Sanju Samson: 12 ಬೌಂಡರಿ, 3 ಸಿಕ್ಸರ್‌; ಭರ್ಜರಿ ಶತಕ ಸಿಡಿಸಿದ ಸಂಜು ಸ್ಯಾಮ್ಸನ್‌

Duleep Trophy 2024: ನಂತಪುರದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ ಕೇವಲ 94 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು. ಇದು ದುಲೀಪ್ ಟ್ರೋಫಿಯ ಪ್ರಸಕ್ತ ಆವೃತ್ತಿಯ ವೇಗದ ಶತಕವಾಗಿದ್ದು, 100 ಅಥವಾ ಅದಕ್ಕಿಂತ ಹೆಚ್ಚಿನ ಸ್ಟ್ರೈಕ್​ ರೇಟ್‌ನಲ್ಲಿ ಗಳಿಸಿದ ಮೊದಲ ಶತಕವಾಗಿದೆ. ಈ ಸ್ಫೋಟಕ ಇನ್ನಿಂಗ್ಸ್‌ನೊಂದಿಗೆ, ಸ್ಯಾಮ್ಸನ್ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದ 11 ನೇ ಶತಕವನ್ನು ಪೂರ್ಣಗೊಳಿಸಿದರು.

Sanju Samson: 12 ಬೌಂಡರಿ, 3 ಸಿಕ್ಸರ್‌; ಭರ್ಜರಿ ಶತಕ ಸಿಡಿಸಿದ ಸಂಜು ಸ್ಯಾಮ್ಸನ್‌
ಸಂಜು ಸ್ಯಾಮ್ಸನ್
Follow us
ಪೃಥ್ವಿಶಂಕರ
|

Updated on: Sep 20, 2024 | 7:58 PM

ದುಲೀಪ್ ಟ್ರೋಫಿಯಲ್ಲಿ ಮೂರನೇ ಸುತ್ತಿನ ಪಂದ್ಯಗಳು ನಡೆಯುತ್ತಿದ್ದು, ಭಾರತ ಬಿ ಹಾಗೂ ಭಾರತ ಡಿ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಭಾರತ ಡಿ ತಂಡದ ಪರ ಆಡುತ್ತಿರುವ ಟೀಂ ಇಂಡಿಯಾದ ಅನುಭವಿ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಬಿರುಸಿನ ಶತಕ ಸಿಡಿಸಿದ್ದಾರೆ. ಅನಂತಪುರದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಸಂಜು ಸ್ಯಾಮ್ಸನ್‌ ಕೇವಲ 94 ಎಸೆತಗಳಲ್ಲಿ ತಮ್ಮ ಶತಕ ಪೂರೈಸಿದರು. ಇದು ದುಲೀಪ್ ಟ್ರೋಫಿಯ ಪ್ರಸಕ್ತ ಆವೃತ್ತಿಯ ವೇಗದ ಶತಕವಾಗಿದ್ದು, 100 ಅಥವಾ ಅದಕ್ಕಿಂತ ಹೆಚ್ಚಿನ ಸ್ಟ್ರೈಕ್​ ರೇಟ್‌ನಲ್ಲಿ ಗಳಿಸಿದ ಮೊದಲ ಶತಕವಾಗಿದೆ. ಈ ಸ್ಫೋಟಕ ಇನ್ನಿಂಗ್ಸ್‌ನೊಂದಿಗೆ, ಸ್ಯಾಮ್ಸನ್ ತಮ್ಮ ಪ್ರಥಮ ದರ್ಜೆ ವೃತ್ತಿಜೀವನದ 11 ನೇ ಶತಕವನ್ನು ಪೂರ್ಣಗೊಳಿಸಿದರು.

