AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಕರ್ಷಕ ಅರ್ಧಶತಕ ಬಾರಿಸಿದ ದೇವದತ್ ಪಡಿಕ್ಕಲ್

ಚೆನ್ನೈನಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಈಸ್ಟ್ ಝೋನ್ ಪರ ಇಶಾನ್ ಕಿಶನ್ (270 ರನ್) ಭರ್ಜರಿ ದ್ವಿಶತಕ ಸಿಡಿಸಿದ್ದಾರೆ. ಈ ಡಬಲ್ ಸೆಂಚುರಿ ನೆರವಿನೊಂದಿಗೆ ಈಸ್ಟ್ ಝೋನ್ ತಂಡವು ಮೊದಲ ಇನಿಂಗ್ಸ್‌ನಲ್ಲಿ ಬರೋಬ್ಬರಿ 708 ರನ್ ಪೇರಿಸಿದೆ. ಇದೀಗ ಇದಕ್ಕೆ ಉತ್ತರವಾಗಿ ಸೌತ್ ಝೋನ್ ಮೊದಲ ಇನಿಂಗ್ಸ್ ಆಡುತ್ತಿದೆ.

ಆಕರ್ಷಕ ಅರ್ಧಶತಕ ಬಾರಿಸಿದ ದೇವದತ್ ಪಡಿಕ್ಕಲ್
ದೇವದತ್ ಪಡಿಕ್ಕಲ್Image Credit source: BCCI
ಝಾಹಿರ್ ಯೂಸುಫ್
|

Updated on: Sep 08, 2026 | 3:08 PM

Share

ಚೆನ್ನೈನ ಎಂ. ಎ. ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ ದುಲೀಪ್ ಟ್ರೋಫಿ ಫೈನಲ್ ಪಂದ್ಯದ ಮೂರನೇ ದಿನದಾಟದಲ್ಲಿ ದೇವದತ್ ಪಡಿಕ್ಕಲ್ 62 ರನ್‌ಗಳಿಸಿ ಔಟಾಗಿದ್ದಾರೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಈಸ್ಟ್ ಝೋನ್ ತಂಡವು ಪ್ರಥಮ ಇನಿಂಗ್ಸ್​ನಲ್ಲಿ ಬರೋಬ್ಬರಿ 708 ರನ್ ಕಲೆಹಾಕಿತು.

ಇದಕ್ಕುತ್ತರವಾಗಿ ಮೊದಲ ಇನಿಂಗ್ಸ್ ಶುರು ಮಾಡಿದ ಸೌತ್ ಝೋನ್ ತಂಡವು ನಿರೀಕ್ಷಿತ ಆರಂಭ ಪಡೆದಿರಲಿಲ್ಲ. ಆರಂಭಿಕರಾದ ರಿಕಿ ಭುಯಿ (1) ಹಾಗೂ ನಾರಾಯಣ್ ಜಗದೀಶನ್ (32) ಬೇಗನೆ ವಿಕೆಟ್ ಒಪ್ಪಿಸಿ ನಿರಾಶೆ ಮೂಡಿಸಿದ್ದರು. ಈ ಹಂತದಲ್ಲಿ 3ನೇ ಕ್ರಮಾಂಕದಲ್ಲಿ ಕ್ರೀಸ್‌ಗೆ ಬಂದ ಕನ್ನಡಿಗ ದೇವದತ್ ಪಡಿಕ್ಕಲ್, ಅತ್ಯಂತ ಸಂಯಮದ ಆಟದ ಮೂಲಕ ಇನಿಂಗ್ಸ್ ಕಟ್ಟಿದರು.

ಆರಂಭದಲ್ಲಿ ತುಸು ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದ್ದ ಪಡಿಕ್ಕಲ್ ಆ ಬಳಿಕ ರನ್ ಪೇರಿಸುತ್ತಾ ಸಾಗಿದರು. ಪರಿಣಾಮ ಪಡಿಕ್ಕಲ್ ಬ್ಯಾಟ್​ನಿಂದ 104 ಎಸೆತಗಳಲ್ಲಿ 4 ಫೋರ್​ಗಳೊಂದಿಗೆ 62 ರನ್​ಗಳು ಮೂಡಿಬಂತು.

