ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಇಂಡಿಯಾ A ಮತ್ತು ಇಂಡಿಯಾ B ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಎ ತಂಡದ ನಾಯಕ ಶುಭ್ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಭಾರತ ಎ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ಕನ್ನಡಿಗರಾದ ಮಯಾಂಕ್ ಅಗರ್ವಾಲ್ ಹಾಗೂ ಕೆಎಲ್ ರಾಹುಲ್ ಸ್ಥಾನ ಪಡೆದಿರುವುದು ವಿಶೇಷ. ಇಲ್ಲಿ ಮಯಾಂಕ್ ಆರಂಭಿಕನಾಗಿ ಸ್ಥಾನ ಪಡೆದರೆ, ಕೆಎಲ್ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಬೀಸಲಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟರ್ ಆಗಿ ಧ್ರುವ್ ಜುರೇಲ್ ಕಾಣಿಸಿಕೊಂಡಿದ್ದಾರೆ.
ಭಾರತ ಬಿ ತಂಡದ ಪ್ಲೇಯಿಂಗ್ ಇಲೆವೆನ್ನಲ್ಲಿ ಸರ್ಫರಾಝ್ ಖಾನ್ ಹಾಗೂ ತಮ್ಮ ಮುಶೀರ್ ಖಾನ್ ಸ್ಥಾನ ಪಡೆದಿದ್ದಾರೆ. ಈ ಹಿಂದೆ ರಣಜಿ ಟೂರ್ನಿಯಲ್ಲಿ ಜೊತೆಯಾಗಿ ಆಡಿದ್ದ ಸಹೋದರು, ಇದೀಗ ದುಲೀಪ್ ಟ್ರೋಫಿಯಲ್ಲೂ ಜೊತೆಯಾಗಿ ಕಣಕ್ಕಿಳಿಯುತ್ತಿರುವುದು ವಿಶೆಷ.
ಇನ್ನು ಈ ಪಂದ್ಯದ ಮೂಲಕ ರಿಷಭ್ ಪಂತ್ ಟೆಸ್ಟ್ ಮಾದರಿ ಕ್ರಿಕೆಟ್ಗೆ ಮರಳಿದ್ದಾರೆ. ಅಂದರೆ 2022ರಲ್ಲಿ ನಡೆದ ಕಾರು ಅಪಘಾತದ ಬಳಿಕ ಪಂತ್ ಯಾವುದೇ ಟೆಸ್ಟ್ ಪಂದ್ಯವಾಡಿರಲಿಲ್ಲ. ಇದೀಗ ಭಾರತ ಬಿ ತಂಡದಲ್ಲಿ ವಿಕೆಟ್ ಕೀಪರ್ ಆಗಿ ಕಣಕ್ಕಿಳಿಯುತ್ತಿದ್ದಾರೆ. ಈ ಮೂಲಕ ಭಾರತ ಟೆಸ್ಟ್ ತಂಡದಲ್ಲೂ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದಾರೆ.
ಭಾರತ ಎ (ಪ್ಲೇಯಿಂಗ್ XI): ಶುಭ್ಮನ್ ಗಿಲ್ (ನಾಯಕ), ಮಯಾಂಕ್ ಅಗರ್ವಾಲ್, ಕೆಎಲ್ ರಾಹುಲ್, ರಿಯಾನ್ ಪರಾಗ್, ಧ್ರುವ್ ಜುರೇಲ್ (ವಿಕೆಟ್ ಕೀಪರ್), ಶಿವಂ ದುಬೆ, ತನುಷ್ ಕೋಟ್ಯಾನ್, ಕುಲ್ದೀಪ್ ಯಾದವ್, ಆಕಾಶ್ ದೀಪ್, ಅವೇಶ್ ಖಾನ್, ಖಲೀಲ್ ಅಹ್ಮದ್
ಭಾರತ ಬಿ (ಪ್ಲೇಯಿಂಗ್ XI): ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಮುಶೀರ್ ಖಾನ್, ನಿತೀಶ್ ರೆಡ್ಡಿ, ವಾಷಿಂಗ್ಟನ್ ಸುಂದರ್, ಸಾಯಿ ಕಿಶೋರ್, ಮುಖೇಶ್ ಕುಮಾರ್, ನವದೀಪ್ ಸೈನಿ, ಯಶ್ ದಯಾಳ್.
ಆಂಧ್ರಪ್ರದೇಶದ ಅನಂತಪುರದ ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಮತ್ತೊಂದು ಪಂದ್ಯದಲ್ಲಿ ಇಂಡಿಯಾ ಸಿ ಮತ್ತು ಇಂಡಿಯಾ ಡಿ ತಂಡಗಳು ಮುಖಾಮುಖಿಯಾಗಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ರುತುರಾಜ್ ಗಾಯಕ್ವಾಡ್ ನಾಯಕತ್ವದ ಇಂಡಿಯಾ ಸಿ ತಂಡವು ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಶ್ರೇಯಸ್ ಅಯ್ಯರ್ ಮುಂದಾಳತ್ವದ ಇಂಡಿಯಾ ಡಿ ತಂಡವು ಮೊದಲು ಬ್ಯಾಟಿಂಗ್ ಮಾಡಲಿದೆ.
ಭಾರತ ಡಿ (ಪ್ಲೇಯಿಂಗ್ XI): ದೇವದತ್ ಪಡಿಕ್ಕಲ್, ಯಶ್ ದುಬೆ, ರಿಕಿ ಭುಯಿ, ಶ್ರೇಯಸ್ ಅಯ್ಯರ್ (ನಾಯಕ), ಶ್ರೀಕರ್ ಭರತ್, ಅಥರ್ವ ಟೈಡೆ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಸರನ್ಶ್ ಜೈನ್, ಅರ್ಷದೀಪ್ ಸಿಂಗ್, ಹರ್ಷಿತ್ ರಾಣಾ, ಆದಿತ್ಯ ಠಾಕರೆ.
ಇದನ್ನೂ ಓದಿ: ಪವರ್ಪ್ಲೇನಲ್ಲೇ ಶತಕ… ಆಸ್ಟ್ರೇಲಿಯನ್ನರ ಅಬ್ಬರಕ್ಕೆ ಹೊಸ ವಿಶ್ವ ದಾಖಲೆ ನಿರ್ಮಾಣ
ಭಾರತ ಸಿ (ಪ್ಲೇಯಿಂಗ್ XI): ರುತುರಾಜ್ ಗಾಯಕ್ವಾಡ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್ (ವಿಕೆಟ್ ಕೀಪರ್), ಅಭಿಷೇಕ್ ಪೊರೆಲ್, ಬಾಬಾ ಇಂದ್ರಜಿತ್, ಆರ್ಯನ್ ಜುಯಲ್, ಹೃತಿಕ್ ಶೋಕೀನ್, ವಿಜಯ್‌ಕುಮಾರ್ ವೈಶಾಕ್, ಮಾನವ್ ಸುತಾರ್, ಅನ್ಶುಲ್ ಕಾಂಬೋಜ್, ಹಿಮಾಂಶು ಚೌಹಾಣ್.
Published On - 9:47 am, Thu, 5 September 24