ ಕುಮಾರ್ , ಪುಲ್ಕಿತ್ ನಾರಂಗ್ , ನಿಶಾಂತ್ ಸಿಂಧು , ಬಲ್ತೇಜ್ ಸಿಂಗ್ , ವೈಭವ್ ಅರೋರಾ , ಹರ್ಷಿತ್ ರಾಣಾ.

ಇದನ್ನೂ ಓದಿ: India T20 Squad: ಟೀಮ್ ಇಂಡಿಯಾದಲ್ಲಿ ಇಬ್ಬರೇ ಆಲ್​ರೌಂಡರ್​ಗಳು..!

ದಕ್ಷಿಣ ವಲಯ ಪ್ಲೇಯಿಂಗ್ ಇಲೆವೆನ್: ಹನುಮ ವಿಹಾರಿ (ನಾಯಕ) , ಮಯಾಂಕ್ ಅಗರ್ವಾಲ್ , ಸಾಯಿ ಸುದರ್ಶನ್ , ರಿಕಿ ಭುಯಿ (ವಿಕೆಟ್ ಕೀಪರ್) , ರವಿಕುಮಾರ್ ಸಮರ್ಥ್ , ವಾಷಿಂಗ್ಟನ್ ಸುಂದರ್ , ತಿಲಕ್ ವರ್ಮಾ , ಸಾಯಿ ಕಿಶೋರ್ , ವಿಧ್ವತ್ ಕಾವೇರಪ್ಪ , ವಿಜಯ್ ಕುಮಾರ್ ವೈಶಾಕ್ , ಕೆ ವಿ ಶಶಿಕಾಂತ್.

ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್