Duleep Trophy 2024: ದುಲೀಪ್ ಟ್ರೋಫಿ ಯಾವಾಗ ಆರಂಭ? ಯಾವ ಚಾನೆಲ್​ನಲ್ಲಿ ನೇರಪ್ರಸಾರ?

Duleep Trophy 2024: ಈ ಬಾರಿ 61ನೇ ಸೀಸನ್ ದುಲೀಪ್ ಟ್ರೋಫಿ ನಡೆಯುತ್ತಿದ್ದು, ಇದರಲ್ಲಿ 4 ತಂಡಗಳು ಮಾತ್ರ ಭಾಗವಹಿಸಲಿವೆ. ಈ ಮೊದಲು ಟೂರ್ನಿಯಲ್ಲಿ 6 ತಂಡಗಳು ಭಾಗವಹಿಸುತ್ತಿದ್ದವು. ಆದರೆ ಈ ಬಾರಿ 4 ತಂಡಗಳು ಮಾತ್ರ ಭಾಗವಹಿಸುತ್ತಿದ್ದು, ಆ ನಾಲ್ಕು ತಂಡಗಳನ್ನು ಭಾರತ ಎ, ಇಂಡಿಯಾ ಬಿ, ಇಂಡಿಯಾ ಸಿ ಮತ್ತು ಇಂಡಿಯಾ ಡಿ ತಂಡಗಳಾಗಿ ರಾಷ್ಟ್ರೀಯ ಆಯ್ಕೆ ಸಮಿತಿ ಆಯ್ಕೆ ಮಾಡಿದೆ.

Duleep Trophy 2024: ದುಲೀಪ್ ಟ್ರೋಫಿ ಯಾವಾಗ ಆರಂಭ? ಯಾವ ಚಾನೆಲ್​ನಲ್ಲಿ ನೇರಪ್ರಸಾರ?
ದುಲೀಪ್ ಟ್ರೋಫಿ
Follow us
ಪೃಥ್ವಿಶಂಕರ
|

Updated on:Sep 04, 2024 | 6:34 PM

ಸೆಪ್ಟೆಂಬರ್ 5 ರಿಂದ ಅಂದರೆ ನಾಳೆಯಿಂದ ಆರಂಭವಾಗಲಿರುವ ದುಲೀಪ್ ಟ್ರೋಫಿಯೊಂದಿಗೆ ಭಾರತದ 2024-25ರ ದೇಶೀಯ ಕ್ರಿಕೆಟ್ ಸೀಸನ್ ಕೂಡ ಆರಂಭವಾಗಲಿದೆ. ಈ ಬಾರಿಯ ದುಲೀಪ್ ಟ್ರೋಫಿ ಟೂರ್ನಿಗೆ ಸಾಕಷ್ಟು ಮನ್ನಣೆ ನೀಡಲಾಗುತ್ತಿದೆ. ಏಕಂದರೆ ಈ ಟೂರ್ನಿಯಲ್ಲಿ ಮಿಂಚುವ ಆಟಗಾರರಿಗೆ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುವುದು ಖಚಿತವಾಗಲಿದೆ. ಹೀಗಾಗಿಯೇ ಈ ಪಂದ್ಯಾವಳಿಯಲ್ಲಿ ಅನೇಕ ಸ್ಟಾರ್ ಕ್ರಿಕೆಟಿಗರು ಆಡುತ್ತಿದ್ದಾರೆ. ಇನ್ನು ನಾಳೆಯಿಂದ ಆರಂಭವಾಗಲಿರುವ ಈ ಟೂರ್ನಿಯ ಎಲ್ಲಾ ಪಂದ್ಯಗಳು ಎರಡು ನಗರಗಳಲ್ಲಿ ನಡೆಯಲಿದ್ದು, ಬೆಂಗಳೂರು ಮತ್ತು ಅನಂತಪುರ ಆತಿಥ್ಯವಹಿಸಲಿವೆ.

