AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Duleep Trophy 2026: 4 ಎಸೆತಗಳಲ್ಲಿ 2 ವಿಕೆಟ್ ಉರುಳಿಸಿದ ವೈಭವ್ ಸೂರ್ಯವಂಶಿ

Duleep Trophy 2026: ದುಲೀಪ್ ಟ್ರೋಫಿ ಕ್ವಾರ್ಟರ್ ಫೈನಲ್‌ನಲ್ಲಿ ಪೂರ್ವ ವಲಯ ತಂಡವು ಈಶಾನ್ಯ ವಲಯವನ್ನು ಇನ್ನಿಂಗ್ಸ್ ಮತ್ತು 210 ರನ್‌ಗಳಿಂದ ಮಣಿಸಿದೆ. 15ರ ಹರೆಯದ ವೈಭವ್ ಸೂರ್ಯವಂಶಿ ಬ್ಯಾಟಿಂಗ್‌ನಲ್ಲಿ ವಿಫಲರಾದರೂ, ಎರಡನೇ ಇನ್ನಿಂಗ್ಸ್‌ನಲ್ಲಿ ಕೇವಲ 4 ಎಸೆತಗಳಲ್ಲಿ 2 ವಿಕೆಟ್ ಕಬಳಿಸಿ ಬೌಲಿಂಗ್‌ನಲ್ಲಿ ಮಿಂಚಿದರು.

Duleep Trophy 2026: 4 ಎಸೆತಗಳಲ್ಲಿ 2 ವಿಕೆಟ್ ಉರುಳಿಸಿದ ವೈಭವ್ ಸೂರ್ಯವಂಶಿ
Vaibhav Sooryavanshi
ಪೃಥ್ವಿಶಂಕರ
|

Updated on:Aug 25, 2026 | 2:57 PM

Share

ಬೆಂಗಳೂರಿನಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿ (Duleep Trophy) ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪೂರ್ವ ವಲಯ ಮತ್ತು ಈಶಾನ್ಯ ವಲಯ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರಂಭದಿಂದಲೂ ಮೇಲುಗೈ ಸಾಧಿಸಿದ ಪೂರ್ವ ವಲಯ ತಂಡ, ಈಶಾನ್ಯ ವಲಯ ತಂಡವನ್ನು ಇನ್ನಿಂಗ್ಸ್ ಮತ್ತು 210 ರನ್​ಗಳ ಅಂತರದಿಂದ ಮಣಿಸಿತು. ಈ ಪಂದ್ಯದಲ್ಲಿ ಪೂರ್ವ ವಲಯ ತಂಡ ಪರ ಕಣಕ್ಕಿಳಿದಿದ್ದ 15 ವರ್ಷದ ಸ್ಫೋಟಕ ಬ್ಯಾಟರ್ ವೈಭವ್ ಸೂರ್ಯವಂಶಿಗೆ (Vaibhav Sooryavanshi) ಬ್ಯಾಟಿಂಗ್​ನಲ್ಲಿ ಗಮನಾರ್ಹ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆದಾಗ್ಯೂ ಬೌಲಿಂಗ್​ನಲ್ಲಿ ಮಿಂಚಿದ ವೈಭವ್ ಈಶಾನ್ಯ ವಲಯ ತಂಡದ ಎರಡನೇ ಇನ್ನಿಂಗ್ಸ್​ನಲ್ಲಿ 3 ಓವರ್​ಗಳನ್ನು ಬೌಲ್ ಮಾಡಿ 11 ರನ್​ಗಳನ್ನು ಬಿಟ್ಟಕೊಟ್ಟು ಎರಡು ವಿಕೆಟ್‌ಗಳನ್ನು ಕಬಳಿಸಿದರು. ತಂಡಕ್ಕೆ ಬ್ಯಾಟಿಂಗ್​ನಲ್ಲಿ ನೆರವಾಗದಿದ್ದರೂ ವೈಭವ್ ಬೌಲಿಂಗ್​ನಲ್ಲಿ ನೆರವಾದರು. ಅದರಲ್ಲೂ ವೈಭವ್ ಕೇವಲ 4 ಎಸೆತಗಳ ಅಂತರದಲ್ಲಿ 2 ವಿಕೆಟ್‌ಗಳನ್ನು ಉರುಳಿಸಿದ್ದು ಇನ್ನಷ್ಟು ವಿಶೇಷವಾಗಿತ್ತು.

ಈಶಾನ್ಯ ವಲಯಕ್ಕೆ ಇನ್ನಿಂಗ್ಸ್ ಸೋಲು

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪೂರ್ವ ವಲಯ ತಂಡ 467 ರನ್​ಗಳಿಗೆ ತನ್ನ ಮೊದಲ ಇನ್ನಿಂಗ್ಸ್‌ ಮುಗಿಸಿತು. ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ವೈಭವ್ ಆರು ಎಸೆತಗಳನ್ನು ಎದುರಿಸಿ ಎರಡು ಬೌಂಡರಿಗಳ ಸಹಾಯದಿಂದ ಕೇವಲ ಎಂಟು ರನ್‌ ಬಾರಿಸಲಷ್ಟೇ ಶಕ್ತರಾಗಿದ್ದರು. ಆದರೆ ವೈಭವ್ ವೈಫಲ್ಯದ ಹೊರತಾಗಿಯೂ ತಂಡದ ಇತರ ಬ್ಯಾಟರ್​ಗಳಾದ ಕುಮಾರ್ ಕುಶಾಗ್ರ ಅವರ 55 ರನ್, ಸುದೀಪ್ ಕುಮಾರ್ ಘರಾಮಿ ಅವರ 146 ರನ್ ಮತ್ತು ಶಹಬಾಜ್ ಅಹ್ಮದ್ ಅವರ 167 ರನ್‌ಗಳ ಇನ್ನಿಂಗ್ಸ್​ನ ಸಹಾಯದಿಂದಾಗಿ ಪೂರ್ವ ವಲಯ ತಂಡವು ಬೃಹತ್ ಮೊತ್ತವನ್ನು ದಾಖಲಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಈಶಾನ್ಯ ವಲಯ ತಂಡ ಮೊದಲ ಇನ್ನಿಂಗ್ಸ್​ನಲ್ಲಿ ಕೇವಲ 111 ರನ್​ಗಳಿಗೆ ಆಲೌಟ್ ಆಯಿತು. ಹೀಗಾಗಿ ಫಾಲೋ ಆನ್ ಪಡೆದ ಈಶಾನ್ಯ ವಲಯ ತಂಡ ಎರಡನೇ ಇನ್ನಿಂಗ್ಸ್​ನಲ್ಲೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ.

