AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಬ್ಬರಿಸಿ ವಿಕೆಟ್ ಒಪ್ಪಿಸಿದ ವೈಭವ್ ಸೂರ್ಯವಂಶಿ!

ಪ್ರತಿಷ್ಠಿತ ದುಲೀಪ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಈಸ್ಟ್ ಝೋನ್ ಮತ್ತು ಸೌತ್ ಝೋನ್ ತಂಡಗಳು ಮುಖಾಮುಖಿಯಾಗಿವೆ. ಚೆನ್ನೈನಲ್ಲಿ ನಡೆಯುತ್ತಿರುವ ಈ ಮಹತ್ವದ ಪಂದ್ಯದಲ್ಲಿ ಟಾಸ್ ಗೆದ್ದಿರುವ ಈಸ್ಟ್ ಝೋನ್ ತಂಡದ ನಾಯಕ ಇಶಾನ್ ಕಿಶನ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಇನ್ನಿಂಗ್ಸ್ ಆರಂಭಿಸಿರುವ ಯುವ ಆಟಗಾರ ವೈಭವ್ ಸೂರ್ಯವಂಶಿ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿದ್ದಾರೆ.

ಅಬ್ಬರಿಸಿ ವಿಕೆಟ್ ಒಪ್ಪಿಸಿದ ವೈಭವ್ ಸೂರ್ಯವಂಶಿ!
ವೈಭವ್ ಸೂರ್ಯವಂಶಿImage Credit source: BCCI
ಝಾಹಿರ್ ಯೂಸುಫ್
|

Updated on:Sep 06, 2026 | 12:01 PM

Share

ಚೆನ್ನೈನ ಎಂ. ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ದುಲೀಪ್ ಟ್ರೋಫಿ 2026ರ ಫೈನಲ್ ಪಂದ್ಯದ ಮೊದಲ ದಿನವೇ ಯುವ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಅಬ್ಬರದ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಸೌತ್ ಝೋನ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಈಸ್ಟ್ ಝೋನ್ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ 44 ರನ್​ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ಅರ್ಧಶತಕದಿಂದ ವಂಚಿತರಾಗಿದ್ದಾರೆ.

ಸಿರಾಜ್​ಗೆ ಬೆಂಡೆತ್ತಿದ ಯುವ ದಾಂಡಿಗ:

ಅಭಿಮನ್ಯು ಈಶ್ವರನ್ ಜೊತೆ ಇನಿಂಗ್ಸ್ ಆರಂಭಿಸಿದ ವೈಭವ್ ಸೂರ್ಯವಂಶಿ ಈಸ್ಟ್ ಝೋನ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿದ್ದರು. ಅದರಲ್ಲೂ ವಿಶೇಷವಾಗಿ, ಸೌತ್ ಝೋನ್ ತಂಡದ ಪ್ರಮುಖ ವೇಗಿ ಮತ್ತು ಭಾರತ ತಂಡದ ಸ್ಟಾರ್ ಬೌಲರ್ ಮೊಹಮ್ಮದ್ ಸಿರಾಜ್ ಅವರ ಓವರ್‌ಗಳಲ್ಲಿ ಸೂರ್ಯವಂಶಿ ಭಯವಿಲ್ಲದೆ ಬ್ಯಾಟ್ ಬೀಸಿದರು. ಸಿರಾಜ್ ಅವರ ಒಂದೇ ಓವರ್‌ನಲ್ಲಿ ಸತತ ಬೌಂಡರಿಗಳನ್ನು ಬಾರಿಸುವ ಮೂಲಕ ಕ್ರೀಡಾಂಗಣದಲ್ಲಿದ್ದ ಪ್ರೇಕ್ಷಕರನ್ನು ರಂಜಿಸಿದರು.

