AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಲೀಪ್ ಟ್ರೋಫಿ: ಈಸ್ಟ್​​ ಝೋನ್ ಚಾಂಪಿಯನ್ಸ್​

ಚೆನ್ನೈನಲ್ಲಿ ನಡೆದ ದುಲೀಪ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಸಂಪೂರ್ಣ ಪಾರುಪತ್ಯ ಮರೆದ ಈಸ್ಟ್ ಝೋನ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸುವಲ್ಲಿ ಯಶಸ್ವಿಯಾಗಿದೆ. ಸೌತ್ ಝೋನ್ ವಿರುದ್ಧದ ಈ ಪಂದ್ಯವನ್ನು ಡ್ರಾನಲ್ಲಿ ಅಂತ್ಯಗೊಳಿಸಿರುವ ಇಶಾನ್ ಕಿಶನ್ ಪಡೆ 14 ವರ್ಷಗಳ ಬಳಿಕ ಟ್ರೋಫಿ ಎತ್ತಿ ಹಿಡಿದಿದ್ದಾರೆ.

ದುಲೀಪ್ ಟ್ರೋಫಿ: ಈಸ್ಟ್​​ ಝೋನ್ ಚಾಂಪಿಯನ್ಸ್​
ಈಸ್ಟ್ ಝೋನ್Image Credit source: BCCI
ಝಾಹಿರ್ ಯೂಸುಫ್
|

Updated on:Sep 10, 2026 | 2:21 PM

Share

ಚೆನ್ನೈನ ಎಂ.ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆದ ಈಸ್ಟ್ ಝೋನ್ ಹಾಗೂ ಸೌತ್ ಝೋನ್ ತಂಡಗಳ ನಡುವಣ ದುಲೀಪ್ ಟ್ರೋಫಿ ಫೈನಲ್ ಪಂದ್ಯವು ಡ್ರಾದಲ್ಲಿ ಅಂತ್ಯಗೊಂಡಿದೆ. ಈ ಡ್ರಾದ ಹೊರತಾಗಿಯೂ, ಮೊದಲ ಇನ್ನಿಂಗ್ಸ್‌ನಲ್ಲಿ 372 ರನ್‌ಗಳ ಬೃಹತ್ ಮುನ್ನಡೆ ಪಡೆದುಕೊಂಡಿದ್ದ ಈಸ್ಟ್ ಝೋನ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ಈಸ್ಟ್ ಝೋನ್ ತಂಡ ಪರ ನಾಯಕ ಇಶಾನ್ ಕಿಶನ್ ಕೇವಲ 334 ಎಸೆತಗಳಲ್ಲಿ 270 ರನ್‌ಗಳನ್ನು ಚಚ್ಚಿ ದಾಖಲೆ ಬರೆದಿದ್ದರು. ಇವರಿಗೆ ಭರ್ಜರಿ ಸಾಥ್ ನೀಡಿದ ಕುಮಾರ್ ಕುಶಾಗ್ರ (101 ರನ್) ಶತಕ ಸಿಡಿಸಿದ್ದರು. ಇನ್ನು ಶಿಖರ್ ಮೋಹನ್ (85 ರನ್) ಹಾಗೂ ಅಭಿಮನ್ಯು ಈಶ್ವರನ್ (72 ರನ್) ಅರ್ಧಶತಕಗಳ ಕೊಡುಗೆ ನೀಡಿದ್ದರು. ಈ ಮೂಲಕ ಈಸ್ಟ್ ಝೋನ್​ ತಂಡವು ಮೊದಲ ಇನಿಂಗ್ಸ್​ನಲ್ಲಿ ಬರೋಬ್ಬರಿ 708 ರನ್ ಕಲೆಹಾಕಿತು.

