Duleep Trophy 2024: ಭಾರತ ಎ ತಂಡಕ್ಕೆ ಮಯಾಂಕ್ ಅಗರ್ವಾಲ್​ ನಾಯಕ

|

Updated on: Sep 10, 2024 | 10:37 AM

Duleep Trophy 2024: ದುಲೀಪ್ ಟ್ರೋಫಿಯಲ್ಲಿ ಭಾರತ ಎ ತಂಡದ ಪರ ಕಣಕ್ಕಿಳಿದಿದ್ದ ಮೂವರು ಆಟಗಾರರು ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ. ಹೀಗಾಗಿ ಇಂಡಿಯಾ ಡಿ ವಿರುದ್ಧದ ಪಂದ್ಯಕ್ಕೆ ಕೆಎಲ್ ರಾಹುಲ್, ಶುಭ್​ಮನ್ ಗಿಲ್, ಧ್ರುವ್ ಜುರೇಲ್ ಅಲಭ್ಯರಾಗಿದ್ದಾರೆ.

Duleep Trophy 2024: ಭಾರತ ಎ ತಂಡಕ್ಕೆ ಮಯಾಂಕ್ ಅಗರ್ವಾಲ್​ ನಾಯಕ
Mayank Agarwal
Follow us on

ಪ್ರಸ್ತುತ ನಡೆಯುತ್ತಿರುವ ದುಲೀಪ್ ಟ್ರೋಫಿಯ 3ನೇ ಪಂದ್ಯದಲ್ಲಿ ಭಾರತ ಎ ತಂಡವನ್ನು ಮಯಾಂಕ್ ಅಗರ್ವಾಲ್ ಮುನ್ನಡೆಸಲಿದ್ದಾರೆ. ತಂಡದ ನಾಯಕರಾಗಿದ್ದ ಶುಭ್​ಮನ್ ಗಿಲ್ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ಸರಣಿಗೆ ಆಯ್ಕೆಯಾಗಿರುವ ಹಿನ್ನಲೆ ದುಲೀಪ್ ಟ್ರೋಫಿಯ ಉಳಿದ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಹೀಗಾಗಿ ತಂಡದ ಸಾರಥ್ಯವನ್ನು ಮಯಾಂಕ್ ಅಗರ್ವಾಲ್​ಗೆ ವಹಿಸಲಾಗಿದೆ.

ಮೊದಲ ಪಂದ್ಯದಲ್ಲಿ ಭಾರತ ಎ ತಂಡದ ವಿರುದ್ಧ ಭಾರತ ಬಿ ತಂಡವು ಭರ್ಜರಿ ಜಯ ಸಾಧಿಸಿತ್ತು. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಭಾರತ ಬಿ ತಂಡವು ಯುವ ದಾಂಡಿಗ ಮುಶೀರ್ ಖಾನ್ (181) ಅವರ ಭರ್ಜರಿ ಶತಕದ ನೆರವಿನಿಂದ 321 ರನ್​ ಕಲೆಹಾಕಿತ್ತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಆಡಿದ ಭಾರತ ಎ ತಂಡವು 231 ರನ್​ಗಳಿಸಲಷ್ಟೇ ಶಕ್ತರಾದರು. ಇನ್ನು ದ್ವಿತೀಯ ಇನಿಂಗ್ಸ್​ನಲ್ಲಿ ಭಾರತ ಬಿ ತಂಡವು 184 ರನ್​ಗಳಿಗೆ ಆಲೌಟ್ ಆಯಿತು. ಮೊದಲ ಇನಿಂಗ್ಸ್​ ಹಿನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್​ನಲ್ಲಿ 288 ರನ್​ಗಳ ಗುರಿ ಪಡೆದ ಭಾರತ ತಂಡವು 198 ರನ್​ಗಳಿಗೆ ಮುಗ್ಗರಿಸಿತು. ಈ ಮೂಲಕ ಅಭಿಮನ್ಯು ಈಶ್ವರನ್ ಮುಂದಾಳತ್ವದ ಭಾರತ ಬಿ ತಂಡವು 76 ರನ್​ಗಳಿಂದ ಭರ್ಜರಿ ಜಯ ಸಾಧಿಸಿತು.

ಇನ್ನು ಸೆಪ್ಟೆಂಬರ್ 12 ರಿಂದ ಆಂಧ್ರ ಪ್ರದೇಶದ ಅನಂತಪುರದಲ್ಲಿರುವ ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ ಸ್ಟೇಡಿಯಂನಲ್ಲಿ ನಡೆಯಲಿರುವ 3ನೇ ಪಂದ್ಯದಲ್ಲಿ ಭಾರತ ಎ ತಂಡವು ಭಾರತ ಡಿ ತಂಡವನ್ನು ಎದುರಿಸಲಿದೆ. ಈ ಪಂದ್ಯದಲ್ಲಿ ಮಯಾಂಕ್ ಅಗರ್ವಾಲ್ ಇಂಡಿಯಾ ಎ ತಂಡವನ್ನು ಮುನ್ನಡೆಸಲಿದ್ದಾರೆ.

ಮೂವರು ಆಟಗಾರರು ಅಲಭ್ಯ:

ದುಲೀಪ್ ಟ್ರೋಫಿಯಲ್ಲಿ ಭಾರತ ಎ ತಂಡದ ಪರ ಕಣಕ್ಕಿಳಿದಿದ್ದ ಮೂವರು ಆಟಗಾರರು ಬಾಂಗ್ಲಾದೇಶ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಆಯ್ಕೆಯಾಗಿದ್ದಾರೆ. ಹೀಗಾಗಿ ಇಂಡಿಯಾ ಡಿ ವಿರುದ್ಧದ ಪಂದ್ಯಕ್ಕೆ ಕೆಎಲ್ ರಾಹುಲ್, ಶುಭ್​ಮನ್ ಗಿಲ್, ಧ್ರುವ್ ಜುರೇಲ್ ಅಲಭ್ಯರಾಗಿದ್ದಾರೆ.

ಇದನ್ನೂ ಓದಿ: CSK ಪರ ಆಡಬೇಕು… RCB ಆಟಗಾರನ ಹೇಳಿಕೆ..!

ಭಾರತ A ತಂಡ: ಮಯಾಂಕ್ ಅಗರ್ವಾಲ್ (ನಾಯಕ), ರಿಯಾನ್ ಪರಾಗ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲ್ದೀಪ್ ಯಾದವ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ವಿದ್ವತ್ ಕಾವೇರಪ್ಪ, ಕುಮಾರ್ ಕುಶಾಗ್ರ, ಶಾಶ್ವತ್ ರಾವತ್.

ಅಲಭ್ಯ: ಶುಭ್​ಮನ್ ಗಿಲ್, ಧ್ರುವ್ ಜುರೇಲ್ (ವಿಕೆಟ್ ಕೀಪರ್), ಕೆಎಲ್ ರಾಹುಲ್.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಬಾರಿಯ ದುಲೀಪ್ ಟ್ರೋಫಿಯು ಸ್ಪೋರ್ಟ್ಸ್​ 18 ಚಾನೆಲ್​ನಲ್ಲಿ ನೇರ ಪ್ರಸಾರವಾಗಲಿದೆ. ಹಾಗೆಯೇ ಈ ಪಂದ್ಯವನ್ನು ಜಿಯೋ ಸಿನಿಮಾ ಆ್ಯಪ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

 

 

Published On - 10:36 am, Tue, 10 September 24