
ಬೆಂಗಳೂರಿನಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿ (Duleep Trophy) ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಪೂರ್ವ ವಲಯ ಮತ್ತು ಈಶಾನ್ಯ ವಲಯ ತಂಡಗಳು ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಆರಂಭದಿಂದಲೂ ಮೇಲುಗೈ ಸಾಧಿಸಿದ ಪೂರ್ವ ವಲಯ ತಂಡ, ಈಶಾನ್ಯ ವಲಯ ತಂಡವನ್ನು ಇನ್ನಿಂಗ್ಸ್ ಮತ್ತು 210 ರನ್‌ಗಳ ಅಂತರದಿಂದ ಮಣಿಸಿತು. ಈ ಪಂದ್ಯದಲ್ಲಿ ಪೂರ್ವ ವಲಯ ತಂಡ ಪರ ಕಣಕ್ಕಿಳಿದಿದ್ದ 15 ವರ್ಷದ ಸ್ಫೋಟಕ ಬ್ಯಾಟರ್ ವೈಭವ್ ಸೂರ್ಯವಂಶಿಗೆ (Vaibhav Sooryavanshi) ಬ್ಯಾಟಿಂಗ್‌ನಲ್ಲಿ ಗಮನಾರ್ಹ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಆದಾಗ್ಯೂ ಬೌಲಿಂಗ್‌ನಲ್ಲಿ ಮಿಂಚಿದ ವೈಭವ್ ಈಶಾನ್ಯ ವಲಯ ತಂಡದ ಎರಡನೇ ಇನ್ನಿಂಗ್ಸ್‌ನಲ್ಲಿ 3 ಓವರ್ಗಳನ್ನು ಬೌಲ್ ಮಾಡಿ 11 ರನ್ಗಳನ್ನು ಬಿಟ್ಟಕೊಟ್ಟು ಎರಡು ವಿಕೆಟ್‌ಗಳನ್ನು ಕಬಳಿಸಿದರು. ತಂಡಕ್ಕೆ ಬ್ಯಾಟಿಂಗ್‌ನಲ್ಲಿ ನೆರವಾಗದಿದ್ದರೂ ವೈಭವ್ ಬೌಲಿಂಗ್‌ನಲ್ಲಿ ನೆರವಾದರು. ಅದರಲ್ಲೂ ವೈಭವ್ ಕೇವಲ 4 ಎಸೆತಗಳ ಅಂತರದಲ್ಲಿ 2 ವಿಕೆಟ್‌ಗಳನ್ನು ಉರುಳಿಸಿದ್ದು ಇನ್ನಷ್ಟು ವಿಶೇಷವಾಗಿತ್ತು.
ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಪೂರ್ವ ವಲಯ ತಂಡ 467 ರನ್ಗಳಿಗೆ ತನ್ನ ಮೊದಲ ಇನ್ನಿಂಗ್ಸ್ ಮುಗಿಸಿತು. ತಂಡದ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದ ವೈಭವ್ ಆರು ಎಸೆತಗಳನ್ನು ಎದುರಿಸಿ ಎರಡು ಬೌಂಡರಿಗಳ ಸಹಾಯದಿಂದ ಕೇವಲ ಎಂಟು ರನ್ ಬಾರಿಸಲಷ್ಟೇ ಶಕ್ತರಾಗಿದ್ದರು. ಆದರೆ ವೈಭವ್ ವೈಫಲ್ಯದ ಹೊರತಾಗಿಯೂ ತಂಡದ ಇತರ ಬ್ಯಾಟರ್ಗಳಾದ ಕುಮಾರ್ ಕುಶಾಗ್ರ ಅವರ 55 ರನ್, ಸುದೀಪ್ ಕುಮಾರ್ ಘರಾಮಿ ಅವರ 146 ರನ್ ಮತ್ತು ಶಹಬಾಜ್ ಅಹ್ಮದ್ ಅವರ 167 ರನ್‌ಗಳ ಇನ್ನಿಂಗ್ಸ್ನ ಸಹಾಯದಿಂದಾಗಿ ಪೂರ್ವ ವಲಯ ತಂಡವು ಬೃಹತ್ ಮೊತ್ತವನ್ನು ದಾಖಲಿಸಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಈಶಾನ್ಯ ವಲಯ ತಂಡ ಮೊದಲ ಇನ್ನಿಂಗ್ಸ್‌ನಲ್ಲಿ ಕೇವಲ 111 ರನ್ಗಳಿಗೆ ಆಲೌಟ್ ಆಯಿತು. ಹೀಗಾಗಿ ಫಾಲೋ ಆನ್ ಪಡೆದ ಈಶಾನ್ಯ ವಲಯ ತಂಡ ಎರಡನೇ ಇನ್ನಿಂಗ್ಸ್ನಲ್ಲೂ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಲಿಲ್ಲ.
Vaibhav Sooryavanshi provides Double Delight ✌️
Picks up 2⃣ wickets in the over. 2 excellent catches as well. 🙌
North East Zone are 79/7 in the 2nd innings after following on.
Scorecard ▶️ https://t.co/XJFhfvvTIU#DuleepTrophy pic.twitter.com/NnYbBPnrja
— BCCI Domestic (@BCCIdomestic) August 25, 2026
ಮೊದಲ ಇನ್ನಿಂಗ್ಸ್‌ನಲ್ಲಿ 111 ರನ್ಗಳಿಗೆ ಆಲೌಟ್ ಆಗಿದ್ದ ಈಶಾನ್ಯ ವಲಯ ತಂಡ ಎರಡನೇ ಇನ್ನಿಂಗ್ಸ್‌ನಲ್ಲಿ 146ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಮೊದಲ ಇನ್ನಿಂಗ್ಸ್‌ನಲ್ಲಿ ವೈಭವ್ ಸೂರ್ಯವಂಶಿಗೆ ಬೌಲಿಂಗ್ ಮಾಡುವ ಅವಕಾಶ ಸಿಗಲಿಲ್ಲ. ಆದರೆ ಎರಡನೇ ಇನ್ನಿಂಗ್ಸ್‌ನಲ್ಲಿ ಬೌಲಿಂಗ್ಗೆ ಬಂದ ವೈಭವ್ಗೆ ತಮ್ಮ ಖೋಟಾದ ಮೊದಲ ಓವರ್ನಲ್ಲಿ ಯಾವುದೇ ವಿಕೆಟ್ ಸಿಗಲಿಲ್ಲ. ಆದರೆ ಎರಡನೇ ಓವರ್ ಎಸೆಯಲು ಬಂದ ವೈಭವ್ ಈ ಓವರ್ನ ಎರಡನೇ ಎಸೆತದಲ್ಲಿ ಮಧ್ಯಮ ಕ್ರಮಾಂಕದ ಬ್ಯಾಟರ್ ಕಿಶನ್ ಅವರ ವಿಕೆಟ್ ಉರುಳಿಸಿದರು. ನಂತರ ಅದೇ ಓವರ್ನ ಐದನೇ ಎಸೆತದಲ್ಲಿ, ಕೆಳ ಕ್ರಮಾಂಕದ ಬ್ಯಾಟ್ಸ್‌ಮನ್ ಇಮ್ಲಿವತಿ ಲೆಮ್ತೂರ್ ಅವರನ್ನು ವೈಭವ್ ಔಟ್ ಮಾಡಿದರು.
Published On - 2:53 pm, Tue, 25 August 26