ಬೃಹತ್ ಮೊತ್ತವನ್ನು ಬೆನ್ನಟ್ಟಿದ ಸೌತ್ ಝೋನ್ ಪರ ನಾಯಕ ತಿಲಕ್ ವರ್ಮಾ ಏಕಾಂಗಿ ಹೋರಾಟ ನಡೆಸಿದರು. ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದ ಅವರು 211 ಎಸೆತಗಳಲ್ಲಿ 9 ಬೌಂಡರಿಗಳ ನೆರವಿನಿಂದ 99 ರನ್ ಗಳಿಸಿ ಶತಕದ ಸನಿಹದಲ್ಲಿದ್ದರು. ಆದರೆ, ದುರದೃಷ್ಟವಶಾತ್ ಮೊಹಮ್ಮದ್ ಖುರೇಷಿ ಬೌಲಿಂಗ್‌ನಲ್ಲಿ ಅವರಿಗೆ ಕ್ಯಾಚ್ ನೀಡಿ ಕೇವಲ 1 ರನ್‌ನಿಂದ ಶತಕದ ಅವಕಾಶವನ್ನು ಕೈಚೆಲ್ಲಿ ನಿರಾಸೆಯಿಂದ ಪೆವಿಲಿಯನ್ ಸೇರಿದರು.

ಇನ್ನು ಸೌತ್ ಝೋನ್ ತಂಡದ ಪರ ಇತರ ಪ್ರಮುಖ ಬ್ಯಾಟರ್‌ಗಳಾದ ದೇವದತ್ ಪಡಿಕ್ಕಲ್ 62 ರನ್ ಹಾಗೂ ಚಾಮಾ ಮಿಲಿಂದ್ 43 ರನ್ ಗಳಿಸಿ ತಂಡದ ಮೊತ್ತ 300ರ ಗಡಿ ದಾಟಲು ನೆರವಾದರು. ಅಂತಿಮವಾಗಿ ಸೌತ್ ಜೋನ್ 107.3 ಓವರ್‌ಗಳಲ್ಲಿ 336 ರನ್‌ಗಳಿಗೆ ತನ್ನ ಎಲ್ಲಾ ವಿಕೆಟ್ ಕಳೆದುಕೊಂಡಿತು.

372 ರನ್​ಗಳ ಮುನ್ನಡೆ:

372 ರನ್​ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ ಆರಂಭಿಸಿದ ಈಸ್ಟ್ ಝೋನ್ ತಂಡವು 7 ವಿಕೆಟ್ ಕಳೆದುಕೊಂಡು 388 ರನ್​ಗಳಿಸಿ ಡಿಕ್ಲೇರ್ ಘೋಷಿಸಿತು. ಈ ಮೂಲಕ ಸೌತ್ ಝೋನ್ ತಂಡಕ್ಕೆ 761 ರನ್​ಗಳ ಗುರಿ ನೀಡಿತು. ಆದರೆ ಈ ಗುರಿಯನ್ನು ಬೆನ್ನತ್ತುವುದು ಅಸಾಧ್ಯವಾಗಿರುವ ಕಾರಣ ಸೌತ್ ಝೋನ್ ತಂಡವು ಪಂದ್ಯವನ್ನು ಅಂತ್ಯಗೊಳಿಸಲು ನಿರ್ಧರಿಸಿದೆ. ಅದರಂತೆ ಇದೀಗ ಪಂದ್ಯವು ಡ್ರಾನಲ್ಲಿ ಅಂತ್ಯವಾಗಿದ್ದು, ಮೊದಲ ಇನಿಂಗ್ಸ್​ನ ಮುನ್ನಡೆಯೊಂದಿಗೆ ಈಸ್ಟ್ ಝೋನ್ ತಂಡವು ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಈಸ್ಟ್​ ಝೋನ್ (ಪ್ಲೇಯಿಂಗ್ XI): ಅಭಿಮನ್ಯು ಈಶ್ವರನ್, ವೈಭವ್ ಸೂರ್ಯವಂಶಿ, ಕುಮಾರ್ ಕುಶಾಗ್ರಾ, ಸುದೀಪ್ ಕುಮಾರ್ ಘರಾಮಿ, ಇಶಾನ್ ಕಿಶನ್ (ನಾಯಕ, ಶಿಖರ್ ಮೋಹನ್, ಅನುಕೂಲ್ ರಾಯ್, ಎಂಡಿ ಕೌನೈನ್ ಖುರೈಶಿ, ಮೊಹಮ್ಮದ್ ಶಮಿ, ಅಭಿಜಿತ್ ಕೆ ಸರ್ಕಾರ್, ಮುಖೇಶ್ ಕುಮಾರ್.

