AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುಲೀಪ್ ಟ್ರೋಫಿ ಫೈನಲ್: ಭಾರೀ ಹಿನ್ನಡೆ ಭೀತಿಯಲ್ಲಿ ಸೌತ್ ಝೋನ್

ಚೆನ್ನೈನಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಈಸ್ಟ್ ಝೋನ್ ಪರ ಇಶಾನ್ ಕಿಶನ್ (270 ರನ್) ಭರ್ಜರಿ ದ್ವಿಶತಕ ಸಿಡಿಸಿದ್ದಾರೆ. ಈ ಡಬಲ್ ಸೆಂಚುರಿ ನೆರವಿನೊಂದಿಗೆ ಈಸ್ಟ್ ಝೋನ್ ತಂಡವು ಮೊದಲ ಇನಿಂಗ್ಸ್‌ನಲ್ಲಿ ಬರೋಬ್ಬರಿ 708 ರನ್ ಪೇರಿಸಿದೆ. ಇದೀಗ ಇದಕ್ಕೆ ಉತ್ತರವಾಗಿ ಸೌತ್ ಝೋನ್ ಮೊದಲ ಇನಿಂಗ್ಸ್ ಆಡುತ್ತಿದೆ.

ದುಲೀಪ್ ಟ್ರೋಫಿ ಫೈನಲ್: ಭಾರೀ ಹಿನ್ನಡೆ ಭೀತಿಯಲ್ಲಿ ಸೌತ್ ಝೋನ್
ಈಸ್ಟ್ ಝೋನ್-ಸೌತ್ ಝೋನ್Image Credit source: Vedhan
ಝಾಹಿರ್ ಯೂಸುಫ್
|

Updated on: Sep 09, 2026 | 7:30 AM

Share

ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ನಡೆಯುತ್ತಿರುವ ದುಲೀಪ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಸೌತ್ ಝೋನ್ ತಂಡವು ಭಾರೀ ಹಿನ್ನಡೆ ಭೀತಿ ಎದುರಿಸುತ್ತಿದೆ. ಈಸ್ಟ್ ಝೋನ್ ತನ್ನ ಮೊದಲ ಇನ್ನಿಂಗ್ಸ್‌ನಲ್ಲಿ ದಾಖಲಿಸಿದ 708 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿರುವ ಸೌತ್ ಝೋನ್, ಮೂರನೇ ದಿನದ ಆಟದ ಮುಕ್ತಾಯಕ್ಕೆ 6 ವಿಕೆಟ್ ನಷ್ಟಕ್ಕೆ 242 ರನ್ ಗಳಿಸಿ ತೀವ್ರ ಸಂಕಷ್ಟಕ್ಕೆ ಸಿಲುಕಿದೆ. ಇದೀಗ 466 ರನ್​ಗಳ ಭಾರೀ ಹಿನ್ನಡೆ ಹೊಂದಿರುವ ಸೌತ್ ಝೋನ್ ತಂಡಕ್ಕೆ ನಾಲ್ಕನೇ ದಿನದಾಟ ನಿರ್ಣಾಯಕ.

ನಾಯಕನ ಜವಾಬ್ದಾರಿಯುತ ಆಟ:

ಸೌತ್ ಝೋನ್ ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಈಸ್ಟ್ ವಲಯದ ಬೌಲಿಂಗ್ ದಾಳಿಗೆ ತತ್ತರಿಸಿ ಸತತವಾಗಿ ವಿಕೆಟ್ ಒಪ್ಪಿಸಿದರು. ಆದರೆ, ಒಂದು ತುದಿಯಲ್ಲಿ ಗಟ್ಟಿಯಾಗಿ ನೆಲೆಯೂರಿದ ನಾಯಕ ತಿಲಕ್ ವರ್ಮಾ ಜವಾಬ್ದಾರಿಯುತ ಬ್ಯಾಟಿಂಗ್ ಪ್ರದರ್ಶಿಸಿದರು. 123 ಎಸೆತಗಳನ್ನು ಎದುರಿಸಿ 56 ರನ್* ಗಳಿಸಿರುವ ಅವರು ಕ್ರೀಸ್‌ನಲ್ಲಿದ್ದು, ನಾಲ್ಕನೇ ದಿನಕ್ಕೆ ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.

