ಅಂತರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ ಸಿಎಸ್​ಕೆ ಆಲ್​ರೌಂಡರ್..!

ದಕ್ಷಿಣ ಆಫ್ರಿಕಾ ತಂಡದ ಸ್ಟಾರ್ ಆಲ್​ರೌಂಡರ್ ಡ್ವೇನ್ ಪ್ರಿಟೋರಿಯಸ್ ತಮ್ಮ 33 ನೇ ವಯಸ್ಸಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

ಅಂತರಾಷ್ಟ್ರೀಯ ಕ್ರಿಕೆಟ್‌ಗೆ ದಿಢೀರ್ ನಿವೃತ್ತಿ ಘೋಷಿಸಿದ ಸಿಎಸ್​ಕೆ ಆಲ್​ರೌಂಡರ್..!
ಸಿಎಸ್​ಕೆ ತಂಡ
Follow us
TV9 Web
| Updated By: ಪೃಥ್ವಿಶಂಕರ

Updated on:Jan 09, 2023 | 4:21 PM

ದಕ್ಷಿಣ ಆಫ್ರಿಕಾ ತಂಡದ ಸ್ಟಾರ್ ಆಲ್​ರೌಂಡರ್ ಡ್ವೇನ್ ಪ್ರಿಟೋರಿಯಸ್ (Dwaine Pretorius) ತಮ್ಮ 33 ನೇ ವಯಸ್ಸಿನಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ (Retirement ) ಹೇಳಿದ್ದಾರೆ. ದಕ್ಷಿಣ ಆಫ್ರಿಕಾ ಪರ 30 ಟಿ20, 27 ಏಕದಿನ ಹಾಗೂ 3 ಟೆಸ್ಟ್ ಪಂದ್ಯಗಳನ್ನು ಆಡಿರುವ ಪ್ರಿಟೋರಿಯಸ್ ಕಳೆದ ವರ್ಷ ಅಕ್ಟೋಬರ್​ನಲ್ಲಿ ಭಾರತದ ವಿರುದ್ಧ ಕೊನೆಯ ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದರು. ಇಂದೋರ್‌ನಲ್ಲಿ ನಡೆದ ಸರಣಿಯ ಮೂರನೇ ಟಿ20 ಪಂದ್ಯದಲ್ಲಿ ಪ್ರಿಟೋರಿಯಸ್ 8 ರನ್‌ಗಳಿಸಿ ಆಡುತ್ತಿದ್ದ ಸೂರ್ಯ ಅವರ ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಅಂತಾರಾಷ್ಟ್ರೀಯ ಕ್ರಿಕೆಟ್ (International Cricket)​ ನಿವೃತ್ತಿ ಘೋಷಿಸಿರುವ ದಕ್ಷಿಣ ಆಫ್ರಿಕಾದ ಈ ಆಲ್‌ರೌಂಡರ್ ತಮ್ಮ ವೃತ್ತಿಜೀವನವನ್ನು ಉಳಿದ ಟಿ20 ಮತ್ತು ಇತರ ಕಿರು ಸ್ವರೂಪಗಳ ಮೇಲೆ ಕೇಂದ್ರೀಕರಿಸಲು ಬಯಸುವುದಾಗಿ ಹೇಳಿಕೊಂಡಿದ್ದಾರೆ..

2 ವಿಶ್ವಕಪ್‌ಗಳಲ್ಲಿ ಆಡಿದ್ದ ಪ್ರಿಟೋರಿಯಸ್

ದಕ್ಷಿಣ ಆಫ್ರಿಕಾ ಪರ 2 ವಿಶ್ವಕಪ್ ಆಡಿರುವ ಪ್ರಿಟೋರಿಯಸ್, ದಕ್ಷಿಣ ಆಫ್ರಿಕಾ ಪರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ಅತ್ಯುತ್ತಮ ಬೌಲಿಂಗ್‌ ದಾಖಲೆಯನ್ನು ಸಹ ಹೊಂದಿದ್ದಾರೆ. ಪಾಕಿಸ್ತಾನದ ವಿರುದ್ಧದ ಪಂದ್ಯದಲ್ಲಿ 17 ರನ್‌ಗಳಿಗೆ 5 ವಿಕೆಟ್ ಪಡೆದಿದ್ದು ಪ್ರಿಟೋರಿಯಸ್ ಅವರ ಅತ್ಯುತ್ತಮ ಬೌಲಿಂಗ್ ದಾಖಲೆಯಾಗಿದೆ. ಕಳೆದ ವರ್ಷ ಆಡಿದ ಟಿ20 ವಿಶ್ವಕಪ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡದ ಮೊದಲ ಆಯ್ಕೆಯ ಆಲ್‌ರೌಂಡರ್ ಆಗಿದ್ದ ಪ್ರಿಟೋರಿಯಸ್, ಪಂದ್ಯಾವಳಿ ಪ್ರಾರಂಭವಾಗುವ ಮೊದಲೇ ಗಾಯಗೊಂಡಿದ್ದರಿಂದ ಇಡೀ ಟೂರ್ನಿಯಿಂದಲೇ ಹೊರಬಿದ್ದಿದ್ದರು.