ಈ ಬಿರುಸಿನ ಬ್ಯಾಟಿಂಗ್​ನೊಂದಿಗೆ ಸೌತ್ ಝೋನ್ ಬೌಲರ್​ಗಳ ಬೆಂಡೆತ್ತಿದ ವೈಭವ್ ಸೂರ್ಯವಂಶಿ 37 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 5 ಫೋರ್​ಗಳೊಂದಿಗೆ 44 ರನ್ ಸಿಡಿಸಿದರು. ಈ ಹಂತದಲ್ಲಿ ಚಾಮಾ ಮಿಲಿಂದ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿ ಔಟಾದರು.

ವೈಭವ್ ಸೂರ್ಯವಂಶಿ ಔಟಾಗುವಷ್ಟರಲ್ಲಿ ಈಸ್ಟ್ ಝೋನ್ ತಂಡದ ಸ್ಕೋರ್ 14.4 ಓವರ್​ಗಳಲ್ಲಿ 1 ವಿಕೆಟ್ ನಷ್ಟಕ್ಕೆ 100 ರನ್ ಆಗಿತ್ತು. ಇದೀಗ ಕ್ರೀಸ್​ನಲ್ಲಿ ಅರ್ಧಶತಕ ಸಿಡಿಸಿರುವ ಅಭಿಮನ್ಯು ಈಶ್ವರನ್ ಹಾಗೂ ಅವರಿಗೆ ಸಾಥ್ ನೀಡುತ್ತಿರುವ ಶಿಖರ್ ಮೋಹನ್ ಬ್ಯಾಟಿಂಗ್ ಮುಂದುವರೆಸಿದ್ದು, ಈಸ್ಟ್ ಝೋನ್ ತಂಡವು 20 ಓವರ್​ಗಳ ಮುಕ್ತಾಯಕ್ಕೆ 1 ವಿಕೆಟ್ ಕಳೆದುಕೊಂಡು 125 ರನ್ ಕಲೆಹಾಕಿದೆ.

ಈಸ್ಟ್​ ಝೋನ್ (ಪ್ಲೇಯಿಂಗ್ XI): ಅಭಿಮನ್ಯು ಈಶ್ವರನ್, ವೈಭವ್ ಸೂರ್ಯವಂಶಿ, ಕುಮಾರ್ ಕುಶಾಗ್ರಾ, ಸುದೀಪ್ ಕುಮಾರ್ ಘರಾಮಿ, ಇಶಾನ್ ಕಿಶನ್ (ನಾಯಕ, ಶಿಖರ್ ಮೋಹನ್, ಅನುಕೂಲ್ ರಾಯ್, ಎಂಡಿ ಕೌನೈನ್ ಖುರೈಶಿ, ಮೊಹಮ್ಮದ್ ಶಮಿ, ಅಭಿಜಿತ್ ಕೆ ಸರ್ಕಾರ್, ಮುಖೇಶ್ ಕುಮಾರ್.

ಇದನ್ನೂ ಓದಿ: ಟಾಪ್-10 ಸರ್ವಶ್ರೇಷ್ಠ ವೇಗಿಗಳನ್ನು ಹೆಸರಿಸಿದ ಸ್ಟುವರ್ಟ್ ಬ್ರಾಡ್

ಸೌತ್ ಝೋನ್ (ಪ್ಲೇಯಿಂಗ್ XI): ರಿಕಿ ಭುಯಿ, ನಾರಾಯಣ್ ಜಗದೀಸನ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶೇಕ್ ರಶೀದ್, ತಿಲಕ್ ವರ್ಮಾ (ನಾಯಕ), ಸ್ಮರಣ್ ರವಿಚಂದ್ರನ್, ಶ್ರೇಯಸ್ ಗೋಪಾಲ್, ತ್ರಿಪುರಾಣ ವಿಜಯ್, ಮೊಹಮ್ಮದ್ ಸಿರಾಜ್, ಚಾಮ ವಿ ಮಿಲಿಂದ್, ಎಂಡಿ ನಿಧೀಶ್.

Published On - 11:27 am, Sun, 6 September 26

Follow Us