4 ಎಸೆತಗಳಲ್ಲಿ 2 ವಿಕೆಟ್ ಉರುಳಿಸಿದ ವೈಭವ್

ಮೊದಲ ಇನ್ನಿಂಗ್ಸ್​ನಲ್ಲಿ 111 ರನ್​ಗಳಿಗೆ ಆಲೌಟ್ ಆಗಿದ್ದ ಈಶಾನ್ಯ ವಲಯ ತಂಡ ಎರಡನೇ ಇನ್ನಿಂಗ್ಸ್​ನಲ್ಲಿ 146ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಮೊದಲ ಇನ್ನಿಂಗ್ಸ್​ನಲ್ಲಿ ವೈಭವ್ ಸೂರ್ಯವಂಶಿಗೆ ಬೌಲಿಂಗ್ ಮಾಡುವ ಅವಕಾಶ ಸಿಗಲಿಲ್ಲ. ಆದರೆ ಎರಡನೇ ಇನ್ನಿಂಗ್ಸ್​ನಲ್ಲಿ ಬೌಲಿಂಗ್​ಗೆ ಬಂದ ವೈಭವ್​ಗೆ ತಮ್ಮ ಖೋಟಾದ ಮೊದಲ ಓವರ್​ನಲ್ಲಿ ಯಾವುದೇ ವಿಕೆಟ್ ಸಿಗಲಿಲ್ಲ. ಆದರೆ ಎರಡನೇ ಓವರ್ ಎಸೆಯಲು ಬಂದ ವೈಭವ್ ಈ ಓವರ್​ನ ಎರಡನೇ ಎಸೆತದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ ಕಿಶನ್ ಅವರ ವಿಕೆಟ್ ಉರುಳಿಸಿದರು. ನಂತರ ಅದೇ ಓವರ್​ನ ಐದನೇ ಎಸೆತದಲ್ಲಿ, ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್ ಇಮ್ಲಿವತಿ ಲೆಮ್ತೂರ್ ಅವರನ್ನು ವೈಭವ್ ಔಟ್ ಮಾಡಿದರು.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 2:53 pm, Tue, 25 August 26

Follow Us
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ಎಬಿವಿಪಿ ಪ್ರತಿಭಟನೆ ವೇಳೆ ಮಾಧ್ಯಮದವರ ಮೇಲೆ ಪೊಲೀಸರ ದರ್ಪ
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
ರಸ್ತೆ ಮಧ್ಯೆ ಕಬ್ಬಿನ ಲಾರಿ ಅಡ್ಡಗಟ್ಟಿದ 10ಕ್ಕೂ ಹೆಚ್ಚು ಕಾಡಾನೆಗಳ ಹಿಂಡು!
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
PSI ಮೇಲೆ ಶಾಸಕ ಸುರೇಶ್‌ಗೌಡ ಪುತ್ರಿ ಕಪಾಳಮೋಕ್ಷ ಪ್ರಕರಣ; ವೀಡಿಯೋ ವೈರಲ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಟಾಕ್ಸಿಕ್ ರಿಲೀಸ್​ಗೂ ಮುನ್ನ ವಿಶೇಷ ಪೂಜೆ ಸಲ್ಲಿಸಲು ಧರ್ಮಸ್ಥಳಕ್ಕೆ ಬಂದ ಯಶ್
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಕೆಪಿಎಸ್‌ಸಿ ಕಚೇರಿ ಮೇಲೆ ಮತ್ತೆ ಸಿಐಡಿ ದಾಳಿ
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಪುತ್ತೂರು ಬಂದ್ ಹಿನ್ನೆಲೆ ಪರಿಸ್ಥಿತಿ ಶಾಂತ: ಬಿಗಿ ಪೊಲೀಸ್ ಬಂದೋಬಸ್ತ್
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಬಗೆದಷ್ಟೂ ಬಯಲಾಗ್ತಿದೆ ಮರಿ ವೀರಪ್ಪನ್​​ ಗೋವಿಂದನ ಕರಾಳ ಇತಿಹಾಸ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ವರುಣನ ಅಬ್ಬರ; ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
ತಮಿಳುನಾಡಿಗೆ ಮತ್ತೆ ನೀರು ಬಿಡಬೇಕೆಂಬ ಆದೇಶ ಖಂಡಿಸಿ ಮಂಡ್ಯದಲ್ಲಿ ಪ್ರತಿಭಟನೆ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ
'ಬಿಗ್ ಬಾಸ್ ಅಗ್ನಿ ಪರೀಕ್ಷೆ'ಯಲ್ಲಿ ಹೈ-ವೋಲ್ಟೇಜ್ ಕಾದಾಟ