IND v SL: ಏಕದಿನ ಸರಣಿ ಆರಂಭಕ್ಕೂ ಮುನ್ನವೇ ಟೀಂ ಇಂಡಿಯಾದಿಂದ ಹೊರಬಿದ್ದ ಜಸ್ಪ್ರೀತ್ ಬುಮ್ರಾ..!

ಐಪಿಎಲ್‌ನಲ್ಲಿ ಆಡಲಿದ್ದಾರೆ

ದಕ್ಷಿಣ ಆಫ್ರಿಕಾ ಪರ 3 ಟೆಸ್ಟ್ ಪಂದ್ಯಗಳನ್ನಾಡಿರುವ ಪ್ರಿಟೋರಿಯಸ್, ಒಟ್ಟು 7 ವಿಕೆಟ್ ಪಡೆದಿದ್ದಾರೆ. ಹಾಗೆಯೇ 27 ಏಕದಿನ ಪಂದ್ಯಗಳಲ್ಲಿ 35 ವಿಕೆಟ್‌ಗಳನ್ನು ಕಬಳಿಸಿದ್ದಾರೆ. ಅಲ್ಲದೆ 30 ಟಿ20 ಪಂದ್ಯಗಳಲ್ಲಿ 35 ವಿಕೆಟ್ ಪಡೆದಿದ್ದಾರೆ. ಐಪಿಎಲ್‌ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಆಡುತ್ತಿರುವ ಪ್ರಿಟೋರಿಯಸ್, ಅಂತರಾಷ್ಟ್ರೀಯ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರಾದರೂ ವಿದೇಶಿ ಲೀಗ್​ಗಳಲ್ಲಿ ಆಡುವುದಾಗಿ ಹೇಳಿಕೊಂಡಿದ್ದಾರೆ. ಪ್ರಿಟೋರಿಯಸ್ ಐಪಿಎಲ್ ಮಾತ್ರವಲ್ಲದೆ SA20 ಲೀಗ್​ನಲ್ಲೂ ಆಡುತ್ತಾರೆ. ಈ ಟೂರ್ನಿ ಫೆಬ್ರವರಿ 11 ರವರೆಗೆ ನಡೆಯಲಿದ್ದು, ಆ ಬಳಿಕ ಅವರು ಐಪಿಎಲ್‌ನಲ್ಲಿ ಬ್ಯುಸಿಯಾಗಲಿದ್ದಾರೆ. ನಂತರ ಆಗಸ್ಟ್‌ನಲ್ಲಿ, ದಿ ಹಂಡ್ರೆಡ್ ಲೀಗ್​ನಲ್ಲಿ ಕಾಣಿಸಿಕೊಳ್ಳಲ್ಲಿದ್ದಾರೆ.

ಇನ್ನಷ್ಟು ಕ್ರೀಡಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:21 pm, Mon, 9 January 23

Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
Daily Horoscope: ಈ ರಾಶಿಯವರಿಗೆ ಇಂದು ಐದು ಗ್ರಹಗಳ ಶುಭ ಫಲವಿದೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಕೊಟ್ಟ ಮಾತು ಉಳಿಸಿಕೊಂಡ ಸುರೇಶ್, ಧನರಾಜ್ ಮಗಳಿಗೆ ಉಡುಗೊರೆ
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಿಗ್​ಬಾಸ್: ಫ್ಯಾಮಿಲಿ ವಿಸಿಟ್ ಬಳಿಕ ಗೆಳೆತನಗಳೆಲ್ಲ ಪೀಸ್-ಪೀಸ್
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಬಳ್ಳಾರಿಯ ಕಂಪ್ಲಿಯಿಂದ ವಕ್ಫ್ ವಿರುದ್ಧ ಹೋರಾಟ ಪುನರಾರಂಭಿಸಿದ ಯತ್ನಾಳ್ ತಂಡ
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಕುಟುಂಬದ ಅರಣ್ಯರೋದನೆ; ಗೋಗರೆದರೂ ಕಿವಿಗೆ ಹಾಕಿಕೊಳ್ಳದ ಪೊಲೀಸರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ಹಿರಿಯ ನಾಯಕರನ್ನು ಪೊಲೀಸ್ ವಶಕ್ಕೆ ಪಡೆದರೂ ಎದೆಗುಂದದ ಕಾರ್ಯಕರ್ತರು
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ
ಶಾಸಕನ ಜಾತಿಯವರೇ ಕ್ಷೇತ್ರದ ಪದಾಧಿಕಾರಿಗಳಾಗಬಾರದು: KN ರಾಜಣ್ಣ