Duleep Trophy 2024: ಇಂದಿನಿಂದ ದುಲೀಪ್ ಟ್ರೋಫಿ ಶುರು

Duleep trophy 2024: ಭಾರತ ಟೆಸ್ಟ್ ತಂಡದಲ್ಲಿರುವ ಆಟಗಾರರು ದುಲೀಪ್ ಟ್ರೋಫಿ ಆಡುವುದನ್ನು ಕಡ್ಡಾಯಗೊಳಿಸಲಾಗಿದೆ. ಇದಾಗ್ಯೂ ಹಿರಿಯ ಆಟಗಾರರಾದ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಅಶ್ವಿನ್ ಹಾಗೂ ಜಸ್​ಪ್ರೀತ್ ಬುಮ್ರಾಗೆ ವಿನಾಯಿತಿ ನೀಡಲಾಗಿದೆ. ಹೀಗಾಗಿ ಈ ಆಟಗಾರರು ಇಂದಿನಿಂದ ಶುರುವಾಗಲಿರುವ ದುಲೀಪ್ ಟ್ರೋಫಿಯಲ್ಲಿ ಕಾಣಿಸಿಕೊಳ್ಳುವುದಿಲ್ಲ.

Duleep Trophy 2024: ಇಂದಿನಿಂದ ದುಲೀಪ್ ಟ್ರೋಫಿ ಶುರು
Duleep trophy 2024
Follow us
|

Updated on: Sep 05, 2024 | 8:07 AM

ದೇಶೀಯ ಅಂಗಳದ ಟೆಸ್ಟ್ ಟೂರ್ನಿ ದುಲೀಪ್ ಟ್ರೋಫಿಗೆ ಇಂದಿನಿಂದ ಚಾಲನೆ ದೊರೆಯಲಿದೆ. ನಾಲ್ಕು ತಂಡಗಳ ನಡುವಣ ಈ ಕದನದಲ್ಲಿ ಈ ಬಾರಿ ಟೀಮ್ ಇಂಡಿಯಾ ಆಟಗಾರರು ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಅಂದರೆ ಭಾರತ ಟೆಸ್ಟ್ ತಂಡದ ಬಹುತೇಕ ಆಟಗಾರರು ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಕಣಕ್ಕಿಳಿಯುತ್ತಿದ್ದಾರೆ.

ಇಂದು ಏಕಕಾಲಕ್ಕೆ ಎರಡು ಪಂದ್ಯಗಳು ಶುರುವಾಗಲಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಮೊದಲ ಪಂದ್ಯದಲ್ಲಿ ಶುಭ್​ಮನ್ ಗಿಲ್ ನಾಯಕತ್ವದ ಟೀಮ್ ಎ ಹಾಗೂ ಅಭಿಮನ್ಯು ಈಶ್ವರನ್ ಮುಂದಾಳತ್ವದ ಟೀಮ್ ಬಿ ತಂಡಗಳು ಮುಖಾಮುಖಿಯಾಗಲಿದೆ.

ಹಾಗೆಯೇ ಆಂಧ್ರ ಪ್ರದೇಶದ ಅನಂತಪುರದಲ್ಲಿರುವ ರೂರಲ್ ಡೆವಲಪ್‌ಮೆಂಟ್ ಟ್ರಸ್ಟ್ ಸ್ಟೇಡಿಯಂನಲ್ಲಿ ನಡೆಯಲಿರುವ ಮತ್ತೊಂದು ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ನಾಯಕತ್ವದ ಟೀಮ್ ಸಿ ಹಾಗೂ ಶ್ರೇಯಸ್ ಅಯ್ಯರ್ ಸಾರಥ್ಯದ ಟೀಮ್ ಡಿ ತಂಡಗಳು ಮುಖಾಮುಖಿಯಾಗಲಿದೆ.

ಮಹತ್ವದ ಟೂರ್ನಿ:

ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಆಟಗಾರರಿಗೆ ಬಾಂಗ್ಲಾದೇಶ್ ವಿರುದ್ಧದ ಟೆಸ್ಟ್ ತಂಡದಲ್ಲಿ ಸ್ಥಾನ ಸಿಗಲಿದೆ. ಅದರಲ್ಲೂ ಭಾರತ ಟೆಸ್ಟ್​ ತಂಡದ ಆಟಗಾರರು ಈ ಟೂರ್ನಿಯಲ್ಲಿ ವಿಫಲರಾದರೆ ಟೀಮ್ ಇಂಡಿಯಾದಿಂದ ಹೊರಬೀಳುವ ಸಾಧ್ಯತೆ ಕೂಡ ಇದೆ. ಹೀಗಾಗಿ ಈ ಬಾರಿಯ ದುಲೀಪ್ ಟ್ರೋಫಿಯು ಹೆಚ್ಚಿನ ಮಹತ್ವ ಪಡೆದುಕೊಂಡಿದೆ.

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?

ಈ ಬಾರಿಯ ದುಲೀಪ್ ಟ್ರೋಫಿಯು ಸ್ಪೋರ್ಟ್ಸ್​ 18 ಚಾನೆಲ್​ನಲ್ಲಿ ನೇರ ಪ್ರಸಾರವಾಗಲಿದೆ. ಹಾಗೆಯೇ ಈ ಪಂದ್ಯವನ್ನು ಜಿಯೋ ಸಿನಿಮಾ ಆ್ಯಪ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಎಷ್ಟು ಗಂಟೆಗೆ ಪಂದ್ಯ ಶುರು?