ಇದನ್ನೂ ಓದಿ: ಸಿಎಸ್​ಕೆ ಕೋಚ್ ಹುದ್ದೆ ಆಫರ್​: 20 ಕೋಟಿ ರೂ.ಗೆ ಬೇಡಿಕೆ!

ಸೌತ್ ಝೋನ್ (ಪ್ಲೇಯಿಂಗ್ XI): ರಿಕಿ ಭುಯಿ, ನಾರಾಯಣ್ ಜಗದೀಸನ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶೇಕ್ ರಶೀದ್, ತಿಲಕ್ ವರ್ಮಾ (ನಾಯಕ), ಸ್ಮರಣ್ ರವಿಚಂದ್ರನ್, ಶ್ರೇಯಸ್ ಗೋಪಾಲ್, ತ್ರಿಪುರಾಣ ವಿಜಯ್, ಮೊಹಮ್ಮದ್ ಸಿರಾಜ್, ಚಾಮ ವಿ ಮಿಲಿಂದ್, ಎಂಡಿ ನಿಧೀಶ್.

Published On - 2:17 pm, Thu, 10 September 26

Follow Us
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
ಸರ್ಕಾರದ 100 ದಿನದ ಕಾರ್ಯಕ್ರಮಕ್ಕೆ ಬಂದ ಸಿದ್ದರಾಮಯ್ಯಗೆ ವಿಶೇಷ ಸ್ವಾಗತ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
KSRTC ಬಸ್‌ನ ಸ್ಟೇರಿಂಗ್ ಕಟ್ ಆಗಿ ಪಲ್ಟಿ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಮುಂಗಾರಿನಲ್ಲೇ ಹೀಟ್ ವೇವ್! ಬೆಂಗಳೂರಿನಲ್ಲಿ ದಿನೇದಿನೆ ಹೆಚ್ಚಾಗುತ್ತಿದೆ ತಾಪ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಕಲಬುರಗಿ ಕೇಂದ್ರ ಕಾರಾಗೃಹದ ಮೇಲೆ ಪೊಲೀಸರ ದಾಳಿ: ಕೈದಿಯಿಂದ ಮೊಬೈಲ್​​ ವಶ
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
ಮಂಡ್ಯದ ವಸತಿಶಾಲೆಯಲ್ಲಿ ಮಕ್ಕಳಿಗೆ ಫುಡ್ ಪಾಯಿಸನ್
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
‘ಜೈಲಿನಲ್ಲಿ ಖುದ್ದು ಹಾಜರಿ ಬೇಕು’; ಹೈಕೋರ್ಟ್​​ನಲ್ಲಿ ದರ್ಶನ್ ಅರ್ಜಿ
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಅಸಲಿ ಮುಖ ತೋರಿಸೋಕೆ ಆರಂಭಿಸಿದ ಸೌಂದರ್ಯಾ ಶೆಟ್ಟಿ; ಅಣಕಿಸಿದ ವಿಡಿಯೋ ವೈರಲ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಡಿಕೆಶಿ ಸರ್ಕಾರಕ್ಕೆ 100 ದಿನ: ಕೆಆರ್​ಎಸ್ ಡ್ಯಾಂಗೆ ಕಲರ್​ಫುಲ್​ ​ಲೈಟಿಂಗ್
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಸತೀಶ್ ಜಾರಕಿಹೊಳಿ ನಿವಾಸದಲ್ಲಿ ತಡರಾತ್ರಿ 2 ಗಂಟೆವರೆಗೆ ಇಡಿ ಶೋಧ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ
ಗುರುಗಳ ಲಹರಿ ಇರುವ ಶುಭ ದಿನ: ಸೆಪ್ಟೆಂಬರ್ 10 ರ ರಾಶಿ ಭವಿಷ್ಯ