AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಲೀಪ್ ಟ್ರೋಫಿ ಫೈನಲ್: ಹೀಗಿದೆ ಉಭಯ ತಂಡಗಳ ಪ್ಲೇಯಿಂಗ್ 11

ದುಲೀಪ್ ಟ್ರೋಫಿ 2026ರ ಫೈನಲ್ ಫೈಟ್ ಶುರುವಾಗಿದೆ. ಈ ಬಾರಿ ಪ್ರಶಸ್ತಿಗಾಗಿ ಈಸ್ಟ್ ಝೋನ್ ಮತ್ತು ಸೌತ್ ಝೋನ್ ತಂಡಗಳು ಮುಖಾಮುಖಿಯಾಗಿವೆ. ಇಶಾನ್ ಕಿಶನ್ ಹಾಗೂ ತಿಲಕ್ ವರ್ಮಾ ಅವರ ತಂತ್ರಗಾರಿಕೆ, ಮೊಹಮ್ಮದ್ ಶಮಿ ಮತ್ತು ಮೊಹಮ್ಮದ್ ಸಿರಾಜ್ ಅವರ ವೇಗದ ಜಿದ್ದಾಜಿದ್ದಿಗೆ ಸಾಕ್ಷಿಯಾಗಲಿರುವ ಈ ಪಂದ್ಯದ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ.

ದುಲೀಪ್ ಟ್ರೋಫಿ ಫೈನಲ್: ಹೀಗಿದೆ ಉಭಯ ತಂಡಗಳ ಪ್ಲೇಯಿಂಗ್ 11
ಇಶಾನ್ - ತಿಲಕ್Image Credit source: BCCI
ಝಾಹಿರ್ ಯೂಸುಫ್
|

Updated on: Sep 06, 2026 | 9:41 AM

Share

ದೇಶಿಯ ಕ್ರಿಕೆಟ್‌ನ ಪ್ರತಿಷ್ಠಿತ ಟೂರ್ನಿ ದುಲೀಪ್ ಟ್ರೋಫಿ 2026ರ ಫೈನಲ್ ಪಂದ್ಯ ಶುರುವಾಗಿದೆ. ಚೆನ್ನೈನ ಎಂ. ಎ. ಚಿದಂಬರಂ (ಚೆಪಾಕ್) ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಈಸ್ಟ್ ಝೋನ್ ತಂಡದ ನಾಯಕ ಇಶಾನ್ ಕಿಶನ್ ಬ್ಯಾಟಿಂಗ್ ಮಾಡುವ ನಿರ್ಧಾರ ತೆಗೆದುಕೊಂಡಿದ್ದಾರೆ. ಅದರಂತೆ ತಿಲಕ್ ವರ್ಮಾ ನೇತೃತ್ವದ ಸೌತ್ ಝೋನ್ ತಂಡವು ಬೌಲಿಂಗ್ ಮಾಡಲಿದೆ.

ಬಲಿಷ್ಠ ಈಸ್ಟ್ ಝೋನ್:

ಇಶಾನ್ ಕಿಶನ್ ಸಾರಥ್ಯದ ಈಸ್ಟ್ ಝೋನ್ ತಂಡ ಅತ್ಯಂತ ಬಲಿಷ್ಠವಾಗಿ ಕಾಣಿಸುತ್ತಿದೆ. ಅನುಭವಿ ವೇಗಿ ಮೊಹಮ್ಮದ್ ಶಮಿ ಅವರ ಉಪಸ್ಥಿತಿ ತಂಡದ ಬೌಲಿಂಗ್ ವಿಭಾಗಕ್ಕೆ ಆನೆ ಬಲ ತಂದಿದ್ದರೆ, ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ತಂಡದ ಮತ್ತೊಂದು ಶಕ್ತಿಯಾಗಿ ಹೊರಹೊಮ್ಮಿದ್ದಾರೆ. ಇವರೊಂದಿಗೆ ಮುಖೇಶ್ ಕುಮಾರ್ ಹಾಗೂ ಅಭಿಮನ್ನು ಈಶ್ವರನ್ ಕೂಡ ತಂಡದಲ್ಲಿದ್ದಾರೆ. ಹಾಗೆಯೇ ಸ್ಪಿನ್ ಆಲ್​ರೌಂಡರ್​ಗಳಾಗಿ ಶಹಬಾಝ್ ಅಹ್ಮದ್ ಹಾಗೂ ಅನುಕೂಲ್ ರಾಯ್ ತಂಡದ ಬಲವನ್ನು ಹೆಚ್ಚಿಸಿದ್ದಾರೆ. ಇನ್ನು ಫೈನಲ್​ನಲ್ಲಿ ಕಣಕ್ಕಿಳಿಯಬೇಕಿದ್ದ ಅನುಭವಿ ದಾಂಡಿಗ ಕೆಎಲ್ ರಾಹುಲ್ ವೈಯುಕ್ತಿಕ ಕಾರಣಗಳಿಂದ ಹೊರಗುಳಿದಿದ್ದಾರೆ.