ಟೂರ್ನಿಯಲ್ಲಿ 4 ತಂಡಗಳು

ಈ ಬಾರಿ 61ನೇ ಸೀಸನ್ ದುಲೀಪ್ ಟ್ರೋಫಿ ನಡೆಯುತ್ತಿದ್ದು, ಇದರಲ್ಲಿ 4 ತಂಡಗಳು ಮಾತ್ರ ಭಾಗವಹಿಸಲಿವೆ. ಈ ಮೊದಲು ಟೂರ್ನಿಯಲ್ಲಿ 6 ತಂಡಗಳು ಭಾಗವಹಿಸುತ್ತಿದ್ದವು. ಆದರೆ ಈ ಬಾರಿ 4 ತಂಡಗಳು ಮಾತ್ರ ಭಾಗವಹಿಸುತ್ತಿದ್ದು, ಆ ನಾಲ್ಕು ತಂಡಗಳನ್ನು ಭಾರತ ಎ, ಇಂಡಿಯಾ ಬಿ, ಇಂಡಿಯಾ ಸಿ ಮತ್ತು ಇಂಡಿಯಾ ಡಿ ತಂಡಗಳಾಗಿ ರಾಷ್ಟ್ರೀಯ ಆಯ್ಕೆ ಸಮಿತಿ ಆಯ್ಕೆ ಮಾಡಿದೆ. ಬಾಂಗ್ಲಾದೇಶ ಸರಣಿಗೆ ಈ ಎಲ್ಲ ತಂಡಗಳಿಂದ ಆಟಗಾರರನ್ನು ಆಯ್ಕೆ ಮಾಡಲಾಗುತ್ತದೆ. ದುಲೀಪ್ ಟ್ರೋಫಿಯ ಮೊದಲ ಎರಡು ಪಂದ್ಯಗಳು ಬಹಳ ಮಹತ್ವದ್ದಾಗಲಿವೆ. ಏಕೆಂದರೆ ಟೀಂ ಇಂಡಿಯಾದ ಆಯ್ಕೆಯು ಈ ಎರಡು ಪಂದ್ಯಗಳನ್ನು ಆಧರಿಸಿರುತ್ತದೆ.

ಪಂದ್ಯಾವಳಿಯ ನೇರ ಪ್ರಸಾರ ವಿವರ ಹೀಗಿದೆ

ದುಲೀಪ್ ಟ್ರೋಫಿ ಯಾವಾಗ ಆರಂಭ?

61ನೇ ಆವೃತ್ತಿಯ ದುಲೀಪ್ ಟ್ರೋಫಿ ಇದೇ ಸೆಪ್ಟೆಂಬರ್ 4 ರಿಂದ ಆರಂಭವಾಗಲಿದೆ.

ದುಲೀಪ್ ಟ್ರೋಫಿಯ ಎಲ್ಲಾ ಪಂದ್ಯಗಳು ಎಷ್ಟು ಗಂಟೆಗೆ ಆರಂಭವಾಗಲಿವೆ?

ದುಲೀಪ್ ಟ್ರೋಫಿಯ ಎಲ್ಲಾ ಪಂದ್ಯಗಳು ಬೆಳಿಗ್ಗೆ 9 ಗಂಟೆಗೆ ಪ್ರಾರಂಭವಾಗಲಿವೆ.

ದುಲೀಪ್ ಟ್ರೋಫಿಯ ಮೊದಲ ಪಂದ್ಯ ಯಾವೆರಡು ತಂಡಗಳ ನಡುವೆ ನಡೆಯಲ್ಲಿದೆ?

ದುಲೀಪ್ ಟ್ರೋಫಿಯ ಮೊದಲ ಪಂದ್ಯ ಭಾರತ ಎ ಮತ್ತು ಭಾರತ ಬಿ ನಡುವೆ ಸೆಪ್ಟೆಂಬರ್ 5 ರಿಂದ 8 ರವರೆಗೆ ನಡೆಯಲಿದೆ.

ಯಾವ ಚಾನೆಲ್​ನಲ್ಲಿ ದುಲೀಪ್ ಟ್ರೋಫಿಯ ನೇರ ಪ್ರಸಾರ ಇರಲಿದೆ?

ಸ್ಪೋರ್ಟ್ಸ್ 18 ನಲ್ಲಿ ಈ ಬಾರಿಯ ದುಲೀಪ್ ಟ್ರೋಫಿಯ ನೇರ ಪ್ರಸಾರ ಇರಲಿದೆ.

ದುಲೀಪ್ ಟ್ರೋಫಿಯ ಲೈವ್ ಸ್ಟ್ರೀಮಿಂಗ್ ಯಾವ ಅಪ್ಲಿಕೇಶನ್‌ನಲ್ಲಿ ಇರಲಿದೆ?

ಈ ಬಾರಿ ದುಲೀಪ್ ಟ್ರೋಫಿಯ ಲೈವ್ ಸ್ಟ್ರೀಮಿಂಗ್ ಜಿಯೋ ಸಿನಿಮಾ ಅಪ್ಲಿಕೇಶನ್‌ನಲ್ಲಿ ಇರಲಿದೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:31 pm, Wed, 4 September 24

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