Duleep Trophy 2023: ದುಲೀಪ್ ಟ್ರೋಫಿ ಫೈನಲ್: ಮೊದಲ ದಿನದಾಟದಲ್ಲಿ ಪಶ್ಚಿಮ ವಲಯಕ್ಕೆ ಮೇಲುಗೈ

| Updated By: ಝಾಹಿರ್ ಯೂಸುಫ್

Updated on: Jul 12, 2023 | 6:01 PM

Duleep Trophy 2023 Final: ದುಲೀಪ್ ಟ್ರೋಫಿ ಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದ ಪಶ್ಚಿಮ ವಲಯ ತಂಡದ ನಾಯಕ ಪ್ರಿಯಾಂಕ್ ಪಾಂಚಾಲ್ ಮೊದಲು ಫೀಲ್ಡಿಂಗ್ ಮಾಡುವ ನಿರ್ಧಾರ ತೆಗೆದುಕೊಂಡರು.

Duleep Trophy 2023: ದುಲೀಪ್ ಟ್ರೋಫಿ ಫೈನಲ್: ಮೊದಲ ದಿನದಾಟದಲ್ಲಿ ಪಶ್ಚಿಮ ವಲಯಕ್ಕೆ ಮೇಲುಗೈ
Duleep Trophy 2023
Follow us on

Duleep Trophy 2023: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿಯ ಫೈನಲ್​ ಪಂದ್ಯದಲ್ಲಿ ಪಶ್ಚಿಮ ವಲಯ ಹಾಗೂ ದಕ್ಷಿಣ ವಲಯ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಶ್ಚಿಮ ವಲಯ ತಂಡದ ನಾಯಕ ಪ್ರಿಯಾಂಕ್ ಪಾಂಚಾಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ದಕ್ಷಿಣ ವಲಯ ಪರ ಇನಿಂಗ್ಸ್ ಆರಂಭಿಸಿದ ರವಿಕುಮಾರ್ ಸಮರ್ಥ್ (7) ಹಾಗೂ ಮಯಾಂಕ್​ ಅಗರ್ವಾಲ್ (28) ಬೇಗನೆ ವಿಕೆಟ್ ಒಪ್ಪಿಸಿದ್ದರು.

ಇನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ತಿಲಕ್ ವರ್ಮಾ 40 ರನ್​ ಬಾರಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದರು. ಮತ್ತೊಂದೆಡೆ ನಾಯಕ ಹನುಮ ವಿಹಾರಿ 130 ಎಸೆತಗಳಲ್ಲಿ 63 ರನ್​ ಬಾರಿಸಿ ತಂಡಕ್ಕೆ ಆಸರೆಯಾದರು. ಪರಿಣಾಮ 2 ವಿಕೆಟ್ ನಷ್ಟದೊಂದಿಗೆ ದಕ್ಷಿಣ ವಲಯ ತಂಡದ ಸ್ಕೋರ್ 100 ರ ಗಡಿದಾಟಿತು.

ಆದರೆ ತಿಲಕ್ ವರ್ಮಾ ಹಾಗೂ ಹನುಮ ವಿಹಾರಿ ವಿಕೆಟ್ ಬೀಳುತ್ತಿದ್ದಂತೆ ದಿಢೀರ್ ಕುಸಿತಕ್ಕೊಳಗಾದ ದಕ್ಷಿಣ ವಲಯ ತಂಡ ಮೊದಲ ದಿನದಾಟದ ಅಂತ್ಯಕ್ಕೆ 7 ವಿಕೆಟ್​ ಕಳೆದುಕೊಂಡು 182 ರನ್​ ಕಲೆಹಾಕಿದೆ. ಕ್ರೀಸ್​ನಲ್ಲಿ ವಿಜಯಕುಮಾರ್ ವೈಶಾಕ್ ಹಾಗೂ ವಾಷಿಂಗ್ಟನ್ ಸುಂದರ್ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಪಶ್ಚಿಮ ವಲಯ ಪರ ಅರ್ಝಾನ್ ನಾಗ್ವಾಸ್ವಾಲ್ಲಾ, ಚಿಂತನ್ ಗಜ ಹಾಗೂ ಶಮ್ಸ್ ಮುಲಾನಿ ತಲಾ 2 ವಿಕೆಟ್ ಕಬಳಿಸಿ ಮಿಂಚಿದ್ದಾರೆ.

ದಕ್ಷಿಣ ವಲಯ ಪ್ಲೇಯಿಂಗ್ 11: ರವಿಕುಮಾರ್ ಸಮರ್ಥ್ , ಮಯಾಂಕ್ ಅಗರ್ವಾಲ್ , ಹನುಮ ವಿಹಾರಿ (ನಾಯಕ) , ರಿಕಿ ಭುಯಿ (ವಿಕೆಟ್ ಕೀಪರ್) , ತಿಲಕ್ ವರ್ಮ , ವಾಷಿಂಗ್ಟನ್ ಸುಂದರ್ , ಸಾಯಿ ಕಿಶೋರ್ , ಸಚಿನ್ ಬೇಬಿ , ವಿಧ್ವತ್ ಕಾವೇರಪ್ಪ , ವಿಜಯ್ ಕುಮಾರ್ ವೈಶಾಕ್ , ವಾಸುಕಿ ಕೌಶಿಕ್.

ಇದನ್ನೂ ಓದಿ: ODI World Cup 2023: ಏಕದಿನ ವಿಶ್ವಕಪ್​ನಲ್ಲಿನ ಟೀಮ್ ಇಂಡಿಯಾದ 9 ಎದುರಾಳಿಗಳು ಇವರೇ..!

ಪಶ್ಚಿಮ ವಲಯ ಪ್ಲೇಯಿಂಗ್ 11: ಪೃಥ್ವಿ ಶಾ , ಪ್ರಿಯಾಂಕ್ ಪಾಂಚಾಲ್ (ನಾಯಕ) , ಚೇತೇಶ್ವರ ಪೂಜಾರ , ಸೂರ್ಯಕುಮಾರ್ ಯಾದವ್ , ಸರ್ಫರಾಜ್ ಖಾನ್ , ಧರ್ಮೇಂದ್ರಸಿನ್ಹ್ ಜಡೇಜಾ , ಹಾರ್ವಿಕ್ ದೇಸಾಯಿ ( ವಿಕೆಟ್ ಕೀಪರ್ ) , ಚಿಂತನ್ ಗಜ , ಅರ್ಝಾನ್ ನಾಗವಾಸ್ವಾಲ್ಲಾ , ಅತಿತ್ ಶೇತ್ , ಶಮ್ಸ್ ಮುಲಾನಿ.