ಬಲಾಢ್ಯರ ಸೌತ್ ಝೋನ್​:

ತಿಲಕ್ ವರ್ಮಾ ನೇತೃತ್ವದ ಸೌತ್ ಝೋನ್ ತಂಡದಲ್ಲಿ ಸ್ಟಾರ್ ವೇಗಿ ಮೊಹಮ್ಮದ್ ಸಿರಾಜ್ ಮತ್ತು ಪ್ರತಿಭಾವಂತ ಬ್ಯಾಟರ್ ದೇವದತ್ ಪಡಿಕ್ಕಲ್ ಕಾಣಿಸಿಕೊಂಡಿದ್ದಾರೆ. ಹಾಗೆಯೇ ಕರುಣ್ ನಾಯರ್, ಸ್ಮರಣ್ ರವಿಚಂದ್ರನ್ ಅವರಂತಹ ಅನುಭವಿ ದಾಂಡಿಗರು ಸೌತ್ ಪಡೆಯಲ್ಲಿದ್ದಾರೆ. ಹೀಗಾಗಿಯೇ ಫೈನಲ್ ಪಂದ್ಯದಲ್ಲಿ ಜಿದ್ದಾಜಿದ್ದಿನ ಪೈಪೋಟಿಯನ್ನು ನಿರೀಕ್ಷಿಸಬಹುದು.

ಈಸ್ಟ್​ ಝೋನ್ (ಪ್ಲೇಯಿಂಗ್ XI): ಅಭಿಮನ್ಯು ಈಶ್ವರನ್, ವೈಭವ್ ಸೂರ್ಯವಂಶಿ, ಕುಮಾರ್ ಕುಶಾಗ್ರಾ, ಸುದೀಪ್ ಕುಮಾರ್ ಘರಾಮಿ, ಇಶಾನ್ ಕಿಶನ್ (ನಾಯಕ, ಶಿಖರ್ ಮೋಹನ್, ಅನುಕೂಲ್ ರಾಯ್, ಎಂಡಿ ಕೌನೈನ್ ಖುರೈಶಿ, ಮೊಹಮ್ಮದ್ ಶಮಿ, ಅಭಿಜಿತ್ ಕೆ ಸರ್ಕಾರ್, ಮುಖೇಶ್ ಕುಮಾರ್.

ಇದನ್ನೂ ಓದಿ: ಟಾಪ್-10 ಸರ್ವಶ್ರೇಷ್ಠ ವೇಗಿಗಳನ್ನು ಹೆಸರಿಸಿದ ಸ್ಟುವರ್ಟ್ ಬ್ರಾಡ್

ಸೌತ್ ಝೋನ್ (ಪ್ಲೇಯಿಂಗ್ XI): ರಿಕಿ ಭುಯಿ, ನಾರಾಯಣ್ ಜಗದೀಸನ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶೇಕ್ ರಶೀದ್, ತಿಲಕ್ ವರ್ಮಾ (ನಾಯಕ), ಸ್ಮರಣ್ ರವಿಚಂದ್ರನ್, ಶ್ರೇಯಸ್ ಗೋಪಾಲ್, ತ್ರಿಪುರಾಣ ವಿಜಯ್, ಮೊಹಮ್ಮದ್ ಸಿರಾಜ್, ಚಾಮ ವಿ ಮಿಲಿಂದ್, ಎಂಡಿ ನಿಧೀಶ್.

Follow Us