5 ವರ್ಷಗಳ ನಂತರ ಶತಕ

ಸಂಜು ಸ್ಯಾಮ್ಸನ್ ಸುಮಾರು 5 ವರ್ಷಗಳ ನಂತರ ಪ್ರಥಮ ದರ್ಜೆಯಲ್ಲಿ ಶತಕ ಬಾರಿಸಿದ್ದಾರೆ. ಇದಕ್ಕೂ ಮುನ್ನ ಅವರು 2019ರಲ್ಲಿ ಬಂಗಾಳ ವಿರುದ್ಧ 116 ರನ್‌ಗಳ ಇನ್ನಿಂಗ್ಸ್‌ ಆಡಿದ್ದರು. ಅದರ ನಂತರ, ಈ ಪಂದ್ಯಕ್ಕೂ ಮೊದಲು ಸ್ಯಾಮ್ಸನ್ ಕೇವಲ 9 ರೆಡ್ ಬಾಲ್ ಪಂದ್ಯಗಳನ್ನು ಮಾತ್ರ ಆಡಿದ್ದರು. ಈ ಟೂರ್ನಿಯ ಮೊದಲ ಪಂದ್ಯದಲ್ಲಿ ಬೆಂಚ್ ಕಾಯ್ದಿದ್ದ ಸಂಜು, ಎರಡನೇ ಪಂದ್ಯದಲ್ಲಿ ಆಡುವ ಅವಕಾಶ ಪಡೆದಿದ್ದರು. ಆದರೆ ಸ್ಯಾಮ್ಸನ್​ಗೆ ತನ್ನ ಮೊದಲ ಪಂದ್ಯದಲ್ಲಿ ವಿಶೇಷ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆದರೆ ಎರಡನೇ ಪಂದ್ಯದಲ್ಲಿ ಬಿರುಸಿನ ಬ್ಯಾಟಿಂಗ್ ಮಾಡಿದ ಸಂಜು ಭಾರತ ಬಿ ತಂಡದ ಬೌಲರ್‌ಗಳ ಬೆವರಿಳಿಸಿದರು.

ಪಂದ್ಯ ಹೀಗಿದೆ

ಇನ್ನು ಈ ಪಂದ್ಯದ ಬಗ್ಗೆ ಹೇಳುವುದಾದರೆ.. ಭಾರತ ಬಿ ತಂಡದ ನಾಯಕ ಅಭಿಮನ್ಯು ಈಶ್ವರನ್ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡರು. ಅದರಂತೆ ಮೊದಲು ಬ್ಯಾಟ್ ಮಾಡಿದ ಭಾರತ ಡಿ ತಂಡಕ್ಕೆ ಆರಂಭಿಕರಾದ ದೇವದತ್ ಪಡಿಕ್ಕಲ್ ಮತ್ತು ಶ್ರೀಕರ್ ಭರತ್ ಉತ್ತಮ ಆರಂಭ ನೀಡಿದ್ದರು. ಇವರಿಬ್ಬರು ಮೊದಲ ವಿಕೆಟ್‌ಗೆ 105 ರನ್‌ಗಳ ಜೊತೆಯಾಟ ನೀಡಿದರು. ಆದರೆ ಆ ನಂತರ ತಂಡ 50 ರನ್ ಗಳಿಸುವಷ್ಟರಲ್ಲಿ 4 ವಿಕೆಟ್ ಕಳೆದುಕೊಂಡಿತು. ನಾಯಕ ಶ್ರೇಯಸ್ ಅಯ್ಯರ್ ಖಾತೆ ತೆರೆಯದೆ ಔಟಾಗಿದ್ದು, ತಂಡ ಸಂಕಷ್ಟಕ್ಕೆ ಸಿಲುಕುವಂತೆ ಮಾಡಿತು.

