ದೇಶೀಯ ಅಂಗಳದ ಟೆಸ್ಟ್ ಕದನ ದುಲೀಪ್ ಟ್ರೋಫಿ ಟೂರ್ನಿಗೆ ವೇದಿಕೆ ಸಿದ್ಧವಾಗಿದೆ. ಸೆಪ್ಟೆಂಬರ್ 5 ರಿಂದ ಶುರುವಾಗಲಿರುವ ಈ ಟೂರ್ನಿಯಲ್ಲಿ ಒಟ್ಟು 4 ತಂಡಗಳು ಕಣಕ್ಕಿಳಿಯಲಿವೆ. ಈ ಹಿಂದೆ ದುಲೀಪ್ ಟ್ರೋಫಿಯನ್ನು ಝೋನಲ್ ಸ್ವರೂಪದಲ್ಲಿ ಆಡಲಾಗುತ್ತಿತ್ತು. ಅಂದರೆ ರಾಷ್ಟ್ರದಾದ್ಯಂತ ಆಟಗಾರರನ್ನು ಆರು ವಲಯ ತಂಡಗಳಾಗಿ ಕಣಕ್ಕಿಳಿಸಲಾಗುತ್ತಿತ್ತು.
ಆದರೆ ಈ ಬಾರಿ ವಲಯ ತಂಡಗಳ ಬದಲಾಗಿ 4 ತಂಡಗಳನ್ನು ಆಯ್ಕೆ ಮಾಡಲಾಗಿದೆ. ಅಲ್ಲದೆ ಈ ತಂಡಗಳಿಗೆ A, B, C, ಮತ್ತು D ಎಂದು ಹೆಸರಿಡಲಾಗಿದೆ. ವಿಶೇಷ ಎಂದರೆ ಈ ನಾಲ್ಕು ತಂಡಗಳು ದುಲೀಪ್ ಟ್ರೋಫಿಗಾಗಿ ರೌಂಡ್ ರಾಬಿನ್ ಮಾದರಿಯಲ್ಲಿ ಪಂದ್ಯಗಳನ್ನಾಡಲಾಗುತ್ತದೆ.
ಈ ಬಾರಿಯ ದುಲೀಪ್ ಟ್ರೋಫಿ ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯಲಿದೆ. ಅಂದರೆ ಇಲ್ಲಿ ಪ್ರತಿ ತಂಡಗಳು ಮೂರು ಪಂದ್ಯಗಳನ್ನಾಡಲಿದೆ. ಆ ಬಳಿಕ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ತಂಡವನ್ನು ಚಾಂಪಿಯನ್ ಎಂದು ಘೋಷಿಸಲಾಗುತ್ತದೆ. ಅಂದರೆ ಇಲ್ಲಿ ಯಾವುದೇ ಸೆಮಿಫೈನಲ್ ಮತ್ತು ಫೈನಲ್ ಪಂದ್ಯವಿರುವುದಿಲ್ಲ.
ನಾಲ್ಕು ತಂಡಗಳು ತಲಾ ಮೂರು ಪಂದ್ಯಗಳನ್ನಾಡಲಿದ್ದು, ಇದರಲ್ಲಿ ಅತ್ಯಧಿಕ ಪಂದ್ಯಗಳನ್ನು ಗೆದ್ದು ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ತಂಡಕ್ಕೆ ದುಲೀಪ್ ಟ್ರೋಫಿ ಒಲಿಯಲಿದೆ.
ಅಂದಹಾಗೆ ದುಲೀಪ್ ಟ್ರೋಫಿ ಟೆಸ್ಟ್ ಮಾದರಿಯಲ್ಲಿ ನಡೆಯುತ್ತಿದ್ದರೂ, ಈ ಪಂದ್ಯವು ನಾಲ್ಕು ದಿನದಾಟಗಳಿಗೆ ಸೀಮಿತವಾಗಿರಲಿದೆ. ಹೀಗಾಗಿ ಇಲ್ಲಿ ಗೆಲುವಿನ ಜೊತೆಗೆ ಡ್ರಾ ಲೆಕ್ಕಾಚಾರಗಳು ಕೂಡ ಸಹ ಮುಖ್ಯವಾಗುತ್ತದೆ. ಅದರಂತೆ ಈ ಬಾರಿ ದುಲೀಪ್ ಟ್ರೋಫಿ ಎತ್ತಿ ಹಿಡಿಯುವ ತಂಡ ಯಾವುದೆಂದು ಕಾದು ನೋಡಬೇಕಿದೆ.
ಟೀಮ್ A: ಶುಭಮನ್ ಗಿಲ್ (ನಾಯಕ), ಮಯಾಂಕ್ ಅಗರ್ವಾಲ್, ರಿಯಾನ್ ಪರಾಗ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲ್ದೀಪ್ ಯಾದವ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ವಿದ್ವತ್ ಕಾವೇರಪ್ಪ, ಕುಮಾರ್ ಕುಶಾಗ್ರ, ಶಾಶ್ವತ್ ರಾವತ್ .
ಟೀಮ್ B: ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಮುಶೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್, ಯಶ್ ದಯಾಳ್, ಮುಖೇಶ್ ಕುಮಾರ್, ರಾಹುಲ್ ಚಹರ್, ಆರ್ ಸಾಯಿ ಕಿಶೋರ್, ಮೋಹಿತ್ ಅವಸ್ತಿ, ಎನ್ ಜಗದೇಶನ್ (ವಿಕೆಟ್ ಕೀಪರ್)
ಟೀಮ್ C: ರುತುರಾಜ್ ಗಾಯಕ್ವಾಡ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಬಿ ಇಂದ್ರಜಿತ್, ಹೃತಿಕ್ ಶೋಕೀನ್, ಮಾನವ್ ಸುತಾರ್, ಉಮ್ರಾನ್ ಮಲಿಕ್, ವೈಶಾಕ್ ವಿಜಯ್‌ಕುಮಾರ್, ಅನ್ಶುಲ್ ಖಂಬೋಜ್, ಹಿಮಾಂಶು ಚೌಹಾಣ್, ಮಯಾಂಕ್ ಮಾರ್ಕಾಂಡೆ , ಸಂದೀಪ್ ವಾರಿಯರ್.
ಇದನ್ನೂ ಓದಿ: IPL 2025: ಐಪಿಎಲ್ನಲ್ಲಿ ಮಹತ್ವದ ಬದಲಾವಣೆ: ಪಂದ್ಯಗಳ ಸಂಖ್ಯೆ ಹೆಚ್ಚಳ ಸಾಧ್ಯತೆ
ಟೀಮ್ D: ಶ್ರೇಯಸ್ ಲೈಯರ್ (ನಾಯಕ), ಅಥರ್ವ ಟೈಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಕಿ ಭುಯಿ, ಸರನ್ಶ್ ಜೈನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಆಕಾಶ್ ಸೇನ್‌ಗುಪ್ತ, ಕೆಎಸ್ ಭರತ್ (ವಿಕೆಟ್ ಕೀಪರ್) , ಸೌರಭ್ ಕುಮಾರ್.