Duleep Trophy 2024: ಟಾಸ್ ಗೆದ್ದ ಭಾರತ ಡಿ: ಪ್ಲೇಯಿಂಗ್ ಇಲೆವೆನ್ನಲ್ಲಿ ಐವರು ಕನ್ನಡಿಗರು
Duleep Trophy 2024: ದುಲೀಪ್ ಟ್ರೋಫಿಯ 2ನೇ ಸುತ್ತಿನ ಪಂದ್ಯಗಳು ಇಂದಿನಿಂದ ಶುರುವಾಗಿದೆ. ಆಂಧ್ರ ಪ್ರದೇಶದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಭಾರತ ಎ ಮತ್ತು ಭಾರತ ಡಿ ತಂಡಗಳು ಮುಖಾಮುಖಿಯಾದರೆ, ಮತ್ತೊಂದು ಮ್ಯಾಚ್ನಲ್ಲಿ ಭಾರತ ಸಿ ಮತ್ತು ಭಾರತ ಬಿ ತಂಡಗಳು ಕಣಕ್ಕಿಳಿದಿವೆ.
ಆಂಧ್ರ ಪ್ರದೇಶದ ಅನಂತಪುರದಲ್ಲಿರುವ ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿಯ ಮೂರನೇ ಪಂದ್ಯದಲ್ಲಿ ಭಾರತ ಎ ಮತ್ತು ಭಾರತ ಡಿ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ಡಿ ತಂಡದ ನಾಯಕ ಶ್ರೇಯಸ್ ಅಯ್ಯರ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಶುಭ್ಮನ್ ಗಿಲ್ ಅನುಪಸ್ಥಿತಿಯಲ್ಲಿ ಈ ಪಂದ್ಯದಲ್ಲಿ ಭಾರತ ಎ ತಂಡವನ್ನು ಕನ್ನಡಿಗ ಮಯಾಂಕ್ ಅಗರ್ವಾಲ್ ಮುನ್ನಡೆಸುತ್ತಿದ್ದಾರೆ. ಹಾಗೆಯೇ ಈ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ಮತ್ತೋರ್ವ ಕನ್ನಡಿಗ ಪ್ರಸಿದ್ಧ್ ಕೃಷ್ಣ ಕೂಡ ಕಾಣಿಸಿಕೊಂಡಿದ್ದಾರೆ.
ಇನ್ನು ಭಾರತ ಡಿ ತಂಡದಲ್ಲಿ ಕನ್ನಡಿಗರಾದ ದೇವದತ್ ಪಡಿಕ್ಕಲ್ ಹಾಗೂ ಕೊಡಗಿನ ವೇಗಿ ವಿಧ್ವತ್ ಕಾವೇರಪ್ಪ ಸ್ಥಾನ ಪಡೆದಿದ್ದಾರೆ. ಅದರಂತೆ ಉಭಯ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ…
ಭಾರತ A (ಪ್ಲೇಯಿಂಗ್ XI): ಪ್ರಥಮ್ ಸಿಂಗ್, ಮಯಾಂಕ್ ಅಗರ್ವಾಲ್ (ನಾಯಕ), ತಿಲಕ್ ವರ್ಮಾ, ರಿಯಾನ್ ಪರಾಗ್, ಶಾಶ್ವತ್ ರಾವತ್, ಕುಮಾರ್ ಕುಶಾಗ್ರಾ (ವಿಕೆಟ್ ಕೀಪರ್), ಶಮ್ಸ್ ಮುಲಾನಿ, ತನುಷ್ ಕೋಟ್ಯಾನ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಆಕಿಬ್ ಖಾನ್.
ಭಾರತ D (ಪ್ಲೇಯಿಂಗ್ XI): ಅಥರ್ವ ತೈಡೆ, ಯಶ್ ದುಬೆ, ಶ್ರೇಯಸ್ ಅಯ್ಯರ್ (ನಾಯಕ), ದೇವದತ್ ಪಡಿಕ್ಕಲ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಕಿ ಭುಯಿ, ಸರನ್ಶ್ ಜೈನ್, ಸೌರಭ್ ಕುಮಾರ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ವಿಧ್ವತ್ ಕಾವೇರಪ್ಪ, ಆದಿತ್ಯ ಠಾಕರೆ.