ಈ ಹಂತದಲ್ಲಿ ಈಸ್ಟ್ ಝೋನ್ ತಂಡದ ನಾಯಕ ಇಶಾನ್ ಕಿಶನ್ ವೇಗಿ ಮುಕೇಶ್ ಕುಮಾರ್ ಅವರಿಗೆ ಚೆಂಡು ನೀಡಿದರು. ಮುಕೇಶ್ ಎಸೆದ ಲೆಗ್-ಸ್ಟಂಪ್ ಲೈನ್‌ನ ಎಸೆತವನ್ನು ಪಡಿಕ್ಕಲ್ ಫ್ಲಿಕ್ ಮಾಡಲು ಯತ್ನಿಸಿದರು. ಆದರೆ, ಟೈಮಿಂಗ್ ಲಭಿಸದ ಕಾರಣ ಚೆಂಡು ನೇರವಾಗಿ ಡೀಪ್ ಸ್ಕ್ವೇರ್ ಲೆಗ್‌ನಲ್ಲಿದ್ದ ಫೀಲ್ಡರ್ ಡೆನಿಶ್ ದಾಸ್ ಅವರ ಕೈಸೇರಿತು. ಇದರೊಂದಿಗೆ ಸೌತ್ ಝೋನ್​ ತಂಡದ ದೊಡ್ಡ ಭರವಸೆಯಾಗಿದ್ದ ದೇವದತ್ ಪಡಿಕ್ಕಲ್ ಹೋರಾಟ ಅಂತ್ಯವಾಯಿತು.

ಸೌತ್ ಝೋನ್ 5 ವಿಕೆಟ್ ಪತನ:

ಮೊದಲ ಇನಿಂಗ್ಸ್​ ಆಡುತ್ತಿರುವ ಸೌತ್ ಝೋನ್ ತಂಡವು ಕೇವಲ 170 ರನ್​ಗಳಿಸುವಷ್ಟರಲ್ಲಿ 5 ವಿಕೆಟ್ ಕಳೆದುಕೊಂಡಿದೆ. ಈ ನಾಲ್ವರಲ್ಲಿ ಅರ್ಧಶತಕದ ಗಡಿದಾಟಿದ್ದು ದೇವದತ್ ಪಡಿಕ್ಕಲ್ ಮಾತ್ರ.

  • ರಿಕಿ ಭುಯಿ- 1 ರನ್
  • ನಾರಾಯಣ್ ಜಗದೀಶನ್- 32
  • ಶೇಖ್ ರಶೀದ್- 27
  • ದೇವದತ್ ಪಡಿಕ್ಕಲ್- 62
  • ಸ್ಮರಣ್ ರವಿಚಂದ್ರನ್- 23

ಈಸ್ಟ್ ಝೋನ್ ಪರ ಅತ್ಯುತ್ತಮ ದಾಳಿ ಸಂಘಟಿಸುತ್ತಿರುವ ಮುಕೇಶ್ ಕುಮಾರ್ 2 ವಿಕೆಟ್ ಪಡೆದರೆ, ಮೊಹಮ್ಮದ್ ಶಮಿ ಹಾಗೂ ಶಿಖರ್ ಮೋಹನ್ ತಲಾ ಒಂದು ವಿಕೆಟ್ ಕಬಳಿಸಿದ್ದಾರೆ.

ಈಸ್ಟ್​ ಝೋನ್ (ಪ್ಲೇಯಿಂಗ್ XI): ಅಭಿಮನ್ಯು ಈಶ್ವರನ್, ವೈಭವ್ ಸೂರ್ಯವಂಶಿ, ಕುಮಾರ್ ಕುಶಾಗ್ರಾ, ಸುದೀಪ್ ಕುಮಾರ್ ಘರಾಮಿ, ಇಶಾನ್ ಕಿಶನ್ (ನಾಯಕ, ಶಿಖರ್ ಮೋಹನ್, ಅನುಕೂಲ್ ರಾಯ್, ಎಂಡಿ ಕೌನೈನ್ ಖುರೈಶಿ, ಮೊಹಮ್ಮದ್ ಶಮಿ, ಅಭಿಜಿತ್ ಕೆ ಸರ್ಕಾರ್, ಮುಖೇಶ್ ಕುಮಾರ್.

ಇದನ್ನೂ ಓದಿ: ದುಲೀಪ್ ಟ್ರೋಫಿ ಫೈನಲ್ ಎಷ್ಟು ದಿನಗಳ ಪಂದ್ಯ? ಇಲ್ಲಿದೆ ಉತ್ತರ

ಸೌತ್ ಝೋನ್ (ಪ್ಲೇಯಿಂಗ್ XI): ರಿಕಿ ಭುಯಿ, ನಾರಾಯಣ್ ಜಗದೀಸನ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶೇಕ್ ರಶೀದ್, ತಿಲಕ್ ವರ್ಮಾ (ನಾಯಕ), ಸ್ಮರಣ್ ರವಿಚಂದ್ರನ್, ಶ್ರೇಯಸ್ ಗೋಪಾಲ್, ತ್ರಿಪುರಾಣ ವಿಜಯ್, ಮೊಹಮ್ಮದ್ ಸಿರಾಜ್, ಚಾಮ ವಿ ಮಿಲಿಂದ್, ಎಂಡಿ ನಿಧೀಶ್.

Follow Us
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More