AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

4 ರನ್​ಗಳಿಂದ ಶತಕ ವಂಚಿತರಾದ ಸರ್ಫರಾಜ್ ಖಾನ್ ಸಹೋದರ

Musheer Khan Duleep Trophy: ದುಲೀಪ್ ಟ್ರೋಫಿ ಕ್ವಾರ್ಟರ್-ಫೈನಲ್‌ನಲ್ಲಿ ಪಶ್ಚಿಮ ವಲಯದ ಮುಶೀರ್ ಖಾನ್ 96 ರನ್‌ಗಳ ಮಹತ್ವದ ಇನ್ನಿಂಗ್ಸ್ ಆಡಿದರು. ಶತಕ ವಂಚಿತರಾದರೂ, ಕಠಿಣ ಪರಿಸ್ಥಿತಿಯಲ್ಲಿ ತಂಡವನ್ನು 200 ರನ್ ಗಡಿ ದಾಟಲು ಸಹಾಯ ಮಾಡಿದರು. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ 46ಕ್ಕೂ ಹೆಚ್ಚು ಸರಾಸರಿ ಹೊಂದಿರುವ ಮುಶೀರ್ ಅವರ ಸ್ಥಿರ ಪ್ರದರ್ಶನ ಭಾರತ A ತಂಡಕ್ಕೆ ಆಯ್ಕೆಯಾಗುವ ಸಾಧ್ಯತೆಗಳನ್ನು ಹೆಚ್ಚಿಸಿದೆ.

4 ರನ್​ಗಳಿಂದ ಶತಕ ವಂಚಿತರಾದ ಸರ್ಫರಾಜ್ ಖಾನ್ ಸಹೋದರ
Musheer Khan
ಪೃಥ್ವಿಶಂಕರ
|

Updated on:Aug 25, 2026 | 8:03 PM

Share

ಬೆಂಗಳೂರಿನ ಸೆಂಟರ್ ಆಫ್ ಎಕ್ಸಲೆನ್ಸ್‌ನಲ್ಲಿ ಉತ್ತರ ವಲಯ ಮತ್ತು ಪಶ್ಚಿಮ ವಲಯ ನಡುವೆ ನಡೆಯುತ್ತಿರುವ ದುಲೀಪ್ ಟ್ರೋಫಿ (Duleep Trophy) ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ಪಶ್ಚಿಮ ವಲಯ ಪರ ಆಡುತ್ತಿರುವ ಸರ್ಫರಾಜ್ ಖಾನ್ ಅವರ ಸಹೋದರ ಮುಶೀರ್ ಖಾನ್ ( Musheer Khan) ಅದ್ಭುತ ಪ್ರದರ್ಶನ ನೀಡಿದರು. ಉತ್ತರ ವಲಯ ನೀಡಿರುವ 287 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಪಶ್ಚಿಮ ವಲಯ ಪರ ಮುಶೀರ್ ಖಾನ್ 126 ಎಸೆತಗಳಲ್ಲಿ 96 ರನ್‌ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಆದಾಗ್ಯೂ ಕೇವಲ 4 ರನ್‌ಗಳ ಅಂತರದಲ್ಲಿ ಶತಕ ವಂಚಿತರಾದರೂ ತಮ್ಮ ಇನ್ನಿಂಗ್ಸ್ ಮೂಲಕ ತಂಡವನ್ನು 200 ರನ್​ಗಳ ಗಡಿ ದಾಟಲು ಸಹಾಯ ಮಾಡಿದರು.

ಮುಶೀರ್ ಖಾನ್ ಸ್ಮರಣೀಯ ಇನ್ನಿಂಗ್ಸ್

ಈ ಗುರಿ ಬೆನ್ನಟ್ಟಿದ ಪಶ್ಚಿಮ ವಲಯ ತಂಡ ಕಳಪೆ ಆರಂಭ ಪಡೆಯಿತು. ಕೇವಲ 4 ರನ್‌ಗಳಿಗೆ ಮೊದಲ ವಿಕೆಟ್ ಕಳೆದುಕೊಂಡಿತು. ನಂತರ ಕ್ರೀಸ್‌ಗೆ ಬಂದ ಮುಶೀರ್ ಖಾನ್ ತಾಳ್ಮೆಯ ಇನ್ನಿಂಗ್ಸ್ ಕಟ್ಟಿದರು. ತಂಡವು 84 ರನ್ ಗಳಿಸುವಷ್ಟರಲ್ಲಿ ಎರಡು ವಿಕೆಟ್‌ಗಳನ್ನು ಕಳೆದುಕೊಂಡರೂ ಮುಶೀರ್ ಖಾನ್ 126 ಎಸೆತಗಳನ್ನು ಎದುರಿಸಿ ಎಂಟು ಬೌಂಡರಿ ಮತ್ತು ಎರಡು ಸಿಕ್ಸರ್‌ಗಳೊಂದಿಗೆ 96 ರನ್ ಗಳಿಸಿ ಔಟಾದರು.

