
ಚೆನ್ನೈನ ಎಂ. ಎ. ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ದುಲೀಪ್ ಟ್ರೋಫಿ 2026ರ ಫೈನಲ್ ಪಂದ್ಯದ ಮೊದಲ ದಿನವೇ ಯುವ ಬ್ಯಾಟಿಂಗ್ ಸೆನ್ಸೇಷನ್ ವೈಭವ್ ಸೂರ್ಯವಂಶಿ ಅಬ್ಬರದ ಬ್ಯಾಟಿಂಗ್ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ. ಸೌತ್ ಝೋನ್ ವಿರುದ್ಧದ ಈ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಈಸ್ಟ್ ಝೋನ್ ಪರ ಆರಂಭಿಕನಾಗಿ ಕಣಕ್ಕಿಳಿದ ವೈಭವ್ ಸೂರ್ಯವಂಶಿ 44 ರನ್ಗಳಿಸಿ ವಿಕೆಟ್ ಒಪ್ಪಿಸುವ ಮೂಲಕ ಅರ್ಧಶತಕದಿಂದ ವಂಚಿತರಾಗಿದ್ದಾರೆ.
ಅಭಿಮನ್ಯು ಈಶ್ವರನ್ ಜೊತೆ ಇನಿಂಗ್ಸ್ ಆರಂಭಿಸಿದ ವೈಭವ್ ಸೂರ್ಯವಂಶಿ ಈಸ್ಟ್ ಝೋನ್ ತಂಡಕ್ಕೆ ಸ್ಫೋಟಕ ಆರಂಭ ಒದಗಿಸಿದ್ದರು. ಅದರಲ್ಲೂ ವಿಶೇಷವಾಗಿ, ಸೌತ್ ಝೋನ್ ತಂಡದ ಪ್ರಮುಖ ವೇಗಿ ಮತ್ತು ಭಾರತ ತಂಡದ ಸ್ಟಾರ್ ಬೌಲರ್ ಮೊಹಮ್ಮದ್ ಸಿರಾಜ್ ಅವರ ಓವರ್‌ಗಳಲ್ಲಿ ಸೂರ್ಯವಂಶಿ ಭಯವಿಲ್ಲದೆ ಬ್ಯಾಟ್ ಬೀಸಿದರು. ಸಿರಾಜ್ ಅವರ ಒಂದೇ ಓವರ್‌ನಲ್ಲಿ ಸತತ ಬೌಂಡರಿಗಳನ್ನು ಬಾರಿಸುವ ಮೂಲಕ ಕ್ರೀಡಾಂಗಣದಲ್ಲಿದ್ದ ಪ್ರೇಕ್ಷಕರನ್ನು ರಂಜಿಸಿದರು.
ಈ ಬಿರುಸಿನ ಬ್ಯಾಟಿಂಗ್ನೊಂದಿಗೆ ಸೌತ್ ಝೋನ್ ಬೌಲರ್ಗಳ ಬೆಂಡೆತ್ತಿದ ವೈಭವ್ ಸೂರ್ಯವಂಶಿ 37 ಎಸೆತಗಳಲ್ಲಿ 1 ಸಿಕ್ಸ್ ಹಾಗೂ 5 ಫೋರ್ಗಳೊಂದಿಗೆ 44 ರನ್ ಸಿಡಿಸಿದರು. ಈ ಹಂತದಲ್ಲಿ ಚಾಮಾ ಮಿಲಿಂದ್ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾಗಿ ಕ್ಯಾಚ್ ನೀಡಿ ಔಟಾದರು.
4️⃣,6️⃣,4️⃣
Vaibhav Sooryavanshi on the charge with some delightful shots 🔥
The 50-run stand also comes up between Vaibhav and Abhimanyu Easwaran 🙌
Scorecard ▶️ https://t.co/KQf5Km69nk#DuleepTrophy | #SZvEZ pic.twitter.com/0XLR4LI50R
— BCCI Domestic (@BCCIdomestic) September 6, 2026
ವೈಭವ್ ಸೂರ್ಯವಂಶಿ ಔಟಾಗುವಷ್ಟರಲ್ಲಿ ಈಸ್ಟ್ ಝೋನ್ ತಂಡದ ಸ್ಕೋರ್ 14.4 ಓವರ್‌ಗಳಲ್ಲಿ 1 ವಿಕೆಟ್ ನಷ್ಟಕ್ಕೆ 100 ರನ್ ಆಗಿತ್ತು. ಇದೀಗ ಕ್ರೀಸ್ನಲ್ಲಿ ಅರ್ಧಶತಕ ಸಿಡಿಸಿರುವ ಅಭಿಮನ್ಯು ಈಶ್ವರನ್ ಹಾಗೂ ಅವರಿಗೆ ಸಾಥ್ ನೀಡುತ್ತಿರುವ ಶಿಖರ್ ಮೋಹನ್ ಬ್ಯಾಟಿಂಗ್ ಮುಂದುವರೆಸಿದ್ದು, ಈಸ್ಟ್ ಝೋನ್ ತಂಡವು 20 ಓವರ್ಗಳ ಮುಕ್ತಾಯಕ್ಕೆ 1 ವಿಕೆಟ್ ಕಳೆದುಕೊಂಡು 125 ರನ್ ಕಲೆಹಾಕಿದೆ.
ಈಸ್ಟ್ ಝೋನ್ (ಪ್ಲೇಯಿಂಗ್ XI): ಅಭಿಮನ್ಯು ಈಶ್ವರನ್, ವೈಭವ್ ಸೂರ್ಯವಂಶಿ, ಕುಮಾರ್ ಕುಶಾಗ್ರಾ, ಸುದೀಪ್ ಕುಮಾರ್ ಘರಾಮಿ, ಇಶಾನ್ ಕಿಶನ್ (ನಾಯಕ, ಶಿಖರ್ ಮೋಹನ್, ಅನುಕೂಲ್ ರಾಯ್, ಎಂಡಿ ಕೌನೈನ್ ಖುರೈಶಿ, ಮೊಹಮ್ಮದ್ ಶಮಿ, ಅಭಿಜಿತ್ ಕೆ ಸರ್ಕಾರ್, ಮುಖೇಶ್ ಕುಮಾರ್.
ಇದನ್ನೂ ಓದಿ: ಟಾಪ್-10 ಸರ್ವಶ್ರೇಷ್ಠ ವೇಗಿಗಳನ್ನು ಹೆಸರಿಸಿದ ಸ್ಟುವರ್ಟ್ ಬ್ರಾಡ್
ಸೌತ್ ಝೋನ್ (ಪ್ಲೇಯಿಂಗ್ XI): ರಿಕಿ ಭುಯಿ, ನಾರಾಯಣ್ ಜಗದೀಸನ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶೇಕ್ ರಶೀದ್, ತಿಲಕ್ ವರ್ಮಾ (ನಾಯಕ), ಸ್ಮರಣ್ ರವಿಚಂದ್ರನ್, ಶ್ರೇಯಸ್ ಗೋಪಾಲ್, ತ್ರಿಪುರಾಣ ವಿಜಯ್, ಮೊಹಮ್ಮದ್ ಸಿರಾಜ್, ಚಾಮ ವಿ ಮಿಲಿಂದ್, ಎಂಡಿ ನಿಧೀಶ್.
Published On - 11:27 am, Sun, 6 September 26