ಮಿಂಚಿದ ಅಗ್ರಕ್ರಮಾಂಕ

ಇದಾದ ಬಳಿಕ 6ನೇ ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬಂದ ಸ್ಯಾಮ್ಸನ್ ತಂಡದ ಇನ್ನಿಂಗ್ಸ್ ನಿಭಾಯಿಸಿದರು. ಆದಾಗ್ಯೂ ತಂಡದ ವಿಕೆಟ್​ಗಳು ನಿಗದಿತ ಅಂತರದಲ್ಲಿ ಉರುಳುತ್ತಿದ್ದವು. ಹೀಗಾಗಿ 216 ರನ್ ಗಳಿಸುವಷ್ಟರಲ್ಲಿ ಅರ್ಧ ತಂಡ ಪೆವಿಲಿಯನ್‌ ಸೇರಿಕೊಂಡಿತ್ತು. ನಂತರ ಹೊಡಿಬಡಿ ಆಟಕ್ಕೆ ಮುಂದಾದ ಸ್ಯಾಮ್ಸನ್ ತಮ್ಮ 106 ರನ್‌ಗಳ ಇನ್ನಿಂಗ್ಸ್‌ನಲ್ಲಿ 12 ಬೌಂಡರಿ ಮತ್ತು 3 ಸಿಕ್ಸರ್‌ಗಳನ್ನು ಹೊಡೆದರು. ಅವರ ಇನ್ನಿಂಗ್ಸ್‌ನಿಂದಾಗಿ ಭಾರತ ಡಿ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ 349 ರನ್ ಗಳಿಸಲು ಸಾಧ್ಯವಾಯಿತು. ಸ್ಯಾಮ್ಸನ್ ಹೊರತಾಗಿ ಈ ಪಂದ್ಯದಲ್ಲಿ ಕನ್ನಡಿಗ ದೇವದತ್ ಪಡಿಕಲ್ 50 ರನ್, ಶ್ರೀಕರ್ ಭರತ್ 52 ರನ್ ಹಾಗೆಯೇ ರಿಕಿ ಭುಯಿ 56 ರನ್​ಗಳ ಕಾಣಿಕೆ ನೀಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
ತಾರಾ ಎದುರೇ ಮೋಕ್ಷಿತಾಗೆ ಕೈ ಮುಗಿದು ಕ್ಷಮೆ ಕೇಳಿದ ಮಂಜು
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Devotional: ಸಾಲ ಬಾಧೆ, ಮನೆಯಲ್ಲಿನ ಸಮಸ್ಯೆಗಳಿಗೆ ಇಲ್ಲಿದೆ ಪರಿಹಾರ
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
Daily Horoscope: ಈ ರಾಶಿಯವರು ಇಂದು ಮಕ್ಕಳಿಂದ ಶುಭ ಸುದ್ದಿ ಕೇಳುವರು
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಜಾತ್ರೆಗೆ ನುಗ್ಗಿದ ಕಾರು: ಯುವತಿ ಸಾವು, 8 ಜನರಿಗೆ ಗಂಭೀರ ಗಾಯ..!
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸರ್ಕಾರದ ಅಸ್ಥಿಪಂಜರ ಮಾತ್ರ ಉಳಿದಿದೆ, ಸುಟ್ಟುಹೋಗೋದು ನಿಶ್ಚಿತ: ಸೋಮಣ್ಣ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಗೆ ನುಗ್ಗಿದ ಚಿರತೆ, ವಿಡಿಯೋ ನೋಡಿ
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ದರ್ಶನ್, ಶಿವಣ್ಣ ಬಳಿಕ ಧ್ರುವ ಸರ್ಜಾಗೆ ಮಚ್ಚು ನೀಡಿದ ಜೋಗಿ ಪ್ರೇಮ್
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ತ್ರಿವೇಣಿ ಸಂಗಮ ರಸ್ತೆಯಲ್ಲಿ ನಂದಿನಿ ಹಾಲಿಂದ ತಯಾರಾಗುವ ಬಿಸಿಬಿಸಿ ಚಹಾ ಲಭ್ಯ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಅಹಮದಾಬಾದ್‌ನಲ್ಲಿ ಮಕರ ಸಂಕ್ರಾಂತಿ ಹಬ್ಬಕ್ಕೆ ಗಾಳಿಪಟ ಹಾರಿಸಿದ ಅಮಿತ್ ಶಾ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ
ಹಿಂದಿನ ಸರ್ಕಾರ ಸಾಲಗಳನ್ನು ನಮ್ಮ ಸರ್ಕಾರ ತೀರಿಸುತ್ತಿದೆ: ಪ್ರಿಯಾಂಕ್ ಖರ್ಗೆ