ಈ ಪಂದ್ಯದ ಎರಡೂ ಇನ್ನಿಂಗ್ಸ್‌ಗಳಲ್ಲಿ, ಮುಶೀರ್ ಖಾನ್ ದೀರ್ಘ ಇನ್ನಿಂಗ್ಸ್‌ಗಳನ್ನು ಆಡಿದರು. ಮೊದಲ ಇನ್ನಿಂಗ್ಸ್‌ನಲ್ಲಿ ಮುಶೀರ್ 31 ರನ್ ಬಾರಿಸಿದರೂ ಬರೋಬ್ಬರಿ 126 ಎಸೆತಗಳನ್ನು ಎದುರಿಸಿ ಬಹಳ ಸಮಯ ಕ್ರೀಸ್‌ನಲ್ಲಿಯೇ ಇದ್ದರು. ಈ ಪಂದ್ಯದಲ್ಲಿ ಒಟ್ಟು 252 ಎಸೆತಗಳನ್ನು ಎದುರಿಸುವ ಮೂಲಕ, ಅವರು ರೆಡ್-ಬಾಲ್ ಕ್ರಿಕೆಟ್‌ನಲ್ಲಿ ಒತ್ತಡವನ್ನು ನಿಭಾಯಿಸುವ ಸಾಮರ್ಥ್ಯವನ್ನು ಹೊಂದಿದ್ದಾರೆಂಬುದನ್ನು ಸಾಬೀತುಪಡಿಸಿದರು.

ಪ್ರಥಮ ದರ್ಜೆಯಲ್ಲಿ ಅದ್ಭುತ ಸರಾಸರಿ

ಕೇವಲ 21 ವರ್ಷ ವಯಸ್ಸಿನ ಮುಶೀರ್ ಖಾನ್ ಈಗಾಗಲೇ ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಉತ್ತಮ ದಾಖಲೆಯನ್ನು ಹೊಂದಿದ್ದಾರೆ. ತಮ್ಮ 18 ಪ್ರಥಮ ದರ್ಜೆ ಪಂದ್ಯಗಳಲ್ಲಿ ಐದು ಶತಕಗಳು ಮತ್ತು ನಾಲ್ಕು ಅರ್ಧಶತಕಗಳನ್ನು ಬಾರಿಸಿರುವ ಮುಶೀರ್ ಅವರ ಬ್ಯಾಟಿಂಗ್ ಸರಾಸರಿ 46 ಕ್ಕಿಂತ ಹೆಚ್ಚಿದೆ. ಮುಂಬೈ ತಂಡದ ಪ್ರಮುಖ ಸದಸ್ಯರಾಗಿರುವ ಮುಶೀರ್ ಮೂರು ಸ್ವರೂಪಗಳಲ್ಲಿ ಆಡುತ್ತಾರೆ. ಲಿಸ್ಟ್ ಎ ನಲ್ಲಿ 40.83 ರ ಸರಾಸರಿಯನ್ನು ಹೊಂದಿರುವ ಮುಶೀರ್ ಖಾನ್ ಅವರ ಪ್ರದರ್ಶನವನ್ನು ನೋಡಿದರೆ, ಶೀಘ್ರದಲ್ಲೇ ಅವರಿಗೆ ಭಾರತ ಎ ತಂಡದಲ್ಲಿ ಅವಕಾಶ ಸಿಗುವ ಸಾಧ್ಯತೆಗಳಿವೆ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:00 pm, Tue, 25 August 26

Follow Us
ಪೃಥ್ವಿಶಂಕರ
ಪೃಥ್ವಿಶಂಕರ

ಪೃಥ್ವಿಶಂಕರ ಅವರ ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ. ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ಕೆಲಸ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ಇವರು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ಇವರ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ಚಿಕ್ಕಮಗಳೂರಲ್ಲಿ ಬಿರುಗಾಳಿ ಸಹಿತ ಅಬ್ಬರಿಸಿದ ವರುಣ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ವಿಜಯಲಕ್ಷ್ಮಿ ದರ್ಶನ್ ಅರ್ಜಿ ರದ್ದಾಗಿದ್ದೇಕೆ: ವಿವರಿಸಿದ ವಕೀಲ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಸತತ 2ನೇ ವರ್ಷವೂ ಚಾಮರಾಜನಗರ ದಸರಾ ರದ್ದು; ಜಾನಪದ ಕಲಾವಿದರಲ್ಲಿ ಬೇಸರ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಎಸ್​​​​ಐಆರ್ ವಿರುದ್ಧ ಸಿಜೆಪಿ ಸಮರ: ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಕರ್ನಾಟಕ ಸರ್ಕಾರ ಕೆಡವಲು ಕೇಂದ್ರದಿಂದ ಯತ್ನ: ಪ್ರಿಯಾಂಕ್ ಖರ್ಗೆ ಗಂಭೀರ ಆರೋಪ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಭೇಟಿ ನೀಡದ ಟಿಹೆಚ್ಒಗಳು: ಸಚಿವ ಖಾದರ್ ಗರಂ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಆಸ್ಪತ್ರೆಯಲ್ಲಿ ಮೊಬೈಲ್ ಟಾರ್ಚ್ ಬೆಳಕಿನಲ್ಲೇ ಚಿಕಿತ್ಸೆ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ಬೀಗರೂಟ ಮಾಡಿದ್ರೆ 1 ಲಕ್ಷ, ತಿಂದ್ರೆ 50 ಸಾವಿರ ದಂಡ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ವಿಜಯಪುರದಲ್ಲಿ ಕಚ್ಚಾ ಅಡುಗೆ ಎಣ್ಣೆ ಟ್ಯಾಂಕರ್ ಪಲ್ಟಿ: ಮುಗಿಬಿದ್ದ ಜನ
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್
ಸಾಗರ ಮುಂಬಾಳು ಬಳಿ ನಡು ರಸ್ತೆಯಲ್ಲೇ ಧಗಧಗ ಹೊತ್ತಿ ಉರಿದ ಸ್ಲೀಪರ್ ಬಸ್