ಈ ಟೂರ್ನಿಯ ಎಲ್ಲಾ ಪಂದ್ಯಗಳು ಬೆಳಿಗ್ಗೆ 9 ಗಂಟೆಯಿಂದ ಶುರುವಾಗಲಿದೆ. ಹಾಗೆಯೇ ಟೆಸ್ಟ್ ಪಂದ್ಯವಾಗಿರುವುದರಿಂದ ಸಂಜೆಯವರೆಗೆ ನಡೆಯಲಿದೆ.

ಹೇಗಿರಲಿದೆ ಟೂರ್ನಿ?

ಈ ಬಾರಿಯ ದುಲೀಪ್ ಟ್ರೋಫಿ ರೌಂಡ್ ರಾಬಿನ್ ಮಾದರಿಯಲ್ಲಿ ನಡೆಯಲಿದೆ. ಅಂದರೆ ಇಲ್ಲಿ ಪ್ರತಿ ತಂಡಗಳು ಮೂರು ಪಂದ್ಯಗಳನ್ನಾಡಲಿದೆ. ಈ ಪಂದ್ಯಗಳಲ್ಲಿ ಹೆಚ್ಚು ಜಯ/ಡ್ರಾ ದೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನ ಅಲಂಕರಿಸುವ ತಂಡವನ್ನು ಚಾಂಪಿಯನ್​ ಎಂದು ಘೋಷಿಸಲಾಗುತ್ತದೆ. ಅಂದರೆ ಇಲ್ಲಿ ಯಾವುದೇ ಸೆಮಿಫೈನಲ್ ಮತ್ತು ಫೈನಲ್ ಪಂದ್ಯವಿರುವುದಿಲ್ಲ. ಇನ್ನು ದುಲೀಪ್ ಟ್ರೋಫಿಯು ಟೆಸ್ಟ್ ಮಾದರಿಯಲ್ಲಿ ನಡೆಯುತ್ತಿದ್ದರೂ, ಈ ಪಂದ್ಯವು ನಾಲ್ಕು ದಿನದಾಟಗಳಿಗೆ ಸೀಮಿತವಾಗಿರಲಿದೆ.

ನಾಲ್ಕು ತಂಡಗಳು:

ಟೀಮ್ A: ಶುಭಮನ್ ಗಿಲ್ (ನಾಯಕ), ಮಯಾಂಕ್ ಅಗರ್ವಾಲ್, ರಿಯಾನ್ ಪರಾಗ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ಕೆಎಲ್ ರಾಹುಲ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲ್ದೀಪ್ ಯಾದವ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ವಿದ್ವತ್ ಕಾವೇರಪ್ಪ, ಕುಮಾರ್ ಕುಶಾಗ್ರ, ಶಾಶ್ವತ್ ರಾವತ್ .

ಟೀಮ್ B: ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಝ್ ಖಾನ್, ರಿಷಭ್ ಪಂತ್ (ವಿಕೆಟ್ ಕೀಪರ್), ಮುಶೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಯಶ್ ದಯಾಳ್, ಮುಖೇಶ್ ಕುಮಾರ್, ರಾಹುಲ್ ಚಹರ್, ಆರ್ ಸಾಯಿ ಕಿಶೋರ್, ಮೋಹಿತ್ ಅವಸ್ತಿ, ಎನ್ ಜಗದೀಶನ್ (ವಿಕೆಟ್ ಕೀಪರ್)

ಟೀಮ್ C: ರುತುರಾಜ್ ಗಾಯಕ್ವಾಡ್ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಅಭಿಷೇಕ್ ಪೊರೆಲ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಬಿ ಇಂದ್ರಜಿತ್, ಹೃತಿಕ್ ಶೋಕೀನ್, ಮಾನವ್ ಸುತಾರ್, ವೈಶಾಕ್ ವಿಜಯ್‌ಕುಮಾರ್, ಅನ್ಶುಲ್ ಖಂಬೋಜ್, ಹಿಮಾಂಶು ಚೌಹಾಣ್, ಮಯಾಂಕ್ ಮಾರ್ಕಾಂಡೆ , ಸಂದೀಪ್ ವಾರಿಯರ್, ಗೌರವ್ ಯಾದವ್.

ಇದನ್ನೂ ಓದಿ: IPL 2025: ಕುತೂಹಲ ಮೂಡಿಸಿದ ಕೆಎಲ್ ರಾಹುಲ್ ನಡೆ..!

ಟೀಮ್ D: ಶ್ರೇಯಸ್ ಅಯ್ಯರ್ (ನಾಯಕ), ಅಥರ್ವ ಟೈಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ರಿಕಿ ಭುಯಿ, ಸರನ್ಶ್ ಜೈನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಆಕಾಶ್ ಸೇನ್‌ಗುಪ್ತ, ಕೆಎಸ್ ಭರತ್ (ವಿಕೆಟ್ ಕೀಪರ್) , ಸೌರಭ್ ಕುಮಾರ್, ಇಶಾನ್ ಕಿಶನ್ (ಗಾಯಾಳು).

ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
ಚಿತ್ರದುರ್ಗದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
4,4,4,4,4... ಒಂದೇ ಓವರ್​ನಲ್ಲಿ 5 ಬೌಂಡರಿ ಬಾರಿಸಿದ ಬಾಬರ್ ಆಝಂ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ
ನಾಗಮಂಗಲ ಗಲಭೆ: ಬಿಜೆಪಿ ನಾಯಕ ಅಶ್ವತ್ಥನಾರಾಯಣ ಹೇಳಿದ್ದೇನು ನೋಡಿ