ಭಾರತ B vs ಭಾರತ C ಮುಖಾಮುಖಿ:
ಅನಂತಪುರದ ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ನ 2ನೇ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮತ್ತೊಂದು ಪಂದ್ಯದಲ್ಲಿ ಭಾರತ ಬಿ ಮತ್ತು ಭಾರತ ಸಿ ತಂಡಗಳು ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಜಯಿಸಿದ ಭಾರತ ಬಿ ತಂಡದ ನಾಯಕ ಅಭಿಮನ್ಯು ಈಶ್ವರನ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಈ ಪಂದ್ಯದಲ್ಲಿ ಕರ್ನಾಟಕದ ವೇಗಿ ವಿಜಯಕುಮಾರ್ ವೈಶಾಕ್ ಸ್ಥಾನ ಪಡೆದಿದ್ದಾರೆ. ಅದರಂತೆ ಉಭಯ ತಂಡಗಳ ಆಡುವ ಬಳಗ ಈ ಕೆಳಗಿನಂತಿದೆ…
ಭಾರತ B (ಪ್ಲೇಯಿಂಗ್ XI): ಅಭಿಮನ್ಯು ಈಶ್ವರನ್ (ನಾಯಕ), ಎನ್ ಜಗದೀಸನ್ (ವಿಕೆಟ್ ಕೀಪರ್), ಮುಶೀರ್ ಖಾನ್, ಸರ್ಫರಾಝ್ ಖಾನ್, ರಿಂಕು ಸಿಂಗ್, ನಿತೀಶ್ ರೆಡ್ಡಿ, ವಾಷಿಂಗ್ಟನ್ ಸುಂದರ್, ರವಿಶ್ರೀನಿವಾಸನ್ ಸಾಯಿ ಕಿಶೋರ್, ನವದೀಪ್ ಸೈನಿ, ಮುಖೇಶ್ ಕುಮಾರ್, ರಾಹುಲ್ ಚಾಹರ್.
ಇದನ್ನೂ ಓದಿ: ವಿಶ್ವದ ಟಾಪ್-5 ಬ್ಯಾಟರ್ಗಳನ್ನು ಹೆಸರಿಸಿದ ಕೆಎಲ್ ರಾಹುಲ್
ಭಾರತ C (ಪ್ಲೇಯಿಂಗ್ XI): ರುತುರಾಜ್ ಗಾಯಕ್‌ವಾಡ್ (ನಾಯಕ), ಇಶಾನ್ ಕಿಶನ್, ಸಾಯಿ ಸುದರ್ಶನ್, ರಜತ್ ಪಾಟಿದಾರ್, ಬಾಬಾ ಇಂದ್ರಜಿತ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಮಾನವ್ ಸುತಾರ್, ಅಂಶುಲ್ ಕಾಂಬೋಜ್, ಮಯಾಂಕ್ ಮಾರ್ಕಾಂಡೆ, ವಿಜಯಕುಮಾರ್ ವೈಶಾಕ್, ಸಂದೀಪ್ ವಾರಿಯರ್.
ಕಣದಲ್ಲಿರುವ ಕನ್ನಡಿಗರು:
- ಮಯಾಂಕ್ ಅಗರ್ವಾಲ್ (ಭಾರತ ಎ)
- ಪ್ರಸಿದ್ಧ್ ಕೃಷ್ಣ (ಭಾರತ ಎ)
- ದೇವದತ್ ಪಡಿಕ್ಕಲ್ (ಭಾರತ ಡಿ)
- ವಿಧ್ವತ್ ಕಾವೇರಪ್ಪ (ಭಾರತ ಡಿ)
- ವಿಜಯಕುಮಾರ್ ವೈಶಾಕ್ (ಭಾರತ ಸಿ)
ಯಾವ ಚಾನೆಲ್ನಲ್ಲಿ ನೇರ ಪ್ರಸಾರ?
ಈ ಬಾರಿಯ ದುಲೀಪ್ ಟ್ರೋಫಿಯು ಸ್ಪೋರ್ಟ್ಸ್ 18 ಚಾನೆಲ್ನಲ್ಲಿ ನೇರ ಪ್ರಸಾರವಾಗಲಿದೆ. ಹಾಗೆಯೇ ಈ ಪಂದ್ಯವನ್ನು ಜಿಯೋ ಸಿನಿಮಾ ಆ್ಯಪ್ನಲ್ಲಿ ಉಚಿತವಾಗಿ ವೀಕ್ಷಿಸಬಹುದು.
Published On - 10:06 am, Thu, 12 September 24