ಇವರಿಗೆ ಮಧ್ಯಮ ಕ್ರಮಾಂಕದಲ್ಲಿ ಕನ್ನಡಿಗ ಶ್ರೇಯಸ್ ಗೋಪಾಲ್ (26 ರನ್) ಕೆಲಕಾಲ ಉತ್ತಮ ಸಾಥ್ ನೀಡಿದರಾದರೂ, ಕುರೈಶಿ ಬೌಲಿಂಗ್‌ನಲ್ಲಿ ವಿಕೆಟ್ ಒಪ್ಪಿಸಿದರು. ಇದಕ್ಕೂ ಮುನ್ನ ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿದ ದೇವದತ್ ಪಡಿಕ್ಕಲ್ 62 ರನ್​ ಬಾರಿಸಿ ತಂಡವನ್ನು ಆರಂಭಿಕ ಆಘಾತದಿಂದ ಪಾರು ಮಾಡಿದ್ದರು.

ಶಮಿ-ಮುಕೇಶ್ ಮಾರಕ ದಾಳಿ:

ಈಸ್ಟ್ ಝೋನ್ ಪರ ಬೌಲಿಂಗ್‌ನಲ್ಲಿ ಮಿಂಚಿರುವ ಟೀಮ್ ಇಂಡಿಯಾದ ಹಿರಿಯ ವೇಗಿ ಮೊಹಮ್ಮದ್ ಶಮಿ 2 ವಿಕೆಟ್ ಪಡೆದರೆ, ಮುಕೇಶ್ ಕುಮಾರ್ ಮತ್ತೆರಡು ವಿಕೆಟ್ ಕಬಳಿಸಿದ್ದಾರೆ. ಇದೀಗ ಇನ್ನುಳಿದ 4 ವಿಕೆಟ್​ಗಳ ಮೇಲೆ ಕಣ್ಣಿಟ್ಟಿರುವ ಈಸ್ಟ್ ಝೋನ್ ಬೌಲರ್​ಗಳು ಮೊದಲ ಇನಿಂಗ್ಸ್​ನಲ್ಲಿ ಮುನ್ನಡೆ ಪಡೆಯುವ ಮೂಲಕ ಪಂದ್ಯದ ಮೇಲೆ ಸಂಪೂರ್ಣ ಹಿಡಿತ ಸಾಧಿಸುವ ವಿಶ್ವಾಸದಲ್ಲಿದ್ದಾರೆ.

ಸೌತ್ ಝೋನ್ 6 ವಿಕೆಟ್ ಪತನ:

ಸೌತ್ ಝೋನ್ ತಂಡವು ಈವರೆಗೆ 6 ವಿಕೆಟ್ ಕಳೆದುಕೊಂಡಿದ್ದು, ಇದೀಗ ನಾಯಕ ತಿಲಕ್ ವರ್ಮಾ ಹಾಗೂ ಚಮಾ ಮಿಲಿಂದ್ ಕ್ರೀಸ್​ನಲ್ಲಿದ್ದಾರೆ. ಇನ್ನು ಔಟಾದ ಬ್ಯಾಟರ್​ಗಳ ಪಟ್ಟಿ ಈ ಕೆಳಗಿನಂತಿದೆ..

  • ರಿಕಿ ಭುಯಿ- 1 ರನ್
  • ನಾರಾಯಣ್ ಜಗದೀಶನ್- 32 ರನ್
  • ಶೇಖ್ ರಶೀದ್- 27 ರನ್
  • ದೇವದತ್ ಪಡಿಕ್ಕಲ್- 62 ರನ್
  • ಸ್ಮರಣ್ ರವಿಚಂದ್ರನ್- 23 ರನ್
  • ಶ್ರೇಯಸ್ ಗೋಪಾಲ್- 26 ರನ್

ಈಸ್ಟ್​ ಝೋನ್ (ಪ್ಲೇಯಿಂಗ್ XI): ಅಭಿಮನ್ಯು ಈಶ್ವರನ್, ವೈಭವ್ ಸೂರ್ಯವಂಶಿ, ಕುಮಾರ್ ಕುಶಾಗ್ರಾ, ಸುದೀಪ್ ಕುಮಾರ್ ಘರಾಮಿ, ಇಶಾನ್ ಕಿಶನ್ (ನಾಯಕ, ಶಿಖರ್ ಮೋಹನ್, ಅನುಕೂಲ್ ರಾಯ್, ಎಂಡಿ ಕೌನೈನ್ ಖುರೈಶಿ, ಮೊಹಮ್ಮದ್ ಶಮಿ, ಅಭಿಜಿತ್ ಕೆ ಸರ್ಕಾರ್, ಮುಖೇಶ್ ಕುಮಾರ್.

ಇದನ್ನೂ ಓದಿ: ದುಲೀಪ್ ಟ್ರೋಫಿ ಫೈನಲ್ ಎಷ್ಟು ದಿನಗಳ ಪಂದ್ಯ? ಇಲ್ಲಿದೆ ಉತ್ತರ

ಸೌತ್ ಝೋನ್ (ಪ್ಲೇಯಿಂಗ್ XI): ರಿಕಿ ಭುಯಿ, ನಾರಾಯಣ್ ಜಗದೀಸನ್ (ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಶೇಕ್ ರಶೀದ್, ತಿಲಕ್ ವರ್ಮಾ (ನಾಯಕ), ಸ್ಮರಣ್ ರವಿಚಂದ್ರನ್, ಶ್ರೇಯಸ್ ಗೋಪಾಲ್, ತ್ರಿಪುರಾಣ ವಿಜಯ್, ಮೊಹಮ್ಮದ್ ಸಿರಾಜ್, ಚಾಮ ವಿ ಮಿಲಿಂದ್, ಎಂಡಿ ನಿಧೀಶ್.

Follow Us
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಇಂದು ಈ ರಾಶಿಯವರು ನಿಮ್ಮ ವೀಕ್ನೆಸ್ ಅನ್ನು ಯಾರಿಗೂ ಹೇಳಿಕೊಳ್ಳಬೇಡಿ!
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕುಂಭಾಭಿಷೇಕಕ್ಕೆ ಹೊಸ ಬಣ್ಣದಲ್ಲಿ ಸಿಂಗಾರಗೊಂಡ ಮಧುರೈ ಮೀನಾಕ್ಷಿ ದೇವಸ್ಥಾನ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಕಾರ್ಮಿಕರ ಮಕ್ಕಳಿಗೆ ಉಚಿತ ಶಿಕ್ಷಣ: ರಾಜ್ಯಕ್ಕೆ ಮಾದರಿಯಾದ ರಾಮಪುರಂ ಕುಟುಂಬ
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಹೈಕೋರ್ಟ್​ನಲ್ಲಿ ದರ್ಶನ್ ಪರ ಆದೇಶ ಬಂದಿದ್ದು ಹೇಗೆ? ವಿವರ ನೀಡಿದ ವಕೀಲರು
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಎರಡೇ ತಿಂಗಳಿಗೆ 2 ಕೋಟಿ ವೆಚ್ಚದ ರಸ್ತೆ ಢಮಾರ್!
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಟ್ರಾಲಿ ಬ್ಯಾಗ್​ನಲ್ಲಿ ಸಾಗಿಸುತ್ತಿದ್ದ 180 ನಕ್ಷತ್ರ ಆಮೆಗಳು ವಶಕ್ಕೆ 
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಕೆಎನ್ ರಾಜಣ್ಣ ನಡೆ
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಸಿಎಂ ಡಿಕೆಶಿ ಆರೋಗ್ಯದಲ್ಲಿ ಕೊಂಚ ಏರುಪೇರು: ವೈದ್ಯರು ದೌಡು, ಏನಾಯ್ತು?
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ಬಿಗ್​​ಬಾಸ್​: ತಾಂಡವ್ ‘ಖಾಲಿ ಪಲಾವ್, ಗಗನ್ ‘ಕೊಳೆತ ಟೊಮ್ಯಾಟೊ’
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ
ರಸ್ತೆ ಕಾಮಗಾರಿ ಗುದ್ದಲಿ ಪೂಜೆ ವೇಳೆ MLC-MLA ನಡುವೆ ಮಾತಿನ ಚಕಮಕಿ